AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವ ದಾಖಲೆಯ ಶತಕ ಸಿಡಿಸಿದ ಹೆನ್ರಿಕ್ ಕ್ಲಾಸೆನ್

Heinrich Klaasen`Century: ಈ ಪಂದ್ಯದಲ್ಲಿ 67 ಎಸೆತಗಳನ್ನು ಎದುರಿಸಿದ ಹೆನ್ರಿಕ್ ಕ್ಲಾಸೆನ್ 4 ಭರ್ಜರಿ ಸಿಕ್ಸ್ ಹಾಗೂ 12 ಫೋರ್​ಗಳೊಂದಿಗೆ 107 ರನ್ ಬಾರಿಸಿ ಔಟಾದರು. ಇನ್ನು ಅಂತಿಮ ಹಂತದಲ್ಲಿ ಮಾರ್ಕೊ ಯಾನ್ಸೆನ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಕೇವಲ 42 ಎಸೆತಗಳನ್ನು ಎದುರಿಸಿದ ಯಾನ್ಸೆನ್ 6 ಭರ್ಜರಿ ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ ಅಜೇಯ 75 ರನ್ ಬಾರಿಸಿದರು.

ವಿಶ್ವ ದಾಖಲೆಯ ಶತಕ ಸಿಡಿಸಿದ ಹೆನ್ರಿಕ್ ಕ್ಲಾಸೆನ್
Heinrich Klaasen
Follow us
TV9 Web
| Updated By: ಝಾಹಿರ್ ಯೂಸುಫ್

Updated on: Oct 21, 2023 | 6:39 PM

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಏಕದಿನ ವಿಶ್ವಕಪ್​ನ 20ನೇ ಪಂದ್ಯದಲ್ಲಿ ಭರ್ಜರಿ ಶತಕ ಬಾರಿಸುವ ಮೂಲಕ ಸೌತ್ ಆಫ್ರಿಕಾ ಬ್ಯಾಟರ್ ಹೆನ್ರಿಕ್ ಕ್ಲಾಸೆನ್ ವಿಶೇಷ ಸಾಧಕರ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ. ಇಂಗ್ಲೆಂಡ್​ ವಿರುದ್ಧದ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಸೌತ್ ಆಫ್ರಿಕಾ ತಂಡ ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ಆಟಗಾರ ಕ್ವಿಂಟನ್ ಡಿಕಾಕ್ (4) ಮೊದಲ ಓವರ್​ನಲ್ಲೇ ವಿಕೆಟ್​ ಒಪ್ಪಿಸಿದರು. ಆ ಬಳಿಕ ಉತ್ತಮ ಜೊತೆಯಾಟವಾಡಿದ ರೀಝ ಹೆಂಡ್ರಿಕ್ಸ್​ (85) ಹಾಗೂ ರಾಸ್ಸಿ ವಂಡರ್ ಡಸ್ಸೆನ್ (60) ಅರ್ಧಶತಕ ಬಾರಿಸಿ ಮಿಂಚಿದರು. ನಾಯಕ ಐಡೆನ್ ಮಾರ್ಕ್ರಮ್ 42 ರನ್​ಗಳ ಕೊಡುಗೆ ನೀಡಿದರು.

ಇನ್ನು ಐದನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಹೆನ್ರಿಕ್ ಕ್ಲಾಸೆನ್ ಸ್ಪೋಟಕ ಇನಿಂಗ್ಸ್ ಆಡಿದರು. ಆರಂಭದಿಂದಲೇ ಇಂಗ್ಲೆಂಡ್ ಬೌಲರ್​ಗಳ ಬೆಂಡೆತ್ತಿದ ಕ್ಲಾಸೆನ್ ಸಿಕ್ಸ್​-ಫೋರ್​ಗಳ ಸುರಿಮಳೆಗೈದರು. ಪರಿಣಾಮ ಕೇವಲ 61 ಎಸೆತಗಳಲ್ಲಿ ಭರ್ಜರಿ ಶತಕ ಮೂಡಿಬಂತು.  ಇದರೊಂದಿಗೆ ಏಕದಿನ ವಿಶ್ವಕಪ್​ನಲ್ಲಿ ಅತೀ ವೇಗವಾಗಿ ಶತಕ ಸಿಡಿಸಿದ ವಿಶ್ವದ 6ನೇ ಬ್ಯಾಟರ್ ಹಾಗೂ ಸೌತ್ ಆಫ್ರಿಕಾದ ಮೂರನೇ ಆಟಗಾರ ಎನಿಸಿಕೊಂಡರು.

