AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK: ಟೀಮ್ ಇಂಡಿಯಾ ವಿರುದ್ದದ ಪಂದ್ಯಕ್ಕೂ ಮುನ್ನ ಪಾಕ್ ತಂಡಕ್ಕೆ ಅನುಭವಿ ವೇಗಿ ಎಂಟ್ರಿ..!

India vs Pakistan Asia Cup 2022: 2021 ಟಿ20 ವಿಶ್ವಕಪ್​ನಲ್ಲಿ ಭಾರತದ ವಿರುದ್ದ ಆಡಿದ ಪ್ಲೇಯಿಂಗ್ ಇಲೆವೆನ್​ನಲ್ಲಿ ಹಸನ್ ಅಲಿ ಕೂಡ ಇದ್ದರು. ಆ ಪಂದ್ಯದಲ್ಲಿ 4 ಓವರ್ ಬೌಲಿಂಗ್ ಮಾಡಿದ್ದರು.

IND vs PAK: ಟೀಮ್ ಇಂಡಿಯಾ ವಿರುದ್ದದ ಪಂದ್ಯಕ್ಕೂ ಮುನ್ನ ಪಾಕ್ ತಂಡಕ್ಕೆ ಅನುಭವಿ ವೇಗಿ ಎಂಟ್ರಿ..!
Pakistan Team
TV9 Web
| Updated By: ಝಾಹಿರ್ ಯೂಸುಫ್|

Updated on: Aug 27, 2022 | 5:34 PM

Share

Asia Cup 2022: ಏಷ್ಯಾ ರಾಷ್ಟ್ರಗಳ ಚುಟುಕು ಕ್ರಿಕೆಟ್ ಕದನ ಏಷ್ಯಾಕಪ್ ಇಂದಿನಿಂದ ಶುರುವಾಗಲಿದೆ. 15ನೇ ಸೀಸನ್ ಟೂರ್ನಿ ಆರಂಭಕ್ಕೂ ಮುನ್ನವೇ ಪಾಕಿಸ್ತಾನ್ ತಂಡಕ್ಕೆ ಆಘಾತ ಎದುರಾಗಿತ್ತು. ತಂಡದಕ್ಕೆ ಆಯ್ಕೆಯಾಗಿದ್ದ ಪ್ರಮುಖ ವೇಗಿ ಶಾಹೀನ್ ಅಫ್ರಿದಿ ಗಾಯಗೊಂಡು ಟೂರ್ನಿಯಿಂದ ಹೊರಗುಳಿದಿದ್ದರು. ಇನ್ನೇನು ಟೂರ್ನಿ ಆರಂಭವಾಗಲಿದೆ ಎನ್ನುವಷ್ಟರಲ್ಲಿ ಮತ್ತೋರ್ವ ವೇಗಿ ಮೊಹಮ್ಮದ್ ವಾಸಿಂ ಜೂನಿಯರ್ ಅಭ್ಯಾಸದ ವೇಳೆ ಗಾಯಗೊಂಡು ಹೊರಬಿದ್ದಿದ್ದರು. ಇದೀಗ ವಾಸಿಂ ಜೂನಿಯರ್ ಸ್ಥಾನದಲ್ಲಿ ಪಾಕ್ ಕ್ರಿಕೆಟ್ ಮಂಡಳಿ ಮತ್ತೋರ್ವ ವೇಗಿ ಹಸನ್ ಅಲಿ ಅವರನ್ನು ಆಯ್ಕೆ ಮಾಡಿದೆ.

ಪಾಕಿಸ್ತಾನ್ ತಂಡದ ಅನುಭವಿ ವೇಗಿಯಾಗಿ ಗುರುತಿಸಿಕೊಂಡಿರುವ ಹಸನ್ ಅಲಿ ಅವರನ್ನು ಈ ಬಾರಿ ತಂಡಕ್ಕೆ ಆಯ್ಕೆ ಮಾಡಿರಲಿಲ್ಲ. ಬದಲಾಗಿ ಯುವ ವೇಗಿಗಳಿಗೆ ಅವಕಾಶ ನೀಡಲಾಗಿತ್ತು. ಇದೀಗ ಇಬ್ಬರು ಪ್ರಮುಖ ಬೌಲರ್​ಗಳು ಹೊರಬಿದ್ದ ಕಾರಣ ಹಸನ್ ಅಲಿಗೆ ಅವಕಾಶ ಕಲ್ಪಿಸಲಾಗಿದೆ.

