IPL 2022 MI vs RR Head to Head: ಮುಂಬೈ-ರಾಜಸ್ಥಾನ ಮುಖಾಮುಖಿ; ಉಭಯ ತಂಡಗಳಲ್ಲಿ ಯಾರಿಗೆ ಮೇಲುಗೈ?

IPL 2022 MI vs RR Head to Head: ಇಲ್ಲಿಯವರೆಗೆ ನಡೆದಿರುವ 25 ಪಂದ್ಯಗಳ ಬಗ್ಗೆ ಮಾತನಾಡುವುದಾದರೆ, ಮುಂಬೈ 25 ಪಂದ್ಯಗಳಲ್ಲಿ 13 ಪಂದ್ಯಗಳನ್ನು ಗೆದ್ದಿದ್ದರೆ, ರಾಜಸ್ಥಾನ್ ರಾಯಲ್ಸ್ 11 ಪಂದ್ಯಗಳನ್ನು ಗೆದ್ದಿದೆ.

IPL 2022 MI vs RR Head to Head: ಮುಂಬೈ-ರಾಜಸ್ಥಾನ ಮುಖಾಮುಖಿ; ಉಭಯ ತಂಡಗಳಲ್ಲಿ ಯಾರಿಗೆ ಮೇಲುಗೈ?
ರಾಜಸ್ಥಾನ ತಂಡ
Follow us
TV9 Web
| Updated By: ಪೃಥ್ವಿಶಂಕರ

Updated on: Apr 01, 2022 | 5:50 PM

ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್​ (Mumbai Indians)ಗೆ ಈ ಬಾರಿಯ ಐಪಿಎಲ್ ಶುಭವಾಗಿ ಆರಂಭವಾಗಿಲ್ಲ. ಮುಂಬೈ ಮೊದಲ ಪಂದ್ಯದಲ್ಲಿ ಡೆಲ್ಲಿ ವಿರುದ್ಧ ಸೋಲನ್ನು ಎದುರಿಸಬೇಕಾಯಿತು. ಇದೀಗ ತಂಡ ತನ್ನ ಗೆಲುವಿನ ಖಾತೆ ತೆರೆಯಲು ಶನಿವಾರ ನಡೆಯಲಿರುವ ಡಬಲ್ ಹೆಡರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡವನ್ನು ಎದುರಿಸಲಿದೆ . ರೋಹಿತ್ ಶರ್ಮಾ ನಾಯಕತ್ವದ ಈ ತಂಡ ಯಾವುದೇ ಬೆಲೆ ತೆತ್ತಾದರೂ ಈ ಪಂದ್ಯದಲ್ಲಿ ಗೆಲ್ಲಲು ಪ್ರಯತ್ನಿಸಲಿದೆ. ಈ ಗೆಲುವಿನೊಂದಿಗೆ 15ನೇ ಆವೃತ್ತಿಯ ಮೊದಲ ಗೆಲುವಿನ ಖಾತೆಯನ್ನು ತೆರೆಯಬಹುದು. ಆದಾಗ್ಯೂ, ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ಮೊದಲ ಪಂದ್ಯವನ್ನು ಗೆದ್ದ ನಂತರ ಸಾಕಷ್ಟು ಆತ್ಮವಿಶ್ವಾಸದಿಂದ ಮೈದಾನಕ್ಕಿಳಿಯುವುದರಿಂದ ಅದು ಅವರಿಗೆ ಸುಲಭವಲ್ಲ.

ರಾಜಸ್ಥಾನ್ ರಾಯಲ್ಸ್ ಈ ಆವೃತ್ತಿಯ ತನ್ನ ಮೊದಲ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಿತು. ಈ ಪಂದ್ಯದಲ್ಲಿ ಹೈದರಾಬಾದ್ ತಂಡವನ್ನು 61 ರನ್‌ಗಳಿಂದ ಸೋಲಿಸಿತು. ಆದರೆ ಮುಂಬೈ ತನ್ನ ಮೊದಲ ಪಂದ್ಯದಲ್ಲಿ ದೆಹಲಿ ಎದುರು ಸೋತಿದೆ.

