AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

6 ಓವರ್​ಗಳ ಟೂರ್ನಿಗೆ 7 ಸದಸ್ಯರ ಟೀಂ ಇಂಡಿಯಾ ಪ್ರಕಟ

India Squad for Hong Kong Sixes 2025: 2025 ರ ಹಾಂಗ್ ಕಾಂಗ್ ಸಿಕ್ಸಸ್ ಲೀಗ್‌ಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದೆ. ದಿನೇಶ್ ಕಾರ್ತಿಕ್ ನಾಯಕತ್ವದಲ್ಲಿ ಏಳು ಆಟಗಾರರ ತಂಡ ಕಣಕ್ಕಿಳಿಯಲಿದ್ದು, ನಾಲ್ವರು ಕನ್ನಡಿಗರು ಸ್ಥಾನ ಪಡೆದಿರುವುದು ವಿಶೇಷ. ರಾಬಿನ್ ಉತ್ತಪ್ಪ, ಭರತ್ ಚಿಪ್ಲಿ, ಸ್ಟುವರ್ಟ್ ಬಿನ್ನಿ, ಅಭಿಮನ್ಯು ಮಿಥುನ್ ಪ್ರಮುಖ ಆಟಗಾರರು. ನವೆಂಬರ್ 7 ರಂದು ಪಾಕಿಸ್ತಾನದ ವಿರುದ್ಧ ಭಾರತ ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ.

6 ಓವರ್​ಗಳ ಟೂರ್ನಿಗೆ 7 ಸದಸ್ಯರ ಟೀಂ ಇಂಡಿಯಾ ಪ್ರಕಟ
Team India
ಪೃಥ್ವಿಶಂಕರ
|

Updated on:Nov 05, 2025 | 9:05 PM

Share

2025 ರ ಹಾಂಗ್​ಕಾಂಗ್ ಸಿಕ್ಸಸ್ (Hong Kong Sixes 2025) ಲೀಗ್ ಇದೇ ನವೆಂಬರ್ 7 ರಂದು ಪ್ರಾರಂಭವಾಗಲಿದ್ದು, ನವೆಂಬರ್ 9 ರವರೆಗೆ ನಡೆಯಲಿದೆ. ಇದೀಗ ಈ ಆರು ಓವರ್‌ಗಳ ಪಂದ್ಯಾವಳಿಗಾಗಿ ಭಾರತದ ತಂಡವನ್ನು (India Cricket Squad) ಪ್ರಕಟಿಸಲಾಗಿದೆ. ಭಾರತೀಯ ತಂಡಕ್ಕೆ ಒಟ್ಟು ಏಳು ಆಟಗಾರರನ್ನು ಆಯ್ಕೆ ಮಾಡಲಾಗಿದ್ದು, ತಂಡವನ್ನು ಅನುಭವಿ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ದಿನೇಶ್ ಕಾರ್ತಿಕ್ ಮುನ್ನಡೆಸಲಿದ್ದಾರೆ. ಈ ತಂಡದಲ್ಲಿ ನಾಲ್ವರು ಕನ್ನಡಿಗರು ಸ್ಥಾನ ಪಡೆದಿರುವುದು ಗಮನಿಸಬೇಕಾದ ಸಂಗತಿಯಾಗಿದೆ.

7 ಸದ್ಯಸರ ಭಾರತ ತಂಡ ಪ್ರಕಟ

ಕಳೆದ ಆವೃತ್ತಿಯ ನಾಯಕ ರಾಬಿನ್ ಉತ್ತಪ್ಪ ತಂಡಕ್ಕೆ ಮರಳಿರುವುದು ಅತ್ಯಂತ ದೊಡ್ಡ ಸುದ್ದಿಯಾಗಿದೆ. 2007 ರ ಟಿ20 ವಿಶ್ವಕಪ್ ವಿಜೇತ ಉತ್ತಪ್ಪ 2024 ರಲ್ಲಿ ನಡೆದ ಈ ಪಂದ್ಯಾವಳಿಯಲ್ಲಿ ಓಮನ್ ವಿರುದ್ಧ ಕೇವಲ 13 ಎಸೆತಗಳಲ್ಲಿ 52 ರನ್ ಗಳಿಸಿ ಅಬ್ಬರದ ಇನ್ನಿಂಗ್ಸ್ ಆಡಿದ್ದರು. ಅಗ್ರ ಕ್ರಮಾಂಕದಲ್ಲಿ ಅವರ ಸ್ಫೋಟಕ ಬ್ಯಾಟಿಂಗ್ ಭಾರತಕ್ಕೆ ಅಬ್ಬರದ ಆರಂಭ ನೀಡುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತದೆ. ಕಳೆದ ವರ್ಷದ ಟೂರ್ನಮೆಂಟ್‌ನಲ್ಲಿ ಅತ್ಯಂತ ಯಶಸ್ವಿ ಭಾರತೀಯ ಬ್ಯಾಟ್ಸ್‌ಮನ್ ಆಗಿದ್ದ ಭರತ್ ಚಿಪ್ಲಿ ಅವರನ್ನು ಸಹ ತಂಡದಲ್ಲಿ ಸೇರಿಸಲಾಗಿದೆ.

