AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

15ನೇ ವಯಸ್ಸಿನಲ್ಲೇ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ

Vaibhav Sooryavanshi: ಭಾರತೀಯ ದೇಶೀಯ ಕ್ರಿಕೆಟ್‌ನಲ್ಲಿ ಸದಾ ಹೊಸ ದಾಖಲೆಗಳು ನಿರ್ಮಾಣವಾಗುತ್ತಲೇ ಇರುತ್ತವೆ. ಆದರೆ, ಬೆಂಗಳೂರಿನ ಬಿಸಿಸಿಐ ಎಕ್ಸಲೆನ್ಸ್ ಸೆಂಟರ್‌ನಲ್ಲಿ ನಡೆಯುತ್ತಿರುವ ದುಲೀಪ್ ಟ್ರೋಫಿ ಸೆಮಿಫೈನಲ್ ಪಂದ್ಯದ ವೇಳೆ ಮತ್ತೊಂದು ಹೊಸ ಇತಿಹಾಸ ಸೃಷ್ಟಿಯಾಗಿದೆ. ಈ ಐತಿಹಾಸಿಕ ಮೈಲಿಗಲ್ಲು ಸ್ಥಾಪಿಸಿದ್ದು ಕೇವಲ 15 ವರ್ಷದ ಯುವ ಆಟಗಾರ ವೈಭವ್ ಸೂರ್ಯವಂಶಿ.

15ನೇ ವಯಸ್ಸಿನಲ್ಲೇ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ
Vaibhav Sooryavanshi
ಝಾಹಿರ್ ಯೂಸುಫ್
|

Updated on: Aug 30, 2026 | 1:10 PM

Share

ಭಾರತೀಯ ಕ್ರಿಕೆಟ್‌ನ ಉದಯೋನ್ಮುಖ ತಾರೆ, 15 ವರ್ಷದ ವೈಭವ್ ಸೂರ್ಯವಂಶಿ ಹಿರಿಯರ ದೇಶಿ ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ ಬರೆದಿದ್ದಾರೆ. ಬೆಂಗಳೂರಿನ ಬಿಸಿಸಿಐ ಎಕ್ಸಲೆನ್ಸ್ ಸೆಂಟರ್‌ನಲ್ಲಿ ನಡೆಯುತ್ತಿರುವ ಸೆಂಟ್ರಲ್ ಝೋನ್ ವಿರುದ್ಧದ ದುಲೀಪ್ ಟ್ರೋಫಿ ಸೆಮಿಫೈನಲ್ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ ಇದ್ದಕ್ಕಿದ್ದಂತೆ ಈಸ್ಟ್ ಝೋನ್ ತಂಡವನ್ನು ಮುನ್ನಡೆಸುವ ಜವಾಬ್ದಾರಿ ಹೊತ್ತುಕೊಂಡಿದ್ದಾರೆ.

ಕಿಶನ್ ಗಾಯ, ಸೂರ್ಯವಂಶಿಗೆ ಒಲಿದ ನಾಯಕತ್ವ!

ಈಸ್ಟ್ ಝೋನ್ ತಂಡದ ಖಾಯಂ ನಾಯಕರಾಗಿದ್ದ ಅನುಭವಿ ಆಟಗಾರ ಇಶಾನ್ ಕಿಶನ್ ಪಂದ್ಯದ 19ನೇ ಓವರ್‌ನಲ್ಲಿ ವಿಕೆಟ್ ಕೀಪಿಂಗ್ ಮಾಡುವಾಗ ಮಣಿಕಟ್ಟಿನ ಗಾಯಕ್ಕೆ ತುತ್ತಾದರು. ತೀವ್ರ ನೋವಿನಿಂದಾಗಿ ಅವರು ಮೈದಾನ ತೊರೆಯಬೇಕಾಗಿ ಬಂದಾಗ, ತಂಡದ ಉಪನಾಯಕರಾಗಿದ್ದ 15 ವರ್ಷದ ವೈಭವ್ ಸೂರ್ಯವಂಶಿ ಸಾರಥ್ಯ ವಹಿಸಿಕೊಂಡರು. ಈ ಮೂಲಕ ಅತ್ಯಂತ ಕಿರಿಯ ವಯಸ್ಸಿನಲ್ಲಿ ಹಿರಿಯರ ಪ್ರಥಮ ದರ್ಜೆ ಕ್ರಿಕೆಟ್ ತಂಡವನ್ನು ಮುನ್ನಡೆಸಿದ ಅಪರೂಪದ ದಾಖಲೆಯನ್ನು ಬರೆದರು.

