ಸೋತ ಟೀಮ್ ಇಂಡಿಯಾಗೆ ಮುಂದಿನ ಪಂದ್ಯಗಳು ನಿರ್ಣಾಯಕ

Women's T20 World Cup 2024: ಭಾರತ ತಂಡವು ತನ್ನ ಎರಡನೇ ಪಂದ್ಯದಲ್ಲಿ ಪಾಕಿಸ್ತಾನ್ ತಂಡವನ್ನು ಎದುರಿಸಲಿದೆ. ಟಿ20 ವಿಶ್ವಕಪ್​ನ ಈ ಹೈವೋಲ್ಟೇಜ್ ಪಂದ್ಯಕ್ಕೆ ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಆತಿಥ್ಯವಹಿಸಲಿದ್ದು, ಈ ಮ್ಯಾಚ್ ಭಾನುವಾರ ಸಂಜೆ (ಅಕ್ಟೋಬರ್ 6) 3.30 ರಿಂದ ಶುರುವಾಗಲಿದೆ.

ಸೋತ ಟೀಮ್ ಇಂಡಿಯಾಗೆ ಮುಂದಿನ ಪಂದ್ಯಗಳು ನಿರ್ಣಾಯಕ
Team India
Follow us
|

Updated on: Oct 05, 2024 | 3:04 PM

ಮಹಿಳಾ ಟಿ20 ವಿಶ್ವಕಪ್​ನ ಮೊದಲ ಪಂದ್ಯದಲ್ಲೇ ಭಾರತ ತಂಡ ಹೀನಾಯ ಸೋಲನುಭವಿಸಿದೆ. ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ 58 ರನ್​ಗಳಿಂದ ಪರಾಜಯಗೊಂಡಿದೆ. ಈ ಸೋಲಿನ ಬೆನ್ನಲ್ಲೇ ಭಾರತ ತಂಡದ ಸೆಮಿಫೈನಲ್ ಲೆಕ್ಕಾಚಾರಗಳು ಸಹ ಶುರುವಾಗಿದೆ.

ಏಕೆಂದರೆ ಈ ಬಾರಿಯ ಟಿ20 ವಿಶ್ವಕಪ್​ನ ಮೊದಲ ಸುತ್ತಿನ ಪಂದ್ಯಗಳು ಗ್ರೂಪ್​ ಹಂತಗಳಲ್ಲಿ ನಡೆಯುತ್ತಿದೆ. ಇಲ್ಲಿ 10 ತಂಡಗಳನ್ನು 2 ಗ್ರೂಪ್​ಗಳಲ್ಲಿ ವಿಂಗಡಿಸಲಾಗಿದೆ. ಅಲ್ಲದೆ ಮೊದಲ ಸುತ್ತಿನ ಪಂದ್ಯಗಳ ಮುಕ್ತಾಯದ ವೇಳೆಗೆ ಆಯಾ ಗ್ರೂಪ್​ನ ಅಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳನ್ನು ಅಲಂಕರಿಸುವ ತಂಡಗಳು ಸೆಮಿಫೈನಲ್​ಗೆ ಅರ್ಹತೆ ಪಡೆಯಲಿದೆ.

ಅದರಂತೆ ಇದೀಗ ಮೊದಲ ಸುತ್ತಿನ ಪ್ರಥಮ ಪಂದ್ಯದಲ್ಲೇ ಟೀಮ್ ಇಂಡಿಯಾ ಸೋಲನುಭವಿಸಿದೆ. ಇನ್ನುಳಿದಿರುವುದು ಮೂರು ಪಂದ್ಯಗಳು ಮಾತ್ರ. ಈ ಮೂರು ಮ್ಯಾಚ್​ಗಳಲ್ಲಿ ಜಯ ಸಾಧಿಸಿದರೆ ಮಾತ್ರ ಟೀಮ್ ಇಂಡಿಯಾ ನೇರವಾಗಿ ಸೆಮಿಫೈನಲ್​ಗೆ ಅರ್ಹತೆ ಪಡೆಯಬಹುದು.

