AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಂಬಾಬ್ವೆ ವಿರುದ್ಧ ಹರ್ಮನ್‌ಪ್ರೀತ್ ಕೌರ್ ಶತಕದ ಅಬ್ಬರ! ಏಕದಿನ ಕ್ರಿಕೆಟ್‌ನಲ್ಲಿ 8ನೇ ಸೆಂಚುರಿ

ಭಾರತ ಮತ್ತು ಜಿಂಬಾಬ್ವೆ ಮಹಿಳಾ ಏಕದಿನ ಸರಣಿಯ 2ನೇ ಪಂದ್ಯದಲ್ಲಿ ಮಾಜಿ ನಾಯಕಿ ಹರ್ಮನ್‌ಪ್ರೀತ್ ಕೌರ್ ತಮ್ಮ 8ನೇ ಶತಕ ಸಿಡಿಸಿ ಮಿಂಚಿದ್ದಾರೆ. ಆರಂಭಿಕ ಆಘಾತದ ನಂತರ ತಂಡಕ್ಕೆ ಆಧಾರವಾದ ಹರ್ಮನ್‌ಪ್ರೀತ್, ಪ್ರತೀಕಾ ರಾವಲ್ ಮತ್ತು ದೀಪ್ತಿ ಶರ್ಮಾ ಅವರೊಂದಿಗೆ ಶತಕದ ಜೊತೆಯಾಟ ನಡೆಸಿ ತಂಡವನ್ನು ಬೃಹತ್ ಮೊತ್ತದತ್ತ ಕೊಂಡೊಯ್ದರು. ಇದು ಅವರ ಏಕದಿನ ವೃತ್ತಿಜೀವನದ 8ನೇ ಶತಕ.

ಜಿಂಬಾಬ್ವೆ ವಿರುದ್ಧ ಹರ್ಮನ್‌ಪ್ರೀತ್ ಕೌರ್ ಶತಕದ ಅಬ್ಬರ! ಏಕದಿನ ಕ್ರಿಕೆಟ್‌ನಲ್ಲಿ 8ನೇ ಸೆಂಚುರಿ
Harmanpreet KaurImage Credit source: PTI
ಪೃಥ್ವಿಶಂಕರ
|

Updated on:Oct 25, 2026 | 5:29 PM

Share

ಭಾರತ ಮತ್ತು ಜಿಂಬಾಬ್ವೆ ಮಹಿಳಾ ತಂಡಗಳ ನಡುವಿನ 3 ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯ ವಡೋದರದ ಕೋಟಂಬಿಯಲ್ಲಿರುವ BCA ಕ್ರೀಡಾಂಗಣದಲ್ಲಿ ನಡೆಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ಪರ ಮಾಜಿ ನಾಯಕಿ ಹರ್ಮನ್​ಪ್ರೀತ್ ಕೌರ್ ತಮ್ಮ ಏಕದಿನ ವೃತ್ತಿಜೀವನದ 8ನೇ ಶತಕ ಸಿಡಿಸಿ ಮಿಂಚಿದ್ದಾರೆ. ಕೇವಲ 19 ರನ್​​ಗಳಿಗೆ ನಾಯಕಿ ಸ್ಮೃತಿ ಮಂಧಾನ ಹಾಗೂ ಶಫಾಲಿ ವರ್ಮಾ ಅವರ ವಿಕೆಟ್ ಕಳೆದುಕೊಂಡು ಒತ್ತಡಕ್ಕೆ ಸಿಲುಕಿದ್ದ ತಂಡದ ಇನ್ನಿಂಗ್ಸ್ ನಿಭಾಯಿಸಿದ ಹರ್ಮನ್ ಮೊದಲಿಗೆ ಪ್ರತೀಕಾ ರಾವಲ್ ಅವರೊಂದಿಗೆ ಮೂರನೇ ವಿಕೆಟ್​ಗೆ ಶತಕದ ಜೊತೆಯಾಟ ನಡೆಸಿದರು. ಆ ಬಳಿಕ ಆಲ್‌ರೌಂಡರ್ ದೀಪ್ತಿ ಶರ್ಮಾ ಜೊತೆಗೂಡಿ ಮತ್ತೊಂದು ಶತಕದ ಜೊತೆಯಾಟವನ್ನಾಡಿ ತಂಡವನ್ನು ಬೃಹತ್ ಮೊತ್ತದತ್ತ ಕೊಂಡೊಯ್ದರು.

