AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನ್ ತಂಡಕ್ಕೆ ಸೆಮಿಫೈನಲ್​ಗೇರಲು ಇನ್ನೂ ಇದೆ ಚಾನ್ಸ್​..!

T20 World Cup 2026: ಟಿ20 ವಿಶ್ವಕಪ್​ನ ಸೂಪರ್-8 ಸುತ್ತಿನ ಮೊದಲ ಪಂದ್ಯವು ಮಳೆಯಿಂದಾಗಿ ರದ್ದಾಗಿತ್ತು. ಪಾಕಿಸ್ತಾನ್ ಹಾಗೂ ನ್ಯೂಝಿಲೆಂಡ್ ನಡುವೆ ನಡೆಯಬೇಕಿದ್ದ ಈ ಪಂದ್ಯವು ರದ್ದಾದ ಕಾರಣ ಉಭಯ ತಂಡಗಳಿಗೆ ತಲಾ ಒಂದೊಂದು ಅಂಕಗಳನ್ನು ನೀಡಲಾಗಿದೆ. ಈ ಒಂದು ಅಂಕದೊಂದಿಗೆ ಮುಂದಿನ ಪಂದ್ಯದಲ್ಲಿ ಗೆಲ್ಲುವ ಮೂಲಕ ಪಾಕ್ ತಂಡಕ್ಕೆ ಸೆಮಿಫೈನಲ್​ಗೇರಲು ಅವಕಾಶವಿದೆ.

ಪಾಕಿಸ್ತಾನ್ ತಂಡಕ್ಕೆ ಸೆಮಿಫೈನಲ್​ಗೇರಲು ಇನ್ನೂ ಇದೆ ಚಾನ್ಸ್​..!
Pakistan
ಝಾಹಿರ್ ಯೂಸುಫ್
|

Updated on: Feb 25, 2026 | 8:06 AM

Share

T20 World Cup 2026: ಟಿ20 ವಿಶ್ವಕಪ್​ನ 45ನೇ ಪಂದ್ಯದಲ್ಲಿ ಪಾಕಿಸ್ತಾನ್ ತಂಡ ಸೋಲನುಭವಿಸಿದೆ. ಶ್ರೀಲಂಕಾದ ಪಲ್ಲೆಕೆಲೆ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕ್ ತಂಡದ ನಾಯಕ ಸಲ್ಮಾನ್ ಅಲಿ ಅಘಾ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡವು 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 164 ರನ್ ಕಲೆಹಾಕಿದ್ದರು.

165 ರನ್​ಗಳ ಗುರಿ ಬೆನ್ನತ್ತಿದ ಇಂಗ್ಲೆಂಡ್ 19.1 ಓವರ್​ಗಳಲ್ಲಿ 166 ರನ್​ ಬಾರಿಸಿ 2 ವಿಕೆಟ್​ಗಳ ರೋಚಕ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಇಂಗ್ಲೆಂಡ್ ತಂಡವು ಸೆಮಿಫೈನಲ್​ಗೆ ಪ್ರವೇಶಿಸಿದೆ.

ಇತ್ತ ಸೋತಿರುವ ಪಾಕಿಸ್ತಾನ್ ತಂಡ ಇನ್ನೂ ಸಹ ಟೂರ್ನಿಯಿಂದ ಹೊರಬಿದ್ದಿಲ್ಲ. ಬದಲಾಗಿ ಮುಂದಿನ ಪಂದ್ಯಗಳ ಮೂಲಕ ಸೆಮಿಫೈನಲ್​ಗೇರಬಹುದು. ಆದರೆ ಇಂತಹದೊಂದು ಅವಕಾಶ ಸೃಷ್ಟಿಯಾಗಲು ಉಳಿದ ತಂಡಗಳ ಫಲಿತಾಂಶವನ್ನು ಎದುರು ನೋಡಬೇಕಿದೆ.

ಪಾಕಿಸ್ತಾನ್ ತಂಡದ ಸೆಮಿಫೈನಲ್ ಸಮೀಕರಣ ಹೀಗಿದೆ:

  • ಶ್ರೀಲಂಕಾ ವಿರುದ್ಧ ಗೆಲುವು: ಪಾಕಿಸ್ತಾನ್ ತಂಡವು ಫೆಬ್ರವರಿ 28 ರಂದು ನಡೆಯಲಿರುವ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಜಯ ಸಾಧಿಸಲೇಬೇಕು.
  • ನ್ಯೂಝಿಲೆಂಡ್​ ಸೋಲು: ಪಾಕಿಸ್ತಾನ್ ತಂಡವು ಸೆಮಿಫೈನಲ್‌ಗೆ ಸುಲಭವಾಗಿ ಅರ್ಹತೆ ಪಡೆಯಬೇಕಾದರೆ, ನ್ಯೂಝಿಲೆಂಡ್ ತಂಡವು ತನ್ನ ಉಳಿದ ಎರಡೂ ಪಂದ್ಯಗಳಲ್ಲಿ, ಅಂದರೆ ಶ್ರೀಲಂಕಾ ಮತ್ತು ಇಂಗ್ಲೆಂಡ್ ವಿರುದ್ಧ ಸೋಲಬೇಕು.
  • 3 ಅಂಕಗಳು: ನ್ಯೂಝಿಲೆಂಡ್ ತಂಡವು ಶ್ರೀಲಂಕಾ ಮತ್ತು ಇಂಗ್ಲೆಂಡ್ ವಿರುದ್ಧ ಸೋತರೆ ಒಂದು ಅಂಕದಲ್ಲೇ ಉಳಿಯಲಿದೆ. ಈ ವೇಳೆ ಪಾಕಿಸ್ತಾನ್ ತಂಡವು ಶ್ರೀಲಂಕಾ ವಿರುದ್ಧ ಭರ್ಜರಿ ಜಯ ಸಾಧಿಸಿ ಒಟ್ಟು 3 ಅಂಕಗಳೊಂದಿಗೆ ಸೆಮಿಫೈನಲ್​ಗೇರಬಹುದು.
  • ನೆಟ್ ರನ್ ರೇಟ್: ಒಂದು ವೇಳೆ ನ್ಯೂಝಿಲೆಂಡ್ ಒಂದು ಪಂದ್ಯ ಗೆದ್ದರೆ, ಪಾಕಿಸ್ತಾನ್ ಮತ್ತು ನ್ಯೂಝಿಲೆಂಡ್ ಎರಡೂ ತಲಾ 3 ಪಾಯಿಂಟ್ ಪಡೆಯುತ್ತವೆ. ಆಗ ಪಾಕಿಸ್ತಾನವು ಉತ್ತಮ ರನ್ ರೇಟ್ ಆಧಾರದ ಮೇಲೆ ಮಾತ್ರ ಸೆಮಿಫೈನಲ್ ಪ್ರವೇಶಿಸಬಹುದು.
  • ಪಂದ್ಯ ರದ್ದಾದರೆ: ಫೆಬ್ರವರಿ 28 ರಂದು ನಡೆಯಲಿರುವ ಶ್ರೀಲಂಕಾ ವಿರುದ್ಧದ ಕೊನೆಯ ಪಂದ್ಯದಲ್ಲಿ ಪಾಕಿಸ್ತಾನ್  ಗೆಲ್ಲಲೇಬೇಕು. ಒಂದು ವೇಳೆ ಈ ಪಂದ್ಯ ಸೋತರೆ ಅಥವಾ ಮಳೆಯಿಂದ ರದ್ದಾದರೆ ಪಾಕಿಸ್ತಾನ್ ಟೂರ್ನಿಯಿಂದ ಹೊರಬೀಳಲಿದೆ.

ಅಂದರೆ ಈಗಾಗಲೇ ಸೆಮಿಫೈನಲ್​ಗೆ ಪ್ರವೇಶಿಸಿರುವ ಇಂಗ್ಲೆಂಡ್ ತಂಡದ ಮುಂದಿನ ಗೆಲುವು ಪಾಕ್ ತಂಡದ ಮೇಲೆ ಯಾವುದೇ ಪ್ರಭಾವ ಬೀರುವುದಿಲ್ಲ. ಹೀಗಾಗಿ ನ್ಯೂಝಿಲೆಂಡ್ ವಿರುದ್ಧ ಇಂಗ್ಲೆಂಡ್ ತಂಡ ಗೆಲ್ಲುವುದನ್ನು ಪಾಕಿಸ್ತಾನ್ ಎದುರು ನೋಡಬೇಕು.

ಇದನ್ನೂ ಓದಿ: ವಿಶ್ವಕಪ್ ಇತಿಹಾಸದಲ್ಲೇ ಅತ್ಯಂತ ಹೀನಾಯ ದಾಖಲೆ ಬರೆದ ಬಾಬರ್ ಆಝಂ

ಇನ್ನು ನ್ಯೂಝಿಲೆಂಡ್ ವಿರುದ್ಧ ಶ್ರೀಲಂಕಾ ಗೆದ್ದರೆ ಪಾಕಿಸ್ತಾನ್ ತಂಡದ ಹಾದಿ ಸುಗಮವಾಗಲಿದೆ. ಏಕೆಂದರೆ ಈ ಗೆಲುವಿನೊಂದಿಗೆ ಲಂಕಾ ಪಡೆ ಪಡೆಯಲಿರುವುದು ಕೇವಲ 2 ಪಾಯಿಂಟ್ಸ್ ಮಾತ್ರ. ಅಲ್ಲದೆ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಪಾಕಿಸ್ತಾನ್ ತಂಡ ಗೆದ್ದರೆ ಒಟ್ಟು ಪಾಯಿಂಟ್ಸ್ 3 ಆಗಲಿದೆ. ಈ ಮೂಲಕ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನ ಅಲಂಕರಿಸಿ ಸೆಮಿಫೈನಲ್​ಗೆ ಅರ್ಹತೆ ಪಡೆಯಬಹುದು.

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!