ಇದಕ್ಕೂ ಮುನ್ನ ಈ ದಾಖಲೆ ರಿಷಭ್ ಪಂತ್ ಹೆಸರಿನಲ್ಲಿತ್ತು. 2017ರಲ್ಲಿ ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ದೆಹಲಿ ತಂಡವನ್ನು ಮುನ್ನಡೆಸಿ 20ನೇ ವಯಸ್ಸಿನಲ್ಲಿ ಪಂತ್ ಈ ದಾಖಲೆ ಬರೆದಿದ್ದರು.

ಇದೀಗ ಈ ದಾಖಲೆಯನ್ನು ವೈಭವ್ ಸೂರ್ಯವಂಶಿ ತಮ್ಮದಾಗಿಸಿಕೊಂಡಿದ್ದಾರೆ. ಕೇವಲ 15 ವರ್ಷ 156 ದಿನಗಳ ಪ್ರಾಯದಲ್ಲಿ (ಆಗಸ್ಟ್ 30, 2026 ರಂದು) ದುಲೀಪ್ ಟ್ರೋಫಿ ಪಂದ್ಯದಲ್ಲಿ ಈಸ್ಟ್ ಝೋನ್ ತಂಡವನ್ನು ಮುನ್ನಡೆಸುವ ಮೂಲಕ ಈ ಐತಿಹಾಸಿಕ ಮೈಲಿಗಲ್ಲು ಸ್ಥಾಪಿಸಿದ್ದಾರೆ.

ದೇಶೀಯ ಕ್ರಿಕೆಟ್​ನ ಅತ್ಯಂತ ಕಿರಿಯ ಕ್ಯಾಪ್ಟನ್​ಗಳು:

ಆಟಗಾರರು ದಾಖಲೆ / ವಿಶೇಷತೆ
ವೈಭವ್ ಸೂರ್ಯವಂಶಿ 15ನೇ ವಯಸ್ಸಿನಲ್ಲಿ ದೇಶೀಯ ಕ್ರಿಕೆಟ್​ನಲ್ಲಿ ತಂಡವನ್ನು ಮುನ್ನಡೆಸಿದ ನಾಯಕ. ಅಲ್ಲದೆ 14ನೇ ವಯಸ್ಸಿನಲ್ಲಿ ಬಿಹಾರ್ ರಣಜಿ ತಂಡದ ಉಪನಾಯಕರಾದ ಹೆಗ್ಗಳಿಕೆಯನ್ನೂ ಸಹ ಹೊಂದಿದ್ದಾರೆ.
ರಿಷಭ್ ಪಂತ್ 20ನೇ ವಯಸ್ಸಿನಲ್ಲಿ ರಣಜಿ ಟ್ರೋಫಿ ಇತಿಹಾಸದಲ್ಲೇ ಫೈನಲ್ ಪಂದ್ಯದಲ್ಲಿ ತಂಡವೊಂದನ್ನು (ದೆಹಲಿ) ಮುನ್ನಡೆಸಿದ ಅತ್ಯಂತ ಕಿರಿಯ ನಾಯಕ ಎಂಬ ದಾಖಲೆ ಬರೆದಿದ್ದರು.
ಯಶ್ ಧುಳ್ 20ನೇ ವಯಸ್ಸಿನಲ್ಲಿ ದೆಹಲಿ ರಣಜಿ ತಂಡದ ನಾಯಕರಾಗಿ ನೇಮಕಗೊಂಡು, ಅತ್ಯಂತ ಕಿರಿಯ ವಯಸ್ಸಿಗೆ ರಣಜಿ ತಂಡ ಮುನ್ನಡೆಸಿದ ಹೆಗ್ಗಳಿಕೆ ಪಾತ್ರರಾಗಿದ್ದರು.

ಇದನ್ನೂ ಓದಿ: ಯಾವ ಬೌಲರ್ ಕಂಡರೆ ಭಯ? ವೈಭವ್ ಸೂರ್ಯವಂಶಿ ಖಡಕ್ ಉತ್ತರ

ಒಟ್ಟಾರೆಯಾಗಿ ಹೇಳುವುದಾದರೆ, 15 ವರ್ಷದ ವೈಭವ್ ಸೂರ್ಯವಂಶಿ ದುಲೀಪ್ ಟ್ರೋಫಿಯಲ್ಲಿ ಈಸ್ಟ್ ಝೋನ್ ತಂಡದ ಸಾರಥ್ಯ ವಹಿಸಿಕೊಳ್ಳುವ ಮೂಲಕ ಹೊಸ ಇತಿಹಾಸ ಬರೆದಿದ್ದಾರೆ. ಈ ಅದ್ಭುತ ದಾಖಲೆಯೊಂದಿಗೆ, ಮುಂದಿನ ದಿನಗಳಲ್ಲಿ ಅವರು ಭಾರತ ತಂಡವನ್ನು ಮುನ್ನಡೆಸಿದ ಅತ್ಯಂತ ಕಿರಿಯ ಕ್ಯಾಪ್ಟನ್ ಎನಿಸಿಕೊಳ್ಳಲಿದ್ದಾರೆಯೇ ಎಂಬುದನ್ನು ಕಾದು ನೋಡಬೇಕಿದೆ.

