AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK: ವಿಶ್ವಕಪ್​ ಅಂಗಳದಲ್ಲೂ ಕೈಕುಲುಕದ ಉಭಯ ನಾಯಕಿಯರು

India vs Pakistan T20 World Cup: ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ ಭಾರತ vs ಪಾಕಿಸ್ತಾನ ಮಹಿಳಾ T20 ವಿಶ್ವಕಪ್ ಪಂದ್ಯದಲ್ಲಿ, ಭಾರತದ ನಾಯಕಿ ಹರ್ಮನ್‌ಪ್ರೀತ್ ಕೌರ್ ಪಾಕಿಸ್ತಾನಿ ನಾಯಕಿಯೊಂದಿಗೆ ಹ್ಯಾಂಡ್‌ಶೇಕ್ ಮಾಡಲಿಲ್ಲ. ಕಳೆದ ವರ್ಷದ ಪುರುಷರ ಏಷ್ಯಾಕಪ್‌ನಿಂದ ಭಾರತ ತಂಡಗಳು ಪಾಕ್ ಆಟಗಾರರೊಂದಿಗೆ ಕೈಕುಲುಕುವುದನ್ನು ನಿಲ್ಲಿಸಿವೆ. ಈ ನೀತಿಯನ್ನು ಮಹಿಳಾ ವಿಶ್ವಕಪ್‌ನಲ್ಲೂ ಮುಂದುವರಿಸಲಾಗಿದ್ದು, ಇದು ಹಿಂದಿನ ವಿವಾದಗಳನ್ನು ಮತ್ತಷ್ಟು ಕೆರಳಿಸಿದೆ.

IND vs PAK: ವಿಶ್ವಕಪ್​ ಅಂಗಳದಲ್ಲೂ ಕೈಕುಲುಕದ ಉಭಯ ನಾಯಕಿಯರು
Ind Vs Pak Toss
ಪೃಥ್ವಿಶಂಕರ
|

Updated on:Jun 14, 2026 | 7:25 PM

Share

ಭಾರತ ಮತ್ತು ಪಾಕಿಸ್ತಾನ (India vs Pakistan) ನಡುವಿನ ಮಹಿಳಾ ಟಿ20 ವಿಶ್ವಕಪ್ ( Women’s T20 World Cup 2026) ಪಂದ್ಯ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಆದಾಗ್ಯೂ ಟಾಸ್‌ ಸಮಯದಲ್ಲಿ ಉಭಯ ತಂಡಗಳ ನಾಯಕಿಯರು ಹ್ಯಾಂಡ್‌ಶೇಕ್ ಮಾಡುತ್ತಾರಾ ಎಂಬುದನ್ನು ನೋಡಲು ಎಲ್ಲರೂ ಕಾದು ಕುಳಿತಿದ್ದರು. ಆದರೆ ಭಾರತದ ನಾಯಕಿ ಹರ್ಮನ್‌ಪ್ರೀತ್ ಕೌರ್ ಪಾಕಿಸ್ತಾನಿ ನಾಯಕಿಯೊಂದಿಗೆ ಹ್ಯಾಂಡ್‌ಶೇಕ್ ಮಾಡುವುದಿಲ್ಲ ಎಂಬ ನೀತಿಯನ್ನು ಟಿ20 ವಿಶ್ವಕಪ್​ನಲ್ಲೂ ಮುಂದುವರೆಸಿದರು. ಇದರರ್ಥ ಪಂದ್ಯದ ನಂತರವೂ ಭಾರತೀಯ ಆಟಗಾರ್ತಿಯರು ಪಾಕಿಸ್ತಾನದೊಂದಿಗೆ ಹ್ಯಾಂಡ್‌ಶೇಕ್ ಮಾಡುವುದಿಲ್ಲ ಎಂಬುದು ಇದರಿಂದ ಸ್ಪಷ್ಟವಾಗಿದೆ.

