ಐಪಿಎಲ್​ ಹರಾಜಿಗೂ ಮುನ್ನ ಎಲ್ಲಾ ಫ್ರಾಂಚೈಸಿಗಳ ಗಮನ ಸೆಳೆದ ಹರ್ಷಲ್ ಪಟೇಲ್

IPL 2024: ಐಪಿಎಲ್ 2024 ರ ಹರಾಜು ಡಿಸೆಂಬರ್ 19 ರಂದು ದುಬೈನಲ್ಲಿ ನಡೆಯಲಿದೆ. ಈ ಬಾರಿ ಹರಾಜು ಪಟ್ಟಿಯಲ್ಲಿ ಒಟ್ಟು 333 ಆಟಗಾರರು ಹೆಸರು ಕಾಣಿಸಿಕೊಂಡಿದೆ. ಇದರಲ್ಲಿ ಕೇವಲ 77 ಆಟಗಾರರಿಗೆ ಮಾತ್ರ ಅವಕಾಶ ದೊರೆಯಲಿದೆ. ಇತ್ತ ಹರ್ಷಲ್ ಪಟೇಲ್ ಸೇರಿದಂತೆ ಒಟ್ಟು 23 ಆಟಗಾರರು ತಮ್ಮ ಮೂಲ ಬೆಲೆಯನ್ನು 2 ಕೋಟಿ ರೂ. ಎಂದು ಘೋಷಿಸಿದ್ದಾರೆ.

ಐಪಿಎಲ್​ ಹರಾಜಿಗೂ ಮುನ್ನ ಎಲ್ಲಾ ಫ್ರಾಂಚೈಸಿಗಳ ಗಮನ ಸೆಳೆದ ಹರ್ಷಲ್ ಪಟೇಲ್
Harshal Patel
Follow us
TV9 Web
| Updated By: ಝಾಹಿರ್ ಯೂಸುಫ್

Updated on: Dec 17, 2023 | 3:23 PM

ಈ ಬಾರಿಯ ಐಪಿಎಲ್ (IPL 2024) ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಒಟ್ಟು 11 ಆಟಗಾರರನ್ನು ಬಿಡುಗಡೆ ಮಾಡಿತ್ತು. ಈ ಆಟಗಾರರ ಪಟ್ಟಿಯಲ್ಲಿ ಪರ್ಪಲ್ ಪಟೇಲ್ ಖ್ಯಾತಿಯ ಹರ್ಷಲ್ ಪಟೇಲ್ ಕೂಡ ಇದ್ದರು. ಕಳೆದ ಮೂರು ಸೀಸನ್​ಗಳಿಂದ ಆರ್​ಸಿಬಿ ಪರ ಕಣಕ್ಕಿಳಿದಿದ್ದ ಹರ್ಷಲ್ ಪಟೇಲ್ ಈ ಬಾರಿ ತಂಡದಿಂದ ಹೊರಬಿದ್ದಿದ್ದರು.

ಆದರೆ ಇದೀಗ ದೇಶೀಯ ಅಂಗಳದಲ್ಲಿ ನಡೆದ ವಿಜಯ್​ ಹಜಾರೆ ಟೂರ್ನಿಯಲ್ಲಿ ಹರ್ಷಲ್ ಪಟೇಲ್ ಭರ್ಜರಿ ಪ್ರದರ್ಶನ ನೀಡುವ ಮೂಲಕ ಮಿಂಚಿದ್ದಾರೆ. ಈ ಮೂಲಕ ಹರಾಜಿಗೂ ಮುನ್ನ ಎಲ್ಲಾ ಫ್ರಾಂಚೈಸಿಗಳ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಹರ್ಷಲ್ ಪಟೇಲ್ ವಿಜಯ್ ಹಜಾರೆ ಟ್ರೋಫಿಯಲ್ಲಿ 10 ಪಂದ್ಯಗಳನ್ನು ಆಡಿದ್ದಾರೆ. ಈ ವೇಳೆ ಒಟ್ಟು 19 ವಿಕೆಟ್​ ಕಬಳಿಸಿ ಟೂರ್ನಿಯಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಬೌಲರ್​ ಎನಿಸಿಕೊಂಡಿದ್ದಾರೆ. ಇದು ಹರ್ಷಲ್ ಪಟೇಲ್ ಪಾಲಿಗೆ ಪ್ಲಸ್ ಪಾಯಿಂಟ್ ಆಗಲಿದೆ.

ಏಕೆಂದರೆ ಕಳೆದ ಮೂರು ಸೀಸನ್​ಗಳಲ್ಲಿ ಆರ್​ಸಿಬಿ ಪರ ಬೌಲಿಂಗ್ ಮಾಡಿದ್ದ ಹರ್ಷಲ್ ಪಟೇಲ್ ಒಟ್ಟು 65 ವಿಕೆಟ್ ಕಬಳಿಸಿದ್ದರು. ಆದರೆ ಐಪಿಎಲ್ 2023 ರಲ್ಲಿ 13 ಪಂದ್ಯಗಳಿಂದ ಕೇವಲ 14 ವಿಕೆಟ್ ಪಡೆಯಲಷ್ಟೇ ಶಕ್ತರಾಗಿದ್ದರು. ಇದೇ ಕಾರಣದಿಂದಾಗಿ ಹರ್ಷಲ್ ಅವರನ್ನು ಆರ್​ಸಿಬಿ ತಂಡದಿಂದ ಕೈ ಬಿಟ್ಟಿತ್ತು.

