KL Rahul: ಅರ್ಧಶತಕ ಸಿಡಿಸಿ ವಿಶೇಷ ಸಾಧಕರ ಪಟ್ಟಿಗೆ ಸೇರ್ಪಡೆಯಾದ ಕೆಎಲ್ ರಾಹುಲ್

India vs South Africa 2nd Test: ಹನುಮ ವಿಹಾರಿ (20) ಹಾಗೂ ರಿಷಭ್ ಪಂತ್ 17) ಒಂದಷ್ಟು ಹೊತ್ತು ಕ್ರೀಸ್ ಕಚ್ಚಿ ನಿಂತರೂ ದೊಡ್ಡ ಮೊತ್ತಗಳಿಸಲು ಸಾಧ್ಯವಾಗಲಿಲ್ಲ. ಇದಾಗ್ಯೂ ರಾಹುಲ್ ಜೊತೆಗೂಡಿದ ಅಶ್ವಿನ್ ತಂಡಕ್ಕೆ ಆಸರೆಯಾದರು.

KL Rahul: ಅರ್ಧಶತಕ ಸಿಡಿಸಿ ವಿಶೇಷ ಸಾಧಕರ ಪಟ್ಟಿಗೆ ಸೇರ್ಪಡೆಯಾದ ಕೆಎಲ್ ರಾಹುಲ್
KL Rahul
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jan 03, 2022 | 9:40 PM

ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ ಕ್ರಿಕೆಟ್ ತಂಡ ಕೇವಲ 202 ರನ್​ಗಳಿಸಿ ಆಲೌಟ್ ಆಗಿದೆ. ಇದಕ್ಕೂ ಮುನ್ನ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಕೆಎಲ್ ರಾಹುಲ್ ಬ್ಯಾಟಿಂಗ್ ಆಯ್ದುಕೊಂಡರು. ಆದರೆ ಭಾರತ ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ. ಆರಂಭಿಕ ಆಟಗಾರ ಮಯಾಂಕ್ ಅಗರ್ವಾಲ್ ಕೇವಲ 26 ರನ್​ಗಳಿಗೆ ಮೊದಲಿಗರಾಗಿ ಹೊರನಡೆದರು. ಇದರ ಬೆನ್ನಲ್ಲೇ ಚೇತೇಶ್ವರ ಪೂಜಾರ (3) ಹಾಗೂ ಅಜಿಂಕ್ಯ ರಹಾನೆ (0) ಕೂಡ ವಿಕೆಟ್ ಒಪ್ಪಿಸಿ ನಿರಾಸೆ ಮೂಡಿಸಿದರು. ಮತ್ತೊಂದೆಡೆ ನಾಯಕ ಕೆಎಲ್ ರಾಹುಲ್ ಸಂಪೂರ್ಣ ರಕ್ಷಣಾತ್ಮಕ ಆಟವಾಡಿದರು.

ಇನ್ನು ಹನುಮ ವಿಹಾರಿ (20) ಹಾಗೂ ರಿಷಭ್ ಪಂತ್ 17) ಒಂದಷ್ಟು ಹೊತ್ತು ಕ್ರೀಸ್ ಕಚ್ಚಿ ನಿಂತರೂ ದೊಡ್ಡ ಮೊತ್ತಗಳಿಸಲು ಸಾಧ್ಯವಾಗಲಿಲ್ಲ. ಇದಾಗ್ಯೂ ರಾಹುಲ್ ಜೊತೆಗೂಡಿದ ಅಶ್ವಿನ್ ತಂಡಕ್ಕೆ ಆಸರೆಯಾದರು. 133 ಎಸೆತಗಳನ್ನು ಎದುರಿಸಿದ ಕೆಎಲ್ ರಾಹುಲ್ ಅರ್ಧಶತಕ ಪೂರೈಸಿದರು. ಹಾಗೆಯೇ ಅಶ್ವಿನ್ 50 ಎಸೆತಗಳಲ್ಲಿ ಬಿರುಸಿನ 46 ರನ್​ ಬಾರಿಸಿ ತಂಡದ ಮೊತ್ತವನ್ನು 200ರ ಗಡಿ ತಲುಪಿಸಿದರು. ಅದರಂತೆ ಅಂತಿಮವಾಗಿ ಟೀಮ್ ಇಂಡಿಯಾ 202 ರನ್​ಗಳಿಸಿತು.