ಟಿ20 ವಿಶ್ವಕಪ್​ನಲ್ಲೂ ಕೈಕುಲುಕಲಿಲ್ಲ

ವಾಸ್ತವವಾಗಿ, ಕಳೆದ ವರ್ಷ ನಡೆದ ಪುರುಷರ ಏಷ್ಯಾಕಪ್ ನಂತರ, ಪುರುಷ ಮತ್ತು ಮಹಿಳಾ ತಂಡಗಳ ಆಟಗಾರರು ಪಾಕಿಸ್ತಾನಿ ಆಟಗಾರರೊಂದಿಗೆ ಕೈಕುಲುಕುವುದಕ್ಕೆ ತಿಲಾಂಜಲಿ ಇಟ್ಟಿದ್ದಾರೆ. ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಂ ಇಂಡಿಯಾ ಏಷ್ಯಾಕಪ್‌ನಲ್ಲಿ, ಪಾಕ್ ಆಟಗಾರರೊಂದಿಗೆ ಹ್ಯಾಂಡ್‌ಶೇಕ್ ಮಾಡಿರಲಿಲ್ಲ. ಇದರಿಂದ ದೊಡ್ಡ ವಿವಾದವೇ ಹುಟ್ಟಿಕೊಂಡಿತು. ಇದಕ್ಕೆ ತಿರುಗೇಟೆಂಬಂತೆ ಎಸಿಸಿ ಅಧ್ಯಕ್ಷರಾಗಿದ್ದ ಮೊಹ್ಸಿನ್ ನಖ್ವಿ, ಟೀಂ ಇಂಡಿಯಾಕ್ಕೆ ನೀಡಬೇಕಿದ್ದ ಏಷ್ಯಾಕಪ್ ಟ್ರೋಫಿಯನ್ನು ಹಸ್ತಾಂತರಿಸಿಲ್ಲ. ಈ ಟೂರ್ನಿಯ ಬಳಿಕ ನಡೆದಿದ್ದ ಮಹಿಳಾ ವಿಶ್ವಕಪ್, U19 ವಿಶ್ವಕಪ್, ರೈಸಿಂಗ್ ಸ್ಟಾರ್ಸ್ ಏಷ್ಯಾಕಪ್ ಮತ್ತು ಪುರುಷರ ಟಿ20 ವಿಶ್ವಕಪ್‌ನಲ್ಲಿಯೂ ಉಭಯ ತಂಡಗಳ ಆಟಗಾರರು ಹ್ಯಾಂಡ್‌ಶೇಕ್ ಮಾಡಿರಲಿಲ್ಲ.

ಟಾಸ್ ಗೆದ್ದ ಭಾರತ

ಟಾಸ್ ಗೆದ್ದ ಬಳಿಕ ಮಾತನಾಡಿದ ಹರ್ಮನ್ಪ್ರೀತ್ ಕೌರ್, ‘ನಾವು ಮೊದಲು ಬ್ಯಾಟಿಂಗ್ ಮಾಡುತ್ತೇವೆ, ಇದು ಬ್ಯಾಟಿಂಗ್ ಮಾಡಲು ಉತ್ತಮ ಪಿಚ್. ಹೀಗಾಗಿ ನಾವು ಉತ್ತಮ ಸ್ಕೋರ್ ಕಲೆಹಾಕುತ್ತೇವೆ ಎಂದರು. ಇದರ ಜೊತೆಗೆ ತಂಡದ ಪ್ಲೇಯಿಂಗ್ 11 ಬಗ್ಗೆ ಮಾತನಾಡಿದ ಹರ್ಮನ್ಪ್ರೀತ್, ಭಾರತಿ ಫುಲ್ಮಾಲಿಗೆ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ನೀಡಲಾಗಿದೆ ಎಂದರು.

IND vs PAK Women’s T20 WC Live Score: ಭಾರತಕ್ಕೆ ಆರಂಭಿಕ ಆಘಾತ

ಉಭಯ ತಂಡಗಳ ಪ್ಲೇಯಿಂಗ್ 11

ಭಾರತ: ಸ್ಮೃತಿ ಮಂಧಾನ, ಶೆಫಾಲಿ ವರ್ಮಾ, ಜೆಮಿಮಾ ರಾಡ್ರಿಗಸ್, ಹರ್ಮನ್ಪ್ರೀತ್ ಕೌರ್ (ನಾಯಕಿ), ಭಾರತಿ ಫುಲ್ಮಾಲಿ, ರಿಚಾ ಘೋಷ್ (ವಿಕೆಟ್ ಕೀಪರ್), ದೀಪ್ತಿ ಶರ್ಮಾ, ಅರುಂಧತಿ ರೆಡ್ಡಿ, ಶ್ರೇಯಾಂಕಾ ಪಾಟೀಲ್, ಶ್ರೀ ಚರಣಿ, ಕ್ರಾಂತಿ ಗೌಡ್.

ಪಾಕಿಸ್ತಾನ: ಗುಲ್ ಫಿರೋಜಾ, ಮುನೀಬಾ ಅಲಿ (ವಿಕೆಟ್ ಕೀಪರ್), ಆಯೇಶಾ ಜಾಫರ್, ಸೈರಾ ಜಬೀನ್, ಅಲಿಯಾ ರಿಯಾಜ್, ನತಾಲಿಯಾ ಪರ್ವೇಜ್, ಫಾತಿಮಾ ಸನಾ (ನಾಯಕಿ), ರಮೀನ್ ಶಮೀಮ್, ನಶ್ರಾ ಸಂಧು, ತಸ್ಮಿಯಾ ರುಬಾಬ್, ಸಾದಿಯಾ ಇಕ್ಬಾಲ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:20 pm, Sun, 14 June 26

