IPL 2023 Points Table: ಆರ್ಸಿಬಿ- ಡೆಲ್ಲಿ ಪಂದ್ಯಕ್ಕು ಮುನ್ನ ಐಪಿಎಲ್ 2023 ಪಾಯಿಂಟ್ ಟೇಬಲ್ ಹೇಗಿದೆ ನೋಡಿ
ಆರ್ಸಿಬಿ - ಡಿಸಿ ಪಂದ್ಯಕ್ಕೂ ಮುನ್ನ ಐಪಿಎಲ್ 2023 ಪಾಯಿಂಟ್ ಟೇಬಲ್ ಹೇಗಿದೆ?, ಆರೆಂಜ್ (Orange Cap), ಪರ್ಪಲ್ ಕ್ಯಾಪ್ ಯಾರ ಬಳಿಯಿದೆ ಎಂಬುದನ್ನು ನೋಡೋಣ.
16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (IPL 2023) ಟೂರ್ನಿಯಲ್ಲಿ 19 ಪಂದ್ಯಗಳು ಮುಕ್ತಾಯಗೊಂಡಿದೆ. ಕೆಲ ತಂಡಗಳಿಂದ ಊಹಿಸಲಾಗದ ಪ್ರದರ್ಶನ ಬರುತ್ತಿದೆ. ಎದುರಾಳಿಗೆ 200+ ಟಾರ್ಗೆಟ್ ನೀಡಿದರೂ ಚೇಸ್ ಮಾಡಿ ಗೆಲುವು ಸಾಧಿಸುವುದು ಈ ಬಾರಿಯ ಟೂರ್ನಿಯಲ್ಲಿ ಸಾಮಾನ್ಯವಾಗುತ್ತಿದೆ. ಇಂದು ಐಪಿಎಲ್ 2023 ರಲ್ಲಿ ಎರಡು ಪಂದ್ಯಗಳು ನಡೆಯಲಿದೆ. ಮೊದಲ ಮ್ಯಾಚ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಡೆಲ್ಲಿ ಕ್ಯಾಪಿಟಲ್ಸ್ (RCB vs DC) ಅನ್ನು ಎದುರಿಸಲಿದೆ. ಮತ್ತೊಂದು ಪಂದ್ಯದಲ್ಲಿ ಲಖನೌ ಸೂಪರ್ ಜೇಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ಮುಖಾಮುಖಿ ಆಗಲಿದೆ. ಹಾಗಾದರೆ, ಆರ್ಸಿಬಿ – ಡಿಸಿ ಪಂದ್ಯಕ್ಕೂ ಮುನ್ನ ಪಾಯಿಂಟ್ ಟೇಬಲ್ ಹೇಗಿದೆ?, ಆರೆಂಜ್ (Orange Cap), ಪರ್ಪಲ್ ಕ್ಯಾಪ್ ಯಾರ ಬಳಿಯಿದೆ ಎಂಬುದನ್ನು ನೋಡೋಣ.
- ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ತಂಡ ಭರ್ಜರಿ ಆಟ ಪ್ರದರ್ಶಿಸುತ್ತಿದ್ದು ಟೇಬಲ್ ಟಾಪ್ನಲ್ಲಿದೆ. ಆಡಿದ ನಾಲ್ಕು ಪಂದ್ಯಗಳಲ್ಲಿ ಮೂರು ಗೆಲುವು, ಒಂದು ಸೋಲುಂಡು ಆರ್ಆರ್ ಅಗ್ರಸ್ಥಾನದಲ್ಲಿದೆ. +1.588 ರನ್ರೇಟ್ನೊಂದಿಗೆ 6 ಅಂಕ ಸಂಪಾದಿಸಿದೆ.
- ಹಿಂದಿನ ಪಂದ್ಯದಲ್ಲಿ ಆರ್ಸಿಬಿ ವಿರುದ್ಧ ರೋಚಕ ಜಯ ಸಾಧಿಸಿದ ಲಖನೌ ಸೂಪರ್ ಜೇಂಟ್ಸ್ ತಂಡ ಎರಡನೇ ಸ್ಥಾನದಲ್ಲಿದೆ. +1.048 ರನ್ರೇಟ್ನೊಂದಿಗೆ 6 ಅಂಕ ಸಂಪಾದಿಸಿದೆ.
