
ಈ ಬಾರಿಯ ಮಹಿಳಾ ಏಕದಿನ ವಿಶ್ವಕಪ್‌ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸುವ ಧ್ಯೇಯದೊಂದಿಗೆ ಕಣಕ್ಕಿಳಿದ ಟೀಮ್ ಇಂಡಿಯಾ ಇದೀಗ ಸತತ ಸೋಲುಗಳಿಂದ ಕಂಗೆಟ್ಟಿದೆ. ಮೊದಲ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು ಮಣಿಸಿ ಟೀಮ್ ಇಂಡಿಯಾ ಶುಭಾರಂಭ ಮಾಡಿತ್ತು. ಇದಾದ ಬಳಿಕ ಪಾಕಿಸ್ತಾನ್ ತಂಡವನ್ನು 88 ರನ್ ಗಳಿಂದ ಮಣಿಸಿದ್ದರು.
ಆದರೆ ಆನಂತರ ಸೌತ್ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ ವಿರುದ್ಧ 3 ವಿಕೆಟ್ ಗಳ ಸೋಲುಂಡಿದ್ದರು. ಇದೀಗ ಇಂಗ್ಲೆಂಡ್ ವಿರುದ್ಧದ ಪಂದ್ಯವನ್ನು ಕೇವಲ 4 ರನ್ ಗಳಿಂದ ಕೈಚೆಲ್ಲಿಕೊಂಡಿದೆ.
ಹೀಗೆ ಹ್ಯಾಟ್ರಿಕ್ ಸೋಲುಂಡರೂ ಟೀಮ್ ಇಂಡಿಯಾ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನವನ್ನು ಕಾಯ್ದುಕೊಂಡಿದೆ. ಹೀಗಾಗಿ ಸೆಮಿಫೈನಲ್ ಗೇರುವ ಅವಕಾಶ ಭಾರತ ತಂಡಕ್ಕೆ ಇನ್ನೂ ಇದೆ.
ಅಂದರೆ ಭಾರತ ತಂಡವು ನೇರವಾಗಿ ಸೆಮಿಫೈನಲ್ ಗೆ ಪ್ರವೇಶಿಸಕಿದ್ದರೆ ಮುಂದಿನ ಎರಡೂ ಮ್ಯಾಚ್ ಗಳಲ್ಲೂ ಗೆಲ್ಲಬೇಕು. ಅದರಲ್ಲೂ ಅಕ್ಟೋಬರ್ 23 ರಂದು ನಡೆಯಲಿರುವ ಪಂದ್ಯವು ನ್ಯೂಝಿಲೆಂಡ್ ಹಾಗೂ ಭಾರತದ ಪಾಲಿಗೆ ನಿರ್ಣಾಯಕ. ಹೀಗಾಗಿ ಸೆಮಿಫೈನಲ್ ಹಾದಿಯನ್ನು ಸುಗಮಗೊಳಿಸಬೇಕಿದ್ದರೆ ಟೀಮ್ ಇಂಡಿಯಾ ಗುರುವಾರ ಕಿವೀಸ್ ಪಡೆಯನ್ನು ಸೋಲಿಸಲೇಬೇಕು.
ಇದನ್ನೂ ಓದಿ: 2 ವರ್ಷಗಳ ಬಳಿಕ ಮತ್ತೆ 10 ಓವರ್‌ಗಳಲ್ಲಿ ಮುಗ್ಗರಿಸಿದ ಟೀಮ್ ಇಂಡಿಯಾ
ಭಾರತ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಪ್ರತೀಕಾ ರಾವಲ್, ಹರ್ಲೀನ್ ಡಿಯೋಲ್, ದೀಪ್ತಿ ಶರ್ಮಾ, ಜೆಮಿಮಾ ರೊಡ್ರಿಗಸ್, ರೇಣುಕಾ ಸಿಂಗ್ ಠಾಕೂರ್, ಅರುಂಧತಿ ರೆಡ್ಡಿ, ರಿಚಾ ಘೋಷ್ (ವಿಕೆಟ್ ಕೀಪರ್), ಕ್ರಾಂತಿ ಗೌಡ್, ಅಮನ್ಜೋತ್ ಕೌರ್, ರಾಧಾ ಯಾದವ್, ಶ್ರೀ ಚಾರಣಿ, ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ಸ್ನೇಹ್ ರಾಣಾ.
Published On - 7:31 am, Mon, 20 October 25