ಕಳೆದ ಆವೃತ್ತಿಯಲ್ಲಿ, ಅವರು ಪಾಕಿಸ್ತಾನ ವಿರುದ್ಧ 16 ಎಸೆತಗಳಲ್ಲಿ ಅಜೇಯ 53 ರನ್ ಸೇರಿದಂತೆ ಒಟ್ಟು 156 ರನ್ ಬಾರಿಸಿದ್ದರು. ಆಲ್‌ರೌಂಡರ್ ಸ್ಟುವರ್ಟ್ ಬಿನ್ನಿ ಈ ಬಾರಿ ಹಾಂಗ್ ಕಾಂಗ್ ಸಿಕ್ಸಸ್ ಟೂರ್ನಮೆಂಟ್‌ನಲ್ಲಿಯೂ ಕಾಣಿಸಿಕೊಳ್ಳಲಿದ್ದಾರೆ. ಬಲಗೈ ಮಧ್ಯಮ ವೇಗದ ಬೌಲರ್ ಅಭಿಮನ್ಯು ಮಿಥುನ್ ಬೌಲಿಂಗ್ ವಿಭಾಗವನ್ನು ಮುನ್ನಡೆಸಲಿದ್ದಾರೆ. ಟೆಸ್ಟ್ ಮತ್ತು ಏಕದಿನ ಪಂದ್ಯಗಳಲ್ಲಿ ಭಾರತ ಪರ ಆಡಿರುವ ಮಿಥುನ್, ದೇಶೀಯ ಕ್ರಿಕೆಟ್‌ನಲ್ಲಿ 330 ಕ್ಕೂ ಹೆಚ್ಚು ಪ್ರಥಮ ದರ್ಜೆ ವಿಕೆಟ್‌ಗಳನ್ನು ಹೊಂದಿದ್ದಾರೆ. ಎಡಗೈ ಸ್ಪಿನ್ನರ್ ಶಹಬಾಜ್ ನದೀಮ್ ಮತ್ತು ಬ್ಯಾಟ್ಸ್‌ಮನ್ ಪ್ರಿಯಾಂಕ್ ಪಾಂಚಲ್ ಕೂಡ ಭಾರತೀಯ ತಂಡದ ಭಾಗವಾಗಿದ್ದಾರೆ.

ಈ ದಿನದಂದು ಪಾಕ್ ವಿರುದ್ಧ ಪಂದ್ಯ

ಈ ಪಂದ್ಯಾವಳಿಯಲ್ಲಿ ಭಾರತ ತಂಡ ಪಾಕಿಸ್ತಾನದ ವಿರುದ್ಧ ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ. ಎರಡೂ ತಂಡಗಳು ನವೆಂಬರ್ 7 ರಂದು ಪರಸ್ಪರ ಮುಖಾಮುಖಿಯಾಗಲಿವೆ. ನಂತರ ನವೆಂಬರ್ 8 ರಂದು ಕುವೈತ್ ತಂಡವನ್ನು ಎದುರಿಸಲಿದೆ. ಇದರ ನಂತರ, ಭಾರತ ತಂಡವು ಅಫ್ಘಾನಿಸ್ತಾನವನ್ನು ಎದುರಿಸಲಿದೆ. ಬಳಿಕ ಸೆಮಿಫೈನಲ್ ಮತ್ತು ಫೈನಲ್ ಪಂದ್ಯಗಳು ನಡೆಯಲಿವೆ.

ಭಾರತ ತಂಡ: ದಿನೇಶ್ ಕಾರ್ತಿಕ್ (ನಾಯಕ), ರಾಬಿನ್ ಉತ್ತಪ್ಪ, ಭರತ್ ಚಿಪ್ಲಿ, ಸ್ಟುವರ್ಟ್ ಬಿನ್ನಿ, ಅಭಿಮನ್ಯು ಮಿಥುನ್, ಶಹಬಾಜ್ ನದೀಮ್, ಪ್ರಿಯಾಂಕ್ ಪಾಂಚಾಲ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:00 pm, Wed, 5 November 25