AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಕದಿನದಲ್ಲಿ ಅತಿ ವೇಗದ ದ್ವಿಶತಕ; ವಿಶ್ವದಾಖಲೆ ಸೃಷ್ಟಿಸಿದ ಹ್ಯಾರಿ ಬ್ರೂಕ್..!

ಪಾಕಿಸ್ತಾನದಲ್ಲಿ ನಡೆದ ತ್ರಿಕೋನ ಏಕದಿನ ಸರಣಿಯಲ್ಲಿ ಇಂಗ್ಲೆಂಡ್ ನಾಯಕ ಹ್ಯಾರಿ ಬ್ರೂಕ್ ಶ್ರೀಲಂಕಾ ವಿರುದ್ಧ 114 ಎಸೆತಗಳಲ್ಲಿ 202 ರನ್ ಸಿಡಿಸಿ ದಾಖಲೆ ಬರೆದಿದ್ದಾರೆ. ಏಕದಿನದಲ್ಲಿ ದ್ವಿಶತಕ ಬಾರಿಸಿದ ಮೊದಲ ಇಂಗ್ಲೆಂಡ್ ಆಟಗಾರ ಎನಿಸಿರುವ ಬ್ರೂಕ್, ಶುಭ್‌ಮನ್ ಗಿಲ್ ಅವರ ವೇಗದ ದ್ವಿಶತಕದ ದಾಖಲೆಯನ್ನೂ ಮುರಿದು ಹೊಸ ಮೈಲುಗಲ್ಲು ಸ್ಥಾಪಿಸಿದ್ದಾರೆ. ಈ ಸ್ಫೋಟಕ ಇನ್ನಿಂಗ್ಸ್ ಇಂಗ್ಲೆಂಡ್‌ಗೆ 429 ರನ್ ಗಳಿಸಲು ನೆರವಾಯಿತು.

ಏಕದಿನದಲ್ಲಿ ಅತಿ ವೇಗದ ದ್ವಿಶತಕ; ವಿಶ್ವದಾಖಲೆ ಸೃಷ್ಟಿಸಿದ ಹ್ಯಾರಿ ಬ್ರೂಕ್..!
ಹ್ಯಾರಿ ಬ್ರೂಕ್
ಪೃಥ್ವಿಶಂಕರ
|

Updated on: Oct 22, 2026 | 6:13 PM

Share

ಪಾಕಿಸ್ತಾನದಲ್ಲಿ ನಡೆಯುತ್ತಿರುವ ತ್ರಿಕೋನ ಏಕದಿನ ಸರಣಿಯಲ್ಲಿ ಇಂಗ್ಲೆಂಡ್‌ ತಂಡದ ನಾಯಕ ಹ್ಯಾರಿ ಬ್ರೂಕ್, ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ದಾಖಲೆಯ ದ್ವಿಶತಕ ಸಿಡಿಸಿದ್ದಾರೆ. ರಾವಲ್ಪಿಂಡಿಯಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಇಂಗ್ಲೆಂಡ್‌ ತಂಡ ಬ್ರೂಕ್ ಅಬ್ಬರದಿಂದಾಗಿ 429 ರನ್ ಕಲೆಹಾಕಿದೆ. ಬ್ರೂಕ್ ಈ ಪಂದ್ಯದಲ್ಲಿ ಕೇವಲ 116 ಎಸೆತಗಳಲ್ಲಿ 16 ಬೌಂಡರಿ ಹಾಗೂ 10 ಸಿಕ್ಸರ್‌ಗಳ ಸಹಿತ 202 ರನ್ ಬಾರಿಸಿದರು. ಈ ಮೂಲಕ ಏಕದಿನ ಕ್ರಿಕೆಟ್‌ನಲ್ಲಿ ದ್ವಿಶತಕ ಬಾರಿಸಿದ ಮೊದಲ ಇಂಗ್ಲೆಂಡ್ ಆಟಗಾರ ಎಂಬ ಹೆಗ್ಗಳಿಕೆಗೆ ಬ್ರೂಕ್ ಪಾತ್ರರಾಗಿದ್ದಾರೆ.

