AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಯಕತ್ವ ತ್ಯಜಿಸಿದ ಬಳಿಕ ಭರ್ಜರಿ ಬ್ಯಾಟಿಂಗ್: 91 ರನ್ ಸಿಡಿಸಿ ಕಣ್ಣೀರಿಟ್ಟ ಹರ್ಮನ್‌ಪ್ರೀತ್ ಕೌರ್!

ರಾಯ್‌ಪುರದಲ್ಲಿ ಜಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ ಹರ್ಮನ್‌ಪ್ರೀತ್ ಕೌರ್ 91 ರನ್ ಗಳಿಸಿ ಮಿಂಚಿದರು. ನಾಯಕತ್ವದಿಂದ ಕೆಳಗಿಳಿದ ನಂತರ ಅವರ ಮೊದಲ ಅರ್ಧಶತಕ ಇದಾಗಿತ್ತು. ಈ ಸ್ಫೋಟಕ ಪ್ರದರ್ಶನದ ನಂತರ ಸಂದರ್ಶನದಲ್ಲಿ ಹರ್ಮನ್‌ಪ್ರೀತ್ ಭಾವುಕರಾಗಿ ಕಣ್ಣೀರಿಟ್ಟರು. ಹಿಂದಿನ ಕೋಚ್‌ಗಳಿಗೆ ಧನ್ಯವಾದ ಹೇಳುತ್ತಾ, ತಮ್ಮ ಆಟವನ್ನು ಆನಂದಿಸಲು ಸಿಕ್ಕ ಅವಕಾಶದ ಬಗ್ಗೆ ಸಂತೋಷ ವ್ಯಕ್ತಪಡಿಸಿದರು. ಇದು ಅವರ ಲಯಕ್ಕೆ ಮರಳಿದ ಸಂಕೇತವಾಗಿತ್ತು.

ನಾಯಕತ್ವ ತ್ಯಜಿಸಿದ ಬಳಿಕ ಭರ್ಜರಿ ಬ್ಯಾಟಿಂಗ್: 91 ರನ್ ಸಿಡಿಸಿ ಕಣ್ಣೀರಿಟ್ಟ ಹರ್ಮನ್‌ಪ್ರೀತ್ ಕೌರ್!
ಹರ್ಮನ್​ಪ್ರೀತ್ ಕೌರ್
ಪೃಥ್ವಿಶಂಕರ
|

Updated on: Oct 20, 2026 | 10:01 PM

Share

ರಾಯ್‌ಪುರದ ಶಹೀದ್ ವೀರ್ ನಾರಾಯಣ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಜಿಂಬಾಬ್ವೆ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಭಾರತ ಮಹಿಳಾ ತಂಡದ ಮಾಜಿ ನಾಯಕಿ ಹರ್ಮನ್‌ಪ್ರೀತ್ ಕೌರ್ ಕೇವಲ 41 ಎಸೆತಗಳಲ್ಲಿ 91 ರನ್ ಗಳಿಸಿದರು. ಅವರ ಈ ಭರ್ಜರಿ ಇನ್ನಿಂಗ್ಸ್‌ನಲ್ಲಿ 10 ಬೌಂಡರಿ ಹಾಗೂ 6 ಸಿಕ್ಸರ್‌ಗಳು ಸೇರಿದ್ದವು. ಹರ್ಮನ್‌ಪ್ರೀತ್ ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ 216 ರನ್‌ಗಳನ್ನು ಕಲೆಹಾಕಿತು. ಈ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನದ ಬಳಿಕ ಮಧ್ಯಂತರ ಸಂದರ್ಶನದ ವೇಳೆ ಮಾತನಾಡಿದ ಹರ್ಮನ್‌ಪ್ರೀತ್ ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ.