- ಗುಜರಾತ್ ಟೈಟಾನ್ಸ್ ತಂಡ ಪಂಜಾಬ್ ವಿರುದ್ಧ ಜಯ ಸಾಧಿಸುವ ಮೂಲಕ ಮೂರನೇ ಸ್ಥಾನದಲ್ಲಿದ್ದು ಆಡಿದ ನಾಲ್ಕು ಪಂದ್ಯಗಳಲ್ಲಿ ಮೂರು ಗೆಲುವು, ಒಂದು ಸೋಲುಂಡು +0.341 ರನ್ರೇಟ್ನೊಂದಿಗೆ 6 ಅಂಕ ಸಂಪಾದಿಸಿದೆ.
- ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ನಿನ್ನೆಯ ಪಂದ್ಯದಲ್ಲಿ ಸೋತರೂ ನಾಲ್ಕನೇ ಪ್ಲೇಸ್ನಲ್ಲಿದೆ. ಆಡಿದ ನಾಲ್ಕು ಪಂದ್ಯಗಳಲ್ಲಿ ಎರಡು ಗೆಲುವು, ಎರಡು ಸೋಲುಂಡು +0.711 ರನ್ರೇಟ್ನೊಂದಿಗೆ 4 ಅಂಕ ಸಂಪಾದಿಸಿದೆ.
- ಆಡಿದ ನಾಲ್ಕು ಪಂದ್ಯಗಳಲ್ಲಿ ತಲಾ ಎರಡರಲ್ಲಿ ಜಯ- ಸೋಲು ಕಾಣುವ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ತಂಡ ಐದನೇ ಸ್ಥಾನದಲ್ಲಿದೆ. +0.225 ರನ್ರೇಟ್ನೊಂದಿಗೆ 4 ಅಂಕ ಸಂಪಾದಿಸಿದೆ.
- ಪಂಜಾಬ್ ಕಿಂಗ್ಸ್ ಕೂಡ ಆಡಿದ ನಾಲ್ಕು ಪಂದ್ಯಗಳಲ್ಲಿ ಎರಡರಲ್ಲಿ ಸೋಲು ಹಾಗೂ ಎರಡರಲ್ಲಿ ಜಯ ಕಂಡು 4 ಅಂಕ ಹೊಂದಿ -0.226ರನ್ರೇಟ್ನೊಂದಿಗೆ ಆರನೇ ಸ್ಥಾನದಲ್ಲಿದೆ.
- ಸನ್ರೈಸರ್ಸ್ ಹೈದರಾಬಾದ್ ತಂಡ ಕೆಕೆಆರ್ ವಿರುದ್ಧ ಗೆದ್ದು ಎರಡು ಸ್ಥಾನ ಮೇಲ್ಕೇರಿದೆ. ಆಡಿದ ನಾಲ್ಕು ಪಂದ್ಯದಲ್ಲಿ ಎರಡರಲ್ಲೂ ಸೋಲು ಎರಡರಲ್ಲಿ ಜಯ ಕಂಡು 4 ಅಂಕ ಸಂಪಾದಿಸಿ -0.822 ರನ್ರೇಟ್ ಹೊಂದಿದೆ.
- ರಾಯಲ್ ಚಾಲೆಂಜರ್ಸ್ ಬೆಂಗಳೂರು ಎಂಟನೇ ಸ್ಥಾನದಲ್ಲಿದೆ. ಆಡಿದ ಮೂರು ಪಂದ್ಯಗಳ ಪೈಕಿ ಎರಡು ಸೋಲು ಒಂದು ಗೆಲುವು ಕಂಡು 2 ಅಂಕ ಸಂಪಾದಿಸಿ -0.800 ರನ್ರೇಟ್ ಹೊಂದಿದೆ.
- ಮುಂಬೈ ಇಂಡಿಯನ್ಸ್ ಒಂಬತ್ತನೇ ಸ್ಥಾನದಲ್ಲಿದೆ. ಆಡಿದ ಮೂರು ಪಂದ್ಯದಲ್ಲಿ ಎರಡು ಸೋಲು, ಒಂದು ಗೆಲುವು ಕಂಡು 2 ಅಂಕ ಸಂಪಾದಿಸಿ -0.879 ರನ್ರೇಟ್ ಹೊಂದಿದೆ.
