AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

6 ಎಸೆತಗಳಲ್ಲಿ 4 ವಿಕೆಟ್: ಹರ್ಷಿತ್ ರಾಣಾ ಬೆಂಕಿ ಬೌಲಿಂಗ್

India vs Prime Minister 11: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ಪ್ರೈಮ್ ಮಿನಿಸ್ಟರ್ಸ್ ಇಲೆವೆನ್ ವಿರುದ್ಧ ಅಭ್ಯಾಸ ಪಂದ್ಯವಾಡುತ್ತಿದೆ. ತಲಾ 46 ಓವರ್​ಗಳಿಗೆ ಸೀಮಿತವಾಗಿರುವ ಈ ಪಂದ್ಯದ ಮೂಲಕ ಟೀಮ್ ಇಂಡಿಯಾ ಪಿಂಕ್ ಬಾಲ್ ಟೆಸ್ಟ್​ಗೆ ಸಜ್ಜಾಗುತ್ತಿದೆ.

6 ಎಸೆತಗಳಲ್ಲಿ 4 ವಿಕೆಟ್: ಹರ್ಷಿತ್ ರಾಣಾ ಬೆಂಕಿ ಬೌಲಿಂಗ್
Harshit rana
ಝಾಹಿರ್ ಯೂಸುಫ್
|

Updated on: Dec 01, 2024 | 1:00 PM

Share

ಕ್ಯಾನ್​​ಬೆರಾ ಮನುಕಾ ಓವಲ್​ ಮೈದಾನದಲ್ಲಿ ನಡೆಯುತ್ತಿರುವ ಪ್ರೈಮ್ ಮಿನಿಸ್ಟರ್ಸ್ ಇಲೆವೆನ್ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಟೀಮ್ ಇಂಡಿಯಾದ ಯುವ ವೇಗಿ ಹರ್ಷಿತ್ ರಾಣಾ ಮಿಂಚಿನ ದಾಳಿ ಸಂಘಟಿಸಿದ್ದಾರೆ. ಈ ಪಂದ್ಯದಲ್ಲಿ ಟಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡಿದ್ದರು.

ನಾಯಕನ ನಿರ್ಧಾರವನ್ನು ಸಮರ್ಥಿಸುವಂತೆ ದಾಳಿ ಸಂಘಟಿಸಿದ ಟೀಮ್ ಇಂಡಿಯಾ ವೇಗಿಗಳು ಪ್ರೈಮ್ ಮಿನಿಸ್ಟರ್ಸ್ ಇಲೆವೆನ್​ಗೆ ಆರಂಭಿಕ ಆಘಾತ ನೀಡುವಲ್ಲಿ ಯಶಸ್ವಿಯಾದರು. 22 ರನ್​​ಗಳಿಗೆ 2 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ತಂಡಕ್ಕೆ ಸ್ಯಾಮ್ ಕಾನ್ಟಾಸ್ ಹಾಗೂ ಜಾಕ್ ಕ್ಲೇಟನ್ ಆಸರೆಯಾದರು. ಈ ಜೋಡಿಯು 2ನೇ ವಿಕೆಟ್​ಗೆ ಶತಕದ ಜೊತೆಯಾಟವಾಡಿದರು.

ಈ ಹಂತದಲ್ಲಿ ದಾಳಿಗಿಳಿದ ಹರ್ಷಿತ್ ರಾಣಾ ಬ್ಯಾಕ್ ಟು ಬ್ಯಾಕ್ ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾದರು. 23ನೇ ಓವರ್​​ನ 4ನೇ ಎಸೆತದಲ್ಲಿ ಕ್ಲೇಟನ್ (40) ವಿಕೆಟ್ ಪಡೆದ ರಾಣಾ, 6ನೇ ಎಸೆತದಲ್ಲಿ ಆಲಿವರ್ ಡೇವಿಸ್ (0) ರನ್ನು ಕ್ಲೀನ್ ಬೌಲ್ಡ್ ಮಾಡಿದರು.

ಇನ್ನು 25ನೇ ಓವರ್​​ನ ಮೊದಲ ಎಸೆತದಲ್ಲಿ ನಾಯಕ ಜ್ಯಾಕ್ ಎಡ್ವರ್ಡ್ಸ್ (1) ವಿಕೆಟ್ ಕಬಳಿಸಿದರು. ಹಾಗೆಯೇ ಇದೇ ಓವರ್​​ನ 3ನೇ ಎಸೆತದಲ್ಲಿ ಸ್ಯಾಮ್ ಹಾರ್ಪರ್ (0)ಗೂ ಪೆವಿಲಿಯನ್ ಹಾದಿ ತೋರಿಸಿದರು. ಈ ಮೂಲಕ ಕೇವಲ 6 ಎಸೆತಗಳಲ್ಲಿ ಹರ್ಷಿತ್ ರಾಣಾ ಯಾವುದೇ ರನ್ ನೀಡದೇ 4 ವಿಕೆಟ್ ಕಬಳಿಸಿ ಮಿಂಚಿದರು.

ಹರ್ಷಿತ್ ರಾಣಾ ಬೌಲಿಂಗ್:

ಇದರ ಹೊರತಾಗಿಯೂ  ಪ್ರೈಮ್ ಮಿನಿಸ್ಟರ್ಸ್ ಇಲೆವೆನ್ ತಂಡವು 40 ಓವರ್​​ಗಳ ಮುಕ್ತಾಯದ ವೇಳೆಗೆ 8 ವಿಕೆಟ್ ಕಳೆದುಕೊಂಡು 210 ರನ್ ಕಲೆಹಾಕುವಲ್ಲಿ ಯಶಸ್ವಿಯಾಗಿದೆ.

ಪ್ರೈಮ್ ಮಿನಿಸ್ಟರ್ಸ್ ಇಲೆವೆನ್: ಜ್ಯಾಕ್ ಎಡ್ವರ್ಡ್ಸ್ (ನಾಯಕ) , ಮ್ಯಾಟ್ ರೆನ್‌ಶಾ , ಜ್ಯಾಕ್ ಕ್ಲೇಟನ್ , ಆಲಿವರ್ ಡೇವಿಸ್ , ಜೇಡನ್ ಗುಡ್‌ವಿನ್ , ಸ್ಯಾಮ್ ಹಾರ್ಪರ್ (ವಿಕೆಟ್ ಕೀಪರ್) , ಚಾರ್ಲಿ ಅ್ಯಂಡರ್ಸನ್ , ಸ್ಯಾಮ್ ಕೊನ್‌ಸ್ಟಾಸ್ , ಸ್ಕಾಟ್ ಬೋಲ್ಯಾಂಡ್ , ಲಾಯ್ಡ್ ಪೋಪ್ , ಹ್ಯಾನೋ ಜೇಕಬ್ಸ್ , ಮಹ್ಲಿ ಬಿಯರ್ಡ್‌ಮನ್ , ಏಡನ್ ಓನ್ ಕಾನರ್ , ಜೆಮ್ ರಯಾನ್, ಜಾಕ್ ನಿಸ್ಬೆಟ್.

ಇದನ್ನೂ ಓದಿ: IPL 2025: RCB ತಂಡಕ್ಕೆ 4 ತವರು ಮೈದಾನ..!

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಜಸ್​ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್, ಶುಭ್​ಮನ್ ಗಿಲ್ , ವಿರಾಟ್ ಕೊಹ್ಲಿ , ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಸರ್ಫರಾಝ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ , ಮೊಹಮ್ಮದ್ ಸಿರಾಜ್ , ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ದೇವದತ್ ಪಡಿಕ್ಕಲ್.

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