AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022 Points Table: ಎರಡನೇ ಸ್ಥಾನಕ್ಕೆ ಜಿಗಿದ ರಾಜಸ್ಥಾನ್: ಆರೆಂಜ್, ಪರ್ಪಲ್ ಕ್ಯಾಪ್ ಯಾರ ಬಳಿಯಿದೆ?

IPL 2022 Orange Cap and Purple Cap: ಐಪಿಎಲ್ 2022ರ ಪಾಯಿಂಟ್ ಟೇಬಲ್ (IPL 2022 Point Table) ಹೇಗಿದೆ?, ಆರೆಂಜ್ (Orange Cap), ಪರ್ಪಲ್ ಕ್ಯಾಪ್ ಯಾರ ಬಳಿ ಇದೆ ಎಂಬುದನ್ನು ನೋಡೋಣ.

IPL 2022 Points Table: ಎರಡನೇ ಸ್ಥಾನಕ್ಕೆ ಜಿಗಿದ ರಾಜಸ್ಥಾನ್: ಆರೆಂಜ್, ಪರ್ಪಲ್ ಕ್ಯಾಪ್ ಯಾರ ಬಳಿಯಿದೆ?
IPL 2022
TV9 Web
| Updated By: Vinay Bhat|

Updated on: May 16, 2022 | 11:42 AM

Share

ಇಂಡಿಯನ್ ಪ್ರೀಮಿಯರ್ ಲೀಗ್ (IPL 2022) 15ನೇ ಆವೃತ್ತಿ ರೋಚಕ ಘಟ್ಟದತ್ತ ಸಾಗುತ್ತಿದೆ. ಒಂದು ತಂಡದ ಸೋಲು-ಗೆಲುವು ಇನ್ನೊಂದು ತಂಡದ ಅಳಿವು-ಉಳಿವಿನ ಲೆಕ್ಕಚಾರ ಆರಂಭವಾಗಿದೆ. ಈ ಬಾರಿ ಹಿಂದಿನ ಸೀಸನ್​ನಲ್ಲಿ ನೀರಸ ಪ್ರದರ್ಶನ ತೋರುತ್ತಿದ್ದ ತಂಡ ಹೊಸ ಆಟಗಾರರನ್ನು ಸೇರಿಸಿ ಭರ್ಜರಿ ಪ್ರದರ್ಶನ ತೋರುತ್ತಿದ್ದರೆ, ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಟೂರ್ನಿಯಿಂದ ಹೊರಬಿದ್ದಿದೆ. ಇದರ ನಡುವೆ ಎರಡು ಹೊಸ ತಂಡಗಳಾದ ಗುಜರಾತ್ ಮತ್ತು ಲಖನೌ ಕೂಡ ನಿರೀಕ್ಷೆ ಹುಟ್ಟಿಸಿದ್ದು, ಹಾರ್ದಿಕ್ ಪಡೆ ಕ್ವಾಲಿಫೈ ಆದ ಮೊದಲ ತಂಡವಾಗಿದೆ. ಈ ಬಾರಿ ಅತಿ ಹೆಚ್ಚು ರನ್ ಕಲೆಹಾಕಿದವರಿಗೆ ಆರೆಂಜ್ ಕ್ಯಾಪ್, ಅತಿ ಹೆಚ್ಚು ವಿಕೆಟ್ ಕಿತ್ತವರು ಪರ್ಪಲ್ ಕ್ಯಾಪ್ ಧರಿಸುತ್ತಾರೆ. ಹಾಗಾದ್ರೆ ಐಪಿಎಲ್ 2022ರ ಪಾಯಿಂಟ್ ಟೇಬಲ್ (IPL 2022 Point Table) ಹೇಗಿದೆ?, ಆರೆಂಜ್ (Orange Cap), ಪರ್ಪಲ್ ಕ್ಯಾಪ್ ಯಾರ ಬಳಿ ಇದೆ ಎಂಬುದನ್ನು ನೋಡೋಣ.