ಒಂದು ವೇಳೆ ಈ ಮೂರು ಮ್ಯಾಚ್​ಗಳಲ್ಲಿ ಒಂದರಲ್ಲಿ ಸೋಲನುಭವಿಸಿದರೂ, ಉಳಿದ ತಂಡಗಳ ಪಂದ್ಯಗಳ ಫಲಿತಾಂಶವನ್ನು ಅವಲಂಭಿಸಬೇಕಾಗುತ್ತದೆ. ಹೀಗಾಗಿ ಟೀಮ್ ಇಂಡಿಯಾ ಪಾಲಿಗೆ ಮುಂಬರುವ ಪಂದ್ಯಗಳು ತುಂಬಾ ಮಹತ್ವದು.

ಭಾರತ ತಂಡದ ಮುಂದಿನ ಪಂದ್ಯಗಳು:

ಟೀಮ್ ಇಂಡಿಯಾ ಅಕ್ಟೋಬರ್ 6 ರಂದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ್ ತಂಡವನ್ನು ಎದುರಿಸಲಿದೆ. ಇನ್ನು ಅಕ್ಟೋಬರ್ 9 ರಂದು ನಡೆಯಲಿರುವ ಮೂರನೇ ಪಂದ್ಯದಲ್ಲಿ ಏಷ್ಯನ್ ಚಾಂಪಿಯನ್​ ಶ್ರೀಲಂಕಾ ವಿರುದ್ಧ ಆಡಲಿದೆ. ಹಾಗೆಯೇ ಕೊನೆಯ ಲೀಗ್ ಪಂದ್ಯದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿದೆ.

ಈ ಮೂರು ಮ್ಯಾಚ್​ಗಳಲ್ಲಿ ಭಾರತ ತಂಡವು ಹ್ಯಾಟ್ರಿಕ್ ಗೆಲುವು ಸಾಧಿಸಿದರೆ, 6 ಅಂಕಗಳೊಂದಿಗೆ ಸೆಮಿಫೈನಲ್​ಗೆ ಪ್ರವೇಶಿಸಬಹುದು. ಒಂದು ವೇಳೆ ಇದರಲ್ಲಿ ಒಂದು ಮ್ಯಾಚ್​​ನಲ್ಲಿ ಸೋತರೂ ಶ್ರೀಲಂಕಾ, ಆಸ್ಟ್ರೇಲಿಯಾ, ನ್ಯೂಝಿಲೆಂಡ್ ಹಾಗೂ ಪಾಕಿಸ್ತಾನ್ ತಂಡಗಳ ಫಲಿತಾಂಶದ ಆಧಾರದ ಮೇಲೆ ಸೆಮಿಫೈನಲ್​ ಅರ್ಹತೆಯನ್ನು ಎದುರು ನೋಡಬೇಕಾಗುತ್ತದೆ. ಹೀಗಾಗಿ ಟೀಮ್ ಇಂಡಿಯಾ ಪಾಲಿಗೆ ಮುಂದಿನ ಮೂರು ಪಂದ್ಯಗಳು ಮಾಡು ಇಲ್ಲವೇ ಮಡಿ ಪಂದ್ಯ ಎನ್ನಬಹುದು.

ಇದನ್ನೂ ಓದಿ: ಟೀಮ್ ಇಂಡಿಯಾ ಪರ ಕಣಕ್ಕಿಳಿದರೆ ಅನ್​ಕ್ಯಾಪ್ಡ್ ಪಟ್ಟಿಯಿಂದ ಮೂವರು ಹೊರಕ್ಕೆ..!

ಭಾರತ ಟಿ20 ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ, ಶಫಾಲಿ ವರ್ಮಾ, ದೀಪ್ತಿ ಶರ್ಮಾ, ಜೆಮಿಮಾ ರೊಡ್ರಿಗಸ್, ರಿಚಾ ಘೋಷ್, ಯಾಸ್ತಿಕಾ ಭಾಟಿಯಾ, ಪೂಜಾ ವಸ್ತ್ರಾಕರ್, ಅರುಂಧತಿ ರೆಡ್ಡಿ, ರೇಣುಕಾ ಸಿಂಗ್ ಠಾಕೂರ್, ದಯಾಲನ್ ಹೇಮಲತಾ, ಆಶಾ ಶೋಭಾನಾ, ರಾಧಾ ಯದ್, ಶ್ರೇಯಾಂಕಾ ಪಾಟೀಲ್, ಸಜನಾ ಸಜೀವನ್.