ನಾಯಕತ್ವದಿಂದ ಕೆಳಗಿಳಿದ ಬಳಿಕ ಭರ್ಜರಿ ಫಾರ್ಮ್​

ಹರ್ಮನ್‌ಪ್ರೀತ್ ಕೌರ್ ಇತ್ತೀಚೆಗಷ್ಟೇ ನಾಯಕತ್ವ ಕಳೆದುಕೊಂಡಿದ್ದರು. ಈ ವಿಚಾರವಾಗಿ ಹಲವು ಚರ್ಚೆಗಳು ಕೂಡ ನಡೆದಿದ್ದವು. ಆದರೆ ಈಗ ನಾಯಕತ್ವದ ಒತ್ತಡದಿಂದ ಹೊರಬಂದಿರುವ ಹರ್ಮನ್‌ಪ್ರೀತ್ ಬ್ಯಾಟಿಂಗ್‌ನಲ್ಲಿ ಭರ್ಜರಿ ಕಮ್‌ಬ್ಯಾಕ್ ಮಾಡುತ್ತಿರುವಂತೆ ಕಾಣುತ್ತಿದೆ. ಜಿಂಬಾಬ್ವೆ ಮಹಿಳಾ ತಂಡದ ವಿರುದ್ಧದ ಟಿ20 ಸರಣಿಯಲ್ಲಿ 91 ರನ್‌ಗಳ ಸ್ಫೋಟಕ ಇನ್ನಿಂಗ್ಸ್ ಆಡಿದ್ದ ಅವರು, ಇದೀಗ ಏಕದಿನ ಸರಣಿಯಲ್ಲೂ ಅದ್ಭುತ ಶತಕ ಸಿಡಿಸಿ ಮಿಂಚಿದ್ದಾರೆ. ಅಷ್ಟೇ ಅಲ್ಲ, ಈ ಮೂಲಕ ಭಾರತದ ದಿಗ್ಗಜ ಆಟಗಾರ್ತಿ ಮಿಥಾಲಿ ರಾಜ್ ಅವರ ದಾಖಲೆಯನ್ನೂ ಹಿಂದಿಕ್ಕಿದ್ದಾರೆ.

101 ಎಸೆತಗಳಲ್ಲಿ ಶತಕ

ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ಕಡಿಮೆ ಗುರಿಯನ್ನು ಬೆನ್ನಟ್ಟಿದ್ದರಿಂದ ಹರ್ಮನ್‌ಪ್ರೀತ್‌ಗೆ ಬ್ಯಾಟಿಂಗ್ ಮಾಡುವ ಅವಕಾಶ ಸಿಕ್ಕಿರಲಿಲ್ಲ. ಆದರೆ ಎರಡನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ಕೇವಲ 19 ರನ್‌ಗಳಿಗೆ ನಾಯಕಿ ಸ್ಮೃತಿ ಮಂಧಾನ ಸೇರಿದಂತೆ ಎರಡು ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಈ ಸಂದರ್ಭದಲ್ಲಿ ಕ್ರೀಸ್‌ಗೆ ಬಂದ ಹರ್ಮನ್‌ಪ್ರೀತ್ ಮೇಲೆ ತಂಡವನ್ನು ಸಂಕಷ್ಟದಿಂದ ಪಾರು ಮಾಡುವ ಜವಾಬ್ದಾರಿ ಇತ್ತು.

ಹಿಂದೆ ನಾಯಕಿಯಾಗಿದ್ದಾಗಲೂ ಹಲವು ಬಾರಿ ತಂಡಕ್ಕೆ ಆಸರೆಯಾಗಿದ್ದ ಹರ್ಮನ್‌ಪ್ರೀತ್, ಈ ಬಾರಿ ನಾಯಕತ್ವದ ಜವಾಬ್ದಾರಿಯಿಲ್ಲದೆ ಕಣಕ್ಕಿಳಿದು ತಮ್ಮ ಸಾಮರ್ಥ್ಯ ಏನೆಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದರು. ಮೊದಲು ಪ್ರತೀಕಾ ರಾವಲ್ ಜೊತೆಗೂಡಿ ಶತಕದ ಜೊತೆಯಾಟವಾಡಿದ ಅವರು, ಬಳಿಕ ದೀಪ್ತಿ ಶರ್ಮಾ ಜೊತೆಗೂಡಿ ಮತ್ತೊಂದು ಶತಕದ ಜೊತೆಯಾಟ ಕಟ್ಟಿದರು. ಈ ಮೂಲಕ ತಂಡದ ಇನ್ನಿಂಗ್ಸ್‌ಗೆ ಬಲ ತುಂಬಿದ್ದಲ್ಲದೆ, ಭಾರತವನ್ನು ದೊಡ್ಡ ಮೊತ್ತದತ್ತ ಕೊಂಡೊಯ್ದರು. ಅಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ ಹರ್ಮನ್‌ಪ್ರೀತ್ ಕೌರ್, ಕೇವಲ 101 ಎಸೆತಗಳಲ್ಲಿ ತಮ್ಮ ಶತಕ ಪೂರ್ಣಗೊಳಿಸಿದರು. ಅವರ ಈ ಇನ್ನಿಂಗ್ಸ್‌ನಲ್ಲಿ 12 ಬೌಂಡರಿಗಳು ಸೇರಿದ್ದವು.

