Team India: ಶತಕ ಬಾರಿಸದೇ ವಿಶೇಷ ದಾಖಲೆ ಬರೆದ ಟೀಮ್ ಇಂಡಿಯಾ

India vs West Indies: ಈ ಪಂದ್ಯದಲ್ಲಿ ಟೀಮ್ ಇಂಡಿಯಾ ನೀಡಿದ 351 ರನ್​ಗಳ ಬೃಹತ್ ಗುರಿಯನ್ನು ಬೆನ್ನತ್ತಿದ ವೆಸ್ಟ್ ಇಂಡೀಸ್ ತಂಡವು ಕೇವಲ 151 ರನ್​ಗಳಿಗೆ ಆಲೌಟ್ ಆಗಿದೆ.

Team India: ಶತಕ ಬಾರಿಸದೇ ವಿಶೇಷ ದಾಖಲೆ ಬರೆದ ಟೀಮ್ ಇಂಡಿಯಾ
Team India
Follow us
TV9 Web
| Updated By: ಝಾಹಿರ್ ಯೂಸುಫ್

Updated on: Aug 02, 2023 | 6:09 PM

ವೆಸ್ಟ್ ಇಂಡೀಸ್ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ  (Team India) ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಭಾರತ ತಂಡದ ಬ್ಯಾಟರ್​ಗಳು ವಿಶೇಷ ದಾಖಲೆಗಳನ್ನು ತನ್ನದಾಗಿಸಿಕೊಂಡಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಟೀಮ್ ಇಂಡಿಯಾ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿತು. ಮೊದಲ ವಿಕೆಟ್​ಗೆ 143 ರನ್​ಗಳ ಜೊತೆಯಾಟವಾಡುವ ಮೂಲಕ ಶುಭ್​ಮನ್ ಗಿಲ್ ಹಾಗೂ ಇಶಾನ್ ಕಿಶನ್ ಉತ್ತಮ ಆರಂಭ ಒದಗಿಸಿದ್ದರು. ಇನ್ನು ಈ ಪಂದ್ಯದಲ್ಲಿ ಇಶಾನ್ ಕಿಶನ್ 77 ರನ್ ಬಾರಿಸಿದರೆ, ಶುಭ್​ಮನ್ ಗಿಲ್ 85 ರನ್​ ಸಿಡಿಸಿದ್ದರು.

ಆ ಬಳಿಕ ಬಂದ ಸಂಜು ಸ್ಯಾಮ್ಸನ್ 51 ರನ್​ಗಳ ಕೊಡುಗೆ ನೀಡಿದರು. ಇನ್ನು ಅಂತಿಮ ಹಂತದಲ್ಲಿ 52 ಎಸೆತಗಳಲ್ಲಿ 5 ಭರ್ಜರಿ ಸಿಕ್ಸರ್ ಹಾಗೂ 4 ಪೋರ್​ಗಳೊಂದಿಗೆ ಅಬ್ಬರಿಸಿದ್ದ ಹಾರ್ದಿಕ್ ಪಾಂಡ್ಯ ಅಜೇಯ 70 ರನ್​ ಚಚ್ಚಿದ್ದರು. ಈ ಮೂಲಕ ಟೀಮ್ ಇಂಡಿಯಾ ಒಟ್ಟು 351 ರನ್​ ಕಲೆಹಾಕಿತು.

ಟೀಮ್ ಇಂಡಿಯಾ ವಿಶೇಷ ದಾಖಲೆ:

ಈ 351 ರನ್​ಗಳೊಂದಿಗೆ ಟೀಮ್ ಇಂಡಿಯಾ ದಾಖಲೆ ಬರೆದಿರುವುದು ವಿಶೇಷ. ಅಂದರೆ ಟೀಮ್ ಇಂಡಿಯಾ ಬ್ಯಾಟರ್​ಗಳು ಶತಕ ಬಾರಿಸದೇ ಕಲೆಹಾಕಿದ ಅತ್ಯಧಿಕ ಮೊತ್ತ ಇದಾಗಿದೆ. ಈ ಪಂದ್ಯದಲ್ಲಿ ಇಶಾನ್ ಕಿಶನ್, ಶುಭ್​ಮನ್ ಗಿಲ್, ಸಂಜು ಸ್ಯಾಮ್ಸನ್ ಹಾಗೂ ಹಾರ್ದಿಕ್ ಪಾಂಡ್ಯ ಅರ್ಧಶತಕ ಬಾರಿಸಿ 351 ರನ್​ ಪೇರಿಸಿದ್ದರು.

