AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranji Trophy 2025-26: ಹುಬ್ಬಳ್ಳಿಯಲ್ಲಿ ರಣಜಿ ಫೈನಲ್​​ ಪಂದ್ಯ; ರಾಜ್ ನಗರ ಸ್ಟೇಡಿಯಂ ಬಗ್ಗೆ ನಿಮಗೆಷ್ಟು ಗೊತ್ತು?

ಫೆಬ್ರವರಿ 24ರಂದು ಹುಬ್ಬಳ್ಳಿಯ ರಾಜ್ ನಗರ KSCA ಮೈದಾನದಲ್ಲಿ ಕರ್ನಾಟಕ ಮತ್ತು ಜಮ್ಮು ಕಾಶ್ಮೀರ ತಂಡಗಳ ನಡುವೆ ಐತಿಹಾಸಿಕ ರಣಜಿ ಫೈನಲ್ ಪಂದ್ಯ ನಡೆಯಲಿದೆ. ಅಂತಾರಾಷ್ಟ್ರೀಯ ಗುಣಮಟ್ಟದ ಈ ಕ್ರೀಡಾಂಗಣದಲ್ಲಿ ರಣಜಿ ಫೈನಲ್ ನಡೆಯುತ್ತಿರುವುದು ಇದೇ ಮೊದಲು. 16.5 ಎಕರೆ ವಿಸ್ತೀರ್ಣದ ಈ ಮೈದಾನದಲ್ಲಿ ಪಿಚ್ ಸಿದ್ಧತೆ ಕಾರ್ಯ ಭರದಿಂದ ಸಾಗಿದ್ದು, ಕ್ರಿಕೆಟ್ ಪ್ರೇಮಿಗಳಲ್ಲಿ ಉತ್ಸಾಹ ಮನೆ ಮಾಡಿದೆ.

Ranji Trophy 2025-26: ಹುಬ್ಬಳ್ಳಿಯಲ್ಲಿ ರಣಜಿ ಫೈನಲ್​​ ಪಂದ್ಯ; ರಾಜ್ ನಗರ ಸ್ಟೇಡಿಯಂ ಬಗ್ಗೆ ನಿಮಗೆಷ್ಟು ಗೊತ್ತು?
ರಣಜಿ ಫೈನಲ್​​ ಪಂದ್ಯಕ್ಕೆ ನಡೆಯುತ್ತಿರುವ ತಯಾರಿImage Credit source: Tv9 Kannada
ಸಂಜಯ್ಯಾ ಚಿಕ್ಕಮಠ
| Edited By: |

Updated on:Feb 20, 2026 | 12:44 PM

Share

ಹುಬ್ಬಳ್ಳಿ, ಫೆಬ್ರವರಿ 20: ಕರ್ನಾಟಕ ಮತ್ತು ಜಮ್ಮು ಕಾಶ್ಮೀರ ನಡುವೆ ರಣಜಿ ಪೈನಲ್ ಪಂದ್ಯ ರಾಜ್ಯದಲ್ಲಿ ನಡೆಯಲಿದ್ದು, ಫೆ. 24ರಂದು ಹುಬ್ಬಳ್ಳಿ ನಗರದ ರಾಜ್ ನಗರದಲ್ಲಿರೋ KSCA ಮೈದಾನದಲ್ಲಿ ಉಭಯ ತಂಡಗಳು ಸೆಣೆಸಾಡಲಿವೆ. ಬೆಂಗಳೂರಿನಲ್ಲಿ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂ ಮಾದರಿಯಲ್ಲೇ ಹುಬ್ಬಳ್ಳಿ ನಗರದ ರಾಜ್ ನಗರದಲ್ಲಿ ಕೆಎಸ್​​ಸಿಎ ಅಂತಾರಾಷ್ಟ್ರೀಯ ಮಟ್ಟದ ಸ್ಟೇಡಿಯಂ ಹೊಂದಿದ್ದು, 2012ರಲ್ಲಿ ಇದರ ಉದ್ಘಾಟನೆ ಆಗಿದೆ. ಜಹೀರ್ ಖಾನ್, ಚೇತೇಶ್ವರ ಪೂಜಾರ್ ಸೇರಿದಂತೆ ಅನೇಕ ಆಟಗಾರರು ಈ ಮೈದಾನದಲ್ಲಿ ಆಟವಾಡಿದ್ದಾರೆ.

ಮೊದಲ ಬಾರಿಗೆ ರಣಜಿ ಫೈನಲ್ ಪಂದ್ಯ

ಇಲ್ಲಿವರಗೆ ಒಂಭತ್ತು ರಣಜಿ ಪಂದ್ಯಗಳು ಹುಬ್ಬಳ್ಳಿಯಲ್ಲಿ ನಡೆದಿದ್ದು, ಮೂರು ಲಿಸ್ಟ್ ‘ಎ’ ಪಂದ್ಯಗಳು ನಡೆದಿವೆ. ಭಾರತ್-ಶ್ರೀಲಂಕಾ, ಭಾರತ‌ – ವೆಸ್ಟ್ ಇಂಡೀಸ್, ಭಾರತ-ನ್ಯೂಜಿಲೆಂಡ್ ತಂಡಗಳ ಸೆಣೆಸಾಟಕ್ಕೆ ಈ ಮೈದಾನ ಸಾಕ್ಷಿಯಾಗಿದೆ. ಆದರೆ ಇದೇ ಮೊದಲ ಬಾರಿಗೆ ರಣಜಿ ಫೈನಲ್ ಪಂದ್ಯ ಇಲ್ಲಿ ನಡೆಯುತ್ತಿದೆ.

