AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಗ್ಲೆಂಡ್ ತಂಡಕ್ಕೆ ಸೆಮಿಫೈನಲ್​ಗೇರಲು ಇನ್ನೂ ಇದೆ ಅವಕಾಶ..!

England: ಇಂಗ್ಲೆಂಡ್ ಉಳಿದಿರುವುದು ಕೇವಲ 3 ಮ್ಯಾಚ್​ಗಳು ಮಾತ್ರ. ಇಲ್ಲಿ ಆಂಗ್ಲರ ಎದುರಾಳಿ ಆಸ್ಟ್ರೇಲಿಯಾ, ನೆದರ್​ಲೆಂಡ್ಸ್ ಹಾಗೂ ಪಾಕಿಸ್ತಾನ್. ಈ ಪಂದ್ಯಗಳಲ್ಲಿ ಇಂಗ್ಲೆಂಡ್ ಗೆದ್ದರೆ ಸೆಮಿಫೈನಲ್​ಗೇರುತ್ತಾ ಎಂದು ಕೇಳಿದ್ರೆ, ಅವಕಾಶವಂತು ಇದೆ ಎನ್ನಬಹುದು.

ಇಂಗ್ಲೆಂಡ್ ತಂಡಕ್ಕೆ ಸೆಮಿಫೈನಲ್​ಗೇರಲು ಇನ್ನೂ ಇದೆ ಅವಕಾಶ..!
England
Follow us
TV9 Web
| Updated By: ಝಾಹಿರ್ ಯೂಸುಫ್

Updated on: Oct 30, 2023 | 7:00 PM

ಏಕದಿನ ವಿಶ್ವಕಪ್ 2023 ರಲ್ಲಿ ಬಲಿಷ್ಠ ಪಡೆಯೊಂದಿಗೆ ಕಣಕ್ಕಿಳಿದಿದ್ದ ಹಾಲಿ ಚಾಂಪಿಯನ್ ಇಂಗ್ಲೆಂಡ್​ ಸತತ ಸೋಲುಗಳಿಂದ ಕಂಗೆಟ್ಟಿದೆ. ಆಡಿರುವ 6 ಪಂದ್ಯಗಳಲ್ಲಿ 5 ಮ್ಯಾಚ್​ಗಳಲ್ಲಿ ಸೋಲುವ ಮೂಲಕ ಪ್ರಸ್ತುತ ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ನ್ಯೂಝಿಲೆಂಡ್ ವಿರುದ್ಧದ ಸೋಲಿನೊಂದಿಗೆ ವಿಶ್ವಕಪ್ ಅಭಿಯಾನ ಆರಂಭಿಸಿದ್ದ ಇಂಗ್ಲೆಂಡ್​ ಗೆದ್ದಿರುವುದು ಬಾಂಗ್ಲಾದೇಶ್ ವಿರುದ್ಧ ಮಾತ್ರ. ಇನ್ನುಳಿದಂತೆ ಅಫ್ಘಾನಿಸ್ತಾನ್, ಸೌತ್ ಆಫ್ರಿಕಾ, ಶ್ರೀಲಂಕಾ ಮತ್ತು ಭಾರತದ ವಿರುದ್ಧ ಸೋಲನುಭವಿಸಿದೆ.

ಇನ್ನು ಇಂಗ್ಲೆಂಡ್ ಉಳಿದಿರುವುದು ಕೇವಲ 3 ಮ್ಯಾಚ್​ಗಳು ಮಾತ್ರ. ಇಲ್ಲಿ ಆಂಗ್ಲರ ಎದುರಾಳಿ ಆಸ್ಟ್ರೇಲಿಯಾ, ನೆದರ್​ಲೆಂಡ್ಸ್ ಹಾಗೂ ಪಾಕಿಸ್ತಾನ್. ಈ ಪಂದ್ಯಗಳಲ್ಲಿ ಇಂಗ್ಲೆಂಡ್ ಗೆದ್ದರೆ ಸೆಮಿಫೈನಲ್​ಗೇರುತ್ತಾ ಎಂದು ಕೇಳಿದ್ರೆ, ಅವಕಾಶವಂತು ಇದೆ ಎನ್ನಬಹುದು.

ಏಕೆಂದರೆ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಟೀಮ್ ಇಂಡಿಯಾ 12 ಅಂಕಗಳೊಂದಿಗೆ ಸೆಮಿಫೈನಲ್ ಹಾದಿಯನ್ನು ಸುಗಮಗೊಳಿಸಿದೆ. ಇನ್ನು ಸೌತ್ ಆಫ್ರಿಕಾ 10 ಅಂಕಗಳೊಂದಿಗೆ 2ನೇ ಸ್ಥಾನದಲ್ಲಿದೆ. ಇಲ್ಲಿ ಮೂರನೇ ಹಾಗೂ ನಾಲ್ಕನೇ ಸ್ಥಾನಗಳಲ್ಲಿರುವ ನ್ಯೂಝಿಲೆಂಡ್ ಮತ್ತು ಆಸ್ಟ್ರೇಲಿಯಾ ತಂಡಗಳು 8 ಅಂಕಗಳನ್ನು ಹೊಂದಿದೆ.