ಗಿಲ್ ದಾಖಲೆ ಮುರಿದ ಬ್ರೂಕ್

ಅಷ್ಟೇ ಅಲ್ಲ, ಏಕದಿನ ಕ್ರಿಕೆಟ್‌ನಲ್ಲಿ ಅತಿ ವೇಗವಾಗಿ ದ್ವಿಶತಕ ಬಾರಿಸಿದ ವಿಶ್ವ ದಾಖಲೆಯನ್ನೂ ಬ್ರೂಕ್ ತಮ್ಮದಾಗಿಸಿಕೊಂಡಿದ್ದಾರೆ. ಈ ಹಿಂದೆ ವೆಸ್ಟ್ ಇಂಡೀಸ್ ವಿರುದ್ಧ 117 ಎಸೆತಗಳಲ್ಲಿ ದ್ವಿಶತಕ ಬಾರಿಸಿದ್ದ ಶುಭ್‌ಮನ್ ಗಿಲ್ ಅವರ ಹೆಸರಿನಲ್ಲಿ ಈ ದಾಖಲೆ ಇತ್ತು. ಆದರೆ ಬ್ರೂಕ್ ಕೇವಲ 114 ಎಸೆತಗಳಲ್ಲೇ ದ್ವಿಶತಕ ಪೂರೈಸಿ ಹೊಸ ದಾಖಲೆ ನಿರ್ಮಿಸಿದ್ದಾರೆ. ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬಂದ ಬ್ರೂಕ್ ಕ್ರೀಸ್‌ಗೆ ಬರುತ್ತಿದ್ದಂತೆಯೇ ತಮ್ಮ ಎಂದಿನ ಶೈಲಿಯಲ್ಲಿ ಹೊಡಬಡಿ ಆಟವನ್ನು ಶುರುಮಾಡಿದರು.

 ಅತಿ ವೇಗವಾಗಿ ದ್ವಿಶತಕ ಬಾರಿಸಿದ ಆಟಗಾರರು

  • 114 ಎಸೆತಗಳು – ಹ್ಯಾರಿ ಬ್ರೂಕ್ (ಇಂಗ್ಲೆಂಡ್) vs ಶ್ರೀಲಂಕಾ (2026)
  •  117 ಎಸೆತಗಳು – ಶುಭ್‌ಮನ್ ಗಿಲ್ (ಭಾರತ) vs ವೆಸ್ಟ್ ಇಂಡೀಸ್ (2026)
  • 126 ಎಸೆತಗಳು – ಇಶಾನ್ ಕಿಶನ್ (ಭಾರತ) vs ಬಾಂಗ್ಲಾದೇಶ (2022)
  •  128 ಎಸೆತಗಳು – ಗ್ಲೆನ್ ಮ್ಯಾಕ್ಸ್‌ವೆಲ್ (ಆಸ್ಟ್ರೇಲಿಯಾ) vs ಅಫ್ಘಾನಿಸ್ತಾನ (2023)
  • 136 ಎಸೆತಗಳು – ಪತುಮ್ ನಿಸ್ಸಾಂಕ (ಶ್ರೀಲಂಕಾ) vs ಅಫ್ಘಾನಿಸ್ತಾನ (2024)

