AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಲಕ್ನೋ ತಂಡ ಸೋತರೂ RCB ತಂಡ ಪ್ಲೇಆಫ್​ಗೆ ಎಂಟ್ರಿ ಕೊಡಬಹುದು..!

IPL 2022 RCB Playoffs Chances: ಆರ್​ಸಿಬಿ ತಂಡವು ಪ್ಲೇಆಫ್​ಗೆ ಅರ್ಹತೆ ಪಡೆಯಲು ಇದೀಗ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ಫಲಿತಾಂಶಗಳನ್ನು ಎದುರು ನೋಡಬೇಕಿದೆ.

IPL 2022: ಲಕ್ನೋ ತಂಡ ಸೋತರೂ RCB ತಂಡ ಪ್ಲೇಆಫ್​ಗೆ ಎಂಟ್ರಿ ಕೊಡಬಹುದು..!
RCB
TV9 Web
| Edited By: |

Updated on:May 17, 2022 | 10:55 PM

Share

IPL 2022: ಪಂಜಾಬ್ ಕಿಂಗ್ಸ್​ ವಿರುದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಗೆಲುವಿನೊಂದಿಗೆ ಆರ್​ಸಿಬಿ ತಂಡದ ಪ್ಲೇಆಫ್ ಹಾದಿ ಕಠಿಣವಾಗಿದೆ. ಏಕೆಂದರೆ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಆರ್​ಸಿಬಿಗೆ ಇನ್ನೂ ಒಂದು ಪಂದ್ಯವಿದ್ದು, ಈ ಪಂದ್ಯದಲ್ಲಿ ಉಭಯ ತಂಡಗಳು ಗೆದ್ದರೆ ಇಲ್ಲಿ ನೆಟ್ ರನ್​ ರೇಟ್ ಲೆಕ್ಕಾಚಾರಗಳು ಬರಲಿದೆ. ಆದರೆ ಮತ್ತೊಂದೆಡೆ 3ನೇ ಸ್ಥಾನದಲ್ಲಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡವು ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ಸೋತರೂ ಕೂಡ ಉಭಯ ತಂಡಗಳಿಗೆ ಪ್ಲಸ್ ಪಾಯಿಂಟ್ ಆಗಲಿದೆ.

ಏಕೆಂದರೆ ಪಾಯಿಂಟ್ಸ್ ಟೇಬಲ್​ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವು 16 ಪಾಯಿಂಟ್ಸ್​ನೊಂದಿಗೆ 3ನೇ ಸ್ಥಾನದಲ್ಲಿದೆ. ಇಲ್ಲಿ ಲಕ್ನೋ ತಂಡದ ನೆಟ್ ರನ್​ ರೇಟ್ ಇರುವುದು 0.262 ಮಾತ್ರ. ಅಂದರೆ ಕೊನೆಯ ಪಂದ್ಯದಲ್ಲಿ ಕೆಕೆಆರ್ ವಿರುದ್ದ ಗೆದ್ದರೆ ಮಾತ್ರ ಲಕ್ನೋ ನೇರವಾಗಿ ಪ್ಲೇಆಫ್ ಪ್ರವೇಶಿಸಬಹುದು. ಒಂದು ವೇಳೆ ಸೋತರೆ ನೆಟ್ ರನ್​ ರೇಟ್ ಕಡಿಮೆಯಾಗಲಿದೆ. ಆದರೆ ಇಲ್ಲಿ ಲಕ್ನೋ ತಂಡದ ಸೋಲು ಆರ್​ಸಿಬಿ ತಂಡಕ್ಕೆ ಪ್ಲಸ್ ಪಾಯಿಂಟ್ ಆಗಬೇಕಿದ್ದರೆ ಹೀನಾಯವಾಗಿ ಸೋಲಬೇಕು. ಅಂದರೆ ಕೆಕೆಆರ್​ ವಿರುದ್ದ ಲಕ್ನೋ ಸೂಪರ್ ಜೈಂಟ್ಸ್​ ತಂಡವು ಬರೋಬ್ಬರಿ 80 ರನ್​ಗಳ ಅಂತರದಿಂದ ಸೋಲಬೇಕಾಗುತ್ತದೆ.

ಇದನ್ನೂ ಓದಿ: IPL 2022: ಏನಿದು RCB ಹಾಲ್ ಆಫ್ ಫೇಮ್ ಪ್ರಶಸ್ತಿ?

