IPL 2022 KKR vs DC Head to Head: ಡೆಲ್ಲಿಗೆ ಕೆಕೆಆರ್ಗೆ ಸವಾಲು: ಯಾರು ಬಲಿಷ್ಠ?
IPL 2022 KKR vs DC Head to Head: ಲೀಗ್ ಪಂದ್ಯಗಳಲ್ಲಿ ತಲಾ ಒಂದು ಪಂದ್ಯ ಗೆದ್ದಿದ್ದರು. ಆದರೆ ಪ್ಲೇಆಫ್ ಪಂದ್ಯವನ್ನು ಗೆದ್ದ ನಂತರ KKR ಫೈನಲ್‌ಗೆ ಲಗ್ಗೆ ಇಟ್ಟಿತು. ಇದೀಗ ಸೋಲಿನ ಸೇಡನ್ನು ತೀರಿಸಿಕೊಳ್ಳುವ ತವಕದಲ್ಲಿದೆ ಪಂತ್ ಪಡೆ.
ಐಪಿಎಲ್ 2022 ರಲ್ಲಿ ಭಾನುವಾರ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಲಿವೆ . ಈ ಬಾರಿ ಕೆಕೆಆರ್ ತಂಡ ತನ್ನ ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಅಮೋಘ ಪ್ರದರ್ಶನ ನೀಡುತ್ತಿದೆ. ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೋಲಿಸುವ ಮೂಲಕ ತಂಡ ಶುಭಾರಂಭ ಮಾಡಿರುವ ಕೆಕೆಆರ್, ಬಳಿಕ RCB ವಿರುದ್ಧ ಸೋಲನ್ನು ಎದುರಿಸಬೇಕಾಯಿತು. ಆದರೆ ನಂತರ ಪಂಜಾಬ್ ಕಿಂಗ್ಸ್ ಮತ್ತು ಮುಂಬೈಯನ್ನು ಸೋಲಿಸಿ ಆರ್ಭಟಿಸಿದೆ. ಇದೀಗ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆಲ್ಲಲು ಭರ್ಜರಿ ತಯಾರಿಯಲ್ಲಿದೆ. ಮತ್ತೊಂದೆಡೆ, ಡೆಲ್ಲಿ ತಂಡವು ಮೂರು ಪಂದ್ಯಗಳಲ್ಲಿ ಎರಡರಲ್ಲಿ ಸೋತಿದೆ. ಕೆಕೆಆರ್ ವಿರುದ್ಧ ಹ್ಯಾಟ್ರಿಕ್ ಸೋಲಿನಿಂದ ತಪ್ಪಿಸಿಕೊಳ್ಳಲು ರಿಷಭ್ ಪಂತ್ ಪಡೆ ಕೂಡ ಪ್ಲ್ಯಾನ್ ರೂಪಿಸಿದೆ.
ಈ ಸೀಸನ್ನಲ್ಲಿ ಕೆಕೆಆರ್ ಮತ್ತು ಡೆಲ್ಲಿ ತಂಡಗಳು ಬಲಿಷ್ಠವಾಗಿ ರೂಪುಗೊಂಡಿದೆ. ಮೆಗಾ ಹರಾಜಿನ ನಂತರ ತಂಡಗಳಲ್ಲಿ ಸಾಕಷ್ಟು ಬದಲಾವಣೆಯಾಗಿದೆ. ಇದಾಗ್ಯೂ ಡೆಲ್ಲಿ ಕ್ಯಾಪಿಟಲ್ಸ್ ಕಡೆಯಿಂದ ನಿರೀಕ್ಷಿತ ಆಟ ಮೂಡಿಬರುತ್ತಿಲ್ಲ. ಮತ್ತೊಂದೆಡೆ ಪ್ಯಾಟ್ ಕಮಿನ್ಸ್ ಆಗಮನದೊಂದಿಗೆ ಕೆಕೆಆರ್ ಮತ್ತಷ್ಟು ಬಲಿಷ್ಠವಾಗಿ ರೂಪುಗೊಂಡಿದೆ.