114 ಎಸೆತಗಳಲ್ಲಿ ದ್ವಿಶತಕ

ಹೀಗಾಗಿ ಕೇವಲ 42 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಅವರು, ನಂತರ 75 ಎಸೆತಗಳಲ್ಲಿ ಶತಕ ತಲುಪಿದರು. ಶತಕದ ಬಳಿಕ ಇನ್ನಷ್ಟು ಆಕ್ರಮಣಕಾರಿಯಾಗಿ ಬ್ಯಾಟ್ ಬೀಸಿದ ಬ್ರೂಕ್, 97 ಎಸೆತಗಳಲ್ಲಿ 150 ರನ್‌ಗಳ ಗಡಿ ದಾಟಿದರು. ನಂತರ ಕೇವಲ 114 ಎಸೆತಗಳಲ್ಲಿ ದ್ವಿಶತಕ ಪೂರೈಸಿ ಎಲ್ಲರನ್ನೂ ಬೆರಗುಗೊಳಿಸಿದರು. ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಇಂಗ್ಲೆಂಡ್ ತಂಡ 50 ಓವರ್‌ಗಳಲ್ಲಿ 429 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು.

ಅಪರೂಪದ ದಾಖಲೆ ಬ್ರೂಕ್ ಪಾಲ್

ಈ ದ್ವಿಶತಕದ ಮೂಲಕ ಹ್ಯಾರಿ ಬ್ರೂಕ್ ಮತ್ತೊಂದು ವಿಶೇಷ ಸಾಧನೆ ಮಾಡಿದ್ದಾರೆ. ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಶತಕ, ಏಕದಿನ ಪಂದ್ಯಗಳಲ್ಲಿ ದ್ವಿಶತಕ ಹಾಗೂ ಟೆಸ್ಟ್ ಕ್ರಿಕೆಟ್‌ನಲ್ಲಿ ತ್ರಿಶತಕ ಬಾರಿಸಿದ ಅಪರೂಪದ ಸಾಧನೆಯನ್ನು ಅವರು ಮಾಡಿದ್ದಾರೆ. ಈ ಹಿಂದೆ ವೆಸ್ಟ್ ಇಂಡೀಸ್‌ನ ಸ್ಫೋಟಕ ಬ್ಯಾಟ್ಸ್‌ಮನ್ ಕ್ರಿಸ್ ಗೇಲ್ ಈ ಸಾಧನೆ ಮಾಡಿದ್ದರು. ಇದೀಗ ಅವರ ಬಳಿಕ ಈ ಸಾಧನೆ ಮಾಡಿದ ಮತ್ತೊಬ್ಬ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆ ಬ್ರೂಕ್ ಪಾಲಾಗಿದೆ. ಸಾಮಾನ್ಯವಾಗಿ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವ ಬ್ರೂಕ್, ಏಕದಿನ ಕ್ರಿಕೆಟ್‌ನಲ್ಲಿ ದ್ವಿಶತಕ ಸಿಡಿಸುವ ಮೂಲಕ ತಮ್ಮ ಸಾಮರ್ಥ್ಯವನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಅವರ ಈ ಸ್ಫೋಟಕ ಇನ್ನಿಂಗ್ಸ್ ಕ್ರಿಕೆಟ್ ಅಭಿಮಾನಿಗಳ ಗಮನ ಸೆಳೆದಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!