ಇತ್ತ ಆರ್​ಸಿಬಿ ತಂಡವು ಗುಜರಾತ್ ಟೈಟನ್ಸ್ ವಿರುದ್ದ 70 ರನ್​ಗಳಿಗಿಂತ ಅಧಿಕ ರನ್​ಗಳಿಂದ ಗೆದ್ದರೆ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕಿಂತ ಹೆಚ್ಚಿನ ನೆಟ್​ ರನ್​ ರೇಟ್ ಪಡೆಯಬಹುದು. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಮುಂದಿನ ಪಂದ್ಯದಲ್ಲಿ ಗೆದ್ದರೂ, ಆರ್​ಸಿಬಿಗೆ ಲಕ್ನೋ ಸೂಪರ್ ಜೈಂಟ್ಸ್ ತಂಡದ ಫಲಿತಾಂಶವನ್ನು ಆಧರಿಸಿ ಪ್ಲೇಆಫ್​ಗೆ ಪ್ರವೇಶಿಸಬಹುದು. ಇದಕ್ಕಾಗಿ ಲಕ್ನೋ ತಂಡವು ಕೆಕೆಆರ್ ವಿರುದ್ದ 80 ರನ್​ಗಳಿಂದ ಸೋತು, ಆರ್​ಸಿಬಿ ಗುಜರಾತ್ ಟೈಟನ್ಸ್ ವಿರುದ್ದ 70 ರನ್​ಗಳಿಂದ ಗೆಲ್ಲಬೇಕು. ಇದರಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡದ ನೆಟ್ ರನ್ ರೇಟ್ ಕುಸಿಯಲಿದೆ. ಇತ್ತ ಗುಜರಾತ್ ಟೈಟನ್ಸ್ ವಿರುದ್ದ ಭರ್ಜರಿ ಗೆಲುವು ದಾಖಲಿಸುವ ಮೂಲಕ ಆರ್​ಸಿಬಿ ನೆಟ್ ರನ್ ರೇಟ್ ಸಹಾಯದಿಂದ ಪ್ಲೇಆಫ್​ ಪ್ರವೇಶಿಸಬಹುದು.

ಇದರ ಹೊರತಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಮುಂದಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ದ ಸೋತರೆ, ಆರ್​ಸಿಬಿಗೆ ನೇರವಾಗಿ ಪ್ಲೇಆಫ್ ಪ್ರವೇಶಿಸುವ ಅವಕಾಶ ದೊರೆಯಲಿದೆ. ಅಂದರೆ ಡೆಲ್ಲಿ ವಿರುದ್ದ ಮುಂಬೈ ಗೆದ್ದರೆ, ಆರ್​ಸಿಬಿ ಗುಜರಾತ್ ಟೈಟನ್ಸ್ ವಿರುದ್ದ ಗೆಲುವು ಸಾಧಿಸಿದರೆ ಸಾಕು. ಈ ಮೂಲಕ 16 ಪಾಯಿಂಟ್ಸ್​ನೊಂದಿಗೆ ನೇರವಾಗಿ ಪ್ಲೇಆಫ್ ಪ್ರವೇಶಿಸಬಹುದು. ಒಂದು ವೇಳೆ ಡೆಲ್ಲಿ ಕ್ಯಾಪಿಟಲ್ಸ್ ಮುಂದಿನ ಪಂದ್ಯದಲ್ಲಿ ಗೆದ್ದರೆ, ಆರ್​ಸಿಬಿ ಗುಜರಾತ್ ಟೈಟನ್ಸ್ ವಿರುದ್ದ ಭರ್ಜರಿ ಜಯ ಸಾಧಿಸಿ ನೆಟ್ ರನ್ ರೇಟ್ ಮೂಲಕ ಪ್ಲೇಆಫ್ ಪ್ರವೇಶಿಸಬಹುದು.

ಒಟ್ಟಿನಲ್ಲಿ ಆರ್​ಸಿಬಿ ತಂಡವು ಪ್ಲೇಆಫ್​ಗೆ ಅರ್ಹತೆ ಪಡೆಯಲು ಇದೀಗ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ಫಲಿತಾಂಶಗಳನ್ನು ಎದುರು ನೋಡಬೇಕಿದೆ.

