AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ವಿಶ್ವ ದಾಖಲೆ: 6 ಓವರ್​ಗಳಲ್ಲಿ 159 ರನ್ ಚಚ್ಚಿದ ಆಸ್ಟ್ರೇಲಿಯಾ

ಹಾಂಗ್ ಕಾಂಗ್ ಸಿಕ್ಸಸ್ ಟೂರ್ನಿಯಲ್ಲಿ ಹೊಸ ಇತಿಹಾಸ ನಿರ್ಮಾಣವಾಗಿದೆ. ಇತಿಹಾಸ ನಿರ್ಮಿಸಿದ್ದು ಆಸ್ಟ್ರೇಲಿಯಾ. ಅದೂ ಸಹ ತನ್ನ ಸಾಂಪ್ರದಾಯಿಕ ಎದುರಾಳಿ ಇಂಗ್ಲೆಂಡ್ ವಿರುದ್ಧ. ಈ ಭರ್ಜರಿ ದಾಖಲೆಯೊಂದಿಗೆ ಆಸ್ಟ್ರೇಲಿಯಾ ತಂಡವು 2 ವರ್ಷಗಳ ಹಿಂದೆ ಒಮಾನ್ ತಂಡ ಬರೆದಿದ್ದ ವಿಶ್ವ ದಾಖಲೆಯನ್ನು ಸರಿಗಟ್ಟಿದೆ.

ಹೊಸ ವಿಶ್ವ ದಾಖಲೆ: 6 ಓವರ್​ಗಳಲ್ಲಿ 159 ರನ್ ಚಚ್ಚಿದ ಆಸ್ಟ್ರೇಲಿಯಾ
Australia Image Credit source: HKS
ಝಾಹಿರ್ ಯೂಸುಫ್
|

Updated on:Oct 31, 2026 | 7:30 AM

Share

ಹಾಂಗ್​ ಕಾಂಗ್ ಸಿಕ್ಸಸ್ ಟೂರ್ನಿಯ ಗ್ರೂಪ್-ಎ ಪಂದ್ಯಗಳಲ್ಲಿ ಆಸ್ಟ್ರೇಳಿಯಾ ದಾಂಡಿಗರು ಅಕ್ಷರಶಃ ಅಬ್ಬರಿಸಿದ್ದಾರೆ. ಈ ಅಬ್ಬರದೊಂದಿಗೆ ಹಾಂಗ್ ಕಾಂಗ್ ಸಿಕ್ಸಸ್ ಟೂರ್ನಿಯಲ್ಲಿ ಹೊಸ ಇತಿಹಾಸವನ್ನು ಬರೆದಿದ್ದಾರೆ. ಮೌಂಗ್ ಕಾಕ್‌ನ ಮಿಷನ್ ರೋಡ್ ಗ್ರೌಂಡ್​ನಲ್ಲಿ ನಡೆದ ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಿದ್ದವು.

ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಜ್ಯಾಕ್ ವುಡ್ ಬ್ಯಾಟಿಂಗ್ ಆಯ್ದುಕೊಂಡರು. ನಾಯಕನ ನಿರ್ಧಾರವನ್ನು ಸಮರ್ಥಿಸುವಂತೆ ಬ್ಯಾಟ್ ಬೀಸಿದ ಆರಂಭಿಕ ದಾಂಡಿಗ ಮ್ಯಾಕ್ಸ್ ಬ್ರ್ಯಾಂಟ್ ಕೇವಲ 10 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದರು. ಆ ಬಳಿಕ ಬಂದ ನಿಕ್ ಹಾಬ್ಸನ್ ಕೂಡ ಹತ್ತೇ ಎಸೆತಗಳಲ್ಲಿ ಹಾಫ್ ಸೆಂಚುರಿ ಪೂರೈಸಿದರು.

