16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ಗೆ (IPL 2023) ಅದ್ಧೂರಿ ಚಾಲನೆ ಸಿಕ್ಕಿದೆ. ಹಾಲಿ ಚಾಂಪಿಯನ್ ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟಾನ್ಸ್ ತಂಡ ಮೊದಲ ಪಂದ್ಯದಲ್ಲಿ ಗೆದ್ದು ಶುಭಾರಂಭ ಮಾಡಿದೆ. ಶುಕ್ರವಾರ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ರೋಚಕ ಪಂದ್ಯದಲ್ಲಿ ನಾಲ್ಕು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ದ ಗುಜರಾತ್ (GT vs CSK) 5 ವಿಕೆಟ್ಗಳ ಜಯ ಸಾಧಿಸಿತು. ರುತುರಾಜ್ ಗಾಯಕ್ವಾಡ್ (Ruturaj Gaikwad) 90 ರನ್ ಸಿಡಿಸಿದ ಪರಿಣಾಮ ಸಿಎಸ್ಕೆ 178 ರನ್ ಗಳಿಸಿತು. ಇದಕ್ಕುತ್ತರವಾಗಿ ಜಿಟಿ ಭರ್ಜರಿ ಬ್ಯಾಟಿಂಗ್ ನಡೆಸಿ ಇನ್ನೂ 4 ಎಸೆತ ಇರುವಂತೆ ಗೆದ್ದು ಬೀಗಿತು.
ಇದೀಗ ಮೊದಲ ಪಂದ್ಯ ಮುಗಿದ ಬಳಿಕ ಆರೆಂಜ್ ಕ್ಯಾಪ್, ಪರ್ಪಲ್ ಕ್ಯಾಪ್ ಯಾರ ಬಳಿ ಇದೆ?, ಪಾಯಿಂಟ್ ಟೇಬಲ್ ಹೇಗಿದೆ ಎಂಬುದನ್ನು ನೋಡೋಣ.
ಮೊದಲ ಪಂದ್ಯದಲ್ಲಿ ಗೆದ್ದ ಪರಿಣಾಮ ಗುಜರಾತ್ ಟೈಟಾನ್ಸ್ ತಂಡ 2 ಅಂಕ ಸಂಪಾದಿಸಿ ಟೇಬಲ್ ಟಾಪ್ನಲ್ಲಿದೆ. +0.514 ರನ್ರೇಟ್ ಹೊಂದಿದೆ.
ಇತ್ತ ಸೋತ ಕಾರಣ ಚೆನ್ನೈ ಸೂಪರ್ ಕಿಂಗ್ಸ್ ಯಾವುದೇ ಅಂಕ ಪಡೆಯದೆ ಕೊನೆಯ ಸ್ಥಾನದಲ್ಲಿದೆ. -0.514 ರನ್ರೇಟ್ ಹಿನ್ನಡೆಯಲ್ಲಿದೆ.
IPL 2023: ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯಾವಳಿ ಹಿನ್ನೆಲೆ ಮಧ್ಯರಾತ್ರಿ 1 ಗಂಟೆಯ ತನಕ ಮೆಟ್ರೋ ಸೇವೆ ವಿಸ್ತರಣೆ
ಆರೆಂಜ್ ಕ್ಯಾಪ್:
ಸಿಎಸ್ಕೆ ತಂಡದ ಆರಂಭಿಕ ಬ್ಯಾಟರ್ ರುತುರಾಜ್ ಗಾಯಕ್ವಾಡ್ ಆರೆಂಕ್ ಕ್ಯಾಪ್ ತೊಟ್ಟಿದ್ದಾರೆ. ಇವರು ಜಿಟಿ ವಿರುದ್ಧ 92 ರನ್ ಸಿಡಿಸಿದ್ದರು. ಇದರಲ್ಲಿ 4 ಪೋರ್ ಮತ್ತು ಬರೋಬ್ಬರಿ 9 ಸಿಕ್ಸರ್ಗಳಿದ್ದವು. 8 ರನ್ಗಳ ಅಂತರದಿಂದ ಶತಕ ವಂಚಿತರಾದರು. ದ್ವಿತೀಯ ಸ್ಥಾನದಲ್ಲಿ 63 ರನ್ ಗಳಿಸಿ ಶುಭ್ಮನ್ ಗಿಲ್ ಇದ್ದಾರೆ.
ಪರ್ಪಲ್ ಕ್ಯಾಪ್:
ಚೆನ್ನೈ ಸೂಪರ್ ಕಿಂಗ್ಸ್ ತಂಡದ ರಾಜ್ವರ್ಧನ್ ಹಂಗರ್ಗೇಕರ್ ಅತಿ ಹೆಚ್ಚು ವಿಕೆಟ್ ಪಡೆದು ಪರ್ಪಲ್ ಕ್ಯಾಪ್ ತೊಟ್ಟಿದ್ದಾರೆ. ಇವರು ಜಿಟಿ ವಿರುದ್ಧ 4 ಒವರ್ ಬೌಲಿಂಗ್ ಮಾಡಿ 36 ರನ್ ನೀಡಿ 3 ವಿಕೆಟ್ ಕಬಳಿಸಿದರು. ನಂತರದ ಸ್ಥಾನದಲ್ಲಿ 2 ವಿಕೆಟ್ಗಳನ್ನು ಪಡೆದು ಮೊಹಮ್ಮದ್ ಶಮಿ, ರಶೀದ್ ಖಾನ್ ಮತ್ತು ಅಲ್ಜರಿ ಜೋಸೆಫ್ ಇದ್ದಾರೆ.
ಇಂದು ಎರಡು ಪಂದ್ಯ:
ಇಂದು ಐಪಿಎಲ್ 2023 ರಲ್ಲಿ ಎರಡು ಪಂದ್ಯಗಳು ನಡೆಯಲಿದೆ. ಮಧ್ಯಾಹ್ನ 3:30ಕ್ಕೆ ಶುರುವಾಗಲಿರುವ ಮೊದಲ ಮ್ಯಾಚ್ನಲ್ಲಿ ಶಿಖರ್ ಧವನ್ ನಾಯಕತ್ವದ ಪಂಜಾಬ್ ಕಿಂಗ್ಸ್ ಮತ್ತು ನಿತೀಶ್ ರಾಣ ನೇತೃತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಮುಖಾಮುಖಿ ಆಗಲಿದೆ. ಸಂಜೆ 7:30ಕ್ಕೆ ನಡೆಯಲಿರುವ ಮತ್ತೊಂದು ಪಂದ್ಯದಲ್ಲಿ ಕೆಎಲ್ ರಾಹುಲ್ ಅವರ ಲಖನೌ ಸೂಪರ್ ಜೇಂಟ್ಸ್ ಡೇವಿಡ್ ವಾರ್ನರ್ ಕ್ಯಾಪ್ಟನ್ ಆಗಿರುವ ಡೆಲ್ಲಿ ಕ್ಯಾಪಿಟಲ್ಸ್ ಅನ್ನು ಎದುರಿಸಲಿದೆ. ಪಂಜಾಬ್ vs ಕೋಲ್ಕತ್ತಾ ಪಂದ್ಯ ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಐಎಸ್ ಬಿಂದ್ರ ಸ್ಟೇಡಿಯಂನಲ್ಲಿ ನಡೆಯಲಿದ್ದರೆ, ಲಖನೌ vs ಡೆಲ್ಲಿ ಪಂದ್ಯ ಲಖನೌದ ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿಇ ಆಯೋಜಿಸಲಾಗಿದೆ.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 9:09 am, Sat, 1 April 23