IPL 2022: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಐಪಿಎಲ್ 2022 ರ ಪ್ಲೇಆಫ್ ಪ್ರವೇಶಿಸುವ ಯತ್ನದಲ್ಲಿದೆ. ಆದರೆ ಪ್ರಸ್ತುತ ಸನ್ನಿವೇಶದಲ್ಲಿ ಆರ್ಸಿಬಿಗೆ ನಾಕೌಟ್‌ನ ಹಾದಿ ಸುಲಭವಲ್ಲ. ಏಕೆಂದರೆ ಫಾಫ್ ಡು ಪ್ಲೆಸಿಸ್ ನೇತೃತ್ವದ ಆರ್‌ಸಿಬಿ ತಂಡವು 13 ಪಂದ್ಯಗಳಿಂದ 14 ಅಂಕಗಳನ್ನು ಕಲೆಹಾಕಿದೆ. ಈ ಮೂಲಕ ಪಾಯಿಂಟ್ ಪಟ್ಟಿಯಲ್ಲಿ 5 ನೇ ಸ್ಥಾನದಲ್ಲಿದೆ. ಅತ್ತ ಇಷ್ಟೇ ಪಾಯಿಂಟ್ಸ್ ಕಲೆಹಾಕಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡವು 4ನೇ ಸ್ಥಾನದಲ್ಲಿದೆ. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಆರ್‌ಸಿಬಿ ನಡುವೆ 4ನೇ ಸ್ಥಾನಕ್ಕಾಗಿ ಪೈಪೋಟಿ ಏರ್ಪಟ್ಟಿದೆ. ವಿಶೇಷ ಎಂದರೆ ಉಭಯ ತಂಡಗಳಿಗೂ ಇನ್ನು ಒಂದು ಪಂದ್ಯವಿದ್ದು, ಈ ಪಂದ್ಯದ ಮೂಲಕ ಪ್ಲೇಆಫ್ ಆಡುವ ತಂಡ ಯಾವುದೆಂದು ನಿರ್ಧಾರವಾಗಲಿದೆ. ಹಾಗಿದ್ರೆ ಆರ್‌ಸಿಬಿ ತಂಡವು ಪ್ಲೇಆಫ್ ಪ್ರವೇಶಿಸಲು ಇರುವ ಮಾರ್ಗಗಳಾವುವು ನೋಡೋಣ…
1- ಗುಜರಾತ್ ಟೈಟನ್ಸ್ ವಿರುದ್ದದ ಗೆಲುವು: ಆರ್‌ಸಿಬಿ ತಂಡವು ಗುಜರಾತ್ ಟೈಟನ್ಸ್ ವಿರುದ್ದ ಭರ್ಜರಿ ಜಯ ಸಾಧಿಸಿದರೆ ಪ್ಲೇಆಫ್ ಪ್ರವೇಶಿಸಬಹುದು. ಒಂದು ವೇಳೆ ಸಾಧಾರಣ ಗೆಲುವು ಕಂಡರೆ ಪ್ಲೇಆಫ್ ಹಾದಿ ಕಠಿಣವಾಗಲಿದೆ. ಏಕೆಂದರೆ ಅತ್ತ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಮುಂಬೈ ವಿರುದ್ದ ಸೋತರೆ ಮಾತ್ರ ಆರ್ಸಿಬಿಗೆ ಪ್ಲೇಆಫ್ ಪ್ರವೇಶಿಸುವ ಅವಕಾಶ ಇರಲಿದೆ. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೆಟ್ ರನ್ ರೇಟ್ ಅನ್ನು ಹಿಂದಿಕ್ಕುವಂತೆ ಗುಜರಾತ್ ಟೈಟನ್ಸ್ ವಿರುದ್ದ ಆರ್‌ಸಿಬಿ ಗೆಲ್ಲಬೇಕು. ಅಂದರೆ ಕನಿಷ್ಠ 80 ರನ್ಗಳ ಅಂತರದಿಂದ ಗುಜರಾತ್ ಟೈಟನ್ಸ್ ವಿರುದ್ದ ಗೆದ್ದರೆ ಆರ್‌ಸಿಬಿ ಮತ್ತೆ ಪಾಯಿಂಟ್ಸ್ ಟೇಬಲ್ನಲ್ಲಿ ನಾಲ್ಕನೇ ಸ್ಥಾನಕ್ಕೇರಬಹುದು. ಈ ಮೂಲಕ ನೆಟ್ ರನ್ ರೇಟ್ ಸಹಾಯದಿಂದ ಪ್ಲೇಆಫ್ ಪ್ರವೇಶಿಸಬಹುದು.
