IPL 2022: RCB ಗೆ ಪ್ಲೇಆಫ್​ ಪ್ರವೇಶಿಸಲು ಇರುವುದು ಮೂರೇ ದಾರಿ..!

IPL 2022 RCB Playoffs Chances: ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಆರ್​ಸಿಬಿ ತಂಡಗಳು ಮುಂದಿನ ಪಂದ್ಯಗಳನ್ನು ಸೋತರೆ, ಕೆಕೆಆರ್​, ಪಂಜಾಬ್ ಕಿಂಗ್ಸ್ ಹಾಗೂ ಎಸ್​ಆರ್​ಹೆಚ್​ ತಂಡಗಳಿಗೆ ಪ್ಲೇಆಫ್​ಗೆ ಚಾನ್ಸ್ ಇರಲಿದೆ.

IPL 2022: RCB ಗೆ ಪ್ಲೇಆಫ್​ ಪ್ರವೇಶಿಸಲು ಇರುವುದು ಮೂರೇ ದಾರಿ..!
IPL 2022 RCB
Follow us
| Edited By: Zahir Yusuf

Updated on:May 18, 2022 | 6:25 PM

IPL 2022: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಐಪಿಎಲ್ 2022 ರ ಪ್ಲೇಆಫ್ ಪ್ರವೇಶಿಸುವ ಯತ್ನದಲ್ಲಿದೆ. ಆದರೆ ಪ್ರಸ್ತುತ ಸನ್ನಿವೇಶದಲ್ಲಿ ಆರ್​ಸಿಬಿಗೆ ನಾಕೌಟ್‌ನ ಹಾದಿ ಸುಲಭವಲ್ಲ. ಏಕೆಂದರೆ ಫಾಫ್ ಡು ಪ್ಲೆಸಿಸ್ ನೇತೃತ್ವದ ಆರ್‌ಸಿಬಿ ತಂಡವು 13 ಪಂದ್ಯಗಳಿಂದ 14 ಅಂಕಗಳನ್ನು ಕಲೆಹಾಕಿದೆ. ಈ ಮೂಲಕ ಪಾಯಿಂಟ್ ಪಟ್ಟಿಯಲ್ಲಿ 5 ನೇ ಸ್ಥಾನದಲ್ಲಿದೆ. ಅತ್ತ ಇಷ್ಟೇ ಪಾಯಿಂಟ್ಸ್ ಕಲೆಹಾಕಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡವು 4ನೇ ಸ್ಥಾನದಲ್ಲಿದೆ. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಆರ್​ಸಿಬಿ ನಡುವೆ 4ನೇ ಸ್ಥಾನಕ್ಕಾಗಿ ಪೈಪೋಟಿ ಏರ್ಪಟ್ಟಿದೆ. ವಿಶೇಷ ಎಂದರೆ ಉಭಯ ತಂಡಗಳಿಗೂ ಇನ್ನು ಒಂದು ಪಂದ್ಯವಿದ್ದು, ಈ ಪಂದ್ಯದ ಮೂಲಕ ಪ್ಲೇಆಫ್ ಆಡುವ ತಂಡ ಯಾವುದೆಂದು ನಿರ್ಧಾರವಾಗಲಿದೆ. ಹಾಗಿದ್ರೆ ಆರ್​ಸಿಬಿ ತಂಡವು ಪ್ಲೇಆಫ್ ಪ್ರವೇಶಿಸಲು ಇರುವ ಮಾರ್ಗಗಳಾವುವು ನೋಡೋಣ…

1- ಗುಜರಾತ್ ಟೈಟನ್ಸ್ ವಿರುದ್ದದ ಗೆಲುವು: ಆರ್​ಸಿಬಿ ತಂಡವು ಗುಜರಾತ್ ಟೈಟನ್ಸ್ ವಿರುದ್ದ ಭರ್ಜರಿ ಜಯ ಸಾಧಿಸಿದರೆ ಪ್ಲೇಆಫ್ ಪ್ರವೇಶಿಸಬಹುದು. ಒಂದು ವೇಳೆ ಸಾಧಾರಣ ಗೆಲುವು ಕಂಡರೆ ಪ್ಲೇಆಫ್ ಹಾದಿ ಕಠಿಣವಾಗಲಿದೆ. ಏಕೆಂದರೆ ಅತ್ತ ಡೆಲ್ಲಿ ಕ್ಯಾಪಿಟಲ್ಸ್​ ತಂಡವು ಮುಂಬೈ ವಿರುದ್ದ ಸೋತರೆ ಮಾತ್ರ ಆರ್​ಸಿಬಿಗೆ ಪ್ಲೇಆಫ್​ ಪ್ರವೇಶಿಸುವ ಅವಕಾಶ ಇರಲಿದೆ. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೆಟ್​ ರನ್​ ರೇಟ್​ ಅನ್ನು ಹಿಂದಿಕ್ಕುವಂತೆ ಗುಜರಾತ್ ಟೈಟನ್ಸ್ ವಿರುದ್ದ ಆರ್​ಸಿಬಿ ಗೆಲ್ಲಬೇಕು. ಅಂದರೆ ಕನಿಷ್ಠ 80 ರನ್​ಗಳ ಅಂತರದಿಂದ ಗುಜರಾತ್ ಟೈಟನ್ಸ್ ವಿರುದ್ದ ಗೆದ್ದರೆ ಆರ್​ಸಿಬಿ ಮತ್ತೆ ಪಾಯಿಂಟ್ಸ್​ ಟೇಬಲ್​ನಲ್ಲಿ ನಾಲ್ಕನೇ ಸ್ಥಾನಕ್ಕೇರಬಹುದು. ಈ ಮೂಲಕ ನೆಟ್ ರನ್ ರೇಟ್​ ಸಹಾಯದಿಂದ ಪ್ಲೇಆಫ್​ ಪ್ರವೇಶಿಸಬಹುದು.