ಲಯಕ್ಕೆ ಮರಳಿದ ಹರ್ಮನ್‌ಪ್ರೀತ್

ಈ ತಿಂಗಳ ಆರಂಭದಲ್ಲಿ ಹರ್ಮನ್‌ಪ್ರೀತ್ ಕೌರ್ ಎಲ್ಲಾ ಮಾದರಿಗಳ ನಾಯಕತ್ವದಿಂದ ಕೆಳಗಿಳಿಯುವುದಾಗಿ ಘೋಷಿಸಿದ್ದರು. ಕಳೆದ 10 ವರ್ಷಗಳ ಕಾಲ ಟಿ20 ತಂಡದ ನಾಯಕತ್ವ ವಹಿಸಿದ್ದ ಹರ್ಮನ್ ತಂಡವನ್ನು ಹಲವು ಸ್ಮರಣೀಯ ಗೆಲುವುಗಳತ್ತ ಮುನ್ನಡೆಸಿದ್ದರು. ನಾಯಕತ್ವ ತ್ಯಜಿಸಿದ ಬಳಿಕ ಹರ್ಮನ್‌ಪ್ರೀತ್ ಕೌರ್ ಬಾರಿಸಿದ ಮೊದಲ ಅರ್ಧಶತಕ ಇದಾಗಿದೆ. ಏಷ್ಯಾಕಪ್ ಹಾಗೂ ಏಷ್ಯನ್ ಗೇಮ್ಸ್‌ನಲ್ಲಿ ಭಾರತ ತಂಡ ಪ್ರಶಸ್ತಿ ಗೆದ್ದಿದ್ದರೂ, ಆ ಟೂರ್ನಿಗಳಲ್ಲಿ ಹರ್ಮನ್‌ಪ್ರೀತ್ ಬ್ಯಾಟಿಂಗ್‌ನಲ್ಲಿ ನಿರೀಕ್ಷಿತ ಪ್ರದರ್ಶನ ನೀಡಿರಲಿಲ್ಲ. ಇದೀಗ ಜಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ ಹರ್ಮನ್ ಲಯ ಕಂಡುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ನನ್ನ ಆಟವನ್ನು ತುಂಬಾ ಆನಂದಿಸಿದೆ

ಮಧ್ಯಂತರ ಸಂದರ್ಶನದ ವೇಳೆ ತಮ್ಮ ಪ್ರದರ್ಶನದ ಬಗ್ಗೆ ಮಾತನಾಡಿದ ಹರ್ಮನ್​ಪ್ರೀತ್ ಕೌರ್, ‘ ತುಂಬಾ ಸಂತೋಷವಾಗುತ್ತಿದೆ. ನಾನು ನನ್ನ ಆಟವನ್ನು ಆನಂದಿಸಬೇಕು ಎಂದುಕೊಂಡಿದ್ದೆ. ಕ್ರೀಸ್‌ನಲ್ಲಿ ಹೆಚ್ಚು ಸಮಯ ಕಳೆಯಲು ಅವಕಾಶ ಸಿಕ್ಕಿದ್ದು, ಮೈದಾನದಲ್ಲಿ ನನ್ನ ಆಟವನ್ನು ತುಂಬಾ ಆನಂದಿಸಿದೆ. ಸಾಧ್ಯವಾದಷ್ಟು ಹೆಚ್ಚು ಸಮಯ ಬ್ಯಾಟಿಂಗ್ ಮಾಡಬೇಕು ಎಂಬುದೇ ತಮ್ಮ ಉದ್ದೇಶವಾಗಿತ್ತು’ ಎಂದಿದ್ದಾರೆ.

ಆ ಬಳಿಕ ತಂಡದ ಮಾಜಿ ಕೋಚ್ ಡಬ್ಲ್ಯು.ವಿ. ರಾಮನ್ ಅವರನ್ನು ಉದ್ದೇಶಿಸಿ ಮಾತನಾಡಿದ ಹರ್ಮನ್‌ಪ್ರೀತ್, ‘ನಿಮಗೂ ಧನ್ಯವಾದ ಹೇಳಬೇಕು. ನಾವು ಬಂದಾಗ ನೀವು ನನ್ನ ಬಳಿ ಬಂದು, ‘ಈಗ ನೀನು ನಿನಗೆ ಇಷ್ಟವಾದ ರೀತಿಯಲ್ಲಿ ಆಟವಾಡು’ ಎಂದು ಹೇಳಿದ್ದಿರಿ. ಅದನ್ನೇ ನಾನು ಮಾಡಲು ಬಯಸಿದ್ದೆ. ನನ್ನ ಆಟವನ್ನು ಆನಂದಿಸಲು ಬಯಸಿದ್ದೆ. ಆ ಮಾತುಗಳಿಗಾಗಿ ಧನ್ಯವಾದಗಳು’ ಎಂದಿದ್ದಾರೆ.