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 5:25 pm, Tue, 17 May 22

Follow Us
TV9 Web
TV9 Web

TV9 Kannada

Read More
ಸರ್ಕಾರಿ ಶಾಲಾ ಮಕ್ಕಳಿಗೆ ಇನ್ಮುಂದೆ ಹೊಸ ವಿನ್ಯಾಸದ ಸಮವಸ್ತ್ರ?
ಸರ್ಕಾರಿ ಶಾಲಾ ಮಕ್ಕಳಿಗೆ ಇನ್ಮುಂದೆ ಹೊಸ ವಿನ್ಯಾಸದ ಸಮವಸ್ತ್ರ?
ಶಿವರಾಜ್ ಕೆಆರ್ ಪೇಟೆ ಹೊಸ ಸಿನಿಮಾ ‘ಹವಾಮಾನ ವರದಿ’ ಶುರುವಾಗಿದ್ದು ಹೀಗೆ..
ಶಿವರಾಜ್ ಕೆಆರ್ ಪೇಟೆ ಹೊಸ ಸಿನಿಮಾ ‘ಹವಾಮಾನ ವರದಿ’ ಶುರುವಾಗಿದ್ದು ಹೀಗೆ..
ಬೆಂಗಳೂರಿನ ಮನಮೋಹಕ ತಾಣ ನಲ್ಲಿಗುಡ್ಡೆ ಅಭಿವೃದ್ಧಿಗೆ ಸರ್ಕಾರದ ಒತ್ತು
ಬೆಂಗಳೂರಿನ ಮನಮೋಹಕ ತಾಣ ನಲ್ಲಿಗುಡ್ಡೆ ಅಭಿವೃದ್ಧಿಗೆ ಸರ್ಕಾರದ ಒತ್ತು
‘ಹವಾಮಾನ ವರದಿ’ ಸಿನಿಮಾ ಬಗ್ಗೆ ನಾಯಕಿ ನಿರೀಕ್ಷಾ ರಾವ್ ಮಾತು: ವಿಡಿಯೋ
‘ಹವಾಮಾನ ವರದಿ’ ಸಿನಿಮಾ ಬಗ್ಗೆ ನಾಯಕಿ ನಿರೀಕ್ಷಾ ರಾವ್ ಮಾತು: ವಿಡಿಯೋ
'ಮೈಲೇಜ್ ಕುಸಿತಕ್ಕೆ ಎಥೆನಾಲ್ ಅಲ್ಲ, ಗುಂಡಿ ಬಿದ್ದ ರಸ್ತೆಗಳೇ ಕಾರಣ': ಅಶೋಕ್
'ಮೈಲೇಜ್ ಕುಸಿತಕ್ಕೆ ಎಥೆನಾಲ್ ಅಲ್ಲ, ಗುಂಡಿ ಬಿದ್ದ ರಸ್ತೆಗಳೇ ಕಾರಣ': ಅಶೋಕ್
ವಾಯುವ್ಯ ಕರ್ನಾಟಕ ಸಾರಿಗೆ ಹೆಸರು ಬದಲಾವಣೆಗೆ ಸರ್ಕಾರ ಆದೇಶ
ವಾಯುವ್ಯ ಕರ್ನಾಟಕ ಸಾರಿಗೆ ಹೆಸರು ಬದಲಾವಣೆಗೆ ಸರ್ಕಾರ ಆದೇಶ
‘ವರ್ಷ 70 ಆದರೂ ನಾನು ತಾಯಿ ರೀತಿ ಕಾಣಲ್ಲ’; ಅನು ಪ್ರಭಾಕರ್
‘ವರ್ಷ 70 ಆದರೂ ನಾನು ತಾಯಿ ರೀತಿ ಕಾಣಲ್ಲ’; ಅನು ಪ್ರಭಾಕರ್
ಯಶಸ್ ವಿರುದ್ಧ ತಿರುಗಿ ಬಿದ್ದ ಆಸಿಯಾ: ಸ್ನೇಹ ಅಂತ್ಯ, ಪೈಪೋಟಿ ಶುರು
ಯಶಸ್ ವಿರುದ್ಧ ತಿರುಗಿ ಬಿದ್ದ ಆಸಿಯಾ: ಸ್ನೇಹ ಅಂತ್ಯ, ಪೈಪೋಟಿ ಶುರು
ಸಚಿವರ ಭಾಷಣಕ್ಕೆ ಕೋಕ್​​: ಕೃಷ್ಣ ಭೈರೇಗೌಡ ಅಸಮಾಧಾನ
ಸಚಿವರ ಭಾಷಣಕ್ಕೆ ಕೋಕ್​​: ಕೃಷ್ಣ ಭೈರೇಗೌಡ ಅಸಮಾಧಾನ
ನಾಳೆ ಪಿಎಂ ಮೋದಿ ಉದ್ಘಾಟಿಸಲಿರೋ ಟಿಲ್ಟೆಡ್ ಎಲ್​ಇಡಿ ಡೋಮ್ ತಾರಾಲಯ ಹೇಗಿದೆ
ನಾಳೆ ಪಿಎಂ ಮೋದಿ ಉದ್ಘಾಟಿಸಲಿರೋ ಟಿಲ್ಟೆಡ್ ಎಲ್​ಇಡಿ ಡೋಮ್ ತಾರಾಲಯ ಹೇಗಿದೆ