IPL 2023 Points Table: ಆರ್​ಸಿಬಿ ಪ್ಲೇಯರ್ಸ್ ಬಳಿಯೇ ಆರೆಂಜ್-ಪರ್ಪಲ್ ಕ್ಯಾಪ್: ಐಪಿಎಲ್ 2023 ಪಾಯಿಂಟ್ ಟೇಬಲ್ ಹೇಗಿದೆ?

Orange-Purple Cap: ಸಿಎಸ್​ಕೆ-ಎಸ್​ಆರ್​ಹೆಚ್ ಪಂದ್ಯಗ ಬಳಿಕ ಪಾಯಿಂಟ್ ಟೇಬಲ್​ ಹೇಗಿದೆ?, ಆರೆಂಜ್ (Orange Cap), ಪರ್ಪಲ್ ಕ್ಯಾಪ್ ಯಾರ ಬಳಿಯಿದೆ ಎಂಬುದನ್ನು ನೋಡೋಣ.

IPL 2023 Points Table: ಆರ್​ಸಿಬಿ ಪ್ಲೇಯರ್ಸ್ ಬಳಿಯೇ ಆರೆಂಜ್-ಪರ್ಪಲ್ ಕ್ಯಾಪ್: ಐಪಿಎಲ್ 2023 ಪಾಯಿಂಟ್ ಟೇಬಲ್ ಹೇಗಿದೆ?
ಐಪಿಎಲ್
Follow us
|

Updated on:Apr 22, 2023 | 10:36 AM

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್​ ಲೀಗ್ (IPL 2023) ಟೂರ್ನಿಯಲ್ಲಿ 29 ಪಂದ್ಯಗಳು ಮುಕ್ತಾಯಗೊಂಡಿದೆ. ಕೆಲ ತಂಡಗಳಿಂದ ಊಹಿಸಲಾಗದ ಪ್ರದರ್ಶನ ಬರುತ್ತಿದೆ. ಎದುರಾಳಿಗೆ 200+ ಟಾರ್ಗೆಟ್ ನೀಡಿದರೂ ಚೇಸ್ ಮಾಡಿ ಗೆಲುವು ಸಾಧಿಸುವುದು ಈ ಬಾರಿಯ ಟೂರ್ನಿಯಲ್ಲಿ ಸಾಮಾನ್ಯವಾಗುತ್ತಿದೆ. ಇಂದು ಐಪಿಎಲ್ 2023 ರಲ್ಲಿ ಎರಡು ಪಂದ್ಯಗಳು ನಡೆಯಲಿದೆ. ಮೊದಲ ಮ್ಯಾಚ್​ನಲ್ಲಿ ಲಖನೌ ಸೂಪರ್ ಜೇಂಟ್ಸ್ ತಂಡ ಗುಜರಾತ್ ಟೈಟಾನ್ಸ್ (LSG vs GT) ಅನ್ನು ಎದುರಿಸಲಿದೆ. ಮತ್ತೊಂದು ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಪಂಜಾಬ್ ಕಿಂಗ್ಸ್ ಮುಖಾಮುಖಿ ಆಗಲಿದೆ. ಶುಕ್ರವಾರ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ 7 ವಿಕೆಟ್​ಗಳ ಅಮೋಘ ಗೆಲುವು ಸಾಧಿಸಿತು. ಹಾಗಾದರೆ, ಸಿಎಸ್​ಕೆ-ಎಸ್​ಆರ್​ಹೆಚ್ ಪಂದ್ಯಗ ಬಳಿಕ ಪಾಯಿಂಟ್ ಟೇಬಲ್​ ಹೇಗಿದೆ?, ಆರೆಂಜ್ (Orange Cap), ಪರ್ಪಲ್ ಕ್ಯಾಪ್ ಯಾರ ಬಳಿಯಿದೆ ಎಂಬುದನ್ನು ನೋಡೋಣ.

  • ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ತಂಡ ಭರ್ಜರಿ ಆಟ ಪ್ರದರ್ಶಿಸುತ್ತಿದ್ದು ಟೇಬಲ್ ಟಾಪ್​ನಲ್ಲಿದೆ. ಆಡಿದ ಆರು ಪಂದ್ಯಗಳಲ್ಲಿ ನಾಲ್ಕು ಗೆಲುವು, ಎರಡು ಸೋಲುಂಡು ಆರ್​ಆರ್​ ಅಗ್ರಸ್ಥಾನದಲ್ಲಿದೆ. +1.043 ರನ್​ರೇಟ್​ನೊಂದಿಗೆ 8 ಅಂಕ ಸಂಪಾದಿಸಿದೆ.
  • ಲಖನೌ ಸೂಪರ್ ಜೇಂಟ್ಸ್ ತಂಡ ಎರಡನೇ ಸ್ಥಾನದಲ್ಲಿದೆ. ಆಡಿದ ಆರು ಪಂದ್ಯಗಳಲ್ಲಿ ನಾಲ್ಕು ಗೆಲುವು, ಎರಡು ಸೋಲುಂಡು 8 ಅಂಕ ಸಂಪಾದಿಸಿ +0.709 ರನ್​ರೇಟ್​ ಹೊಂದಿದೆ.
  • ಆಡಿದ ಆರು ಪಂದ್ಯಗಳಲ್ಲಿ ಎರಡರಲ್ಲಿ ಸೋಲು, ನಾಲ್ಕರಲ್ಲಿ ಜಯ ಕಾಣುವ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ಮೂರನೇ ಸ್ಥಾನಕ್ಕೆ ಜಿಗಿದಿದೆ. +0.355 ರನ್​ರೇಟ್​ನೊಂದಿಗೆ 8 ಅಂಕ ಸಂಪಾದಿಸಿದೆ.
  • ಗುಜರಾತ್ ಟೈಟಾನ್ಸ್ ತಂಡ ನಾಲ್ಕನೇ ಸ್ಥಾನದಲ್ಲಿದ್ದು ಆಡಿದ ಐದು ಪಂದ್ಯಗಳಲ್ಲಿ ಮೂರು ಗೆಲುವು, ಎರಡು ಸೋಲುಂಡು +0.192 ರನ್​ರೇಟ್​ನೊಂದಿಗೆ 6 ಅಂಕ ಸಂಪಾದಿಸಿದೆ.
  • ರಾಯಲ್ ಚಾಲೆಂಜರ್ಸ್ ಬೆಂಗಳೂರು ಐದನೇ ಸ್ಥಾನದಲ್ಲಿದೆ. ಆಡಿದ ಆರು ಪಂದ್ಯಗಳ ಪೈಕಿ ಮೂರರಲ್ಲಿ ಗೆಲುವು ಮೂರರಲ್ಲಿ ಸೋಲು ಕಂಡು 6 ಅಂಕ ಸಂಪಾದಿಸಿ -0.068 ರನ್​ರೇಟ್ ಹೊಂದಿದೆ.
  • ಮುಂಬೈ ಇಂಡಿಯನ್ಸ್ ಆರನೇ ಸ್ಥಾನದಲ್ಲಿದೆ. ಆಡಿದ ಐದು ಪಂದ್ಯದಲ್ಲಿ ಎರಡು ಸೋಲು, ಮೂರು ಗೆಲುವು ಕಂಡು 6 ಅಂಕ ಸಂಪಾದಿಸಿ -0.164 ರನ್​ರೇಟ್ ಹೊಂದಿದೆ.
  • ಪಂಜಾಬ್ ಕಿಂಗ್ಸ್ ಆಡಿದ ಆರು ಪಂದ್ಯಗಳಲ್ಲಿ ತಲಾ ಮೂರು ಸೋಲು-ಮೂರು ಜಯ ಕಂಡು 6 ಅಂಕ ಹೊಂದಿ -0.298ರನ್​ರೇಟ್​ನೊಂದಿಗೆ ಏಳನೇ ಸ್ಥಾನದಲ್ಲಿದೆ.
  • ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಎಂಟನೇ ಪ್ಲೇಸ್​ನಲ್ಲಿದೆ. ಆಡಿದ ಆರು ಪಂದ್ಯಗಳಲ್ಲಿ ಎರಡು ಗೆಲುವು, ನಾಲ್ಕು ಸೋಲುಂಡು +0.214 ರನ್​ರೇಟ್​ನೊಂದಿಗೆ 4 ಅಂಕ ಸಂಪಾದಿಸಿದೆ.
  • ಸನ್​ರೈಸರ್ಸ್ ಹೈದರಾಬಾದ್ ತಂಡ ಒಂಬತ್ತನೇ ಸ್ಥಾನದಲ್ಲಿದೆ. ಆಡಿದ ಆರು ಪಂದ್ಯದಲ್ಲಿ ನಾಲ್ಕರಲ್ಲಿ ಸೋಲು ಎರಡರಲ್ಲಿ ಜಯ ಕಂಡು 4 ಅಂಕ ಸಂಪಾದಿಸಿ -0.794 ರನ್​ರೇಟ್ ಹೊಂದಿದೆ.
  • ಡೆಲ್ಲಿ ಕ್ಯಾಪಿಟಲ್ಸ್ ಕೊನೆಯ ಸ್ಥಾನದಲ್ಲಿದೆ. ಆಡಿದ ಆರು ಪಂದ್ಯಗಳ ಪೈಕಿ ಕೇವಲ ಒಂದರಲ್ಲಷ್ಟೆ ಜಯ ಸಾಧಿಸಿ 2 ಅಂಕ ಸಂಪಾದಿಸಿ -1.183 ರನ್​ರೇಟ್ ಹೊಂದಿದೆ.