Follow Us
ಇಂದು ಈ ರಾಶಿಯವರು ತಮ್ಮ ಕುಟುಂಬದ ಕಡೆ ಹೆಚ್ಚಿನ ಗಮನ ಕೊಡಬೇಕು
ಇಂದು ಈ ರಾಶಿಯವರು ತಮ್ಮ ಕುಟುಂಬದ ಕಡೆ ಹೆಚ್ಚಿನ ಗಮನ ಕೊಡಬೇಕು
ಬಿಜೆಪಿ ಸಭೆ: ಶಾಸಕರ ಮೇಲೆ ವಿಶ್ವಾಸ ಇಟ್ಟಿದ್ದೇ ತಪ್ಪಾಯ್ತು ಎಂದ ಅಶೋಕ್
ಬಿಜೆಪಿ ಸಭೆ: ಶಾಸಕರ ಮೇಲೆ ವಿಶ್ವಾಸ ಇಟ್ಟಿದ್ದೇ ತಪ್ಪಾಯ್ತು ಎಂದ ಅಶೋಕ್
ಸಿಪಿ ಯೋಗೇಶ್ವರ್ ಪುತ್ರನಿಗೆ ಶುಭ ಹಾರೈಸಿದ ಸಿಎಂ ಹೇಳಿದ್ದೇನು? ವಿಡಿಯೋ ನೋಡಿ
ಸಿಪಿ ಯೋಗೇಶ್ವರ್ ಪುತ್ರನಿಗೆ ಶುಭ ಹಾರೈಸಿದ ಸಿಎಂ ಹೇಳಿದ್ದೇನು? ವಿಡಿಯೋ ನೋಡಿ
ರಾಮ ಮಂದಿರದ ದೇಣಿಗೆ ಲೂಟಿ: ಕದ್ದ ಹಣದಲ್ಲಿ ಪ್ರೇಮ ಪುರಾಣ, ಲವರ್​ಗೆ ಗಿಫ್ಟ್!
ರಾಮ ಮಂದಿರದ ದೇಣಿಗೆ ಲೂಟಿ: ಕದ್ದ ಹಣದಲ್ಲಿ ಪ್ರೇಮ ಪುರಾಣ, ಲವರ್​ಗೆ ಗಿಫ್ಟ್!
ಕೆ ಸುಧಾಕರ್‌ ಜೊತೆಗಿನ ವೈಮನಸಿನ ಬಗ್ಗೆ ಬಿಜೆಪಿ ಸಭೆಯಲ್ಲಿ ಚರ್ಚೆ ಆಯ್ತಾ?
ಕೆ ಸುಧಾಕರ್‌ ಜೊತೆಗಿನ ವೈಮನಸಿನ ಬಗ್ಗೆ ಬಿಜೆಪಿ ಸಭೆಯಲ್ಲಿ ಚರ್ಚೆ ಆಯ್ತಾ?
ವಿಶ್ವ ವಿಖ್ಯಾತ ಜೋಗ್ ಫಾಲ್ಸ್ ಗೆ ರಾಜಕಳೆ
ವಿಶ್ವ ವಿಖ್ಯಾತ ಜೋಗ್ ಫಾಲ್ಸ್ ಗೆ ರಾಜಕಳೆ
ಸಿಪಿ ಯೋಗೇಶ್ವರ್ ಪುತ್ರನ ಸಿನಿಮಾಕ್ಕೆ ಕ್ಲ್ಯಾಪ್ ಮಾಡಿದ ಸಿಎಂ ಡಿಕೆಶಿ
ಸಿಪಿ ಯೋಗೇಶ್ವರ್ ಪುತ್ರನ ಸಿನಿಮಾಕ್ಕೆ ಕ್ಲ್ಯಾಪ್ ಮಾಡಿದ ಸಿಎಂ ಡಿಕೆಶಿ
SIR ವೇಳೆ ಕುಸಿದುಬಿದ್ದ BLO, ಬೇಡಿಕೊಂಡ್ರೂ ಕೇಳಿಲ್ಲ ಎಂದು ಶಿಕ್ಷಕಿ ಅಳಲು
SIR ವೇಳೆ ಕುಸಿದುಬಿದ್ದ BLO, ಬೇಡಿಕೊಂಡ್ರೂ ಕೇಳಿಲ್ಲ ಎಂದು ಶಿಕ್ಷಕಿ ಅಳಲು
ಈ ಬಾರಿ ತುಂಬಿದ ಕರ್ನಾಟಕದ ಮೊದಲ ಡ್ಯಾಂನ ಭೋರ್ಗರೆತ ಹೇಗಿದೆ ನೋಡಿ
ಈ ಬಾರಿ ತುಂಬಿದ ಕರ್ನಾಟಕದ ಮೊದಲ ಡ್ಯಾಂನ ಭೋರ್ಗರೆತ ಹೇಗಿದೆ ನೋಡಿ
ರೈಲಿಗೆ ಬಾಂಬ್ ಬೆದರಿಕೆ: ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ, ಓರ್ವ ವಶಕ್ಕೆ!
ರೈಲಿಗೆ ಬಾಂಬ್ ಬೆದರಿಕೆ: ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ, ಓರ್ವ ವಶಕ್ಕೆ!