ಮಧ್ಯರಾತ್ರಿ ಪಟಾಕಿ ಹೊಡೆದ ಆರೋಪ: ರಮ್ಯಾಗೆ ಫನ್ ವರ್ಲ್ಡ್ ಪ್ರತಿಕ್ರಿಯೆ
ಮಧ್ಯರಾತ್ರಿ ಪಟಾಕಿ ಹೊಡೆದ ಆರೋಪ: ರಮ್ಯಾಗೆ ಫನ್ ವರ್ಲ್ಡ್ ಪ್ರತಿಕ್ರಿಯೆ
‘ಪ್ರೇಮದ ಊರಲಿ’ ಸಿನಿಮಾ ನೋಡಲು ಬಂದ ಮಹಿಳೆಯರ ಜಗಳ: ವಿಡಿಯೋ
‘ಪ್ರೇಮದ ಊರಲಿ’ ಸಿನಿಮಾ ನೋಡಲು ಬಂದ ಮಹಿಳೆಯರ ಜಗಳ: ವಿಡಿಯೋ
'ಪ್ರೇಮದ ಊರಲಿ' ಕ್ರೇಜ್: ಟಿಕೆಟ್​​​ಗಾಗಿ ಪರಸ್ಪರ ಬಡಿದಾಡಿಕೊಂಡ ಮಹಿಳೆಯರು!
'ಪ್ರೇಮದ ಊರಲಿ' ಕ್ರೇಜ್: ಟಿಕೆಟ್​​​ಗಾಗಿ ಪರಸ್ಪರ ಬಡಿದಾಡಿಕೊಂಡ ಮಹಿಳೆಯರು!
ತುಮಕೂರು ಶಿರಾದಲ್ಲಿ ಸಾಲಕ್ಕೆ ಚಹಾ ನೀಡಿಲ್ಲವೆಂದು ಬಿಹಾರದ ಯುವಕರ ಅಟ್ಟಹಾಸ
ತುಮಕೂರು ಶಿರಾದಲ್ಲಿ ಸಾಲಕ್ಕೆ ಚಹಾ ನೀಡಿಲ್ಲವೆಂದು ಬಿಹಾರದ ಯುವಕರ ಅಟ್ಟಹಾಸ
ವಿಧಾನ ಪರಿಷತ್ ಶಿಕ್ಷಕರ ಕ್ಷೇತ್ರದ ಚುನಾವಣೆ: ಕಾಂಗ್ರೆಸ್​​ನಿಂದ ಆಮಿಷ ಆರೋಪ
ವಿಧಾನ ಪರಿಷತ್ ಶಿಕ್ಷಕರ ಕ್ಷೇತ್ರದ ಚುನಾವಣೆ: ಕಾಂಗ್ರೆಸ್​​ನಿಂದ ಆಮಿಷ ಆರೋಪ
ದಸರಾ ಮುಕ್ತಾಯ, ಇಂದೇ ಕಾಡಿಗೆ ವಾಪಸಾಗುತ್ತಾ ಗಜಪಡೆ?
ದಸರಾ ಮುಕ್ತಾಯ, ಇಂದೇ ಕಾಡಿಗೆ ವಾಪಸಾಗುತ್ತಾ ಗಜಪಡೆ?
ತುಮಕೂರು ವಿಶ್ವವಿದ್ಯಾಲಯದ ಜ್ಞಾನಸಿರಿ ಕ್ಯಾಂಪಸ್ ಬಳಿ ಚಿರತೆ ಪ್ರತ್ಯಕ್ಷ
ತುಮಕೂರು ವಿಶ್ವವಿದ್ಯಾಲಯದ ಜ್ಞಾನಸಿರಿ ಕ್ಯಾಂಪಸ್ ಬಳಿ ಚಿರತೆ ಪ್ರತ್ಯಕ್ಷ
ಯೂಟ್ಯೂಬ್ ನೋಡಿ ಮೊಬೈಲ್ ಕಳವು ಮಾಡುತ್ತಿದ್ದ ಕಳ್ಳ ಅರೆಸ್ಟ್
ಯೂಟ್ಯೂಬ್ ನೋಡಿ ಮೊಬೈಲ್ ಕಳವು ಮಾಡುತ್ತಿದ್ದ ಕಳ್ಳ ಅರೆಸ್ಟ್
ಸಿಎಂ ದೆಹಲಿ ಭೇಟಿಯ ಹಿಂದಿರುವ ಅಸಲಿ ಕಾರಣ ಬಿಚ್ಚಿಟ್ಟ ಡಿಸಿಎಂ ಪರಮೇಶ್ವರ್
ಸಿಎಂ ದೆಹಲಿ ಭೇಟಿಯ ಹಿಂದಿರುವ ಅಸಲಿ ಕಾರಣ ಬಿಚ್ಚಿಟ್ಟ ಡಿಸಿಎಂ ಪರಮೇಶ್ವರ್