Hima Das: ಭಾರತದ ಸ್ಟಾರ್ ಮಹಿಳಾ ಅಥ್ಲೀಟ್ ಹಿಮಾ ದಾಸ್​ಗೆ ಕೊರೊನಾ ಪಾಸಿಟಿವ್!

Hima Das: ತರಬೇತಿ ಆರಂಭಿಸಲು ಪಟಿಯಾಲಕ್ಕೆ ಆಗಮಿಸಿದ್ದ ಭಾರತದ ಸ್ಟಾರ್ ಮಹಿಳಾ ಅಥ್ಲೀಟ್ ಹಿಮಾ ದಾಸ್ ಅವರ ಕೋವಿಡ್ ಪರೀಕ್ಷೆ ಪಾಸಿಟಿವ್ ಎಂದು ಕಂಡುಬಂದಿದೆ.

Hima Das: ಭಾರತದ ಸ್ಟಾರ್ ಮಹಿಳಾ ಅಥ್ಲೀಟ್ ಹಿಮಾ ದಾಸ್​ಗೆ ಕೊರೊನಾ ಪಾಸಿಟಿವ್!
ಹಿಮಾ ದಾಸ್
Follow us
TV9 Web
| Updated By: ಪೃಥ್ವಿಶಂಕರ

Updated on: Oct 13, 2021 | 5:11 PM

ತರಬೇತಿ ಆರಂಭಿಸಲು ಪಟಿಯಾಲಕ್ಕೆ ಆಗಮಿಸಿದ್ದ ಭಾರತದ ಸ್ಟಾರ್ ಮಹಿಳಾ ಅಥ್ಲೀಟ್ ಹಿಮಾ ದಾಸ್ ಅವರ ಕೋವಿಡ್ ಪರೀಕ್ಷೆ ಪಾಸಿಟಿವ್ ಎಂದು ಕಂಡುಬಂದಿದೆ. ಸ್ನಾಯುವಿನ ಒತ್ತಡದಿಂದಾಗಿ ಹಿಮಾ ದಾಸ್ ಸ್ವಲ್ಪ ವಿರಾಮ ತೆಗೆದುಕೊಂಡಿದ್ದರಿಂದ ಟೋಕಿಯೊ ಒಲಿಂಪಿಕ್ಸ್ -2020 ಗೆ ಅರ್ಹತೆ ಪಡೆಯಲು ಸಾಧ್ಯವಾಗಲಿಲ್ಲ. ಆಂಗ್ಲ ಪತ್ರಿಕೆ ಇಂಡಿಯನ್ ಎಕ್ಸ್‌ಪ್ರೆಸ್ ತನ್ನ ವರದಿಯಲ್ಲಿ ಸ್ಥಳೀಯ ತರಬೇತುದಾರನನ್ನು ಉಲ್ಲೇಖಿಸಿ, ಅ. 10 ರಂದು ಪಟಿಯಾಲಕ್ಕೆ ಬಂದಿದ್ದ ಹಿಮಾ 8 ಮತ್ತು 9 ರಂದು ಗುವಾಹಟಿಯಲ್ಲಿದ್ದರು. ಅವರಿಗೆ ಪಟಿಯಾಲದಲ್ಲಿ ನಡೆಸಿದ ಕಡ್ಡಾಯ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ಕಂಡುಬಂದಿದೆ. ಆದರೆ ಯಾರು ಆತಂಕಪಡುವ ಅವಶ್ಯಕತೆಯಿಲ್ಲ ಎಂದಿದ್ದಾರೆ.

ಆದಾಗ್ಯೂ, ಹಿಮಾ ಅವರ ಮಾಧ್ಯಮ ವ್ಯವಸ್ಥಾಪಕರು ಮಾತನಾಡಿ, ಅವರ ಆರೋಗ್ಯದ ಬಗ್ಗೆ ಚಿಂತೆ ಮಾಡುವ ಅವಶ್ಯಕತೆಯಿಲ್ಲ ಎಂದು ಪತ್ರಿಕೆಗೆ ತಿಳಿಸಿದ್ದಾರೆ. ಆಟಗಾರರ ರಾಷ್ಟ್ರೀಯ ಶಿಬಿರವು ಅಕ್ಟೋಬರ್ ಕೊನೆಯ ವಾರದಲ್ಲಿ ಆರಂಭವಾಗಬೇಕಿತ್ತು. ಆದರೆ ಹಿಮಾ ಬೇಗನೆ ಇಲ್ಲಿಗೆ ತಲುಪಿದರು. ಮುಂದಿನ ದಿನಗಳಲ್ಲಿ ಉಳಿದ ಆಟಗಾರರು ಪಟಿಯಾಲಕ್ಕೆ ಬರಲಿದ್ದಾರೆ. ಶಿಬಿರ ಆರಂಭಕ್ಕೂ ಮುನ್ನ ಹಿಮಾ ಗುಣಮುಖರಾಗಲಿದ್ದಾರೆ ಎಂದಿದ್ದಾರೆ.