25 ಪಂದ್ಯಗಳಲ್ಲಿ ಮುಖಾಮುಖಿ ಡಾ.ಡಿ.ವೈ.ಪಾಟೀಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ರಾಜಸ್ಥಾನ ರಾಯಲ್ಸ್ ನಡುವಿನ ಐಪಿಎಲ್​ನ 26ನೇ ಪಂದ್ಯವಾಗಿದೆ. ಇಲ್ಲಿಯವರೆಗೆ ನಡೆದಿರುವ 25 ಪಂದ್ಯಗಳ ಬಗ್ಗೆ ಮಾತನಾಡುವುದಾದರೆ, ಮುಂಬೈ 25 ಪಂದ್ಯಗಳಲ್ಲಿ 13 ಪಂದ್ಯಗಳನ್ನು ಗೆದ್ದಿದ್ದರೆ, ರಾಜಸ್ಥಾನ್ ರಾಯಲ್ಸ್ 11 ಪಂದ್ಯಗಳನ್ನು ಗೆದ್ದಿದೆ. ಕಳೆದ ಆವೃತ್ತಿಯ ಬಗ್ಗೆ ಮಾತನಾಡುವುದಾದರೆ, ಲೀಗ್ ಸುತ್ತಿನ ಎರಡೂ ಪಂದ್ಯಗಳನ್ನು ಮುಂಬೈ ಇಂಡಿಯನ್ಸ್ ದೊಡ್ಡ ಅಂತರದಿಂದ ಗೆದ್ದಿದೆ.

ಆಟಗಾರರ ಅಂಕಿಅಂಶಗಳ ಬಗ್ಗೆ ಮಾತನಾಡಿದರೆ, ಸಂಜು ಸ್ಯಾಮ್ಸನ್ ಎರಡು ತಂಡಗಳ ನಡುವಿನ 25 ಪಂದ್ಯಗಳಲ್ಲಿ 416 ರನ್ ಗಳಿಸಿ, ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡಿದ್ದಾರೆ. ಅದೇ ಸಮಯದಲ್ಲಿ ಕೀರನ್ ಪೊಲಾರ್ಡ್ ಮತ್ತು ಮುಂಬೈ ನಾಯಕ ರೋಹಿತ್ ಶರ್ಮಾ 316 ರನ್ ಗಳಿಸಿ ಎರಡನೇ ಸ್ಥಾನದಲ್ಲಿದ್ದಾರೆ. ಹಾಗೆಯೇ ರಾಜಸ್ಥಾನ ವಿರುದ್ಧ 17 ವಿಕೆಟ್ ಪಡೆದಿರುವ ಮುಂಬೈನ ಧವಲ್ ಕುಲಕರ್ಣಿ ಬೌಲರ್‌ಗಳ ಪಟ್ಟಿಯಲ್ಲಿ ಮುಂಚೂಣಿಯಲ್ಲಿದ್ದಾರೆ. ಇವರ ನಂತರ, ರಾಜಸ್ಥಾನ ವಿರುದ್ಧ 14 ವಿಕೆಟ್‌ಗಳೊಂದಿಗೆ ಜಸ್ಪ್ರೀತ್ ಬುಮ್ರಾ ಎರಡನೇ ಸ್ಥಾನದಲ್ಲಿದ್ದಾರೆ. ಜೊಫ್ರಾ ಆರ್ಚರ್ 12 ವಿಕೆಟ್ ಪಡೆದಿದ್ದಾರೆ.

ಕಳೆದ ಮುಖಾಮುಖಿಯ ಫಲಿತಾಂಶವೇನು? ಕಳೆದ ಬಾರಿ ಎರಡೂ ತಂಡಗಳು ಯುಎಇಯ ಶಾರ್ಜಾದಲ್ಲಿ ಮುಖಾಮುಖಿಯಾಗಿದ್ದವು. ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ 90 ರನ್ ಗಳಿಸಲಷ್ಟೇ ಶಕ್ತವಾಯಿತು. ಮುಂಬೈ ಪರ ನಾಥನ್ ಕೌಲ್ಟರ್ ನೈಟ್ ನಾಲ್ಕು ಮತ್ತು ಜೇಮ್ಸ್ ನೀಶಮ್ ಮೂರು ವಿಕೆಟ್ ಪಡೆದರು. ಮತ್ತೊಂದೆಡೆ, ಇಶಾನ್ ಕಿಶನ್ 25 ಎಸೆತಗಳಲ್ಲಿ 50 ರನ್ ಗಳಿಸಿದ್ದರು, ಅದರ ಆಧಾರದ ಮೇಲೆ ಮುಂಬೈ ಕೇವಲ 8.2 ಓವರ್‌ಗಳಲ್ಲಿ ಈ ಗುರಿಯನ್ನು ಸಾಧಿಸಿತು.

ಇದನ್ನೂ ಓದಿ:ಏಕದಿನ- ಟಿ20 ತಂಡದಲಿಲ್ಲ ಸ್ಥಾನ; ಕ್ರಿಕೆಟ್ ಬದುಕಿಗೆ ವಿದಾಯ ಹೇಳಿದ ಆಸೀಸ್ ವಿಕೆಟ್ ಕೀಪರ್

ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು