IPL 2021: ಐಪಿಎಲ್​ನಲ್ಲಿ ಹೊಸ ಇತಿಹಾಸ ನಿರ್ಮಿಸಲಿದ್ದಾರೆ ಹರ್ಷಲ್ ಪಟೇಲ್

Harshal Patel: ಮುಂದಿನ 4 ಪಂದ್ಯಗಳಲ್ಲಿ 1 ವಿಕೆಟ್ ಉರುಳಿಸಿದರೆ ಹರ್ಷಲ್ ಪಟೇಲ್ ಹೆಸರಿನಲ್ಲಿ ಐಪಿಎಲ್​ನಲ್ಲಿ ಹೊಸ ದಾಖಲೆ ನಿರ್ಮಾಣವಾಗಲಿದೆ.

IPL 2021: ಐಪಿಎಲ್​ನಲ್ಲಿ ಹೊಸ ಇತಿಹಾಸ ನಿರ್ಮಿಸಲಿದ್ದಾರೆ ಹರ್ಷಲ್ ಪಟೇಲ್
Harshal Patel
Follow us
| Updated By: ಝಾಹಿರ್ ಯೂಸುಫ್

Updated on: Sep 27, 2021 | 4:48 PM

ಆರ್​ಸಿಬಿ (RCB) ವೇಗಿ ಹರ್ಷಲ್ ಪಟೇಲ್ (Harshal Patel) ಮುಂಬೈ ಇಂಡಿಯನ್ಸ್ (Mumbai Indians) ವಿರುದ್ದ ಹ್ಯಾಟ್ರಿಕ್ ವಿಕೆಟ್ ಪಡೆಯುವ ಮೂಲಕ ಐಪಿಎಲ್​ನ (Ipl 2021) ಹ್ಯಾಟ್ರಿಕ್ ಸರದಾರರ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ. ದುಬೈನಲ್ಲಿ ನಡೆದ ಈ ಪಂದ್ಯದಲ್ಲಿ ಒಟ್ಟು ನಾಲ್ಕು ವಿಕೆಟ್ ಉರುಳಿಸುವ ಮೂಲಕ ಹರ್ಷಲ್ ಮುಂಬೈ ತಂಡವನ್ನು ಸೋಲಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಅಷ್ಟೇ ಅಲ್ಲದೆ ಈ ನಾಲ್ಕು ವಿಕೆಟ್​ನೊಂದಿಗೆ ಹರ್ಷಲ್ ಪಟೇಲ್ ಐಪಿಎಲ್​ ಸೀಸನ್​ 14ರ ವಿಕೆಟ್​ಗಳ ಸಂಖ್ಯೆಯನ್ನು 23ಕ್ಕೇರಿಸಿದ್ದಾರೆ. ಪ್ರಸ್ತುತ ಟೂರ್ನಿಯಲ್ಲಿ ವಿಕೆಟ್ ಬೇಟೆ ಮುಂದುವರೆಸಿರುವ ಬಲಗೈ ವೇಗಿ ಪರ್ಪಲ್ ಕ್ಯಾಪ್ ವಿನ್ನರ್ ಆಗುವ ಸಾಧ್ಯತೆ ಹೆಚ್ಚಿದೆ. ಅಷ್ಟೇ ಅಲ್ಲದೆ ಐಪಿಎಲ್​ ಇತಿಹಾಸದಲ್ಲೇ ಭಾರತದ ಅತ್ಯಂತ ಯಶಸ್ವಿ ದೇಶೀಯ ಬೌಲರ್​ ಎನಿಸಿಕೊಳ್ಳಲು ಕೇವಲ 1 ವಿಕೆಟ್​​ನ ಅವಶ್ಯಕತೆಯಿದೆ.

ಹೌದು, ಹರ್ಷಲ್ ಪಟೇಲ್ ಇದುವರೆಗೆ ಟೀಮ್ ಇಂಡಿಯಾವನ್ನು ಪ್ರತಿನಿಧಿಸಿಲ್ಲ. ಭಾರತ ತಂಡವನ್ನು ಪ್ರತಿನಿಧಿಸದೇ ಐಪಿಎಲ್​ನಲ್ಲಿ ಅತೀ ಹೆಚ್ಚು ವಿಕೆಟ್​ ಪಡೆದ ಬೌಲರ್ ಎನಿಸಿಕೊಳ್ಳಲು ಹರ್ಷಲ್​ಗೆ ಕೇವಲ 1 ವಿಕೆಟ್​ನ ಅವಶ್ಯಕತೆಯಿದೆ. ಇನ್ನು 4 ಪಂದ್ಯಗಳು ಬಾಕಿಯಿದ್ದು, ಇದರಲ್ಲಿ 1 ವಿಕೆಟ್ ಪಡೆಯುವ ಮೂಲಕ ಹರ್ಷಲ್ ಪಟೇಲ್ ಐಪಿಎಲ್​ನಲ್ಲಿ ಹೊಸ ದಾಖಲೆ ಬರೆಯುವುದು ಬಹುತೇಕ ಖಚಿತ.