ಕೆಕೆಆರ್-ಡೆಲ್ಲಿ ಮುಖಾಮುಖಿ ದಾಖಲೆ: ಕೆಕೆಆರ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಇದುವರೆಗೆ 29 ಪಂದ್ಯಗಳಲ್ಲಿ ಮುಖಾಮುಖಿಯಾಗಿದೆ. ಈ ವೇಳೆ ಕೆಕೆಆರ್ ತಂಡವೇ ಮೇಲುಗೈ ಸಾಧಿಸಿದೆ. 29 ಪಂದ್ಯಗಳಲ್ಲಿ 16 ಪಂದ್ಯಗಳು ಕೆಕೆಆರ್ ಗೆದ್ದಿದ್ದರೆ, ಡೆಲ್ಲಿ ಕ್ಯಾಪಿಟಲ್ಸ್ ಕೇವಲ 13 ಪಂದ್ಯಗಳನ್ನು ಗೆದ್ದಿದೆ. ಇವೆರಡರ ನಡುವಿನ ವ್ಯತ್ಯಾಸ ಹೆಚ್ಚೇನೂ ಇಲ್ಲವಾದರೂ, ಕೆಕೆಆರ್ ಡೆಲ್ಲಿ ವಿರುದ್ದ ಉತ್ತಮ ಪ್ರದರ್ಶನ ನೀಡುತ್ತಾ ಬಂದಿದೆ. ಇನ್ನು ಕಳೆದ ಸೀಸನ್ನಲ್ಲೂ ಎರಡೂ ತಂಡಗಳು ಮೂರು ಬಾರಿ ಮುಖಾಮುಖಿಯಾಗಿದ್ದವು. ಲೀಗ್ ಪಂದ್ಯಗಳಲ್ಲಿ ತಲಾ ಒಂದು ಪಂದ್ಯ ಗೆದ್ದಿದ್ದರು. ಆದರೆ ಪ್ಲೇಆಫ್ ಪಂದ್ಯವನ್ನು ಗೆದ್ದ ನಂತರ KKR ಫೈನಲ್‌ಗೆ ಲಗ್ಗೆ ಇಟ್ಟಿತು. ಇದೀಗ ಸೋಲಿನ ಸೇಡನ್ನು ತೀರಿಸಿಕೊಳ್ಳುವ ತವಕದಲ್ಲಿದೆ ಪಂತ್ ಪಡೆ.
ಡೆಲ್ಲಿ ಕ್ಯಾಪಿಟಲ್ಸ್ (DC): ರಿಷಭ್ ಪಂತ್ (ನಾಯಕ), ಡೇವಿಡ್ ವಾರ್ನರ್, ಪೃಥ್ವಿ ಶಾ, ಮಿಚೆಲ್ ಮಾರ್ಷ್, ಸರ್ಫರಾಜ್ ಖಾನ್, ಕೆಎಸ್ ಭರತ್, ಮನದೀಪ್ ಸಿಂಗ್, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಅನ್ರಿಕ್ ನೋಕಿಯಾ, ಕಮಲೇಶ್ ನಾಗರಕೋಟಿ, ಮುಸ್ತಾಫಿಜುರ್ ರೆಹಮಾನ್, ಚೇತನ್ ಸಕರಿಯಾ, ಖಲೀಲ್ ಅಹ್ಮದ್, ಅಶ್ವಿನ್ ಹೆಬ್ಬಾರ್, ಅಶ್ವಿನ್ ಹೆಬ್ಬಾರ್ , ಯಶ್ ಧುಲ್, ವಿಕ್ಕಿ ಓಸ್ಟ್ವಾಲ್, ಲುಂಗಿ ಎನ್‌ಗಿಡಿ, ಟಿಮ್ ಸೀಫರ್ಟ್, ಪ್ರವೀಣ್ ದುಬೆ, ರೋವ್‌ಮನ್ ಪೊವೆಲ್, ಲಲಿತ್ ಯಾದವ್.
ಕೋಲ್ಕತ್ತಾ ನೈಟ್ ರೈಡರ್ಸ್ (KKR): ಶ್ರೇಯಸ್ ಅಯ್ಯರ್ (ನಾಯಕ), ವೆಂಕಟೇಶ್ ಅಯ್ಯರ್, ನಿತೀಶ್ ರಾಣಾ, ಶೆಲ್ಡನ್ ಜಾಕ್ಸನ್, ಅಜಿಂಕ್ಯ ರಹಾನೆ, ರಿಂಕು ಸಿಂಗ್, ಆಂಡ್ರೆ ರಸೆಲ್, ಸುನಿಲ್ ನರೈನ್, ಪ್ಯಾಟ್ ಕಮ್ಮಿನ್ಸ್, ಶಿವಂ ಮಾವಿ, ವರುಣ್ ಚಕ್ರವರ್ತಿ, ಸ್ಯಾಮ್ ಬಿಲ್ಲಿಂಗ್ಸ್, ಅನುಕುಲ್ ರಾಯ್, ರಸಿಖ್ ಸಲಾಮ್, ಅಭಿಜಿತ್ ಸಿಂಗ್ , ರಮೇಶ್ ಕುಮಾರ್, ಅಶೋಕ್ ಶರ್ಮಾ, ಟಿಮ್ ಸೌಥಿ, ಆರೋನ್ ಫಿಂಚ್, ಮೊಹಮ್ಮದ್ ನಬಿ, ಉಮೇಶ್ ಯಾದವ್, ಬಿ ಇಂದ್ರಜಿತ್, ಚಾಮಿಕಾ ಕರುಣಾರತ್ನೆ.
ಇದನ್ನೂ ಓದಿ: ಐಪಿಎಲ್ನಲ್ಲಿ ಅತೀ ವೇಗವಾಗಿ ಅರ್ಧಶತಕ ಬಾರಿಸಿದ 10 ಬ್ಯಾಟರ್ಗಳು ಯಾರು ಗೊತ್ತಾ?