ಅಭ್ಯಾಸದ ವೇಳೆ ನೆರವಾದ ಕೋಚ್ ಹಿಮಾಂಶು ಅವರ ಬಗ್ಗೆಯೂ ಮೆಚ್ಚುಗೆ ವ್ಯಕ್ತಪಡಿಸಿದ ಹರ್ಮನ್, ‘ಎರಡು ಪಂದ್ಯಗಳ ಬಳಿಕ ನೆಟ್ಸ್‌ನಲ್ಲಿ ಅಭ್ಯಾಸ ಮಾಡಲು ಸಮಯ ಸಿಕ್ಕಿತು. ನನ್ನ ಮೇಲೆ ತುಂಬಾ ಶ್ರಮ ಹಾಕುತ್ತಿರುವ ಹಿಮಾಂಶು ಭಯ್ಯಾ ಅವರಿಗೆ ನಾನು ವಿಶೇಷವಾಗಿ ಧನ್ಯವಾದ ಹೇಳಲು ಬಯಸುತ್ತೇನೆ. ಇಂದಿನ ನನ್ನ ಬ್ಯಾಟಿಂಗ್‌ನ ಸಂಪೂರ್ಣ ಶ್ರೇಯಸ್ಸು ಅವರಿಗೆ ಸಲ್ಲುತ್ತದೆ’ ಎಂದರು.