ಪ್ರಸ್ತುತ ಈ ದಾಖಲೆ ಯಜುವೇಂದ್ರ ಚಹಲ್​ ಹೆಸರಿನಲ್ಲಿದೆ. ಚಹಲ್ 2015 ರ ಐಪಿಎಲ್ ಸೀಸನ್​ನಲ್ಲಿ ಆರ್​ಸಿಬಿ ಪರ 23 ವಿಕೆಟ್ ಪಡೆದಿದ್ದರು. ಈ ವೇಳೆ ಚಹಲ್ ಭಾರತ ತಂಡವನ್ನು ಪ್ರತಿನಿಧಿಸಿರಲಿಲ್ಲ. ಅದರಂತೆ ಕಳೆದ 6 ವರ್ಷಗಳಿಂದ ಐಪಿಎಲ್​ನಲ್ಲಿ ಮಿಂಚಿದ್ದ ದೇಶೀಯ ಬೌಲರುಗಳ ಪಟ್ಟಿಯಲ್ಲಿ ಚಹಲ್ ಅಗ್ರಸ್ಥಾನದಲ್ಲಿದ್ದಾರೆ. ಇದೀಗ 23 ವಿಕೆಟ್ ಉರುಳಿಸುವ ಮೂಲಕ ಹರ್ಷಲ್ ಪಟೇಲ್ ಚಹಲ್ ದಾಖಲೆಯನ್ನು ಸರಿಗಟ್ಟಿದ್ದಾರೆ. ಮುಂದಿನ 4 ಪಂದ್ಯಗಳಲ್ಲಿ 1 ವಿಕೆಟ್ ಉರುಳಿಸಿದರೆ ಹರ್ಷಲ್ ಪಟೇಲ್ ಹೆಸರಿನಲ್ಲಿ ಐಪಿಎಲ್​ನಲ್ಲಿ ಹೊಸ ದಾಖಲೆ ನಿರ್ಮಾಣವಾಗಲಿದೆ. ಒಟ್ಟಿನಲ್ಲಿ ಹರ್ಷಲ್ ಪಟೇಲ್ ಭರ್ಜರಿ ಬೌಲಿಂಗ್​ನೊಂದಿಗೆ ಆರ್​ಸಿಬಿ ಗೆಲುವಿನ ಲಯಕ್ಕೆ ಮರಳಿದ್ದು, ಮುಂದಿನ ಎರಡು ಪಂದ್ಯಗಳನ್ನು ಗೆಲ್ಲುವ ಮೂಲಕ ಪ್ಲೇ ಆಫ್​ ಪ್ರವೇಶಿಸುವ ಇರಾದೆಯಲ್ಲಿದೆ ಆರ್​ಸಿಬಿ.

ಇದನ್ನೂ ಓದಿ: IPL 2021: ಇದು ಅಂತಿಂಥ ಗೆಲುವಲ್ಲ…ಮುಂಬೈ ದಾಖಲೆಯನ್ನು ಅಳಿಸಿ ಹಾಕಿದ RCB

ಇದನ್ನೂ ಓದಿ: IPL 2021: RCB ಪರ ಹ್ಯಾಟ್ರಿಕ್ ವಿಕೆಟ್ ಪಡೆದ ಮೂವರು ಬೌಲರುಗಳು ಇವರೇ..!

ಇದನ್ನೂ ಓದಿ: Crime News: ತಾಯಿಗೆ ಅನೈತಿಕ ಸಂಬಂಧ: ಅದನ್ನೇ ಬಂಡವಾಳ ಮಾಡಿಕೊಂಡ ಮಗಳು

(Harshal Patel- Most wickets by an uncapped player in a season)

ವಿಡಿಯೋ: ವೀಕೆಂಡ್​ನಲ್ಲಿ ಅಭಿಮಾನಿಗಳ ಭೇಟಿ ಮಾಡಿದ ಧ್ರುವ ಸರ್ಜಾ
ವಿಡಿಯೋ: ವೀಕೆಂಡ್​ನಲ್ಲಿ ಅಭಿಮಾನಿಗಳ ಭೇಟಿ ಮಾಡಿದ ಧ್ರುವ ಸರ್ಜಾ
ರೀಲ್ಸ್​ ಹುಚ್ಚು, 10ಮೀ. ಎತ್ತರದ ಸೈನ್‌ಬೋರ್ಡ್ ಮೇಲೆ ಯುವಕನ ಸಾಹಸ
ರೀಲ್ಸ್​ ಹುಚ್ಚು, 10ಮೀ. ಎತ್ತರದ ಸೈನ್‌ಬೋರ್ಡ್ ಮೇಲೆ ಯುವಕನ ಸಾಹಸ
ಬಿಜೆಪಿಯಲ್ಲಿ ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ
ಬಿಜೆಪಿಯಲ್ಲಿ ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