ಪಾಯಿಂಟ್ ಟೇಬಲ್:

  1. ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟಾನ್ಸ್ ಮೊದಲ ಸ್ಥಾನದಲ್ಲಿದ್ದು ಕ್ವಾಲಿಫೈ ಆದ ಮೊದಲ ತಂಡವಾಗಿದೆ. ಆಡಿದ 13 ಪಂದ್ಯಗಳ ಪೈಕಿ ಕೇವಲ ಮೂರರಲ್ಲಿ ಸೋಲು, ಹತ್ತರಲ್ಲಿ ಗೆಲುವು ಕಂಡು 20 ಅಂಕದೊಂದಿಗೆ ಪ್ಲೇ ಆಫ್ ಪ್ರವೇಶಿಸಿದೆ. ಗುಜರಾತ್ ನಿವ್ವಳ ರನ್ ರೇಟ್ +0.391 ಆಗಿದೆ.
  2. ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ್ ರಾಯಲ್ಸ್ ತಂಡ ಎರಡನೇ ಸ್ಥಾನಕ್ಕೆ ಜಿಗಿದಿದೆ. ಇವರು ಆಡಿದ 13 ಪಂದ್ಯಗಳ ಪೈಕಿ ಎಂಟರಲ್ಲಿ ಗೆಲುವು ಐದರಲ್ಲಿ ಸೋಲುಂಡು ಒಟ್ಟು 16 ಅಂಕ ಸಂಪಾದಿಸಿದೆ. ಆರ್​ಆರ್​ +0.304 ರನ್​​ರೇಟ್ ಹೊಂದಿದೆ.
  3. ಇದನ್ನೂ ಓದಿ
    Image
    PBKS vs DC: ಐಪಿಎಲ್​ನಲ್ಲಿಂದು ಪಂಜಾಬ್-ಡೆಲ್ಲಿ ಹೈವೋಲ್ಟೇಜ್ ಪಂದ್ಯ: ಗೆದ್ದ ತಂಡ ನಾಲ್ಕನೇ ಸ್ಥಾನಕ್ಕೆ
    Image
    Avesh Khan: ಆವೇಶ್ ಖಾನ್ ಎಸೆದ ಬೆಂಕಿ ಬೌಲಿಂಗ್​ಗೆ ಆರೆಂಜ್ ಕ್ಯಾಪ್ ಬ್ಯಾಟರ್ ಬಟ್ಲರ್ ಕ್ಲೀನ್ ಬೌಲ್ಡ್: ವಿಡಿಯೋ
    Image
    CSK vs GT: ಮೊದಲ ಪಂದ್ಯದ ಮೊದಲ ಎಸೆತದಲ್ಲೇ ಮೊದಲ ವಿಕೆಟ್: ಸಿಎಸ್​ಕೆಯಲ್ಲೊಬ್ಬ ಜೂ. ಮಾಲಿಂಗ
    Image
    IPL 2022: ಉಮ್ರಾನ್ ಮಲಿಕ್ ಬೌಲಿಂಗ್ ಬಗ್ಗೆ ಶಮಿ ಹೇಳಿದ್ದೇನು?
  4. ಮತ್ತೊಂದು ಹೊಸ ತಂಡವಾದ ಕೆಎಲ್ ರಾಹುಲ್ ನೇತೃತ್ವದ ಲಖನೌ ಸೂಪರ್ ಜೇಂಟ್ಸ್ ಮೂರನೇ ಸ್ಥಾನಕ್ಕೆ ಕುಸಿದಿದೆ. ಆಡಿದ 13 ಪಂದ್ಯಗಳ ಪೈಕಿ ಎಂಟರಲ್ಲಿ ಗೆದ್ದು ಐದು ಪಂದ್ಯಗಳಲ್ಲಿ ಸೋತು ಒಟ್ಟು 16 ಅಂಕದೊಂದಿಗೆ ಲಖನೌದ ನಿವ್ವಳ ರನ್ ರೇಟ್ 0.262 ಆಗಿದೆ.
  5. ಫಾಫ್ ಡುಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ನಾಲ್ಕನೇ ಸ್ಥಾನದಲ್ಲಿದೆ. ಆಡಿದ 13 ಪಂದ್ಯಗಳಲ್ಲಿ ಆರರಲ್ಲಿ ಸೋಲು ಏಳರಲ್ಲಿ ಗೆಲುವು ಕಂಡಿದೆ. 14 ಅಂಕದೊಂದಿಗೆ RCB ನಿವ್ವಳ ರನ್ ರೇಟ್ -0.323 ಆಗಿದೆ.