ಆರೆಂಜ್ ಕ್ಯಾಪ್:

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಫಾಫ್ ಡುಪ್ಲೆಸಿಸ್ ಆರೆಂಜ್ ಕ್ಯಾಪ್ ತೊಟ್ಟಿದ್ದಾರೆ. ಇವರು ಆಡಿದ ಆರು ಪಂದ್ಯಗಳಲ್ಲಿ ನಾಲ್ಕು ಅರ್ಧಶತಕ ಸಿಡಿಸಿ ಒಟ್ಟು 343 ರನ್ ಕಲೆಹಾಕಿದ್ದಾರೆ. ದ್ವಿತೀಯ ಸ್ಥಾನದಲ್ಲಿ ಡೆಲ್ಲಿ ನಾಯಕ ಡೇವಿಡ್ ವಾರ್ನರ್ 285 ರನ್ ಕಲೆಹಾಕಿದ್ದಾರೆ. ಆರ್​ಸಿಬಿ ತಂಡದ ವಿರಾಟ್ ಕೊಹ್ಲಿ ತೃತೀಯ ಸ್ಥಾನಕ್ಕೆ ಜಿಗಿದಿದ್ದಾರೆ. ಇವರು ಆರು ಪಂದ್ಯಗಳಲ್ಲಿ 279 ರನ್ ಗಳಿಸಿದ್ದಾರೆ.

ಇದನ್ನೂ ಓದಿ
Image
MS Dhoni: ನಿವೃತ್ತಿಯ ಹಂತದಲ್ಲೂ ದಾಖಲೆ: ಟಿ20 ಕ್ರಿಕೆಟ್​ನಲ್ಲಿ ಇತಿಹಾಸ ನಿರ್ಮಿಸಿದ ಎಂಎಸ್ ಧೋನಿ
Image
Ravindra Jadeja: ರೋಚಕ ಕ್ಯಾಚ್ ಹಿಡಿಯುವಾಗ ಅಡ್ಡ ಬಂದ ಕ್ಲಾಸೆನ್: ರವೀಂದ್ರ ಜಡೇಜಾ ಕೋಪದಲ್ಲಿ ಏನು ಮಾಡಿದ್ರು ನೋಡಿ
Image
LSG vs GT, IPL 2023: ಐಪಿಎಲ್​ನಲ್ಲಿಂದು ಡಬಲ್ ಧಮಾಕ: ಲಖನೌ-ಗುಜರಾತ್ ನಡುವೆ ಹೈವೋಲ್ಟೇಜ್ ಕದನ
Image
IPL 2023: ಎದುರಾಳಿ ಬ್ಯಾಟರ್ ಜೊತೆ ದೃಷ್ಟಿಯುದ್ಧಕ್ಕಿಳಿದ ಜಡೇಜಾ! ಸಮಾಧಾನ ಪಡಿಸಿದ ಧೋನಿ

ಪರ್ಪಲ್ ಕ್ಯಾಪ್:

ಆರ್​ಸಿಬಿ ತಂಡದ ಮೊಹಮ್ಮದ್ ಸಿರಾಜ್ ಅತಿ ಹೆಚ್ಚು ವಿಕೆಟ್ ಪಡೆದು ಪರ್ಪಲ್ ಕ್ಯಾಪ್ ತೊಟ್ಟಿದ್ದಾರೆ. ಇವರು ಆಡಿದ ಆರು ಪಂದ್ಯಗಳಿಂದ 12 ವಿಕೆಟ್ ಕಬಳಿಸಿದ್ದಾರೆ. ಲಖನೌ ಸೂಪರ್ ಜೇಂಟ್ಸ್ ತಂಡದ ಮಾರ್ಕ್ ವುಡ್ ದ್ವಿತೀಯ ಸ್ಥಾನದಲ್ಲಿದ್ದು ಆಡಿರುವ ನಾಲ್ಕು ಪಂದ್ಯಗಳಲ್ಲಿ 11 ವಿಕೆಟ್ ಪಡೆದುಕೊಂಡಿದ್ದಾರೆ. ರಾಜಸ್ಥಾನ್ ರಾಯಲ್ಸ್ ತಂಡದ ಸ್ಪಿನ್ನರ್ ಯುಜ್ವೇಂದ್ರ ಚಹಲ್ ಆರು ಪಂದ್ಯಗಳಿಂದ ಒಟ್ಟು 11 ವಿಕೆಟ್ ಕಿತ್ತು ಮೂರನೇ ಸ್ಥಾನದಲ್ಲಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:36 am, Sat, 22 April 23