ಭಾರತ ಮತ್ತು ಇಂಗ್ಲೆಂಡ್ ನಡುವಣ ಸರಣಿಯು ಜನವರಿ 22 ರಿಂದ ಶುರುವಾಗಲಿದೆ. ಈ ಸರಣಿ ಆರಂಭಕ್ಕೂ ಮುನ್ನ ಯುವ ದಾಂಡಿಗ ಹ್ಯಾರಿ ಬ್ರೂಕ್ ಅವರನ್ನು ಇಂಗ್ಲೆಂಡ್ ತಂಡದ ಉಪನಾಯಕನಾಗಿ ಆಯ್ಕೆ ಮಾಡಲಾಗಿದೆ. ಅದರಂತೆ ಮುಂಬರುವ ಸರಣಿಗಳಲ್ಲಿ ಹಾಗೂ ಚಾಂಪಿಯನ್ಸ್ ಟ್ರೋಫಿಯಲ್ಲಿ ಇಂಗ್ಲೆಂಡ್ ತಂಡದ ವೈಸ್ ಕ್ಯಾಪ್ಟನ್ ಆಗಿ 25 ವರ್ಷದ ಬ್ರೂಕ್ ಕಾಣಿಸಿಕೊಳ್ಳಲಿದ್ದಾರೆ.
ಇನ್ನು ಇಂಗ್ಲೆಂಡ್ ತಂಡದ ಸೀಮಿತ ಓವರ್ಗಳ ತಂಡದ ನಾಯಕರಾಗಿ ಜೋಸ್ ಬಟ್ಲರ್ ಅವರನ್ನು ಮುಂದುವರೆಸಲಾಗಿದೆ. ಇದಾಗ್ಯೂ ಅವರು ಭಾರತದ ವಿರುದ್ಧದ ಸರಣಿಯಲ್ಲಿ ವಿಕೆಟ್ ಕೀಪರ್ ಆಗಿ ಕಾಣಿಸಿಕೊಳ್ಳುವ ಸಾಧ್ಯತೆಯಿಲ್ಲ.
ಟೀಮ್ ಇಂಡಿಯಾ ವಿರುದ್ಧದ ಪಂದ್ಯದಲ್ಲಿ ಫಿಲ್ ಸಾಲ್ಟ್ ಅವರಿಗೆ ವಿಕೆಟ್ ಕೀಪಿಂಗ್ ಜವಾಬ್ದಾರಿ ನೀಡಲು ಇಂಗ್ಲೆಂಡ್ ತಂಡದ ಮುಖ್ಯ ಕೋಚ್ ಬ್ರೆಂಡನ್ ಮೆಕಲಂ ನಿರ್ಧರಿಸಿದ್ದಾರೆ. ಹಾಗಾಗಿ ಜೋಸ್ ಬಟ್ಲರ್ ಕ್ಯಾಪ್ಟನ್ ಜವಾಬ್ದಾರಿಯೊಂದಿಗೆ ಫೀಲ್ಡಿಂಗ್ ಮಾಡಲಿದ್ದಾರೆ.
ಇಂಗ್ಲೆಂಡ್ ಏಕದಿನ ತಂಡ: ಜೋಸ್ ಬಟ್ಲರ್ (ನಾಯಕ), ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್, ಜೇಕಬ್ ಬೆಥೆಲ್, ಹ್ಯಾರಿ ಬ್ರೂಕ್ (ಉಪನಾಯಕ), ಬ್ರೈಡನ್ ಕಾರ್ಸೆ, ಬೆನ್ ಡಕೆಟ್, ಜೇಮೀ ಓವರ್ಟನ್, ಜಾಮಿ ಸ್ಮಿತ್, ಲಿಯಾಮ್ ಲಿವಿಂಗ್ಸ್ಟೋನ್, ಆದಿಲ್ ರಶೀದ್, ಜೋ ರೂಟ್, ಸಾಕಿಬ್ ಮಹಮೂದ್, ಫಿಲ್ ಸಾಲ್ಟ್, ಮಾರ್ಕ್ ವುಡ್.
ಇಂಗ್ಲೆಂಡ್ ಟಿ20 ತಂಡ: ಜೋಸ್ ಬಟ್ಲರ್ (ನಾಯಕ), ರೆಹಾನ್ ಅಹ್ಮದ್, ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್, ಜೇಕಬ್ ಬೆಥೆಲ್, ಹ್ಯಾರಿ ಬ್ರೂಕ್ (ಉಪನಾಯಕ), ಬ್ರೈಡನ್ ಕಾರ್ಸೆ, ಬೆನ್ ಡಕೆಟ್, ಜೇಮೀ ಓವರ್ಟನ್, ಜಾಮಿ ಸ್ಮಿತ್, ಲಿಯಾಮ್ ಲಿವಿಂಗ್ಸ್ಟೋನ್, ಆದಿಲ್ ರಶೀದ್, ಸಾಕಿಬ್ ಮಹಮೂದ್, ಫಿಲ್ ಸಾಲ್ಟ್, ಮಾರ್ಕ್ ವುಡ್.
ಇದನ್ನೂ ಓದಿ: ದುಬಾರಿ ಬೆಲೆಯ ಕವಾಸಕಿ ನಿಂಜಾ ಬೈಕ್ ಗಿಫ್ಟ್ ನೀಡಿದ ರಿಂಕು ಸಿಂಗ್