T20 World Cup 2021: ಸೆಹ್ವಾಗ್-ಗಂಭೀರ್ ದಾಖಲೆ ಮುರಿದ ಕೆಎಲ್ ರಾಹುಲ್-ರೋಹಿತ್ ಶರ್ಮಾ

TV9 Digital Desk

| Edited By: Zahir Yusuf

Updated on: Nov 03, 2021 | 11:14 PM

KL Rahul-Rohit Sharma: ಈ ಎಲ್ಲಾ ದಾಖಲೆಯನ್ನು ಮುರಿದು ಇದೀಗ ಕೆಎಲ್ ರಾಹುಲ್ ಹಾಗೂ ರೋಹಿತ್ ಶರ್ಮಾ ಜೋಡಿ 140 ರನ್​ಗಳ ಜೊತೆಯಾಟವಾಡುವ ಮೂಲಕ ಹೊಸ ದಾಖಲೆ ನಿರ್ಮಿಸಿ ಇತಿಹಾಸ ಬರೆದಿದ್ದಾರೆ.

T20 World Cup 2021: ಸೆಹ್ವಾಗ್-ಗಂಭೀರ್ ದಾಖಲೆ ಮುರಿದ ಕೆಎಲ್ ರಾಹುಲ್-ರೋಹಿತ್ ಶರ್ಮಾ
Rohit Sharma-KL Rahul

Follow us on

ಅಫ್ಘಾನಿಸ್ತಾನ್ ವಿರುದ್ದದ ಪಂದ್ಯದಲ್ಲಿ ಅಬ್ಬರಿಸುವ ಮೂಲಕ ಟೀಮ್ ಇಂಡಿಯಾ ಪರ ರೋಹಿತ್ ಶರ್ಮಾ ಹಾಗೂ ಕೆಎಲ್ ರಾಹುಲ್ ಹೊಸ ದಾಖಲೆ ಬರೆದಿದ್ದಾರೆ. ಆರಂಭಿಕರಾಗಿ ಕಣಕ್ಕಿಳಿದ ರೋಹಿತ್-ರಾಹುಲ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಸ್ಪೋಟಕ ಬ್ಯಾಟಿಂಗ್ ಮೂಲಕ ಗಮನ ಸೆಳೆದ ಹಿಟ್​ಮ್ಯಾನ್ 47 ಎಸೆತಗಳಲ್ಲಿ 3 ಸಿಕ್ಸ್​ ಹಾಗೂ 8 ಬೌಂಡರಿಗಳೊಂದಿಗೆ 74 ರನ್ ಬಾರಿಸಿದ್ದರು. ಮತ್ತೊಂದೆಡೆ 2 ಸಿಕ್ಸ್ ಹಾಗೂ 6 ಬೌಂಡರಿಗಳೊಂದಿಗೆ 48 ಎಸೆತಗಳಲ್ಲಿ ಕೆಎಲ್ ರಾಹುಲ್ 69 ಬಾರಿಸಿ ಟೀಮ್ ಇಂಡಿಯಾಗೆ ಭರ್ಜರಿ ಆರಂಭ ಒದಗಿಸಿದ್ದರು.

ಅಷ್ಟೇ ಅಲ್ಲದೆ ಮೊದಲ ವಿಕೆಟ್​ಗೆ 140 ರನ್​ಗಳ ಜೊತೆಯಾಟವಾಡುವ ಮೂಲಕ ಟಿ20 ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಪರ ಅತ್ಯುತ್ತಮ ಜೊತೆಯಾಟವಾಡಿದ ಜೋಡಿ ಎನಿಸಿಕೊಂಡರು. ಈ ಹಿಂದೆ ಈ ದಾಖಲೆ ವೀರೇಂದ್ರ ಸೆಹ್ವಾಗ್ ಹಾಗೂ ಗೌತಮ್ ಗಂಭೀರ್ ಹೆಸರಿನಲ್ಲಿತ್ತು. 2007ರಲ್ಲಿ ಸೆಹ್ವಾಗ್-ಗೌತಿ ಜೋಡಿ 136 ರನ್​ಗಳ ಜೊತೆಯಾಟವಾಡುವ ಮೂಲಕ ದಾಖಲೆ ನಿರ್ಮಿಸಿದ್ದರು.

ಇದೀಗ 140 ರನ್​ಗಳ ಜೊತೆಯಾಟದೊಂದಿಗೆ 14 ವರ್ಷಗಳ ಹಿಂದಿನ ದಾಖಲೆಯನ್ನು ಕೆಎಲ್ ರಾಹುಲ್ ಹಾಗೂ ರೋಹಿತ್ ಶರ್ಮಾ ಮುರಿದಿದ್ದಾರೆ. ಇನ್ನು ಈ ಪಟ್ಟಿಯಲ್ಲಿ ಮೂರನೇ ಅತ್ಯುತ್ತಮ ಶತಕದ ಜೊತೆಯಾಟದ ಜೋಡಿಯಾಗಿ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಇದ್ದಾರೆ. ಕೊಹ್ಲಿ ಹಾಗೂ ಹಿಟ್​ಮ್ಯಾನ್ 2014 ರಲ್ಲಿ ವೆಸ್ಟ್ ಇಂಡೀಸ್ ವಿರುದ್ದದ ಟಿ20 ಪಂದ್ಯದಲ್ಲಿ 106 ರನ್​ಗಳ ಜೊತೆಯಾಟವಾಡಿದ್ದರು. ಹಾಗೆಯೇ 2014 ರಲ್ಲಿ ಬಾಂಗ್ಲಾದೇಶ ವಿರುದ್ದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ 100 ರನ್​ಗಳ ಜೊತೆಗಾರಿಕೆ ಪ್ರದರ್ಶಿಸಿದ್ದರು.

ಈ ಎಲ್ಲಾ ದಾಖಲೆಯನ್ನು ಮುರಿದು ಇದೀಗ ಕೆಎಲ್ ರಾಹುಲ್ ಹಾಗೂ ರೋಹಿತ್ ಶರ್ಮಾ ಜೋಡಿ 140 ರನ್​ಗಳ ಜೊತೆಯಾಟವಾಡುವ ಮೂಲಕ ಹೊಸ ದಾಖಲೆ ನಿರ್ಮಿಸಿ ಇತಿಹಾಸ ಬರೆದಿದ್ದಾರೆ.

ಇದನ್ನೂ ಓದಿ: ICC T20 Rankings: ನೂತನ ಟಿ20 ರ‍್ಯಾಂಕಿಂಗ್ ಪ್ರಕಟ: ಎಲ್ಲರನ್ನು ಹಿಂದಿಕ್ಕಿದ ಬಾಬರ್

ಇದನ್ನೂ ಓದಿ: IPL 2022: RCB ಈ ನಾಲ್ವರು ಆಟಗಾರರನ್ನು ಉಳಿಸಿಕೊಳ್ಳಬಹುದು..!

ಇದನ್ನೂ ಓದಿ: IPL 2022: ನಾಲ್ವರು ಆಟಗಾರರಿಗೆ 42 ಕೋಟಿ ರೂ. ನಿಗದಿ: ಐಪಿಎಲ್ ಹೊಸ ರಿಟೈನ್ ನಿಯಮ

(Highest partnerships for India in T20 WCs)

ತಾಜಾ ಸುದ್ದಿ

Related Stories

Most Read Stories

Click on your DTH Provider to Add TV9 Kannada