2- ಲಕ್ನೋ ತಂಡದ ಸೋಲು: ಕೆಕೆಆರ್ ವಿರುದ್ದದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವು 80 ರನ್​ಗಳ ಅಂತರದಿಂದ ಸೋತರೆ ನೆಟ್ ರನ್ ರೇಟ್ ಕುಸಿಯಲಿದೆ. ಅಷ್ಟೇ ಅಲ್ಲದೆ ಪಾಯಿಂಟ್ಸ್​ ಟೇಬಲ್​ನಲ್ಲಿ ಲಕ್ನೋ ನಾಲ್ಕನೇ ಸ್ಥಾನಕ್ಕೆ ಇಳಿಯಬಹುದು. ಮತ್ತೊಂದೆಡೆ ಗುಜರಾತ್ ಟೈಟನ್ಸ್ ವಿರುದ್ದ ಆರ್​ಸಿಬಿ ತಂಡವು 80 ರನ್​ಗಳಿಗಿಂತ ಹೆಚ್ಚಿನ ರನ್​ಗಳ ಅಂತರದಿಂದ ಗೆಲ್ಲುವ ಮೂಲಕ ಲಕ್ನೋ ತಂಡವನ್ನು ಹಿಂದಿಕ್ಕಿ ನಾಲ್ಕನೇ ಸ್ಥಾನ ಅಲಂಕರಿಸಬಹುದು. ಹೀಗಾದರೆ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಮುಂಬೈ ಇಂಡಿಯನ್ಸ್ ವಿರುದ್ದ ಗೆದ್ದರೂ ಅದು ಆರ್​ಸಿಬಿ ಮೇಲೆ ಪರಿಣಾಮ ಬೀರುವುದಿಲ್ಲ. ಆದರೆ ಇಲ್ಲಿ ಲಕ್ನೋ ಸೂಪರ್ ಜೈಂಟ್ಸ್ 80 ರನ್​ಗಳ ಅಂತರದಿಂದ ಕೆಕೆಆರ್ ವಿರುದ್ದ ಸೋಲಲಿದೆಯಾ ಎಂಬುದೇ ದೊಡ್ಡ ಪ್ರಶ್ನೆ.

ಇದನ್ನೂ ಓದಿ
Image
IPL 2022: ಎಬಿಡಿ, ಕ್ರಿಸ್ ಗೇಲ್​ಗೆ RCB ಯ ಹಾಲ್ ಆಫ್ ಫೇಮ್ ಗೌರವ
Image
IPL 2022: ಇಬ್ಬರು ಯುವ ಆಟಗಾರರ ಪ್ರದರ್ಶನಕ್ಕೆ ಗಂಗೂಲಿ ಫಿದಾ..!
Image
Virat Kohli: ಕಳಪೆ ಫಾರ್ಮ್​ ನಡುವೆಯೂ 2 ದಾಖಲೆ ಬರೆದ ಕಿಂಗ್ ಕೊಹ್ಲಿ
Image
IPL 2022: RCB ತಂಡದ ಸೋಲಿಗೆ ಇವರಿಬ್ಬರೇ ಕಾರಣ..!

3- ಡೆಲ್ಲಿ, ಆರ್​ಸಿಬಿ ತಂಡಗಳ ಸೋಲು: ಆರ್​ಸಿಬಿ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮುಂದಿನ ಪಂದ್ಯಗಳಲ್ಲಿ ಸೋತರೂ ಬೆಂಗಳೂರು ತಂಡ ಪ್ಲೇಆಫ್ ಪ್ರವೇಶಿಸಬಹುದು. ಆದರೆ ಇಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಮುಂಬೈ ಇಂಡಿಯನ್ಸ್ ವಿರುದ್ದ ಭಾರೀ ಅಂತರದಿಂದ ಸೋಲಬೇಕಾಗುತ್ತದೆ. ಅಷ್ಟೇ ಅಲ್ಲದೆ ಆರ್​ಸಿಬಿ ಗುಜರಾತ್ ಟೈಟನ್ಸ್​ ವಿರುದ್ದ ಕಡಿಮೆ ಅಂತರದಿಂದ ಸೋಲಬೇಕು. ಇದರಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೆಟ್ ರನ್ ರೇಟ್ ಕಡಿಮೆಯಾಗಿ, ಆರ್​ಸಿಬಿಗೆ ಪಾಯಿಂಟ್ಸ್ ಟೇಬಲ್​ನಲ್ಲಿ ಮೇಲೇರಬಹುದು. ಇಲ್ಲಿ 14 ಪಾಯಿಂಟ್ಸ್ ಲೆಕ್ಕಾಚಾರದಲ್ಲಿ ಉತ್ತಮ ನೆಟ್ ರನ್ ರೇಟ್ ಹೊಂದಿದ್ದರೆ ಆರ್​ಸಿಬಿ ಪ್ಲೇಆಫ್​ಗೆ ಎಂಟ್ರಿ ಕೊಡಬಹುದು.