2- ಲಕ್ನೋ ತಂಡದ ಸೋಲು: ಕೆಕೆಆರ್ ವಿರುದ್ದದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವು 80 ರನ್ಗಳ ಅಂತರದಿಂದ ಸೋತರೆ ನೆಟ್ ರನ್ ರೇಟ್ ಕುಸಿಯಲಿದೆ. ಅಷ್ಟೇ ಅಲ್ಲದೆ ಪಾಯಿಂಟ್ಸ್ ಟೇಬಲ್ನಲ್ಲಿ ಲಕ್ನೋ ನಾಲ್ಕನೇ ಸ್ಥಾನಕ್ಕೆ ಇಳಿಯಬಹುದು. ಮತ್ತೊಂದೆಡೆ ಗುಜರಾತ್ ಟೈಟನ್ಸ್ ವಿರುದ್ದ ಆರ್‌ಸಿಬಿ ತಂಡವು 80 ರನ್ಗಳಿಗಿಂತ ಹೆಚ್ಚಿನ ರನ್ಗಳ ಅಂತರದಿಂದ ಗೆಲ್ಲುವ ಮೂಲಕ ಲಕ್ನೋ ತಂಡವನ್ನು ಹಿಂದಿಕ್ಕಿ ನಾಲ್ಕನೇ ಸ್ಥಾನ ಅಲಂಕರಿಸಬಹುದು. ಹೀಗಾದರೆ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಮುಂಬೈ ಇಂಡಿಯನ್ಸ್ ವಿರುದ್ದ ಗೆದ್ದರೂ ಅದು ಆರ್‌ಸಿಬಿ ಮೇಲೆ ಪರಿಣಾಮ ಬೀರುವುದಿಲ್ಲ. ಆದರೆ ಇಲ್ಲಿ ಲಕ್ನೋ ಸೂಪರ್ ಜೈಂಟ್ಸ್ 80 ರನ್ಗಳ ಅಂತರದಿಂದ ಕೆಕೆಆರ್ ವಿರುದ್ದ ಸೋಲಲಿದೆಯಾ ಎಂಬುದೇ ದೊಡ್ಡ ಪ್ರಶ್ನೆ.
3- ಡೆಲ್ಲಿ, ಆರ್‌ಸಿಬಿ ತಂಡಗಳ ಸೋಲು: ಆರ್‌ಸಿಬಿ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮುಂದಿನ ಪಂದ್ಯಗಳಲ್ಲಿ ಸೋತರೂ ಬೆಂಗಳೂರು ತಂಡ ಪ್ಲೇಆಫ್ ಪ್ರವೇಶಿಸಬಹುದು. ಆದರೆ ಇಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಮುಂಬೈ ಇಂಡಿಯನ್ಸ್ ವಿರುದ್ದ ಭಾರೀ ಅಂತರದಿಂದ ಸೋಲಬೇಕಾಗುತ್ತದೆ. ಅಷ್ಟೇ ಅಲ್ಲದೆ ಆರ್‌ಸಿಬಿ ಗುಜರಾತ್ ಟೈಟನ್ಸ್ ವಿರುದ್ದ ಕಡಿಮೆ ಅಂತರದಿಂದ ಸೋಲಬೇಕು. ಇದರಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೆಟ್ ರನ್ ರೇಟ್ ಕಡಿಮೆಯಾಗಿ, ಆರ್ಸಿಬಿಗೆ ಪಾಯಿಂಟ್ಸ್ ಟೇಬಲ್ನಲ್ಲಿ ಮೇಲೇರಬಹುದು. ಇಲ್ಲಿ 14 ಪಾಯಿಂಟ್ಸ್ ಲೆಕ್ಕಾಚಾರದಲ್ಲಿ ಉತ್ತಮ ನೆಟ್ ರನ್ ರೇಟ್ ಹೊಂದಿದ್ದರೆ ಆರ್‌ಸಿಬಿ ಪ್ಲೇಆಫ್ಗೆ ಎಂಟ್ರಿ ಕೊಡಬಹುದು.
ಆದರೆ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಆರ್‌ಸಿಬಿ ತಂಡಗಳು ಮುಂದಿನ ಪಂದ್ಯಗಳನ್ನು ಸೋತರೆ, ಕೆಕೆಆರ್, ಪಂಜಾಬ್ ಕಿಂಗ್ಸ್ ಹಾಗೂ ಎಸ್ಆರ್ಹೆಚ್ ತಂಡಗಳಿಗೆ ಪ್ಲೇಆಫ್ಗೆ ಚಾನ್ಸ್ ಇರಲಿದೆ. ಏಕೆಂದರೆ ಈ ತಂಡಗಳು 12 ಪಾಯಿಂಟ್ಸ್ ಕಲೆಹಾಕಿದ್ದು, ತಮ್ಮ ಕೊನೆಯ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಆರ್‌ಸಿಬಿ ತಂಡವನ್ನು ನೆಟ್ ರನ್ ರೇಟ್ ಮೂಲಕ ಹಿಂದಿಕ್ಕಿ ಪ್ಲೇಆಫ್ ಪ್ರವೇಶಿಸುವ ಅವಕಾಶ ಇರಲಿದೆ. ಹೀಗಾಗಿ ಆರ್‌ಸಿಬಿ ತಂಡವು ಗುಜರಾತ್ ಟೈಟನ್ಸ್ ವಿರುದ್ದ ಭಾರೀ ಅಂತರದಿಂದ ಗೆಲ್ಲುವ ಮೂಲಕ ನೆಟ್ ರನ್ ರೇಟ್ ಸಹಾಯದಿಂದ ಪ್ಲೇಆಫ್ ಪ್ರವೇಶಿಸುವುದೊಂದೇ ಉತ್ತಮ ಮಾರ್ಗ.
ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 6:24 pm, Wed, 18 May 22