133 ಎಸೆತಗಳಲ್ಲಿ 9 ಬೌಂಡರಿಯೊಂದಿಗೆ ಅರ್ಧಶತಕ ಬಾರಿಸುವ ಮೂಲಕ ಕೆಎಲ್ ರಾಹುಲ್ ನಾಯಕನಾಗಿ ಚೊಚ್ಚಲ ಪಂದ್ಯದಲ್ಲೇ ಹಾಫ್​ ಸೆಂಚುರಿ ಸಿಡಿಸಿದ ಆಟಗಾರರ ಪಟ್ಟಿಗೆ ಸೇರ್ಪಡೆಯಾದರು. ಅಷ್ಟೇ ಅಲ್ಲದೆ ನಾಯಕನಾಗಿ ಮೊದಲ ಪಂದ್ಯದಲ್ಲೇ ಈ ಸಾಧನೆ ಮಾಡಿದ ಟೀಮ್ ಇಂಡಿಯಾದ 8ನೇ ಕ್ಯಾಪ್ಟನ್ ಎನಿಸಿಕೊಂಡರು. ಇದಕ್ಕೂ ಮುನ್ನ ವಿಜಯ್ ಹಜಾರೆ, ಸುನಿಲ್ ಗವಾಸ್ಕರ್, ವಿರಾಟ್ ಕೊಹ್ಲಿ ನಾಯರಾಗಿ ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ ಶತಕದ ಸಿಡಿಸಿದ ದಾಖಲೆ ನಿರ್ಮಿಸಿದ್ದರು. ಇನ್ನು ಸೌರವ್ ಗಂಗೂಲಿ, ಚಂದು ಬೋರ್ಡೆ, ಹೇಮು ಅಧಿಕಾರಿ, ನಾರಿ ಕಂಟ್ರಾಕ್ಟರ್ ನಾಯಕರಾಗಿ ಚೊಚ್ಚಲ ಪಂದ್ಯದಲ್ಲೇ ಅರ್ಧಶತಕ ಬಾರಿಸಿದ್ದರು. ಇದೀಗ ಕೆಎಲ್ ರಾಹುಲ್ ಕೂಡ ನಾಯಕರಾಗಿ ಕಣಕ್ಕಿಳಿದ ಮೊದಲ ಪಂದ್ಯದಲ್ಲೇ ಅರ್ಧಶತಕ ಬಾರಿಸುವ ಮೂಲಕ ವಿಶೇಷ ಸಾಧಕರ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ.

164* ವಿಜಯ್ ಹಜಾರೆ vs ಇಂಗ್ಲೆಂಡ್ (1951/52) 116 ಸುನಿಲ್ ಗವಾಸ್ಕರ್ vs ನ್ಯೂಜಿಲೆಂಡ್ (1975/76) 115 ವಿರಾಟ್ ಕೊಹ್ಲಿ vs ಆಸ್ಟ್ರೇಲಿಯಾ (2014/15) 84 ಸೌರವ್ ಗಂಗೂಲಿ ಗಂಗೂಲಿ vs ಬಾಂಗ್ಲಾದೇಶ (2000/01) 69 ಸಿ ಬೋರ್ಡೆ vs ಆಸ್ಟ್ರೇಲಿಯಾ (1967/68) 63 ಹೇಮು ಅಧಿಕಾರಿ vs ವೆಸ್ಟ್ ಇಂಡೀಸ್ (1958/59) 62 ನಾರಿ ಕಂಟ್ರಾಕ್ಟರ್ vs ಪಾಕಿಸ್ತಾನ್ (1960/61) 50 ಕೆಎಲ್ ರಾಹುಲ್ vs ದಕ್ಷಿಣ ಆಫ್ರಿಕಾ 2021/22

ಇದನ್ನೂ ಓದಿ:  Virat Kohli: ವಿರಾಟ್ ಕೊಹ್ಲಿಯ ಗಾಯ, ರಾಹುಲ್ ದ್ರಾವಿಡ್ ಹೇಳಿಕೆ ಮತ್ತು 100ನೇ ಟೆಸ್ಟ್​..!

ಇದನ್ನೂ ಓದಿ:  Ravindra Jadeja: ಸ್ಟಾರ್ ಆಲ್​ರೌಂಡರ್ ಜಡೇಜಾರನ್ನು ಆಯ್ಕೆ ಮಾಡದಿರಲು ಇದುವೇ ಕಾರಣ..!

ಇದನ್ನೂ ಓದಿ: Rohit Sharma: ಫಿಟ್​ನೆಸ್​ ಅಥವಾ ಇನ್ನೇನಾದರೂ? ರೋಹಿತ್ ಶರ್ಮಾ ಕೈ ಬಿಡಲು ಕಾರಣವೇನು?

ಇದನ್ನೂ ಓದಿ: IPL 2022: ಇವರೇ RCB ತಂಡದ ಮುಂದಿನ ಕ್ಯಾಪ್ಟನ್ ಎಂದ ಮಾಜಿ ಆರ್​ಸಿಬಿ ನಾಯಕ

(Highest scores in debut innings as Test captain)

Daily Horoscope: ಈ ರಾಶಿಯವರಿಗೆ ಇಂದು ಐದು ಗ್ರಹಗಳ ಶುಭ ಫಲವಿದೆ
Daily Horoscope: ಈ ರಾಶಿಯವರಿಗೆ ಇಂದು ಐದು ಗ್ರಹಗಳ ಶುಭ ಫಲವಿದೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