ನಿಕ್, ಮ್ಯಾಕ್ಸ್ ಸಿಡಿಲಬ್ಬರ:

ಮೊದಲ ಓವರ್​ನಿಂದಲೇ ಅಬ್ಬರಿಸಿದ ಮ್ಯಾಕ್ಸ್ ಬ್ರ್ಯಾಂಟ್ 11 ಎಸೆತಗಳಲ್ಲಿ 2 ಫೋರ್ ಹಾಗೂ 8 ಭರ್ಜರಿ ಸಿಕ್ಸರ್​​ಗಳೊಂದಿಗೆ 56 ರನ್ ಬಾರಿಸಿದರು. ಮತ್ತೊಂದೆಡೆ ಜ್ಯಾಕ್ ವುಡ್ 11 ಎಸೆತಗಳಲ್ಲಿ 40 ರನ್​ಗಳ ಕೊಡುಗೆ ನೀಡಿದರು.

ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಿಕ್ ಹಾಬ್ಸನ್ 11 ಎಸೆತಗಳಲ್ಲಿ 3 ಫೋರ್ ಹಾಗೂ 6 ಸಿಕ್ಸರ್​ಗಳೊಂದಿಗೆ 50 ರನ್ ಚಚ್ಚಿದರು. ಈ ಮೂಲಕ ಆಸ್ಟ್ರೇಲಿಯಾ ತಂಡ ನಿಗದಿತ 6 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 159 ರನ್​ ಕಲೆಹಾಕಿತು.

160 ರನ್​ಗಳ ಕಠಿಣ ಗುರಿ:

160 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ ಇಂಗ್ಲೆಂಡ್ ಪರ ಆರಂಭಿಕ ಆಟಗಾರರು ಸ್ಫೋಟಕ ಬ್ಯಾಟಿಂಗ್ ನಡೆಸಿದರು. ಜಾನ್ ಸಿಂಪ್ಸನ್ ಕೇವಲ 12 ಎಸೆತಗಳಲ್ಲಿ 54 ರನ್ ಚಚ್ಚಿದರೆ, ಅವರಿಗೆ ಸಾಥ್ ನೀಡಿದ ಮಾರ್ಟಿನ್ ಅ್ಯಂಡರ್ಸನ್ 24 ಎಸೆತಗಳಲ್ಲಿ ಅಜೇಯ 50 ರನ್ ಬಾರಿಸಿದರು. ಇಬ್ಬರೂ ಬ್ಯಾಟರ್‌ಗಳು ಅಜೇಯರಾಗುಳಿದು ಹೋರಾಡಿದರೂ, ರನ್ ರೇಟ್‌ನ ಭಾರದಿಂದಾಗಿ ಇಂಗ್ಲೆಂಡ್ ತಂಡವನ್ನು ಗೆಲುವಿನ ದಡ ಸೇರಿಸಲು ಸಾಧ್ಯವಾಗಲಿಲ್ಲ. ಪರಿಣಾಮ, ಇಂಗ್ಲೆಂಡ್ ತಂಡವು 6 ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 121 ರನ್ ಗಳಿಸಲಷ್ಟೇ ಶಕ್ತವಾಗಿ, 38 ರನ್‌ಗಳಿಂದ ಸೋಲೊಪ್ಪಿಕೊಂಡಿತು.

ವಿಶ್ವ ದಾಖಲೆ:

ಆಸ್ಟ್ರೇಲಿಯಾ ಗಳಿಸಿದ 159 ರನ್‌ಗಳ ಮೊತ್ತವು ಈ ಟೂರ್ನಿಯ ಇತಿಹಾಸದಲ್ಲಿ ದಾಖಲಾದ ಅತ್ಯಧಿಕ ಜಂಟಿ ಟೀಮ್ ಸ್ಕೋರ್. ಇದಕ್ಕೂ ಮುನ್ನ ಒಮಾನ್ ತಂಡವು 2024 ರಲ್ಲಿ ಇಂಗ್ಲೆಂಡ್ ವಿರುದ್ಧವೇ ವಿಕೆಟ್ ನಷ್ಟವಿಲ್ಲದೆ 159 ರನ್ ಬಾರಿಸಿ ಈ ದಾಖಲೆ ಬರೆದಿತ್ತು. ಇದೀಗ ಆಸ್ಟ್ರೇಲಿಯಾ ತಂಡವು 159/4 ರನ್ ಗಳಿಸುವ ಮೂಲಕ ಒಮಾನ್ ತಂಡದ ಆ ವಿಶ್ವ ದಾಖಲೆಯನ್ನು ಸರಿಗಟ್ಟಿದೆ.