Follow Us
ತುಂಗಭದ್ರಾ ಡ್ಯಾಂನಿಂದ ನೀರು ಕಳ್ಳತನ ಮಾಡುತ್ತಿರುವ ಕಾರ್ಖಾನೆಗಳು
ತುಂಗಭದ್ರಾ ಡ್ಯಾಂನಿಂದ ನೀರು ಕಳ್ಳತನ ಮಾಡುತ್ತಿರುವ ಕಾರ್ಖಾನೆಗಳು
ಕರ್ನಾಟಕದ ಹಲವು ಜೈಲುಗಳಲ್ಲಿ ಬರೋಬ್ಬರಿ 410 ಮೊಬೈಲ್‌ ಸೀಜ್
ಕರ್ನಾಟಕದ ಹಲವು ಜೈಲುಗಳಲ್ಲಿ ಬರೋಬ್ಬರಿ 410 ಮೊಬೈಲ್‌ ಸೀಜ್
ತಡರಾತ್ರಿ ಮಳೆಗೆ ತತ್ತರಿಸಿದ ಬೆಂಗಳೂರು!
ತಡರಾತ್ರಿ ಮಳೆಗೆ ತತ್ತರಿಸಿದ ಬೆಂಗಳೂರು!
ವಾರ ಭವಿಷ್ಯ: ಗ್ರಹಗಳ ಸ್ಥಾನಪಲ್ಲಟ, ದ್ವಾದಶ ರಾಶಿಗಳ ಮೇಲೆ ಪ್ರಭಾವ
ವಾರ ಭವಿಷ್ಯ: ಗ್ರಹಗಳ ಸ್ಥಾನಪಲ್ಲಟ, ದ್ವಾದಶ ರಾಶಿಗಳ ಮೇಲೆ ಪ್ರಭಾವ
ರವಿ ಕನ್ಯಾ ರಾಶಿಯಲ್ಲಿ, ಚಂದ್ರ ಧನು ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದ
ರವಿ ಕನ್ಯಾ ರಾಶಿಯಲ್ಲಿ, ಚಂದ್ರ ಧನು ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದ
ಮನೆ ಕಟ್ಟುವವರಿಗೆ ಗುಡ್​ನ್ಯೂಸ್: ನಿಮಿಷಗಳಲ್ಲಿ ಸಿಗಲಿದೆ ಪ್ಲಾನ್ ಅಪ್ರೂವಲ್
ಮನೆ ಕಟ್ಟುವವರಿಗೆ ಗುಡ್​ನ್ಯೂಸ್: ನಿಮಿಷಗಳಲ್ಲಿ ಸಿಗಲಿದೆ ಪ್ಲಾನ್ ಅಪ್ರೂವಲ್
7ನೇ ಕ್ಲಾಸ್ ವಿದ್ಯಾರ್ಥಿಗಳಿಗೆ ವರ್ಣಮಾಲೆ ಗೊತ್ತಿಲ್ಲ:ಶಿಕ್ಷಕರಿಗೆ ನೊಟೀಸ್
7ನೇ ಕ್ಲಾಸ್ ವಿದ್ಯಾರ್ಥಿಗಳಿಗೆ ವರ್ಣಮಾಲೆ ಗೊತ್ತಿಲ್ಲ:ಶಿಕ್ಷಕರಿಗೆ ನೊಟೀಸ್
ಪ್ರಚೋದನಕಾರಿ ಭಾಷಣ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೈ ದೂರು
ಪ್ರಚೋದನಕಾರಿ ಭಾಷಣ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೈ ದೂರು
ಸಿದ್ದರಾಮಯ್ಯ ಪ್ರತಿಮೆ ತೆರವು ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ
ಸಿದ್ದರಾಮಯ್ಯ ಪ್ರತಿಮೆ ತೆರವು ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ
ಕಲಬುರಗಿ ಯುವತಿಯನ್ನ ಬಾಂಗ್ಲಾದೇಶಕ್ಕೆ ಕರೆದೊಯ್ದು ಟಾರ್ಚರ್
ಕಲಬುರಗಿ ಯುವತಿಯನ್ನ ಬಾಂಗ್ಲಾದೇಶಕ್ಕೆ ಕರೆದೊಯ್ದು ಟಾರ್ಚರ್