  6. ರಿಷಭ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ಆರ್​ಆರ್​ ವಿರುದ್ಧ ಗೆಲ್ಲುವ ಮೂಲಕ ಪಾಯಿಂಟ್ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ. 12 ಅಂಕದೊಂದಿಗೆ ಡೆಲ್ಲಿಯ ನಿವ್ವಳ ರನ್ ರೇಟ್ 0.210 ಆಗಿದೆ.
  7. ಶ್ರೇಯಸ್ ಅಯ್ಯರ್ ನಾಯಕತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಆರನೇ ಸ್ಥಾನದಲ್ಲಿದೆ. ಆಡಿದ 13 ಪಂದ್ಯಗಳ ಪೈಕಿ ಆರರಲ್ಲಿ ಗೆಲುವು, ಏಳರಲ್ಲಿ ಸೋಲು ಕಂಡು ಒಟ್ಟು 12 ಅಂಕದೊಂದಿಗೆ 0.160 ರನ್​​ರೇಟ್​ ಹೊಂದಿದೆ.
  8. ಮಯಾಂಕ್ ಅಗರ್ವಾಲ್ ನಾಯಕತ್ವದ ಪಂಜಾಬ್ ಕಿಂಗ್ಸ್ ತಂಡ ಏಳನೇ ಸ್ಥಾನದಲ್ಲಿದೆ. 12 ಪಂದ್ಯಗಳ ಪೈಕಿ 6 ರಲ್ಲಿ ಗೆಲುವು ಆರರಲ್ಲಿ ಸೋಲು ಕಂಡು 12 ಅಂಕದೊಂದಿಗೆ ಪಂಜಾಬ್ ನಿವ್ವಳ ರನ್ ರೇಟ್ 0.023 ಆಗಿದೆ.
  9. ಕೇನ್ ವಿಲಿಯಮ್ಸನ್ ನಾಯಕತ್ವದ ಸನ್‌ರೈಸರ್ಸ್ ಹೈದರಾಬಾದ್ ತಂಡ ಎಂಟನೇ ಸ್ಥಾನಕ್ಕೆ ಕುಸಿದಿದೆ. ಆಡಿದ 12 ಪಂದ್ಯಗಳಲ್ಲಿ ಐದರಲ್ಲಷ್ಟೆ ಜಯ ಸಾಧಿಸಿ 10 ಅಂಕ ಸಂಪಾದಿಸಿ -0.270 ರನ್ ರೇಟ್ ಹೊಂದಿದೆ.
  10. ಇತ್ತ ಆಡಿದ 13 ಪಂದ್ಯಗಳ ಪೈಕಿ 9 ರಲ್ಲಿ ಸೋಲು ನಾಲ್ಕರಲ್ಲಿ ಗೆಲುವು ಕಂಡಿರುವ ಎಂಎಸ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ 8 ಅಂಕದೊಂದಿಗೆ -0.206 ರನ್​ರೇಟ್​​ ಹೊಂದಿ ಎಂಟನೇ ಸ್ಥಾನದಲ್ಲಿದೆ.
  11. ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ಅಂಕಪಟ್ಟಿಯಲ್ಲಿ ಹತ್ತನೇ ಸ್ಥಾನದಲ್ಲಿದೆ. ಎಂಐ ಆಡಿದ 12 ಪಂದ್ಯದ ಪೈಕಿ ಮೂರರಲ್ಲಿ ಜಯ ಸಾಧಿಸಿದೆ. ಮುಂಬೈ ನಿವ್ವಳ ರನ್ ರೇಟ್ -0.613.

