World Test Championship: 2023 ಮತ್ತು 2025 ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಸ್ಥಳ ನಿಗದಿ

| Updated By: ಪೃಥ್ವಿಶಂಕರ

Updated on: Sep 21, 2022 | 7:57 PM

World Test Championship: ಕಳೆದ ವರ್ಷ ಮೊದಲ ಬಾರಿಗೆ ನಡೆದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆದಿತ್ತು. ಈ ಪಂದ್ಯವನ್ನು ಗೆಲ್ಲುವ ಮೂಲಕ ನ್ಯೂಜಿಲೆಂಡ್ ಮೊದಲ ಬಾರಿಗೆ ಡಬ್ಲ್ಯುಟಿಸಿ ಚಾಂಪಿಯನ್ ಆಯಿತು.

World Test Championship: 2023 ಮತ್ತು 2025 ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಸ್ಥಳ ನಿಗದಿ
ಪ್ರಾತಿನಿಧಿಕ ಚಿತ್ರ
Follow us on

ಸದ್ಯಕ್ಕೆ ಇಡೀ ಕ್ರಿಕೆಟ್​ ಜಗತ್ತು ಮುಂದಿನ ತಿಂಗಳಿಂದ ಆರಂಭವಾಗಲಿರುವ ಟಿ20 ವಿಶ್ವಕಪ್​ನತ್ತ (t20 world cup) ತನ್ನ ಗಮನ ಹರಿಸಿದೆ. ಆ ನಡುವೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಮುಂದಿನ ಎರಡು ಸೀಸನ್​ಗಳ ಫೈನಲ್ ಪಂದ್ಯ ನಡೆಯುವ ಸ್ಥಳವನ್ನು ಐಸಿಸಿ ಮುಖ್ಯ ಕಾರ್ಯನಿರ್ವಾಹಕ ಜಿಯೋಫ್ ಅಲ್ಲಾರ್ಡಿಸ್ ಪ್ರಕಟಿಸಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ 2023 (World Test Championship 2023)ರ ಫೈನಲ್ ಲಂಡನ್‌ನ ಓವಲ್‌ನಲ್ಲಿ ನಡೆಯಲಿದ್ದು, ಆ ಬಳಿಕ 2025 ರ ಪ್ರಶಸ್ತಿ ಪಂದ್ಯವು ಲಾರ್ಡ್ಸ್ ಮೈದಾನದಲ್ಲಿ (Lord’s ground) ನಡೆಯಲಿದೆ. ಬರ್ಮಿಂಗ್ಹ್ಯಾಮ್‌ನಲ್ಲಿ ನಡೆದ ICC ವಾರ್ಷಿಕ ಸಮ್ಮೇಳನದಲ್ಲಿ ಈ ಬಗ್ಗೆ ಅಧಿಕೃತ ತೀರ್ಮಾನ ತೆಗೆದುಕೊಳ್ಳಲಾಗಿದ್ದು, 2023 ಮತ್ತು 2025ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ಗಳ ಫೈನಲ್‌ನ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು.