ಇದನ್ನೂ ಓದಿ: ಕ್ಯಾಚ್ ಹಿಡಿದು, ವಿಕೆಟ್ ಪಡೆದು ವಿಶ್ವ ದಾಖಲೆ ಬರೆದ ಶಮರ್ ಜೋಸೆಫ್

16.5 ಎಕರೆ ವಿಸ್ತೀರ್ಣದಲ್ಲಿರುವ ಸ್ಟೇಡಿಯಂ

ಎಂಟು ಮುಖ್ಯ ಪಿಚ್, ಹತ್ತು ಅಭ್ಯಾಸ ಪಿಚ್ ಮತ್ತು ಎರಡು ಕಾಂಕ್ರೀಟ್​ ಪಿಚ್‌ಗಳನ್ನು ಹೊಂದಿರುವ ಈ ಸ್ಟೇಡಿಯಂ 16.5 ಎಕರೆ ವಿಸ್ತೀರ್ಣದಲ್ಲಿದೆ. ಸಾವಿರಾರು ಜನರು ಕೂತು ಪಂದ್ಯ ವೀಕ್ಷಣೆ ಮಾಡುವ ಉದ್ದೇಶದಿಂದ ಸ್ಟ್ಯಾಂಡ್ ಗಳ ನಿರ್ಮಾಣವಾಗಿದ್ದರೂ ಅವು ಬಳಕೆಯಲ್ಲಿಲ್ಲ. ಸ್ಟ್ಯಾಂಡ್ ಮೇಲೆ ನೆರಳಿನ ವ್ಯವಸ್ಥೆ ಇಲ್ಲದೇ ಇರುವ ಕಾರಣ ಪ್ರತಿಬಾರಿ ಮ್ಯಾಚ್ ನಡೆದಾಗ ಪೆಂಡಾಲ್ ಹಾಕಿ ನೆರಳಿನ ವ್ಯವಸ್ಥೆ ಮಾಡಲಾಗುತ್ತದೆ. ತಾತ್ಕಾಲಿಕ ಸ್ಟ್ಯಾಂಡ್​​ಗಳನ್ನು ಕೂಡಾ ನಿರ್ಮಿಸಲಾಗುತ್ತೆ.

ಇನ್ನು ರಣಜಿ ಪೈನಲ್ ಪಂದ್ಯ ಹುಬ್ಬಳ್ಳಿಯಲ್ಲಿ ನಡೆಯುವುದು ಪಿಕ್ಸ್ ಆಗಿರುವ ಕಾರಣ ಈಗಾಗಲೇ ಹತ್ತಕ್ಕೂ ಹೆಚ್ಚು ಸಿಬ್ಬಂದಿ ‌ಪಿಚ್‌ ಸಿದ್ದೊಗೊಳಿಸುವ ಕಾರ್ಯದಲ್ಲಿ ನಿರತವಾಗಿದ್ದು, ಕಳೆದ ಒಂದು ವಾರದಿಂದ ಈ ಸಂಬಂಧಿತ ಕೆಲಸಗಳು ನಡೆಯುತ್ತಿದೆ. ಬೆಂಗಳೂರಿನಿಂದ ಹುಬ್ಬಳ್ಳಿಗೆ ಬಂದಿರುವ KSCA ಕೂಡ ಮೈದಾನವನ್ನು ಪರಿಶೀಲನೆ ನಡೆಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 12:39 pm, Fri, 20 February 26

Follow Us
ಸಂಜಯ್ಯಾ ಚಿಕ್ಕಮಠ
ಸಂಜಯ್ಯಾ ಚಿಕ್ಕಮಠ

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್​ನಿಂದ ಆರಂಭವಾದ ವೃತ್ತಿ ಬದುಕು, ಕಲಬುರಗಿ, ಕೊಪ್ಪಳದಿಂದ ಇದೀಗ ಹುಬ್ಬಳ್ಳಿಗೆ ಬಂದಿದ್ದು, ಉತ್ತರ ಕರ್ನಾಟಕ ಪ್ರಮುಖ ವಾಣಿಜ್ಯ ನಗರ ಹುಬ್ಬಳ್ಳಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
ಪ್ರೀತಿಸಿ ಮದುವೆಯಾದ 3 ತಿಂಗಳಲ್ಲೇ ನವಜೋಡಿಗೆ ಗಂಡಾಂತರ: ಆಗಿದ್ದೇನು?
ಪ್ರೀತಿಸಿ ಮದುವೆಯಾದ 3 ತಿಂಗಳಲ್ಲೇ ನವಜೋಡಿಗೆ ಗಂಡಾಂತರ: ಆಗಿದ್ದೇನು?
ಬರ ಮಧ್ಯೆ ಸಚಿವರು, ಲೋಕಸಭಾ, ರಾಜ್ಯಸಭಾ ಸದಸ್ಯರ ಕಾರು ಖರೀದಿ ಮೊತ್ತ ಏರಿಕೆ
ಬರ ಮಧ್ಯೆ ಸಚಿವರು, ಲೋಕಸಭಾ, ರಾಜ್ಯಸಭಾ ಸದಸ್ಯರ ಕಾರು ಖರೀದಿ ಮೊತ್ತ ಏರಿಕೆ
‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್
‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!