- ಡೆಲ್ಲಿ ಕ್ಯಾಪಿಟಲ್ಸ್ ಕೊನೆಯ ಸ್ಥಾನದಲ್ಲಿದೆ. ಆಡಿದ ಎಲ್ಲ ನಾಲ್ಕು ಪಂದ್ಯಗಳಲ್ಲೂ ಸೋಲು ಕಂಡು ಯಾವುದೇ ಅಂಕ ಸಂಪಾದಿಸದೆ -1.576 ರನ್ರೇಟ್ ಹೊಂದಿದೆ.
RCB vs DC, IPL 2023: ಐಪಿಎಲ್ನಲ್ಲಿಂದು ಎರಡು ಪಂದ್ಯ: ರೋಚಕತೆ ಸೃಷ್ಟಿಸಿದ ಆರ್ಸಿಬಿ- ಡೆಲ್ಲಿ ಮ್ಯಾಚ್
ಆರೆಂಜ್ ಕ್ಯಾಪ್:
ಪಂಜಾಬ್ ಕಿಂಗ್ಸ್ ತಂಡದ ನಾಯಕ ಶಿಖರ್ ಧವನ್ ಆರೆಂಜ್ ಕ್ಯಾಪ್ ತೊಟ್ಟಿದ್ದಾರೆ. ಇವರು ಆಡಿದ ನಾಲ್ಕು ಪಂದ್ಯಗಳಲ್ಲಿ ಎರಡು ಅರ್ಧಶತಕ ಸಿಡಿಸಿ ಒಟ್ಟು 233 ರನ್ ಕಲೆಹಾಕಿದ್ದಾರೆ. ದ್ವಿತೀಯ ಸ್ಥಾನದಲ್ಲಿ ಡೆಲ್ಲಿ ನಾಯಕ ಡೇವಿಡ್ ವಾರ್ನರ್ 209 ರನ್ ಕಲೆಹಾಕಿದ್ದಾರೆ. ರಾಜಸ್ಥಾನ್ ರಾಯಲ್ಸ್ ತಂಡ ಜೋಸ್ ಬಟ್ಲರ್ ತೃತೀಯ ಸ್ಥಾನಕ್ಕೆ ಜಿಗಿದಿದ್ದಾರೆ. ಇವರು ನಾಲ್ಕು ಪಂದ್ಯಗಳಲ್ಲಿ 204 ರನ್ ಗಳಿಸಿದ್ದಾರೆ.
ಪರ್ಪಲ್ ಕ್ಯಾಪ್:
ರಾಜಸ್ಥಾನ್ ರಾಯಲ್ಸ್ ತಂಡದ ಯುಜ್ವೇಂದ್ರ ಚಹಲ್ ಅತಿ ಹೆಚ್ಚು ವಿಕೆಟ್ ಪಡೆದು ಪರ್ಪಲ್ ಕ್ಯಾಪ್ ತೊಟ್ಟಿದ್ದಾರೆ. ಇವರು ಆಡಿದ ನಾಲ್ಕು ಪಂದ್ಯಗಳಿಂದ 10 ವಿಕೆಟ್ ಕಬಳಿಸಿದ್ದಾರೆ. ಗುಜರಾತ್ ಟೈಟಾನ್ಸ್ ತಂಡದ ಸ್ಪಿನ್ನರ್ ರಶೀದ್ ಖಾನ್ ನಾಲ್ಕು ಪಂದ್ಯಗಳಿಂದ ಒಟ್ಟು 9 ವಿಕೆಟ್ ಕಿತ್ತು ದ್ವಿತೀಯ ಸ್ಥಾನದಲ್ಲಿದ್ದಾರೆ. ಲಖನೌ ಸೂಪರ್ ಜೇಂಟ್ಸ್ ತಂಡದ ಮಾರ್ಕ್ ವುಡ್ ಮೂರನೇ ಸ್ಥಾನದಲ್ಲಿದ್ದು ಆಡಿರುವ ಮೂರು ಪಂದ್ಯಗಳಲ್ಲಿ 9 ವಿಕೆಟ್ ಪಡೆದುಕೊಂಡಿದ್ದಾರೆ. ತಂಡದ ಮಾರ್ಕ್ ವುಡ್ ಮೂರನೇ ಸ್ಥಾನದಲ್ಲಿದ್ದು ಆಡಿರುವ ಮೂರು ಪಂದ್ಯಗಳಲ್ಲಿ 9 ವಿಕೆಟ್ ಪಡೆದುಕೊಂಡಿದ್ದಾರೆ.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 11:52 am, Sat, 15 April 23