ಇಂಗ್ಲೆಂಡ್ ತಂಡ: ಮಾರ್ಟಿನ್ ಅ್ಯಂಡರ್ಸನ್ , ಲ್ಯೂಕ್ ಹಾಲ್ಮನ್ , ಜ್ಯಾಕ್ ಕಾರ್ಸನ್ , ಫಿನ್ ಹಡ್ಸನ್-ಪ್ರೆಂಟಿಸ್ , ನಾಥನ್ ಗಿಲ್‌ಕ್ರಿಸ್ಟ್ , ಜಾನ್ ಸಿಂಪ್ಸನ್ (ನಾಯಕ), ಡಾನ್ ಮೌಸ್ಲಿ , ಎಡ್ ಬರ್ನಾರ್ಡ್.

ಇದನ್ನೂ ಓದಿ: ಟೀಮ್ ಇಂಡಿಯಾ ಅಬ್ಬರ, ವಿಂಡೀಸ್ ಪಡೆಗೆ ಸ್ಯಾಮಿ ಬಹುಪರಾಕ್!

ಆಸ್ಟ್ರೇಲಿಯಾ ತಂಡ:  ಮ್ಯಾಕ್ಸ್ ಬ್ರ್ಯಾಂಟ್ , ಜ್ಯಾಕ್ ವುಡ್ (ನಾಯಕ) , ಅಲೆಕ್ಸ್ ರಾಸ್ , ನಿಕ್ ಹಾಬ್ಸನ್ , ಕ್ರಿಸ್ ಗ್ರೀನ್ , ಮ್ಯಾಥ್ಯೂ ಕೆಲ್ಲಿ, ಕೇನ್ ರಿಚರ್ಡ್ಸನ್.