ಏಕದಿನ ವಿಶ್ವಕಪ್​ನಲ್ಲಿ ಅತೀ ವೇಗದ ಶತಕ ಸಿಡಿಸಿದ ಸರದಾರರ ಪಟ್ಟಿ ಹೀಗಿದೆ:

ಬ್ಯಾಟರ್​ ಎಸೆತಗಳು ತಂಡ ಎದುರಾಳಿ ತಂಡ ವರ್ಷ ಸ್ಥಳ
ಐಡೆನ್ ಮಾರ್ಕ್ರಾಮ್ 49 ಸೌತ್ ಆಫ್ರಿಕಾ ಶ್ರೀಲಂಕಾ 2023 ದೆಹಲಿ
ಕೆವಿನ್ ಓಬ್ರಿಯನ್ 50 ಐರ್ಲೆಂಡ್ ಇಂಗ್ಲೆಂಡ್ 2011 ಬೆಂಗಳೂರು
ಗ್ಲೆನ್ ಮ್ಯಾಕ್ಸ್​ವೆಲ್ 51 ಆಸ್ಟ್ರೇಲಿಯಾ ಶ್ರೀಲಂಕಾ 2015 ಸಿಡ್ನಿ
ಎಬಿ ಡಿವಿಲಿಯರ್ಸ್​ 52 ಸೌತ್ ಆಫ್ರಿಕಾ ವೆಸ್ಟ್ ಇಂಡೀಸ್ 2015 ಸಿಡ್ನಿ
ಇಯಾನ್ ಮೋರ್ಗನ್ 57 ಇಂಗ್ಲೆಂಡ್ ಅಫ್ಘಾನಿಸ್ತಾನ್ 2019 ಮ್ಯಾಂಚೆಸ್ಟರ್
ಹೆನ್ರಿಕ್ ಕ್ಲಾಸೆನ್ 61 ಸೌತ್ ಆಫ್ರಿಕಾ ಇಂಗ್ಲೆಂಡ್ 2023 ಮುಂಬೈ

ಬೃಹತ್ ಮೊತ್ತ ಪೇರಿಸಿದ ಸೌತ್ ಆಫ್ರಿಕಾ:

ಈ ಪಂದ್ಯದಲ್ಲಿ 67 ಎಸೆತಗಳನ್ನು ಎದುರಿಸಿದ ಹೆನ್ರಿಕ್ ಕ್ಲಾಸೆನ್ 4 ಭರ್ಜರಿ ಸಿಕ್ಸ್ ಹಾಗೂ 12 ಫೋರ್​ಗಳೊಂದಿಗೆ 107 ರನ್ ಬಾರಿಸಿ ಔಟಾದರು. ಇನ್ನು ಅಂತಿಮ ಹಂತದಲ್ಲಿ ಮಾರ್ಕೊ ಯಾನ್ಸೆನ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಕೇವಲ 42 ಎಸೆತಗಳನ್ನು ಎದುರಿಸಿದ ಯಾನ್ಸೆನ್ 6 ಭರ್ಜರಿ ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ ಅಜೇಯ 75 ರನ್ ಬಾರಿಸಿದರು. ಈ ಭರ್ಜರಿ ಬ್ಯಾಟಿಂಗ್ ನೆರವಿನಿಂದಾಗಿ ಸೌತ್ ಆಫ್ರಿಕಾ ತಂಡವು 50 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 399 ರನ್ ಕಲೆಹಾಕಿತು.

ಇಂಗ್ಲೆಂಡ್ (ಪ್ಲೇಯಿಂಗ್ XI): ಜಾನಿ ಬೈರ್‌ಸ್ಟೋವ್, ಡೇವಿಡ್ ಮಲನ್, ಜೋ ರೂಟ್, ಬೆನ್ ಸ್ಟೋಕ್ಸ್, ಹ್ಯಾರಿ ಬ್ರೂಕ್, ಜೋಸ್ ಬಟ್ಲರ್ (ನಾಯಕ), ಡೇವಿಡ್ ವಿಲ್ಲಿ, ಆದಿಲ್ ರಶೀದ್, ಗಸ್ ಅಟ್ಕಿನ್ಸನ್, ಮಾರ್ಕ್ ವುಡ್, ರೀಸ್ ಟೋಪ್ಲಿ.

ಇದನ್ನೂ ಓದಿ: ಚೇಸ್ ಮಾಸ್ಟರ್…ಸಚಿನ್ ವಿಶ್ವ ದಾಖಲೆ ಮುರಿದ ಕಿಂಗ್ ಕೊಹ್ಲಿ

ಸೌತ್ ಆಫ್ರಿಕಾ (ಪ್ಲೇಯಿಂಗ್ XI): ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ರೀಜಾ ಹೆಂಡ್ರಿಕ್ಸ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಐಡೆನ್ ಮಾರ್ಕ್ರಾಮ್ (ನಾಯಕ), ಹೆನ್ರಿಕ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಮಾರ್ಕೊ ಯಾನ್ಸೆನ್, ಜೆರಾಲ್ಡ್ ಕೊಯೆಟ್ಜಿ, ಕೇಶವ್ ಮಹಾರಾಜ್, ಕಗಿಸೊ ರಬಾಡ, ಲುಂಗಿ ಎನ್ಗಿಡಿ.

ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