ಒಲಿಂಪಿಕ್ ಕೋಟಾ ತಪ್ಪಿದೆ ಒಲಿಂಪಿಕ್ಸ್‌ಗೆ ಮುನ್ನ ಹಿಮಾ ದಾಸ್ ಅತ್ಯುತ್ತಮ ಫಾರ್ಮ್‌ನಲ್ಲಿದ್ದರು ಮತ್ತು ಅವರು ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಪದಕ ಗೆಲ್ಲುವ ನಿರೀಕ್ಷೆಯಿತ್ತು. ಮಾರ್ಚ್‌ನಲ್ಲಿ ನಡೆದ ಎರಡನೇ ಫೆಡರೇಶನ್ ಕಪ್‌ನಲ್ಲಿ ಅವರು 23.21 ಸೆಕೆಂಡುಗಳಲ್ಲಿ ಗುರಿಯನ್ನು ಕ್ರಮಿಸಿದರು. ಆದರೆ ಒಲಿಂಪಿಕ್ ಅರ್ಹತಾ ಗುರುತು ಸಾಧಿಸಲು ಸಾಧ್ಯವಾಗಲಿಲ್ಲ. ಆದರೆ ಅವರ ಸ್ನಾಯು ಗಾಯವು ಅವರ ಅಭಿಯಾನಕ್ಕೆ ಹಿನ್ನಡೆ ನೀಡಿತ್ತು. ವೈದ್ಯರ ಸಲಹೆಯಿಲ್ಲದೆ, ಗಾಯದ ಹೊರತಾಗಿಯೂ ಹಿಮಾ ಅಂತರರಾಜ್ಯದ 200 ಮೀಟರ್ ಓಟದಲ್ಲಿ ಸ್ಪರ್ಧಿಸಿದ್ದರು. ಆದರೆ ಪದಕ ಗೆಲ್ಲಲು ಸಾಧ್ಯವಾಗಲಿಲ್ಲ.

20 ವರ್ಷದೊಳಗಿನವರ ಚಾಂಪಿಯನ್‌ಶಿಪ್​ನಲ್ಲಿ ಸಾಧನೆ ಹಿಮಾ ದಾಸ್ 20 ವರ್ಷದೊಳಗಿನವರ ವಿಶ್ವ ಚಾಂಪಿಯನ್‌ಶಿಪ್ ಗೆಲ್ಲುವ ಮೂಲಕ ಸುದ್ದಿಯಾದರು. ಇದರ ನಂತರ, ಅವರು 2018 ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಪ್ರಬಲ ಪ್ರದರ್ಶನ ನೀಡಿದರು. 2018 ರಲ್ಲಿ ನಡೆದ ಏಷ್ಯನ್ ಗೇಮ್ಸ್‌ನಲ್ಲಿ, ಹಿಮ 400 ಮೀಟರ್ ಫೈನಲ್‌ನಲ್ಲಿ ರಾಷ್ಟ್ರೀಯ ದಾಖಲೆಯೊಂದಿಗೆ ಅರ್ಹತೆ ಪಡೆದಿದ್ದರು. ಅಅವರು ಫೈನಲ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದರು ಮತ್ತು ಓಟವನ್ನು 50.79 ಸೆಕೆಂಡುಗಳಲ್ಲಿ ಪೂರ್ಣಗೊಳಿಸಿದರು. ಫೈನಲ್‌ನಲ್ಲಿ ಬೆಳ್ಳಿ ಪದಕ ಗೆಲ್ಲುವಲ್ಲಿ ಯಶಸ್ವಿಯಾದರು.

ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