ಒಂದು ವೇಳೆ ಇಂಗ್ಲೆಂಡ್ ತಂಡವು ಮುಂದಿನ ಎಲ್ಲಾ ಮ್ಯಾಚ್​ಗಳನ್ನು ಗೆದ್ದರೆ 8 ಅಂಕಗಳನ್ನು ಪಡೆಯಲಿದೆ. ಇತ್ತ ಅಂಕ ಪಟ್ಟಿಯಲ್ಲಿ 3ನೇ ಮತ್ತು 4ನೇ ಸ್ಥಾನದಲ್ಲಿಗಳಲ್ಲಿ ನ್ಯೂಝಿಲೆಂಡ್ ಹಾಗೂ ಆಸ್ಟ್ರೇಲಿಯಾ ತಂಡವು ಮುಂದಿನ ಎಲ್ಲಾ ಪಂದ್ಯಗಳಲ್ಲಿ ಸೋತರೆ ಇಂಗ್ಲೆಂಡ್ ತಂಡ ನೆಟ್​ ರನ್​ ರೇಟ್ ಮೂಲಕ ನಾಲ್ಕನೇ ಸ್ಥಾನಕ್ಕೇರಬಹುದು.

ಹೀಗೆ ಆಗಬೇಕಿದ್ದರೆ ಇಂಗ್ಲೆಂಡ್ ತಂಡವು ಇತರೆ ತಂಡಗಳ ಫಲಿತಾಂಶವನ್ನು ಕೂಡ ಅವಲಂಭಿಸಬೇಕಾಗುತ್ತದೆ. ಅಂದರೆ ಮುಂದಿನ ಪಂದ್ಯಗಳಲ್ಲಿ ಆಸ್ಟ್ರೇಲಿಯಾ ಮತ್ತು ನ್ಯೂಝಿಲೆಂಡ್​ ತಂಡಗಳು ಸೋಲಬೇಕು. ಪಾಕಿಸ್ತಾನ್ 2 ಮ್ಯಾಚ್​ಗಳಲ್ಲಿ ಪರಾಜಯಗೊಳ್ಳಬೇಕು. ಹಾಗೆಯೇ ಅಫ್ಘಾನಿಸ್ತಾನ್, ನೆದರ್​ಲೆಂಡ್ಸ್​ ಅಥವಾ ಶ್ರೀಲಂಕಾ ತಂಡಗಳು 8 ಕ್ಕಿಂತ ಹೆಚ್ಚಿನ ಅಂಕಗಳನ್ನು ಸಂಪಾದಿಸಬಾರದು.

ಹೀಗಾದಲ್ಲಿ ನೆಟ್​ ರನ್ ರೇಟ್​ ಸಹಾಯದಿಂದ ಇಂಗ್ಲೆಂಡ್ ತಂಡವು ಟಾಪ್-4 ನಲ್ಲಿ ಸ್ಥಾನ ಪಡೆದು, ಸೆಮಿಫೈನಲ್​ಗೇರಬಹುದು. ಆದರೆ ಹೀಗಾಗಬೇಕಿದ್ದರೆ ಆಟದೊಂದಿಗೆ ಅದೃಷ್ಟ ಕೂಡ ಕೈ ಹಿಡಿಯಬೇಕಾಗುತ್ತದೆ. ಪ್ರಸ್ತುತ ಇಂಗ್ಲೆಂಡ್ ತಂಡದ ಪ್ರದರ್ಶನ ಗಮನಿಸಿದರೆ, ಬಟ್ಲರ್ ಪಡೆ ಸೆಮಿಫೈನಲ್​ಗೆ ಪ್ರವೇಶಿಸುವುದು ಅನುಮಾನ ಎಂದೇ ಹೇಳಬಹುದು.

ಇದನ್ನೂ ಓದಿ: Kuldeep Yadav 2.0: ಚೈನಾಮನ್ ಸ್ಪಿನ್ನರ್​ನ ಕಮಾಲ್ ಹಿಂದಿದೆ ಕನ್ನಡಿಗನ ಕರಾಮತ್ತು..!

ಇಂಗ್ಲೆಂಡ್ ತಂಡ: ಜೋಸ್ ಬಟ್ಲರ್ (ನಾಯಕ), ಮೊಯೀನ್ ಅಲಿ, ಗಸ್ ಅಟ್ಕಿನ್ಸನ್, ಜಾನಿ ಬೈರ್‌ಸ್ಟೋವ್, ಸ್ಯಾಮ್ ಕರನ್, ಲಿಯಾಮ್ ಲಿವಿಂಗ್‌ಸ್ಟೋನ್, ಡೇವಿಡ್ ಮಲಾನ್, ಆದಿಲ್ ರಶೀದ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್, ರೀಸ್ ಟೋಪ್ಲಿ, ಡೇವಿಡ್ ವಿಲ್ಲಿ, ಮಾರ್ಕ್ ವುಡ್ ಮತ್ತು ಕ್ರಿಸ್ ವೋಕ್ಸ್.

ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ರೆಹಮಾನ್ ಕೊಲೆಗೆ ಪೊಲೀಸ್ ಕಮೀಶನರ್ ಹೊಣೆ: ಯುವ ಮುಖಂಡರು
ರೆಹಮಾನ್ ಕೊಲೆಗೆ ಪೊಲೀಸ್ ಕಮೀಶನರ್ ಹೊಣೆ: ಯುವ ಮುಖಂಡರು
ಕಮಲ್ ಹಾಸನ್ ನಟನೆಯ ಥಗ್ ಲೈಫ್ ಬ್ಯಾನ್ ಮಾಡೋದು ಚರ್ಚೆಯ ವಿಷಯ: ಸುಮಲತಾ
ಕಮಲ್ ಹಾಸನ್ ನಟನೆಯ ಥಗ್ ಲೈಫ್ ಬ್ಯಾನ್ ಮಾಡೋದು ಚರ್ಚೆಯ ವಿಷಯ: ಸುಮಲತಾ
ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