ಅದರಂತೆ ಇದೀಗ ಏಷ್ಯಾಕಪ್ ಆಯೋಜಕರು ಬದಲಿ ಆಟಗಾರರನ್ನು ಕರೆಸಿಕೊಳ್ಳಲು ಪಾಕ್ ತಂಡಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಹೀಗಾಗಿ ಭಾರತದ ವಿರುದ್ದದ ಪಂದ್ಯಕ್ಕೂ ಮುನ್ನವೇ ಹಸನ್ ಅಲಿ ಪಾಕಿಸ್ತಾನ್ ತಂಡವನ್ನು ಕೂಡಿಕೊಳ್ಳಲಿದ್ದಾರೆ. ಭಾರತ-ಪಾಕಿಸ್ತಾನ್ ನಡುವಣ ಪಂದ್ಯವು ಆಗಸ್ಟ್ 28 ರಂದು ನಡೆಯಲಿದೆ. ಇತ್ತ ಶುಕ್ರವಾರವೇ ಹಸನ್ ಅಲಿ ಅವರ ಆಯ್ಕೆಯನ್ನು ಏಷ್ಯಾಕಪ್ ತಾಂತ್ರಿಕ ಸಮಿತಿಯು ಅನುಮೋದಿಸಿದೆ. ಹೀಗಾಗಿ ಟೀಮ್ ಇಂಡಿಯಾ ವಿರುದ್ದದ ಪಂದ್ಯದಲ್ಲಿ ಹಸನ್ ಅಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

ಇದನ್ನೂ ಓದಿ
Image
KGF: ಕಬಾಲಿ ನಿರ್ದೇಶಕನ ಮಾಸ್ಟರ್​ ಪ್ಲ್ಯಾನ್​: ಬರಲಿದೆ ಮತ್ತೊಂದು ಕೆಜಿಎಫ್..!
Image
Yash Next Movie: ಯಶ್ ಮುಂದಿನ ಚಿತ್ರಕ್ಕೆ ಸೌತ್ ಸುಂದರಿ ನಾಯಕಿ..?
Image
Kabza: ಒಂದಲ್ಲ, ಎರಡಲ್ಲ, ಮೂರಲ್ಲ…ವಿದೇಶಿ ಭಾಷೆಗಳಲ್ಲೂ ಬಿಡುಗಡೆಯಾಗಲಿದೆ ಕಬ್ಜ
Image
Rashmika Mandanna: ಮಿಂಚಿಂಗೊ ಮಿಂಚಿಂಗ್…ಸದ್ಯಕ್ಕಂತು ಕನ್ನಡಕ್ಕಿಲ್ಲ ರಶ್ಮಿಕಾ ಮಂದಣ್ಣ..!

2021 ಟಿ20 ವಿಶ್ವಕಪ್​ನಲ್ಲಿ ಭಾರತದ ವಿರುದ್ದ ಆಡಿದ ಪ್ಲೇಯಿಂಗ್ ಇಲೆವೆನ್​ನಲ್ಲಿ ಹಸನ್ ಅಲಿ ಕೂಡ ಇದ್ದರು. ಆ ಪಂದ್ಯದಲ್ಲಿ 4 ಓವರ್ ಬೌಲಿಂಗ್ ಮಾಡಿದ್ದ ಹಸನ್ ಸೂರ್ಯಕುಮಾರ್ ಯಾದವ್ ಹಾಗೂ ರವೀಂದ್ರ ಜಡೇಜಾ ಅವರ ವಿಕೆಟ್ ಪಡೆದಿದ್ದರು. ಇದೀಗ ಬದಲಿ ಆಟಗಾರನಾಗಿ  ಅನುಭವಿ ವೇಗಿಯನ್ನು ಮತ್ತೆ ಕರೆಸಿಕೊಳ್ಳುವ ಮೂಲಕ ಪಾಕಿಸ್ತಾನ್ ಟೀಮ್ ಇಂಡಿಯಾ ವಿರುದ್ದ ಭರ್ಜರಿ ಪ್ಲ್ಯಾನ್ ರೂಪಿಸುತ್ತಿದೆ.

