AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ಹೀಗಾದಲ್ಲಿ ಟೀಮ್ ಇಂಡಿಯಾ ಸೆಮಿಫೈನಲ್​ಗೇರುವುದು ಖಚಿತ

India Women vs England Women: ಇಂದೋರ್‌ನ ಹೋಲ್ಕರ್ ಸ್ಟೇಡಿಯಂನಲ್ಲಿ ನಡೆದ ಮಹಿಳಾ ಏಕದಿನ ವಿಶ್ವಕಪ್‌ನ 20ನೇ ಪಂದ್ಯದಲ್ಲಿ ಭಾರತ ತಂಡ ಸೋಲನುಭವಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ 50 ಓವರ್‌ಗಳಲ್ಲಿ 288 ರನ್ ಕಲೆಹಾಕಿದರೆ, ಟೀಮ್ ಇಂಡಿಯಾ 50 ಓವರ್‌ಗಳಲ್ಲಿ 284 ರನ್ ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಟೀಮ್ ಇಂಡಿಯಾ ಕೇವಲ 4 ರನ್ ಗಳಿಂದ ಸೋಲೊಪ್ಪಿಕೊಂಡಿದೆ.

Team India: ಹೀಗಾದಲ್ಲಿ ಟೀಮ್ ಇಂಡಿಯಾ ಸೆಮಿಫೈನಲ್​ಗೇರುವುದು ಖಚಿತ
Team India
ಝಾಹಿರ್ ಯೂಸುಫ್
|

Updated on:Oct 20, 2025 | 7:31 AM

Share

ಈ ಬಾರಿಯ ಮಹಿಳಾ ಏಕದಿನ ವಿಶ್ವಕಪ್‌ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸುವ ಧ್ಯೇಯದೊಂದಿಗೆ ಕಣಕ್ಕಿಳಿದ ಟೀಮ್ ಇಂಡಿಯಾ ಇದೀಗ ಸತತ ಸೋಲುಗಳಿಂದ ಕಂಗೆಟ್ಟಿದೆ. ಮೊದಲ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು ಮಣಿಸಿ ಟೀಮ್ ಇಂಡಿಯಾ ಶುಭಾರಂಭ ಮಾಡಿತ್ತು. ಇದಾದ ಬಳಿಕ ಪಾಕಿಸ್ತಾನ್ ತಂಡವನ್ನು 88 ರನ್ ಗಳಿಂದ ಮಣಿಸಿದ್ದರು.

ಆದರೆ ಆನಂತರ ಸೌತ್ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ ವಿರುದ್ಧ 3 ವಿಕೆಟ್ ಗಳ ಸೋಲುಂಡಿದ್ದರು. ಇದೀಗ ಇಂಗ್ಲೆಂಡ್ ವಿರುದ್ಧದ ಪಂದ್ಯವನ್ನು ಕೇವಲ 4 ರನ್ ಗಳಿಂದ ಕೈಚೆಲ್ಲಿಕೊಂಡಿದೆ.

ಹೀಗೆ ಹ್ಯಾಟ್ರಿಕ್ ಸೋಲುಂಡರೂ ಟೀಮ್ ಇಂಡಿಯಾ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನವನ್ನು ಕಾಯ್ದುಕೊಂಡಿದೆ. ಹೀಗಾಗಿ ಸೆಮಿಫೈನಲ್ ಗೇರುವ ಅವಕಾಶ ಭಾರತ ತಂಡಕ್ಕೆ ಇನ್ನೂ ಇದೆ.

ಟೀಮ್ ಇಂಡಿಯಾ ಸೆಮಿಫೈನಲ್ ಸಮೀಕರಣ:

  • ಭಾರತ ತಂಡಕ್ಕೆ ಇನ್ನೂ ಎರಡು ಪಂದ್ಯಗಳಿವೆ. ಈ ಮ್ಯಾಚ್ ಗಳಲ್ಲಿ ಟೀಮ್ ಇಂಡಿಯಾ ಎದುರಾಳಿಗಳು ನ್ಯೂಝಿಲೆಂಡ್ ಮತ್ತು ಬಾಂಗ್ಲಾದೇಶ್.
  • ನ್ಯೂಝಿಲೆಂಡ್ ಮತ್ತು ಬಾಂಗ್ಲಾದೇಶ್ ವಿರುದ್ಧ ಗೆದ್ದರೆ 8 ಅಂಕಗಳೊಂದಿಗೆ ಟೀಮ್ ಇಂಡಿಯಾ ಸೆಮಿಫೈನಲ್ ಗೆ ಪ್ರವೇಶಿಸಲಿದೆ.
  • ನ್ಯೂಝಿಲೆಂಡ್ ವಿರುದ್ಧ ಸೋತರೆ, ಬಾಂಗ್ಲಾದೇಶ್ ವಿರುದ್ಧ ಭರ್ಜರಿ ಜಯ ಸಾಧಿಸುವ ಮೂಲಕ ಸೆಮಿಫೈನಲ್ ಗೆ ಎಂಟ್ರಿ ಕೊಡಬಹುದು. ಹೀಗಾಗಬೇಕಾದಲ್ಲಿ ನ್ಯೂಝಿಲೆಂಡ್ ತನ್ನ ಕೊನೆಯ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಸೋಲಬೇಕು.
  • ಒಂದು ವೇಳೆ ನ್ಯೂಝಿಲೆಂಡ್ ವಿರುದ್ಧ ಗೆದ್ದು ಬಾಂಗ್ಲಾದೇಶ್ ವಿರುದ್ಧ ಸೋತರೂ, ನ್ಯೂಝಿಲೆಂಡ್ ವಿರುದ್ಧ ಇಂಗ್ಲೆಂಡ್ ಗೆಲ್ಲುವುದನ್ನು ಎದುರು ನೋಡಬೇಕು. ಈ ಮೂಲಕ ನೆಟ್ ರನ್ ರೇಟ್ ನಲ್ಲಿ ನ್ಯೂಝಿಲೆಂಡ್ ಅನ್ನು ಹಿಂದಿಕ್ಕಿ ಭಾರತ ತಂಡ ಸೆಮಿಫೈನಲ್ ಗೇರಬಹುದು.

ಅಂದರೆ ಭಾರತ ತಂಡವು ನೇರವಾಗಿ ಸೆಮಿಫೈನಲ್ ಗೆ ಪ್ರವೇಶಿಸಕಿದ್ದರೆ ಮುಂದಿನ ಎರಡೂ ಮ್ಯಾಚ್ ಗಳಲ್ಲೂ ಗೆಲ್ಲಬೇಕು. ಅದರಲ್ಲೂ ಅಕ್ಟೋಬರ್ 23 ರಂದು ನಡೆಯಲಿರುವ ಪಂದ್ಯವು ನ್ಯೂಝಿಲೆಂಡ್ ಹಾಗೂ ಭಾರತದ ಪಾಲಿಗೆ ನಿರ್ಣಾಯಕ. ಹೀಗಾಗಿ ಸೆಮಿಫೈನಲ್ ಹಾದಿಯನ್ನು ಸುಗಮಗೊಳಿಸಬೇಕಿದ್ದರೆ ಟೀಮ್ ಇಂಡಿಯಾ ಗುರುವಾರ ಕಿವೀಸ್ ಪಡೆಯನ್ನು ಸೋಲಿಸಲೇಬೇಕು.

ಇದನ್ನೂ ಓದಿ: 2 ವರ್ಷಗಳ ಬಳಿಕ ಮತ್ತೆ 10 ಓವರ್​ಗಳಲ್ಲಿ ಮುಗ್ಗರಿಸಿದ ಟೀಮ್ ಇಂಡಿಯಾ

ಭಾರತ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಪ್ರತೀಕಾ ರಾವಲ್, ಹರ್ಲೀನ್ ಡಿಯೋಲ್, ದೀಪ್ತಿ ಶರ್ಮಾ, ಜೆಮಿಮಾ ರೊಡ್ರಿಗಸ್, ರೇಣುಕಾ ಸಿಂಗ್ ಠಾಕೂರ್, ಅರುಂಧತಿ ರೆಡ್ಡಿ, ರಿಚಾ ಘೋಷ್ (ವಿಕೆಟ್ ಕೀಪರ್), ಕ್ರಾಂತಿ ಗೌಡ್, ಅಮನ್​ಜೋತ್ ಕೌರ್, ರಾಧಾ ಯಾದವ್, ಶ್ರೀ ಚಾರಣಿ, ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ಸ್ನೇಹ್ ರಾಣಾ.

Published On - 7:31 am, Mon, 20 October 25