ಇದೀಗ ದೇಶೀಯ ಅಂಗಳದಲ್ಲಿ 10 ಪಂದ್ಯಗಳಿಂದ 19 ವಿಕೆಟ್ ಕಬಳಿಸುವ ಮೂಲಕ ಹರ್ಷಲ್ ಪಟೇಲ್ ಕಂಬ್ಯಾಕ್ ಮಾಡಿದ್ದಾರೆ. ಈ ಮೂಲಕ ಮತ್ತೆ ಐಪಿಎಲ್​ ಕದ ತಟ್ಟುವ ಸೂಚನೆ ನೀಡಿದ್ದಾರೆ.

ಕೋಟಿ ಮೂಲ ಬೆಲೆಯೊಂದಿಗೆ ಹರ್ಷಲ್:

ಈ ಬಾರಿಯ ಐಪಿಎಲ್​ನಲ್ಲಿ ಹರ್ಷಲ್ ಪಟೇಲ್ ತಮ್ಮ ಮೂಲ ಬೆಲೆಯನ್ನು 2 ಕೋಟಿ ರೂ. ಎಂದು ಘೋಷಿಸಿದ್ದಾರೆ. ಹೀಗಾಗಿ ಹರ್ಷಲ್ ಅವರ ಆರಂಭಿಕ ಬಿಡ್ಡಿಂಗ್ ಕೋಟಿಯಿಂದಲೇ ಶುರುವಾಗಲಿದೆ. ಈ 2 ಕೋಟಿ ಮೊತ್ತ ಎರಡಂಕಿಗೆ ತಲುಪಲಿದೆಯಾ ಕಾದು ನೋಡಬೇಕಿದೆ.

ಇದನ್ನೂ ಓದಿ: IPL 2024 Auction: ಹರಾಜಿನಲ್ಲಿ ಕಾಣಿಸಿಕೊಳ್ಳಲಿರುವ 333 ಆಟಗಾರರ ಪಟ್ಟಿ ಇಲ್ಲಿದೆ

ಐಪಿಎಲ್ ಹರಾಜು ಯಾವಾಗ?

ಐಪಿಎಲ್ 2024 ರ ಹರಾಜು ಡಿಸೆಂಬರ್ 19 ರಂದು ದುಬೈನಲ್ಲಿ ನಡೆಯಲಿದೆ. ಈ ಬಾರಿ ಹರಾಜು ಪಟ್ಟಿಯಲ್ಲಿ ಒಟ್ಟು 333 ಆಟಗಾರರು ಹೆಸರು ಕಾಣಿಸಿಕೊಂಡಿದೆ. ಇದರಲ್ಲಿ ಕೇವಲ 77 ಆಟಗಾರರಿಗೆ ಮಾತ್ರ ಅವಕಾಶ ದೊರೆಯಲಿದೆ. ಇತ್ತ ಹರ್ಷಲ್ ಪಟೇಲ್ ಸೇರಿದಂತೆ ಒಟ್ಟು 23 ಆಟಗಾರರು ತಮ್ಮ ಮೂಲ ಬೆಲೆಯನ್ನು 2 ಕೋಟಿ ರೂ. ಎಂದು ಘೋಷಿಸಿದ್ದಾರೆ. ಹೀಗಾಗಿ ಮೊದಲ ಸುತ್ತಿನಿಂದಲೇ ಆಟಗಾರರ ಖರೀದಿಗೆ ಭರ್ಜರಿ ಪೈಪೋಟಿ ಕಂಡು ಬರಬಹುದು.

ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು
ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು
ಬಿಜೆಪಿ ಶಾಸಕ ಮುನಿರತ್ನಗೆ ಬಿತ್ತು ಮೊಟ್ಟೆ ಏಟು: ಇಲ್ಲಿದೆ ನೋಡಿ ವಿಡಿಯೋ
ಬಿಜೆಪಿ ಶಾಸಕ ಮುನಿರತ್ನಗೆ ಬಿತ್ತು ಮೊಟ್ಟೆ ಏಟು: ಇಲ್ಲಿದೆ ನೋಡಿ ವಿಡಿಯೋ
ಕೆನ್-ಬೇತ್ವಾ ನದಿ ಜೋಡಣೆ ಯೋಜನೆಗೆ ಮೋದಿ ಶಂಕುಸ್ಥಾಪನೆ
ಕೆನ್-ಬೇತ್ವಾ ನದಿ ಜೋಡಣೆ ಯೋಜನೆಗೆ ಮೋದಿ ಶಂಕುಸ್ಥಾಪನೆ
Video: ಕಜಾಕಿಸ್ತಾನದಲ್ಲಿ 110 ಮಂದಿ ಪ್ರಯಾಣಿಕರಿದ್ದ ವಿಮಾನ ಪತನ
Video: ಕಜಾಕಿಸ್ತಾನದಲ್ಲಿ 110 ಮಂದಿ ಪ್ರಯಾಣಿಕರಿದ್ದ ವಿಮಾನ ಪತನ
ಮ್ಯಾಕ್ಸ್ ಸಿನಿಮಾ ಬಗ್ಗೆ ಪ್ರಾಮಾಣಿಕ ವಿಮರ್ಶೆ ತಿಳಿಸಿದ ಯಶ್ ಅಭಿಮಾನಿಗಳು
ಮ್ಯಾಕ್ಸ್ ಸಿನಿಮಾ ಬಗ್ಗೆ ಪ್ರಾಮಾಣಿಕ ವಿಮರ್ಶೆ ತಿಳಿಸಿದ ಯಶ್ ಅಭಿಮಾನಿಗಳು