27 ಎಸೆತಗಳಲ್ಲಿ 60 ರನ್! ಏಷ್ಯಾಕಪ್​ ತಂಡದಲ್ಲಿರುವ ಪಾಕ್ ಬೌಲರ್​ಗೆ ಬೆವರಿಳಿಸಿದ ಕ್ಲಾಸೆನ್

The Hundred: ಆಗಸ್ಟ್ 9 ರಂದು ದಿ ಹಂಡ್ರೆಡ್‌ ಲೀಗ್​​ನಲ್ಲಿ ನಡೆದ ಓವಲ್ ಇನ್ವಿನ್ಸಿಬಲ್ಸ್ ಮತ್ತು ಮ್ಯಾಂಚೆಸ್ಟರ್ ಒರಿಜಿನಲ್ಸ್ ತಂಡಗಳ ನಡುವಿನ ಪಂದ್ಯದಲ್ಲಿ, ದಕ್ಷಿಣ ಆಫ್ರಿಕಾದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಹೆನ್ರಿಕ್ ಕ್ಲಾಸೆನ್ ಸಿಡಿಲಬ್ಬರದ ಅರ್ಧಶತಕ ಸಿಡಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ ಓವಲ್ ಇನ್ವಿನ್ಸಿಬಲ್ಸ್ ತಂಡದ ಪರ ಕಣಕ್ಕಿಳಿದಿದ್ದ ಕ್ಲಾಸೆನ್ ಕೇವಲ 27 ಎಸೆತಗಳಲ್ಲಿ 60 ರನ್ ಚಚ್ಚಿದರು.

27 ಎಸೆತಗಳಲ್ಲಿ 60 ರನ್! ಏಷ್ಯಾಕಪ್​ ತಂಡದಲ್ಲಿರುವ ಪಾಕ್ ಬೌಲರ್​ಗೆ ಬೆವರಿಳಿಸಿದ ಕ್ಲಾಸೆನ್
ಹೆನ್ರಿಕ್ ಕ್ಲಾಸೆನ್
Follow us
ಪೃಥ್ವಿಶಂಕರ
|

Updated on:Aug 10, 2023 | 9:39 AM

ಆಗಸ್ಟ್ 9 ರಂದು ದಿ ಹಂಡ್ರೆಡ್‌ (The Hundred) ಲೀಗ್​​ನಲ್ಲಿ ನಡೆದ ಓವಲ್ ಇನ್ವಿನ್ಸಿಬಲ್ಸ್ ಮತ್ತು ಮ್ಯಾಂಚೆಸ್ಟರ್ ಒರಿಜಿನಲ್ಸ್ (Oval Invincibles vs Manchester Originals) ತಂಡಗಳ ನಡುವಿನ ಪಂದ್ಯದಲ್ಲಿ, ದಕ್ಷಿಣ ಆಫ್ರಿಕಾದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಹೆನ್ರಿಕ್ ಕ್ಲಾಸೆನ್ (Heinrich Klaasen) ಸಿಡಿಲಬ್ಬರದ ಅರ್ಧಶತಕ ಸಿಡಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ ಓವಲ್ ಇನ್ವಿನ್ಸಿಬಲ್ಸ್ ತಂಡದ ಪರ ಕಣಕ್ಕಿಳಿದಿದ್ದ ಕ್ಲಾಸೆನ್ ಕೇವಲ 27 ಎಸೆತಗಳಲ್ಲಿ 60 ರನ್ ಚಚ್ಚಿದರು. ಕ್ಲಾಸೆನ್ ಅಬ್ಬರಕ್ಕೆ ಮ್ಯಾಂಚೆಸ್ಟರ್ ಒರಿಜಿನಲ್ಸ್‌ನ ಯಾವುದೇ ಬೌಲರ್​ಗೆ ಕಡಿವಾಣ ಹಾಕಲು ಸಾಧ್ಯವಾಗಲಿಲ್ಲ. ಅದರಲ್ಲೂ ಪಾಕಿಸ್ತಾನ ಏಷ್ಯಾಕಪ್ ತಂಡದಲ್ಲಿ ಸ್ಥಾನ ಪಡೆದಿರುವ ಉಸಾಮಾ ಮಿರ್ (Usama Mir), ಕ್ಲಾಸೆನ್ ಅಬ್ಬರಕ್ಕೆ ಧೂಳಿಪಟವಾದರು.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಓವಲ್ ಇನ್ವಿನ್ಸಿಬಲ್ಸ್ ತಂಡ ಹೆನ್ರಿಕ್ ಕ್ಲಾಸೆನ್ ಅವರ ಸ್ಫೋಟಕ ಬ್ಯಾಟಿಂಗ್​ನಿಂದಾಗಿ 100 ಎಸೆತಗಳಲ್ಲಿ 5 ವಿಕೆಟ್ ಕಳೆದುಕೊಂಡು 186 ರನ್ ಕಲೆಹಾಕಿತು. ತಂಡದ ಪರ ಆರಂಭಿಕ ಜೇಸನ್ ರಾಯ್ 42 ಎಸೆತಗಳಲ್ಲಿ 59 ರನ್ ಸಿಡಿಸಿದರೆ, ಮೂರನೇ ಕ್ರಮಾಂಕದಲ್ಲಿ ಬಂದ ಹೆನ್ರಿಕ್ ಕ್ಲಾಸೆನ್ ಕೇವಲ 27 ಎಸೆತಗಳಲ್ಲಿ 6 ಸಿಕ್ಸರ್‌ಗಳೊಂದಿಗೆ 222.22 ಸ್ಟ್ರೈಕ್ ರೇಟ್‌ನಲ್ಲಿ 60 ರನ್ ಚಚ್ಚಿದರು.