ಆದರೆ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಆರ್​ಸಿಬಿ ತಂಡಗಳು ಮುಂದಿನ ಪಂದ್ಯಗಳನ್ನು ಸೋತರೆ, ಕೆಕೆಆರ್​, ಪಂಜಾಬ್ ಕಿಂಗ್ಸ್ ಹಾಗೂ ಎಸ್​ಆರ್​ಹೆಚ್​ ತಂಡಗಳಿಗೆ ಪ್ಲೇಆಫ್​ಗೆ ಚಾನ್ಸ್ ಇರಲಿದೆ. ಏಕೆಂದರೆ ಈ ತಂಡಗಳು 12 ಪಾಯಿಂಟ್ಸ್ ಕಲೆಹಾಕಿದ್ದು, ತಮ್ಮ ಕೊನೆಯ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಆರ್​ಸಿಬಿ ತಂಡವನ್ನು ನೆಟ್ ರನ್​ ರೇಟ್​ ಮೂಲಕ ಹಿಂದಿಕ್ಕಿ ಪ್ಲೇಆಫ್​ ಪ್ರವೇಶಿಸುವ ಅವಕಾಶ ಇರಲಿದೆ. ಹೀಗಾಗಿ ಆರ್​ಸಿಬಿ ತಂಡವು ಗುಜರಾತ್ ಟೈಟನ್ಸ್​ ವಿರುದ್ದ ಭಾರೀ ಅಂತರದಿಂದ ಗೆಲ್ಲುವ ಮೂಲಕ ನೆಟ್​ ರನ್​ ರೇಟ್ ಸಹಾಯದಿಂದ ಪ್ಲೇಆಫ್ ಪ್ರವೇಶಿಸುವುದೊಂದೇ ಉತ್ತಮ ಮಾರ್ಗ.

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 6:24 pm, Wed, 18 May 22

ತಾಜಾ ಸುದ್ದಿ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಅಶೋಕ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲ್ಲ: ವಿಶ್ವನಾಥ್, ಬಿಜೆಪಿ ಶಾಸಕ
ಅಶೋಕ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲ್ಲ: ವಿಶ್ವನಾಥ್, ಬಿಜೆಪಿ ಶಾಸಕ
ಕೆಸಿಆರ್ ಹಿಪ್ ರಿಪ್ಲೇಸ್ಮೆಂಟ್ ಸರ್ಜರಿ, ವಾಕರ್ ಸಹಾಯದಿಂದ ನಡೆದಾಟ ಪ್ರಯತ್ನ
ಕೆಸಿಆರ್ ಹಿಪ್ ರಿಪ್ಲೇಸ್ಮೆಂಟ್ ಸರ್ಜರಿ, ವಾಕರ್ ಸಹಾಯದಿಂದ ನಡೆದಾಟ ಪ್ರಯತ್ನ
ಉತ್ತರ ಕನ್ನಡ: ಫಕೀರರ ವೇಷದಲ್ಲಿ ಅಮಾಯಕರನ್ನ ಮೋಸ ಮಾಡ್ತಿದ್ದ ಯುವಕರು ವಶಕ್ಕೆ
ಉತ್ತರ ಕನ್ನಡ: ಫಕೀರರ ವೇಷದಲ್ಲಿ ಅಮಾಯಕರನ್ನ ಮೋಸ ಮಾಡ್ತಿದ್ದ ಯುವಕರು ವಶಕ್ಕೆ
ವಿನೋದ್ ತಾಯಿಯನ್ನು ನೋಡಿಕೊಂಡ ರೀತಿ ಪ್ರತಿಯೊಬ್ಬರಿಗೂ ಮಾದರಿ: ಶಿವಕುಮಾರ್
ವಿನೋದ್ ತಾಯಿಯನ್ನು ನೋಡಿಕೊಂಡ ರೀತಿ ಪ್ರತಿಯೊಬ್ಬರಿಗೂ ಮಾದರಿ: ಶಿವಕುಮಾರ್
ಕಟುಕರಿಗೆ ಈ ವಾರ ಇದೆ ಮಾರಿ ಹಬ್ಬ; ಸೂಚನೆ ಕೊಟ್ಟ ಸುದೀಪ್
ಕಟುಕರಿಗೆ ಈ ವಾರ ಇದೆ ಮಾರಿ ಹಬ್ಬ; ಸೂಚನೆ ಕೊಟ್ಟ ಸುದೀಪ್