ಕೊಹ್ಲಿ, ರೋಹಿತ್, ಪಂತ್​ಗೆ ಕೋಕ್; 2024 ರ ಅತ್ಯುತ್ತಮ ಟೆಸ್ಟ್ ತಂಡ ಪ್ರಕಟಿಸಿದ ಹರ್ಷ ಭೋಗ್ಲೆ

Harsha Bhogle's 2024 Best Test XI: ಭಾರತದ ಖ್ಯಾತ ಕ್ರಿಕೆಟ್ ವೀಕ್ಷಕ ವಿವರಣೆಗಾರ ಹರ್ಷ ಭೋಗ್ಲೆ ಅವರು 2024ರ ಅತ್ಯುತ್ತಮ ಟೆಸ್ಟ್ ತಂಡವನ್ನು ಆಯ್ಕೆ ಮಾಡಿದ್ದು, ಅದರಲ್ಲಿ ಯಶಸ್ವಿ ಜೈಸ್ವಾಲ್ ಮತ್ತು ಬೆನ್ ಡಕೆಟ್ ಅವರನ್ನು ಆರಂಭಿಕ ಆಟಗಾರರನ್ನಾಗಿ ಆಯ್ಕೆ ಮಾಡಿದ್ದಾರೆ. ಜೋ ರೂಟ್ ಮತ್ತು ಕೇನ್ ವಿಲಿಯಮ್ಸನ್ ಅವರಂತಹ ಅಗ್ರ ಬ್ಯಾಟ್ಸ್‌ಮನ್‌ಗಳು ಸಹ ಈ ತಂಡದಲ್ಲಿದ್ದಾರೆ. ರವೀಂದ್ರ ಜಡೇಜಾ, ಜಸ್ಪ್ರೀತ್ ಬುಮ್ರಾ (ನಾಯಕ) ಸೇರಿದಂತೆ ಪ್ರತಿಭಾವಂತ ಬೌಲರ್‌ಗಳು ಸಹ ಭಾಗವಾಗಿದ್ದಾರೆ.

ಕೊಹ್ಲಿ, ರೋಹಿತ್, ಪಂತ್​ಗೆ ಕೋಕ್; 2024 ರ ಅತ್ಯುತ್ತಮ ಟೆಸ್ಟ್ ತಂಡ ಪ್ರಕಟಿಸಿದ ಹರ್ಷ ಭೋಗ್ಲೆ
ಹರ್ಷ ಭೋಗ್ಲೆ
Follow us
ಪೃಥ್ವಿಶಂಕರ
|

Updated on:Dec 26, 2024 | 10:08 PM

ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಐದು ಪಂದ್ಯಗಳ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿ ರೋಚಕ ಘಟ್ಟ ತಲುಪಿದೆ. ಉಭಯ ತಂಡಗಳಿಂದ ಜಿದ್ದಾಜಿದ್ದಿನ ಕಾಳಗ ಕಂಡುಬರುತ್ತಿದೆ. ಈ ನಡುವೆ ಭಾರತದ ಖ್ಯಾತ ಕ್ರಿಕೆಟ್ ವೀಕ್ಷಕ ವಿವರಣೆಗಾರ ಹರ್ಷ ಭೋಗ್ಲೆ ಈ ವರ್ಷದ ಅತ್ಯುತ್ತಮ ಟೆಸ್ಟ್ ತಂಡವನ್ನು ಪ್ರಕಟಿಸಿದ್ದಾರೆ. ಹರ್ಷ ಭೋಗ್ಲೆ ತಮ್ಮ ತಂಡವನ್ನು ಆಯ್ಕೆ ಮಾಡುವಲ್ಲಿ ಹಲವು ಅಚ್ಚರಿಯ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ. ಈ ಬಾರಿ ಅವರ ತಂಡದಲ್ಲಿ ಇಬ್ಬರು ಇಂಗ್ಲಿಷ್ ಆಟಗಾರರು, ಇಬ್ಬರು ಭಾರತೀಯ ಆಟಗಾರರು ಮತ್ತು ಪಾಕಿಸ್ತಾನ, ಶ್ರೀಲಂಕಾ, ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್‌ ತಂಡದಿಂದ ತಲಾ ಒಬ್ಬೊಬ್ಬ ಆಟಗಾರರು ಸ್ಥಾನ ಪಡೆದಿದ್ದಾರೆ.