ಇದು ಯಾವುದೇ ಬ್ಯಾಟರ್ ಶತಕ ಬಾರಿಸದೇ ಟೀಮ್ ಇಂಡಿಯಾ ಕಲೆಹಾಕಿದ ಅತ್ಯಧಿಕ ಮೊತ್ತವಾಗಿದೆ. ಇದಕ್ಕೂ ಮುನ್ನ 2005 ರಲ್ಲಿ ಶ್ರೀಲಂಕಾ ವಿರುದ್ಧ ಭಾರತೀಯ ಬ್ಯಾಟರ್​ಗಳು ಶತಕ ಬಾರಿಸದೇ 6 ವಿಕೆಟ್ ನಷ್ಟಕ್ಕೆ 350 ರನ್ ಕಲೆಹಾಕಿದ್ದರು.

ಇದೀಗ ವೆಸ್ಟ್ ಇಂಡೀಸ್ ವಿರುದ್ಧ ಟೀಮ್ ಇಂಡಿಯಾದ ಯಾವುದೇ ಬ್ಯಾಟರ್ ಶತಕಗಳಿಸದೇ ಒಟ್ಟು 351 ರನ್​ಗಳಿಸಿ ಹೊಸ ದಾಖಲೆ ನಿರ್ಮಿಸಿದೆ.

ಸರಣಿ ಗೆದ್ದ ಟೀಮ್ ಇಂಡಿಯಾ:

ಈ ಪಂದ್ಯದಲ್ಲಿ ಟೀಮ್ ಇಂಡಿಯಾ ನೀಡಿದ 351 ರನ್​ಗಳ ಬೃಹತ್ ಗುರಿಯನ್ನು ಬೆನ್ನತ್ತಿದ ವೆಸ್ಟ್ ಇಂಡೀಸ್ ತಂಡವು ಕೇವಲ 151 ರನ್​ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಟೀಮ್ ಇಂಡಿಯಾ 2-1 ಅಂತರದಿಂದ ವಶಪಡಿಸಿಕೊಂಡಿದೆ.

ಭಾರತ (ಪ್ಲೇಯಿಂಗ್ XI): ಇಶಾನ್ ಕಿಶನ್(ವಿಕೆಟ್ ಕೀಪರ್), ಶುಭ್​ಮನ್ ಗಿಲ್, ರುತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ(ನಾಯಕ), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಯದೇವ್ ಉನಾದ್ಕಟ್, ಕುಲದೀಪ್ ಯಾದವ್, ಮುಖೇಶ್ ಕುಮಾರ್.

ಇದನ್ನೂ ಓದಿ: India T20 squad: ಟೀಮ್ ಇಂಡಿಯಾ ಟಿ20 ತಂಡ ಪ್ರಕಟ: ಬುಮ್ರಾಗೆ ನಾಯಕತ್ವ

ವೆಸ್ಟ್ ಇಂಡೀಸ್ (ಪ್ಲೇಯಿಂಗ್ XI): ಬ್ರಾಂಡನ್ ಕಿಂಗ್, ಕೈಲ್ ಮೇಯರ್ಸ್, ಅಲಿಕ್ ಅಥಾನಾಝ್, ಶಾಯ್ ಹೋಪ್(ನಾಯಕ), ಶಿಮ್ರಾನ್ ಹೆಟ್ಮೆಯರ್, ಕೀಸಿ ಕಾರ್ಟಿ, ರೊಮಾರಿಯೋ ಶೆಫರ್ಡ್, ಯಾನಿಕ್ ಕ್ಯಾರಿಯಾ, ಅಲ್ಝಾರಿ ಜೋಸೆಫ್, ಗುಡಕೇಶ್ ಮೋಟಿ, ಜೇಡನ್ ಸೀಲ್ಸ್.

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್