Smriti Mandhana: ದಿ ಹಂಡ್ರೆಡ್​ನಲ್ಲಿ ಈ ದಾಖಲೆ ಬರೆದ ಮೊದಲ ಮಹಿಳಾ ಆಟಗಾರ್ತಿ ಸ್ಮೃತಿ ಮಂಧಾನ..!

ದುಬಾರಿಯಾದ ಪಾಕ್ ಬೌಲರ್

ಅದರಲ್ಲೂ ಪಾಕಿಸ್ತಾನಿ ಸ್ಪಿನ್ನರ್ ಉಸಾಮಾ ಮಿರ್ ವಿರುದ್ಧ ಸಿಡಿಲಬ್ಬರದ ಬ್ಯಾಟಿಂಗ್ ಮಾಡಿದ ಓವಲ್ ಇನ್ವಿನ್ಸಿಬಲ್ ತಂಡ, ಈ ಬೌಲರ್ ಬೌಲ್ ಮಾಡಿದ ಕೇವಲ 10 ಎಸೆತಗಳಲ್ಲಿ 26 ರನ್‌ ಕಲೆಹಾಕಿತು. ಈ 10 ಎಸೆತಗಳಲ್ಲಿ 2 ಬೌಂಡರಿ ಮತ್ತು 2 ಸಿಕ್ಸರ್ ಕೂಡ ಸೇರಿದ್ದವು.

ಕೇವಲ 92 ರನ್​ಗಳಿಗೆ ಆಲೌಟ್

ಇನ್ನು 186 ರನ್​ಗಳ ಗುರಿ ಬೆನ್ನಟ್ಟಿದ ಮ್ಯಾಂಚೆಸ್ಟರ್ ಒರಿಜಿನಲ್ಸ್ ತಂಡದ ಬ್ಯಾಟಿಂಗ್ ವಿಭಾಗ ಸಂಪೂರ್ಣ ವಿಫಲವಾಯಿತು. ಹೀಗಾಗಿ ತಂಡ ಕೇವಲ 92 ರನ್​ಗಳಿಗೆ ಆಲೌಟ್ ಆಗಿ 94 ರನ್‌ಗಳಿಂದ ಪಂದ್ಯವನ್ನು ಕಳೆದುಕೊಂಡಿತು. ಜಾಮೀ ಓವರ್​ಟನ್ 21 ಎಸೆತಗಳಲ್ಲಿ 37 ರನ್ ಕಲೆಹಾಕಿ ತಂಡದ ಪರ ಅತ್ಯಧಿಕ ಸ್ಕೋರರ್ ಎನಿಸಿಕೊಂಡರು. ಇವರನ್ನು ಹೊರತು ಪಡಿಸಿ ಆರಂಭಿಕರಾಗಿ ಬಂದ ಜೋಸ್ ಬಟ್ಲರ್ 23 ರನ್​ಗಳ ಇನ್ನಿಂಗ್ಸ್ ಆಡಿದರು. ಈ ಇಬ್ಬರನ್ನು ಬಿಟ್ಟರೆ ತಂಡದ ಮತ್ತ್ಯಾವ ಬ್ಯಾಟರ್​ ಕೂಡ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಲಿಲ್ಲ. ಇನ್ನ ಬೌಲಿಂಗ್​ನಲ್ಲಿ ದುಬಾರಿಯಾಗಿದ್ದ ಉಸಾಮಾ ಮಿರ್ ಕೇವಲ 1 ರನ್ ಬಾರಿಸಿದ್ದನ್ನು ಬಿಟ್ಟರೆ ಬೇರೇನೂ ಮಾಡಲಿಲ್ಲ.

ಪಾಕಿಸ್ತಾನದ ಪರ ಮಿರ್  ಸಾಧನೆ

ಉಸಾಮಾ ಮಿರ್ ಈ ವರ್ಷ ಪಾಕಿಸ್ತಾನ ಪರ ಏಕದಿನ ತಂಡಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಇದುವರೆಗೆ ಆಡಿರುವ6 ಏಕದಿನ ಪಂದ್ಯಗಳಲ್ಲಿ 10 ವಿಕೆಟ್ ಕಬಳಿಸಿದ್ದಾರೆ. ಈ ವೇಳೆ 43 ರನ್‌ಗಳಿಗೆ 4 ವಿಕೆಟ್‌ ಕಬಳಿಸಿದ್ದು ಅವರ ಅತ್ಯುತ್ತಮ ಸಾಧನೆಯಾಗಿದೆ. ಮಿರ್ ಇನ್ನೂ ಪಾಕಿಸ್ತಾನದ ಪರ ಟೆಸ್ಟ್ ಮತ್ತು ಟಿ20 ಆಡಿಲ್ಲ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:38 am, Thu, 10 August 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್