2024 ರ ಅತ್ಯುತ್ತಮ ಟೆಸ್ಟ್ ತಂಡ

ಹರ್ಷ ಭೋಗ್ಲೆ ತಮ್ಮ ತಂಡದಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಯಂತಹ ಸ್ಟಾರ್ ಆಟಗಾರರಿಗೆ ಸ್ಥಾನ ನೀಡಿಲ್ಲ. ರಿಷಬ್ ಪಂತ್ ಕೂಡ ಈ ತಂಡದಲ್ಲಿ ಸ್ಥಾನ ಪಡೆಯಲು ಸಾಧ್ಯವಾಗಿಲ್ಲ. ಹರ್ಷ ಭೋಗ್ಲೆ ತಮ್ಮ ಟೆಸ್ಟ್ ತಂಡದಲ್ಲಿ ಯಶಸ್ವಿ ಜೈಸ್ವಾಲ್ ಮತ್ತು ಬೆನ್ ಡಕೆಟ್ ಅವರನ್ನು ಆರಂಭಿಕರಾಗಿ ಆಯ್ಕೆ ಮಾಡಿದ್ದಾರೆ. ಯಶಸ್ವಿ ಜೈಸ್ವಾಲ್ ಈ ವರ್ಷ 1300 ಕ್ಕೂ ಹೆಚ್ಚು ರನ್ ಗಳಿಸಿದ್ದು, ಬೆನ್ ಡಕೆಟ್ 1,100 ರನ್‌ಗಳೊಂದಿಗೆ ವರ್ಷವನ್ನು ಕೊನೆಗೊಳಿಸಿದ್ದಾರೆ. ಕ್ರಿಕ್‌ಬಜ್ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಭೋಗ್ಲೆ, ‘ಜೈಸ್ವಾಲ್ ಅವರು ಆರಂಭಿಕ ಬ್ಯಾಟ್ಸ್‌ಮನ್ ಆಗಿ ಉತ್ತಮವಾಗಿ ಆಡಿದ್ದಾರೆ. ಆದ್ದರಿಂದ ಅವರು 2024 ರ ಟೆಸ್ಟ್ ತಂಡದಲ್ಲಿ ನನ್ನ ಮೊದಲ ಆಯ್ಕೆಯಾಗಿದ್ದಾರೆ. ನಾನು ಬೆನ್ ಡಕೆಟ್ ಅವರನ್ನು ಮತ್ತೊಬ್ಬ ಆರಂಭಿಕನಾಗಿ ಆಯ್ಕೆ ಮಾಡಿದ್ದೇನೆ. ಏಕೆಂದರೆ ಅವರು ಕೂಡ ಈ ವರ್ಷ ಸಾಕಷ್ಟು ರನ್ ಗಳಿಸಿದ್ದಾರೆ ಎಂದಿದ್ದಾರೆ.

ಹರ್ಷ ಭೋಗ್ಲೆ ತಮ್ಮ ತಂಡದಲ್ಲಿ ಕೇನ್ ವಿಲಿಯಮ್ಸನ್ ಅವರನ್ನು ಮೂರನೇ ಸ್ಥಾನಕ್ಕೆ ಆಯ್ಕೆ ಮಾಡಿದ್ದು, ಜೋ ರೂಟ್ ಅವರನ್ನು ನಾಲ್ಕನೇ ಸ್ಥಾನಕ್ಕೆ ಆಯ್ಕೆ ಮಾಡಿದ್ದಾರೆ. ಈ ಇಬ್ಬರೂ ಆಟಗಾರರು ಈ ವರ್ಷ ಟೆಸ್ಟ್‌ನಲ್ಲಿ ಉತ್ತಮವಾಗಿ ಬ್ಯಾಟ್ ಬೀಸಿದ್ದು, ಜೋ ರೂಟ್ 1,556 ರನ್ ಗಳಿಸುವ ಮೂಲಕ ಈ ವರ್ಷ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡಿದ್ದರೆ, ವಿಲಿಯಮ್ಸನ್ 1,013 ರನ್ ಗಳಿಸಿದ್ದಾರೆ. 5 ನೇ ಕ್ರಮಾಂಕದಲ್ಲಿ ಹ್ಯಾರಿ ಬ್ರೂಕ್ ಅವರನ್ನು ಆಯ್ಕೆ ಮಾಡಿದ್ದು, ಶ್ರೀಲಂಕಾದ ಕಮಿಂದು ಮೆಂಡಿಸ್ ಕೂಡ ಹರ್ಷ ಭೋಗ್ಲೆ ಅವರ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಪಾಕಿಸ್ತಾನದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಮೊಹಮ್ಮದ್ ರಿಜ್ವಾನ್ ಅವರನ್ನು ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಆಗಿ ಆಯ್ಕೆ ಮಾಡಲಾಗಿದೆ.

ಬೌಲಿಂಗ್ ವಿಭಾಗದಲ್ಲಿ ಯಾರ್ಯಾರು?

ಹರ್ಷ ಭೋಗ್ಲೆ ಅವರು ಭಾರತದ ಆಲ್‌ರೌಂಡರ್ ರವೀಂದ್ರ ಜಡೇಜಾ ಅವರನ್ನು 8 ನೇ ಸ್ಥಾನದಲ್ಲಿ ಆಯ್ಕೆ ಮಾಡಿದ್ದಾರೆ. ಇದಲ್ಲದೆ, ಗಸ್ ಅಟ್ಕಿನ್ಸನ್, ಕಗಿಸೊ ರಬಾಡ ಮತ್ತು ಜಸ್ಪ್ರೀತ್ ಬುಮ್ರಾ ಈ ತಂಡದಲ್ಲಿ ವೇಗದ ಬೌಲರ್‌ಗಳಾಗಿ ಆಯ್ಕೆಯಾಗಿದ್ದಾರೆ. ಹರ್ಷ ಭೋಗ್ಲೆ ಜಸ್ಪ್ರೀತ್ ಬುಮ್ರಾ ಅವರನ್ನು ತಮ್ಮ ತಂಡದ ನಾಯಕನನ್ನಾಗಿ ಮಾಡಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:06 pm, Thu, 26 December 24

ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