ಪಾಕಿಸ್ತಾನ್ ಪರ 49 ಟಿ20 ಪಂದ್ಯಗಳನ್ನಾಡಿರುವ ಹಸನ್ ಅಲಿ ಒಟ್ಟು 60 ವಿಕೆಟ್ ಪಡೆದಿದ್ದಾರೆ. ಇದೀಗ ಅಂತಿಮ ಹಂತದಲ್ಲಿ ತಂಡವನ್ನು ಕೂಡಿಕೊಳ್ಳುವ ಮೂಲಕ ಟೀಮ್ ಇಂಡಿಯಾ ಪಾಲಿಗೆ ಕಂಟಕವಾಗಲಿದೆಯಾ ಕಾದು ನೋಡಬೇಕಿದೆ.

ಪಾಕಿಸ್ತಾನ ತಂಡ ಹೀಗಿದೆ:

ಬಾಬರ್ ಆಜಂ (ನಾಯಕ), ಶದಾಬ್ ಖಾನ್, ಆಸಿಫ್ ಅಲಿ, ಫಖರ್ ಝಮಾನ್, ಹೈದರ್ ಅಲಿ, ಹಾರಿಸ್ ರೌಫ್, ಇಫ್ತಿಕಾರ್ ಅಹ್ಮದ್, ಖುಷ್ದಿಲ್ ಶಾ, ಮೊಹಮ್ಮದ್ ನವಾಜ್, ಮೊಹಮ್ಮದ್ ರಿಝ್ವಾನ್ (ವಿಕೆಟ್‌ಕೀಪರ್), ಹಸನ್ ಅಲಿ, ನಸೀಮ್ ಶಾ, ಮೊಹಮ್ಮದ್ ಹಸ್ನೈನ್, ಶಹನವಾಝ್‌ ದಹಾನಿ, ಉಸ್ಮಾನ್‌ ಖಾದಿರ್‌.

ಟೀಮ್ ಇಂಡಿಯಾ ಹೀಗಿದೆ:

ರೋಹಿತ್‌ ಶರ್ಮಾ (ನಾಯಕ), ಕೆ.ಎಲ್‌ ರಾಹುಲ್‌, ವಿರಾಟ್‌ ಕೊಹ್ಲಿ, ಸೂರ್ಯಕುಮಾರ್‌ ಯಾದವ್‌, ದೀಪಕ್‌ ಹೂಡ, ರಿಷಭ್ ಪಂತ್‌ (ವಿಕೆಟ್‌ಕೀಪರ್‌), ದಿನೇಶ್‌ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್‌ ಪಾಂಡ್ಯ, ರವೀಂದ್ರ ಜಡೇಜಾ, ಭುವನೇಶ್ವರ್‌ ಕುಮಾರ್‌, ಅರ್ಷದೀಪ್‌ ಸಿಂಗ್‌, ಅವೇಶ್‌ ಖಾನ್‌, ಯುಜ್ವೇಂದ್ರ ಚಹಲ್‌, ಆರ್‌ ಅಶ್ವಿನ್‌, ರವಿ ಬಿಷ್ಣೋಯ್‌.

ಮೀಸಲು ಆಟಗಾರರು: ಅಕ್ಷರ್‌ ಪಟೇಲ್‌, ದೀಪಕ್‌ ಚಹರ್‌ ಮತ್ತು ಶ್ರೇಯಸ್‌ ಅಯ್ಯರ್‌.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