ಆರೆಂಜ್ ಕ್ಯಾಪ್:

ಅತಿ ಹೆಚ್ಚು ರನ್ ಗಳಿಸಿದವರ ಮೊದಲ ಸ್ಥಾನದಲ್ಲಿ ಆರ್​ ಆರ್​ ತಂಡದ ಜೋಸ್ ಬಟ್ಲರ್ ತಮ್ಮ ಸ್ಥಾನವನ್ನು ಮತ್ತಷ್ಟು ಭದ್ರ ಪಡಿಸಿಕೊಂಡಿದ್ದು ಮೂರು ಅರ್ಧಶತಕ 3 ಶತಕದೊಂದಿಗೆ ಇವರು 13 ಪಂದ್ಯಗಳಿಂದ 627 ರನ್ ಕಲೆಹಾಕಿ ಆರೆಂಜ್ ಕ್ಯಾಪ್ ತೊಟ್ಟಿದ್ದಾರೆ. ಲಖನೌ ತಂಡದ ನಾಯಕ ಕೆಎಲ್ ರಾಹುಲ್ ಎರಡನೇ ಸ್ಥಾನದಲ್ಲಿದ್ದು 13 ಪಂದ್ಯಗಳಿಂದ 469 ರನ್ ಗಳಿಸಿದ್ದಾರೆ. ಮೂರನೇ ಸ್ಥಾನಕ್ಕೆ ಡೆಲ್ಲಿ ಬ್ಯಾಟರ್ ಡೇವಿಡ್ ವಾರ್ನರ್ ಜಿಗಿದಿದ್ದು 10 ಪಂದ್ಯಗಳಿಂದ 427 ರನ್ ಕಲೆಹಾಕಿದ್ದಾರೆ. ದೀಪಕ್ ಹೂಡ ನಾಲ್ಕನೇ ಸ್ಥಾನದಲ್ಲಿದ್ದು 13 ಪಂದ್ಯಗಳಿಂದ 406 ರನ್ ಸಿಡಿಸಿದ್ದಾರೆ. ಶುಭ್ಮನ್ ಗಿಲ್ 13 ಪಂದ್ಯಗಳಲ್ಲಿ 402 ರನ್ ಗಳಿಸಿ ಐದನೇ ಸ್ಥಾನದಲ್ಲಿದ್ದಾರೆ.

ಪರ್ಪಲ್ ಕ್ಯಾಪ್:

ಇನ್ನು ಅತಿ ಹೆಚ್ಚು ವಿಕೆಟ್ ಪಡೆದ ಆಟಗಾರರ ಪಟ್ಟಿಯಲ್ಲಿ ಯುಜ್ವೇಂದ್ ಚಹಲ್ ಮತ್ತೆ ಅಗ್ರಸ್ಥಾನಕ್ಕೇರಿದ್ದಾರೆ. ಇವರು ಆಡಿದ 13 ಪಂದ್ಯಗಳಲ್ಲಿ ಭರ್ಜರಿ ಬೌಲಿಂಗ್ ಪ್ರದರ್ಶನ ನೀಡಿದ್ದು 24 ವಿಕೆಟ್ ಕಬಳಿಸಿದ್ದಾರೆ. ವನಿಂದು ಹಸರಂಗ ಎರಡನೇ ಸ್ಥಾನಕ್ಕೆ ಕುಸಿದಿದ್ದು 13 ಪಂದ್ಯಗಳಿಂದ 23 ವಿಕೆಟ್ ಕಿತ್ತಿದ್ದಾರೆ. ಮೂರನೇ ಸ್ಥಾನದಲ್ಲಿ ಕಗಿಸೊ ರಬಾಡ ಅವರಿದ್ದು 11 ಪಂದ್ಯಗಳಿಂದ 21 ವಿಕೆಟ್ ತಮ್ಮದಾಗಿಸಿದ್ದಾರೆ.  ಮೊಹಮ್ಮದ್ ಶಮಿ 4ನೇ ಸ್ಥಾನದಲ್ಲಿದ್ದು 13 ಪಂದ್ಯಗಳಲ್ಲಿ 18 ವಿಕೆಟ್ ಪಡೆದಿದ್ದಾರೆ. ಹರ್ಷಲ್ ಪಟೇಲ್ 12 ಪಂದ್ಯಗಳಲ್ಲಿ 18 ವಿಕೆಟ್ ಪಡೆದು 5ನೇ ಸ್ಥಾನದಲ್ಲಿದ್ದಾರೆ.

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್