Published On - 7:30 am, Sat, 31 October 26

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಚೀಫ್ ಸಬ್ ಎಡಿಟರ್. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಪುಟ್ಟೇನಹಳ್ಳಿ ವಿನಾಯಕ ನಗರದಲ್ಲಿ ಮದುವೆ ವಿಚಾರಕ್ಕೆ ಗನ್ ತೋರಿಸಿ ಬೆದರಿಕೆ
ಪುಟ್ಟೇನಹಳ್ಳಿ ವಿನಾಯಕ ನಗರದಲ್ಲಿ ಮದುವೆ ವಿಚಾರಕ್ಕೆ ಗನ್ ತೋರಿಸಿ ಬೆದರಿಕೆ
ಸಾರ್ವಜನಿಕರ ದೂರುಗಳು ‘ಸಕಾಲ’ ವ್ಯಾಪ್ತಿಗೆ: ವಿಳಂಬಕ್ಕೆ ₹1,500 ದಂಡ
ಸಾರ್ವಜನಿಕರ ದೂರುಗಳು ‘ಸಕಾಲ’ ವ್ಯಾಪ್ತಿಗೆ: ವಿಳಂಬಕ್ಕೆ ₹1,500 ದಂಡ
ತುಳಸಿ ವಿವಾಹದ ಶುಭ ದಿನದಂದು ಯಾವ ರಾಶಿಯವರಿಗೆ ಒಲಿಯಲಿದೆ ಅದೃಷ್ಟ?
ತುಳಸಿ ವಿವಾಹದ ಶುಭ ದಿನದಂದು ಯಾವ ರಾಶಿಯವರಿಗೆ ಒಲಿಯಲಿದೆ ಅದೃಷ್ಟ?
ಬಿಗ್ ಬಾಸ್ ಇತಿಹಾಸದಲ್ಲೇ ಮೊದಲು; ಮನೆಯ ಮಹರಾಣಿ ಸೇರಿ ಮೂವರು ಕಳಪೆ
ಬಿಗ್ ಬಾಸ್ ಇತಿಹಾಸದಲ್ಲೇ ಮೊದಲು; ಮನೆಯ ಮಹರಾಣಿ ಸೇರಿ ಮೂವರು ಕಳಪೆ
ಹಾಸನ: 32 ಕಾಡಾನೆಗಳ ಹಿಂಡು ಪತ್ತೆ, ಡ್ರೋನ್​​ ಕ್ಯಾಮರಾದಲ್ಲಿ ದೃಶ್ಯ ಸೆರೆ
ಹಾಸನ: 32 ಕಾಡಾನೆಗಳ ಹಿಂಡು ಪತ್ತೆ, ಡ್ರೋನ್​​ ಕ್ಯಾಮರಾದಲ್ಲಿ ದೃಶ್ಯ ಸೆರೆ
ದನದ ಶೆಡ್ ಬಿಲ್ ಬಾಕಿ:ಪಂಚಾಯ್ತಿ ಮುಂದೆ ಎಮ್ಮೆ ಕರು ಕಟ್ಟಿದ ಫಲಾನುಭವಿ
ದನದ ಶೆಡ್ ಬಿಲ್ ಬಾಕಿ:ಪಂಚಾಯ್ತಿ ಮುಂದೆ ಎಮ್ಮೆ ಕರು ಕಟ್ಟಿದ ಫಲಾನುಭವಿ
ಚಿಕ್ಕಣ್ಣನ ಡ್ಯಾನ್ಸ್ ನೋಡಿ ಪ್ರಭುದೇವಗೆ ಹೋಲಿಸಿದ ಶಿವಣ್ಣ
ಚಿಕ್ಕಣ್ಣನ ಡ್ಯಾನ್ಸ್ ನೋಡಿ ಪ್ರಭುದೇವಗೆ ಹೋಲಿಸಿದ ಶಿವಣ್ಣ
ಹೆಚ್​​​ಡಿಕೆ-ಡಿಕೆಶಿ ಜಟಾಪಟಿ:ಕುಮಾರಸ್ವಾಮಿ ನಡೆಗೆ ಸ್ವಾಮೀಜಿ ಅಸಮಾಧಾನ
ಹೆಚ್​​​ಡಿಕೆ-ಡಿಕೆಶಿ ಜಟಾಪಟಿ:ಕುಮಾರಸ್ವಾಮಿ ನಡೆಗೆ ಸ್ವಾಮೀಜಿ ಅಸಮಾಧಾನ
ಲಕ್ಷ್ಮೀಪುತ್ರ ಟ್ರೇಲರ್‌ಗೆ ಶಿವಣ್ಣ ಫಿದಾ; ಚಿಕ್ಕಣ್ಣ ಭವಿಷ್ಯದ ಸ್ಟಾರ್
ಲಕ್ಷ್ಮೀಪುತ್ರ ಟ್ರೇಲರ್‌ಗೆ ಶಿವಣ್ಣ ಫಿದಾ; ಚಿಕ್ಕಣ್ಣ ಭವಿಷ್ಯದ ಸ್ಟಾರ್
ಚಿನ್ನ ಗ್ರಾಂಗೆ 10 ಸಾವಿರದ ಒಳಗೆ ಬರುತ್ತಾ? ಹೂಡಿಕೆ ತಜ್ಞರು ಹೇಳಿದ್ದೇನು?
ಚಿನ್ನ ಗ್ರಾಂಗೆ 10 ಸಾವಿರದ ಒಳಗೆ ಬರುತ್ತಾ? ಹೂಡಿಕೆ ತಜ್ಞರು ಹೇಳಿದ್ದೇನು?