ಮುಂದಿನ ವರ್ಷ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯವನ್ನು ಓವಲ್‌ನಲ್ಲಿ ಆಡಲಾಗುವುದು ಎಂದು ತಿಳಿಸಲು ನಾವು ಸಂತೋಷಪಡುತ್ತೇವೆ ಎಂದು ಜೆಫ್ ಅಲಾರ್ಡಿಸ್ ಹೇಳಿದ್ದಾರೆ. ಈ ಮೈದಾನವು ಸುದೀರ್ಘ ಇತಿಹಾಸವನ್ನು ಹೊಂದಿದ್ದು, ಪ್ರಮುಖ ಪಂದ್ಯಗಳನ್ನು ಆಯೋಜಿಸಲು ಸೂಕ್ತವಾಗಿದೆ. ಇದಾದ ನಂತರ 2025ರ ಫೈನಲ್ ಲಾರ್ಡ್ಸ್ ನಲ್ಲಿ ನಡೆಯಲಿದೆ ಎಂದಿದ್ದಾರೆ. ಬಳಿಕ ಮಾತನಾಡಿದ ಅವರು, ಕಳೆದ ವರ್ಷದ ಫೈನಲ್ ಪಂದ್ಯ ಸೌತಾಂಪ್ಟನ್‌ನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆದಿತ್ತು. ಪ್ರಪಂಚದಾದ್ಯಂತದ ಅಭಿಮಾನಿಗಳು WTC ಫೈನಲ್‌ಗಾಗಿ ಕಾಯುತ್ತಿದ್ದಾರೆ ಎಂದು ನಾನು ಖಚಿತವಾಗಿ ಹೇಳಬಲ್ಲೆ. ICC ಪರವಾಗಿ, ನಾನು ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ, ಸರ್ರೆ ಕೌಂಟಿ ಕ್ರಿಕೆಟ್ ಕ್ಲಬ್ ಮತ್ತು ಮಾರ್ಲೆಬೋನ್ ಕ್ರಿಕೆಟ್ ಕ್ಲಬ್‌ಗೆ ಧನ್ಯವಾದ ಹೇಳುತ್ತೇನೆ ಎಂದಿದ್ದಾರೆ.

ಲಾರ್ಡ್ಸ್ ಮೊದಲ ಫೈನಲ್‌ ನಡೆಯಬೇಕಾಗಿತ್ತು

ಕಳೆದ ವರ್ಷ ಮೊದಲ ಬಾರಿಗೆ ನಡೆದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆದಿತ್ತು. ಈ ಪಂದ್ಯವನ್ನು ಗೆಲ್ಲುವ ಮೂಲಕ ನ್ಯೂಜಿಲೆಂಡ್ ಮೊದಲ ಬಾರಿಗೆ ಡಬ್ಲ್ಯುಟಿಸಿ ಚಾಂಪಿಯನ್ ಆಯಿತು. ಈ ಅಂತಿಮ ಪಂದ್ಯವನ್ನು ಸೌತಾಂಪ್ಟನ್‌ನಲ್ಲಿ ಆಡಲಾಯಿತ್ತಾದರೂ, ಮೊದಲು ಈ ಪಂದ್ಯವನ್ನು ಲಾರ್ಡ್ಸ್‌ನಲ್ಲಿ ನಿಗದಿಪಡಿಸಲಾಗಿತ್ತು. ನಂತರ ಕೊರೊನಾ ವೈರಸ್ ಸೋಂಕಿನ ಭೀಕರ ಅಲೆಯಿಂದಾಗಿ, ಅಜಿಯಾಸ್ ಬಾಲ್ ಸ್ಟೇಡಿಯಂನಲ್ಲಿ ತನ್ನದೇ ಆದ ಹೋಟೆಲ್ ಇರುವುದರಿಂದ ಅದನ್ನು ಸೌತಾಂಪ್ಟನ್‌ಗೆ ಸ್ಥಳಾಂತರಿಸಬೇಕಾಯಿತು. ಸೋಂಕಿನಿಂದ ರಕ್ಷಿಸಲು ಭಾರತ ಮತ್ತು ನ್ಯೂಜಿಲೆಂಡ್ ತಂಡಗಳನ್ನು ಈ ಹೋಟೆಲ್‌ನಲ್ಲಿ ಇರಿಸಲಾಗಿತ್ತು. ಈಗ 2023 ರಲ್ಲಿ WTC ಫೈನಲ್ ತನ್ನ ಮೂಲ ಸ್ಥಳಕ್ಕೆ ಹಿಂತಿರುಗಲಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಎರಡನೇ ಹಂತವು ಆಗಸ್ಟ್ 4 ರಂದು ಪ್ರಾರಂಭವಾಗಿದ್ದು, ಮುಂದಿನ ವರ್ಷ ಮಾರ್ಚ್ 31 ರವರೆಗೆ ಮುಂದುವರಿಯುತ್ತದೆ. ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ಪ್ರಸ್ತುತ WTC ಟೇಬಲ್‌ನಲ್ಲಿ ಅಗ್ರಸ್ಥಾನದಲ್ಲಿವೆ.

Published On - 7:53 pm, Wed, 21 September 22