ಸಂದರ್ಶನದ ವೇಳೆ ಕಣ್ಣೀರಿಟ್ಟ ಹರ್ಮನ್‌ಪ್ರೀತ್

ಇನ್ನು ಇದೇ ಸಂದರ್ಶನದ ವೇಳೆ ಹರ್ಮನ್‌ಪ್ರೀತ್ ಕೌರ್ ಸ್ಪಷ್ಟವಾಗಿ ಭಾವುಕರಾಗಿದ್ದರು. ಅವರ ಕಣ್ಣುಗಳಲ್ಲಿ ನೀರು ತುಂಬಿಕೊಂಡಿದ್ದು, ತೋಳಿನಿಂದ ಕಣ್ಣೀರು ಒರೆಸಿಕೊಳ್ಳುತ್ತಿರುವುದು ಕಂಡುಬಂತು. ಸಂದರ್ಶನದ ಕೊನೆಯಲ್ಲಿ ಅವರು ಮೈಕ್ರೊಫೋನ್ ಅನ್ನು ಮತ್ತೊಬ್ಬರ ಕಡೆಗೆ ನೀಡಿದ ಬಳಿಕ ತಕ್ಷಣವೇ ಕ್ಯಾಮೆರಾಗಳಿಂದ ದೂರ ಸರಿದರು. ನಾಯಕತ್ವ ತ್ಯಜಿಸುವ ನಿರ್ಧಾರ ಪ್ರಕಟಿಸಿದ ಬಳಿಕ ಹರ್ಮನ್‌ಪ್ರೀತ್ ನೀಡಿದ ಮೊದಲ ಸಂದರ್ಶನ ಇದಾಗಿದೆ. ಅವರ ಭಾವುಕ ಕ್ಷಣವು ಅಭಿಮಾನಿಗಳ ಗಮನ ಸೆಳೆದಿದ್ದು, ನೂರಾರು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಹಜರತ್ ಇಮಾಮ್ ಶಾ ವಲಿ ದರ್ಗಾದಲ್ಲಿ ಮೈಸೂರು ದಸರಾ ಆನೆಗಳಿಗೆ ವಿಶೇಷ ಪೂಜೆ
ಹಜರತ್ ಇಮಾಮ್ ಶಾ ವಲಿ ದರ್ಗಾದಲ್ಲಿ ಮೈಸೂರು ದಸರಾ ಆನೆಗಳಿಗೆ ವಿಶೇಷ ಪೂಜೆ
ರಾಮ್‌ಲೀಲಾ ಮೈದಾನದಲ್ಲಿ ಪ್ರಧಾನಿ ಮೋದಿಯಿಂದ ರಾವಣನ ಪ್ರತಿಕೃತಿ ದಹನ
ರಾಮ್‌ಲೀಲಾ ಮೈದಾನದಲ್ಲಿ ಪ್ರಧಾನಿ ಮೋದಿಯಿಂದ ರಾವಣನ ಪ್ರತಿಕೃತಿ ದಹನ
ಮದ್ವೆಯಾದ ಹತ್ತೇ ದಿನಕ್ಕೆ ಮನೆಬಿಟ್ಟು ಓಡಿ ಹೋದ ಗಂಡ: ಟವರ್ ಏರಿ ಪತ್ನಿ!
ಮದ್ವೆಯಾದ ಹತ್ತೇ ದಿನಕ್ಕೆ ಮನೆಬಿಟ್ಟು ಓಡಿ ಹೋದ ಗಂಡ: ಟವರ್ ಏರಿ ಪತ್ನಿ!
ದ್ವಾರಕಾದಲ್ಲಿ ಬಾಣ ಬಿಟ್ಟು ರಾವಣ ದಹನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ದ್ವಾರಕಾದಲ್ಲಿ ಬಾಣ ಬಿಟ್ಟು ರಾವಣ ದಹನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಕುಂಭಕರ್ಣನ ಜೊತೆ 30 ಅಡಿ ಎತ್ತರದ ಬೃಹತ್ 'ಕಾಕ್ರೋಚ್' ದಹನ
ಕುಂಭಕರ್ಣನ ಜೊತೆ 30 ಅಡಿ ಎತ್ತರದ ಬೃಹತ್ 'ಕಾಕ್ರೋಚ್' ದಹನ
ವಿಡಿಯೋ ಮಾಡಿ, 1,700 ಅಡಿ ಆಳದ ಕಣಿವೆಗೆ ಹಾರಿದ ವ್ಯಕ್ತಿ!
ವಿಡಿಯೋ ಮಾಡಿ, 1,700 ಅಡಿ ಆಳದ ಕಣಿವೆಗೆ ಹಾರಿದ ವ್ಯಕ್ತಿ!
ಶೋ ರೂಮ್‌ನಿಂದ ಏಕಾಏಕಿ ರಸ್ತೆಗೆ ನುಗ್ಗಿದ ಹೊಸ ಕಾರು!
ಶೋ ರೂಮ್‌ನಿಂದ ಏಕಾಏಕಿ ರಸ್ತೆಗೆ ನುಗ್ಗಿದ ಹೊಸ ಕಾರು!
ಅಪ್ಪನ ಅಂಬಾಸಿಡರ್ ಕಾರಿನಲ್ಲಿ ಹೆಂಡ್ತಿ ಜೊತೆ ಡಿಸಿಎಂ ಜಾಲಿರೈಡು: ವಿಡಿಯೋ
ಅಪ್ಪನ ಅಂಬಾಸಿಡರ್ ಕಾರಿನಲ್ಲಿ ಹೆಂಡ್ತಿ ಜೊತೆ ಡಿಸಿಎಂ ಜಾಲಿರೈಡು: ವಿಡಿಯೋ
ಮೈಸೂರು ರಾಜರ ಕಾರುಗಳಿಗೆ ವಿಶೇಷ ಪೂಜೆ: ಎಲ್ಲಾ ಕಾರುಗಳ ಸಂಖ್ಯೆ 1953
ಮೈಸೂರು ರಾಜರ ಕಾರುಗಳಿಗೆ ವಿಶೇಷ ಪೂಜೆ: ಎಲ್ಲಾ ಕಾರುಗಳ ಸಂಖ್ಯೆ 1953
ಪತ್ನಿ ಉಷಾ, ಕುಟುಂಬಸ್ಥರ ಜೊತೆಗೆ ಆಯುಧ ಪೂಜೆ ಮಾಡಿದ ಸಿಎಂ ಡಿಕೆ ಶಿವಕುಮಾರ್
ಪತ್ನಿ ಉಷಾ, ಕುಟುಂಬಸ್ಥರ ಜೊತೆಗೆ ಆಯುಧ ಪೂಜೆ ಮಾಡಿದ ಸಿಎಂ ಡಿಕೆ ಶಿವಕುಮಾರ್