ನಾಯಕತ್ವ ತ್ಯಜಿಸಿದ ಬಳಿಕ ಭರ್ಜರಿ ಬ್ಯಾಟಿಂಗ್: 91 ರನ್ ಸಿಡಿಸಿ ಕಣ್ಣೀರಿಟ್ಟ ಹರ್ಮನ್‌ಪ್ರೀತ್ ಕೌರ್!

15 ತಿಂಗಳ ಬಳಿಕ ಶತಕ, ಮಿಥಾಲಿ ದಾಖಲೆ ಉಡೀಸ್

ಹರ್ಮನ್‌ಪ್ರೀತ್ ಕೌರ್ ಅವರ ಈ ಶತಕ ಬರೋಬ್ಬರಿ 15 ತಿಂಗಳ ಕಾಯುವಿಕೆಗೆ ತೆರೆ ಎಳೆದಿದೆ. ಇದಕ್ಕೂ ಮೊದಲು ಅವರು 2025ರ ಜುಲೈನಲ್ಲಿ ಇಂಗ್ಲೆಂಡ್ ವಿರುದ್ಧ ಶತಕ ಸಿಡಿಸಿದ್ದರು. ಇದೀಗ ಜಿಂಬಾಬ್ವೆ ವಿರುದ್ಧದ ಶತಕದೊಂದಿಗೆ ಹರ್ಮನ್‌ಪ್ರೀತ್ ತಮ್ಮ ಏಕದಿನ ಅಂತಾರಾಷ್ಟ್ರೀಯ ವೃತ್ತಿಜೀವನದ 8ನೇ ಶತಕ ದಾಖಲಿಸಿದ್ದಾರೆ. ಈ ಸಾಧನೆಯೊಂದಿಗೆ ಭಾರತದ ಪರ ಮಹಿಳಾ ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕ ಸಿಡಿಸಿದ ಆಟಗಾರ್ತಿಯರ ಪಟ್ಟಿಯಲ್ಲಿ ಹರ್ಮನ್‌ಪ್ರೀತ್ ಎರಡನೇ ಸ್ಥಾನಕ್ಕೇರಿದ್ದಾರೆ. ಈ ಹಿಂದೆ 7 ಶತಕಗಳನ್ನು ಬಾರಿಸಿದ್ದ ಮಾಜಿ ನಾಯಕಿ ಮಿಥಾಲಿ ರಾಜ್ ಅವರನ್ನು ಅವರು ಹಿಂದಿಕ್ಕಿದ್ದಾರೆ.

ಸದ್ಯ ಈ ಪಟ್ಟಿಯಲ್ಲಿ 14 ಶತಕಗಳೊಂದಿಗೆ ಭಾರತದ ನೂತನ ನಾಯಕಿ ಸ್ಮೃತಿ ಮಂಧಾನ ಮೊದಲ ಸ್ಥಾನದಲ್ಲಿದ್ದಾರೆ. ಇದೀಗ ಹರ್ಮನ್‌ಪ್ರೀತ್ ಅವರ ಬ್ಯಾಟ್ ಮತ್ತೆ ಘರ್ಜಿಸುತ್ತಿದ್ದು, ನಾಯಕತ್ವದಿಂದ ದೂರವಾದ ಬಳಿಕ ಅವರ ಆಟ ಮತ್ತಷ್ಟು ಸುಧಾರಿಸಿದೆಯೇ ಎಂಬ ಚರ್ಚೆಯೂ ಶುರುವಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:09 pm, Sun, 25 October 26

