
ಕ್ಯಾನ್ಬೆರಾ ಮನುಕಾ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಪ್ರೈಮ್ ಮಿನಿಸ್ಟರ್ಸ್ ಇಲೆವೆನ್ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಟೀಮ್ ಇಂಡಿಯಾದ ಯುವ ವೇಗಿ ಹರ್ಷಿತ್ ರಾಣಾ ಮಿಂಚಿನ ದಾಳಿ ಸಂಘಟಿಸಿದ್ದಾರೆ. ಈ ಪಂದ್ಯದಲ್ಲಿ ಟಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡಿದ್ದರು.
ನಾಯಕನ ನಿರ್ಧಾರವನ್ನು ಸಮರ್ಥಿಸುವಂತೆ ದಾಳಿ ಸಂಘಟಿಸಿದ ಟೀಮ್ ಇಂಡಿಯಾ ವೇಗಿಗಳು ಪ್ರೈಮ್ ಮಿನಿಸ್ಟರ್ಸ್ ಇಲೆವೆನ್ಗೆ ಆರಂಭಿಕ ಆಘಾತ ನೀಡುವಲ್ಲಿ ಯಶಸ್ವಿಯಾದರು. 22 ರನ್ಗಳಿಗೆ 2 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ತಂಡಕ್ಕೆ ಸ್ಯಾಮ್ ಕಾನ್ಟಾಸ್ ಹಾಗೂ ಜಾಕ್ ಕ್ಲೇಟನ್ ಆಸರೆಯಾದರು. ಈ ಜೋಡಿಯು 2ನೇ ವಿಕೆಟ್ಗೆ ಶತಕದ ಜೊತೆಯಾಟವಾಡಿದರು.
ಈ ಹಂತದಲ್ಲಿ ದಾಳಿಗಿಳಿದ ಹರ್ಷಿತ್ ರಾಣಾ ಬ್ಯಾಕ್ ಟು ಬ್ಯಾಕ್ ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾದರು. 23ನೇ ಓವರ್ನ 4ನೇ ಎಸೆತದಲ್ಲಿ ಕ್ಲೇಟನ್ (40) ವಿಕೆಟ್ ಪಡೆದ ರಾಣಾ, 6ನೇ ಎಸೆತದಲ್ಲಿ ಆಲಿವರ್ ಡೇವಿಸ್ (0) ರನ್ನು ಕ್ಲೀನ್ ಬೌಲ್ಡ್ ಮಾಡಿದರು.
ಇನ್ನು 25ನೇ ಓವರ್ನ ಮೊದಲ ಎಸೆತದಲ್ಲಿ ನಾಯಕ ಜ್ಯಾಕ್ ಎಡ್ವರ್ಡ್ಸ್ (1) ವಿಕೆಟ್ ಕಬಳಿಸಿದರು. ಹಾಗೆಯೇ ಇದೇ ಓವರ್ನ 3ನೇ ಎಸೆತದಲ್ಲಿ ಸ್ಯಾಮ್ ಹಾರ್ಪರ್ (0)ಗೂ ಪೆವಿಲಿಯನ್ ಹಾದಿ ತೋರಿಸಿದರು. ಈ ಮೂಲಕ ಕೇವಲ 6 ಎಸೆತಗಳಲ್ಲಿ ಹರ್ಷಿತ್ ರಾಣಾ ಯಾವುದೇ ರನ್ ನೀಡದೇ 4 ವಿಕೆಟ್ ಕಬಳಿಸಿ ಮಿಂಚಿದರು.
ಇದರ ಹೊರತಾಗಿಯೂ ಪ್ರೈಮ್ ಮಿನಿಸ್ಟರ್ಸ್ ಇಲೆವೆನ್ ತಂಡವು 40 ಓವರ್ಗಳ ಮುಕ್ತಾಯದ ವೇಳೆಗೆ 8 ವಿಕೆಟ್ ಕಳೆದುಕೊಂಡು 210 ರನ್ ಕಲೆಹಾಕುವಲ್ಲಿ ಯಶಸ್ವಿಯಾಗಿದೆ.
ಪ್ರೈಮ್ ಮಿನಿಸ್ಟರ್ಸ್ ಇಲೆವೆನ್: ಜ್ಯಾಕ್ ಎಡ್ವರ್ಡ್ಸ್ (ನಾಯಕ) , ಮ್ಯಾಟ್ ರೆನ್ಶಾ , ಜ್ಯಾಕ್ ಕ್ಲೇಟನ್ , ಆಲಿವರ್ ಡೇವಿಸ್ , ಜೇಡನ್ ಗುಡ್ವಿನ್ , ಸ್ಯಾಮ್ ಹಾರ್ಪರ್ (ವಿಕೆಟ್ ಕೀಪರ್) , ಚಾರ್ಲಿ ಅ್ಯಂಡರ್ಸನ್ , ಸ್ಯಾಮ್ ಕೊನ್ಸ್ಟಾಸ್ , ಸ್ಕಾಟ್ ಬೋಲ್ಯಾಂಡ್ , ಲಾಯ್ಡ್ ಪೋಪ್ , ಹ್ಯಾನೋ ಜೇಕಬ್ಸ್ , ಮಹ್ಲಿ ಬಿಯರ್ಡ್ಮನ್ , ಏಡನ್ ಓನ್ ಕಾನರ್ , ಜೆಮ್ ರಯಾನ್, ಜಾಕ್ ನಿಸ್ಬೆಟ್.
ಇದನ್ನೂ ಓದಿ: IPL 2025: RCB ತಂಡಕ್ಕೆ 4 ತವರು ಮೈದಾನ..!