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ದಾಂಡೇಲಿಯಲ್ಲಿ ಪ್ರವಾಸಿಗನ ಧ್ವನಿ ಕೇಳಿ ದಡಕ್ಕೆ ಬಂತು ಮೊಸಳೆ!
ದಾಂಡೇಲಿಯಲ್ಲಿ ಪ್ರವಾಸಿಗನ ಧ್ವನಿ ಕೇಳಿ ದಡಕ್ಕೆ ಬಂತು ಮೊಸಳೆ!
ಸ್ಟಿಂಗ್ ವಿಚಾರ ಡೈವರ್ಟ್ ಮಾಡಲು ಹೀಗೆ ಮಾಡ್ತಿದ್ದಾರೆ; ಜೋಶಿ ವಾಗ್ದಾಳಿ
ಸ್ಟಿಂಗ್ ವಿಚಾರ ಡೈವರ್ಟ್ ಮಾಡಲು ಹೀಗೆ ಮಾಡ್ತಿದ್ದಾರೆ; ಜೋಶಿ ವಾಗ್ದಾಳಿ
ಗದಗ ಎಸ್.ಎಸ್. ಕಾಮರ್ಸ್ ಕಾಲೇಜ್ ಫುಡ್ ಫೆಸ್ಟಿವಲ್
ಗದಗ ಎಸ್.ಎಸ್. ಕಾಮರ್ಸ್ ಕಾಲೇಜ್ ಫುಡ್ ಫೆಸ್ಟಿವಲ್
ಪ್ರಧಾನಿ ಮೋದಿ ಸಮ್ಮುಖದಲ್ಲಿ 'ವಿಂಗ್ಸ್ ಓವರ್ ಗಂಗಾ' ಏರ್ ಶೋ!
ಪ್ರಧಾನಿ ಮೋದಿ ಸಮ್ಮುಖದಲ್ಲಿ 'ವಿಂಗ್ಸ್ ಓವರ್ ಗಂಗಾ' ಏರ್ ಶೋ!
ಬೈಪಾಸ್​​ಗೆ ಆಗ್ರಹಿಸಿ ಕಗ್ಗಲಿಪುರ ನಿವಾಸಿಗಳಿಂದ ವಿನೂತನ ಪ್ರತಿಭಟನೆ
ಬೈಪಾಸ್​​ಗೆ ಆಗ್ರಹಿಸಿ ಕಗ್ಗಲಿಪುರ ನಿವಾಸಿಗಳಿಂದ ವಿನೂತನ ಪ್ರತಿಭಟನೆ
RSS ಪಥಸಂಚಲನಕ್ಕೆ ಕೊನೆ ಕ್ಷಣದಲ್ಲಿ ಸರ್ಕಾರ ಅನುಮತಿ ನೀಡಿದೆ ಎಂದ ಅಶೋಕ್
RSS ಪಥಸಂಚಲನಕ್ಕೆ ಕೊನೆ ಕ್ಷಣದಲ್ಲಿ ಸರ್ಕಾರ ಅನುಮತಿ ನೀಡಿದೆ ಎಂದ ಅಶೋಕ್
ಧನ್ವೀರ್, ವಿಜಯಲಕ್ಷ್ಮಿ ದರ್ಶನ್ ಕಿರಿಕ್; ಎಳೆಎಳೆಯಾಗಿ ವಿವರಿಸಿದ ಆಪ್ತ ವೇಲು
ಧನ್ವೀರ್, ವಿಜಯಲಕ್ಷ್ಮಿ ದರ್ಶನ್ ಕಿರಿಕ್; ಎಳೆಎಳೆಯಾಗಿ ವಿವರಿಸಿದ ಆಪ್ತ ವೇಲು
ದರ್ಶನ್ ಹೊರಗೆ ಬರೋದು ವಿಜಯಲಕ್ಷ್ಮಿಗೆ ಇಷ್ಟ ಇಲ್ವಾ? ಲಾಯರ್ ಪ್ರತಿಕ್ರಿಯೆ
ದರ್ಶನ್ ಹೊರಗೆ ಬರೋದು ವಿಜಯಲಕ್ಷ್ಮಿಗೆ ಇಷ್ಟ ಇಲ್ವಾ? ಲಾಯರ್ ಪ್ರತಿಕ್ರಿಯೆ
ಪರಿಷತ್​​​ ಬಿಜೆಪಿ ಅಭ್ಯರ್ಥಿ ಸುರೇಶ್​​ ನಡೆಗೆ ಶಾಸಕ ಬಿ.ಪಿ.ಹರೀಶ್ ಆಕ್ರೋಶ
ಪರಿಷತ್​​​ ಬಿಜೆಪಿ ಅಭ್ಯರ್ಥಿ ಸುರೇಶ್​​ ನಡೆಗೆ ಶಾಸಕ ಬಿ.ಪಿ.ಹರೀಶ್ ಆಕ್ರೋಶ
ಧನ್ವೀರ್, ವಿಜಯಲಕ್ಷ್ಮಿ ದರ್ಶನ್ ನಡುವಿನ ಜಗಳಕ್ಕೆ ಸಿಕ್ತು ಮುಖ್ಯ ಕಾರಣ
ಧನ್ವೀರ್, ವಿಜಯಲಕ್ಷ್ಮಿ ದರ್ಶನ್ ನಡುವಿನ ಜಗಳಕ್ಕೆ ಸಿಕ್ತು ಮುಖ್ಯ ಕಾರಣ