125 ಕೋಟಿ ರೂ. ಬಹುಮಾನ ಮೊತ್ತದಲ್ಲಿ ಯಾರಿಗೆ ಎಷ್ಟು ಕೋಟಿ? ಇಲ್ಲಿದೆ ಸಂಪೂರ್ಣ ಮಾಹಿತಿ

Team India: ಬಾರ್ಬಡೋಸ್​ನಲ್ಲಿ ನಡೆದ ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ರೋಚಕ ಜಯ ಸಾಧಿಸಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡವು 20 ಓವರ್​ಗಳಲ್ಲಿ 176 ರನ್ ಕಲೆಹಾಕಿದರೆ, ಈ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡವು 20 ಓವರ್​ಗಳಲ್ಲಿ 169 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಟೀಮ್ ಇಂಡಿಯಾ 7 ರನ್​ಗಳ ಜಯ ಸಾಧಿಸಿತ್ತು. ಈ ಗೆಲುವಿನ ಬೆನ್ನಲ್ಲೇ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಭಾರತ ತಂಡಕ್ಕೆ 125 ಕೋಟಿ ರೂ. ಬಹುಮಾನ ಮೊತ್ತ ಘೋಷಿಸಿದ್ದರು.

125 ಕೋಟಿ ರೂ. ಬಹುಮಾನ ಮೊತ್ತದಲ್ಲಿ ಯಾರಿಗೆ ಎಷ್ಟು ಕೋಟಿ? ಇಲ್ಲಿದೆ ಸಂಪೂರ್ಣ ಮಾಹಿತಿ
Team India
Follow us
|

Updated on: Jul 08, 2024 | 12:03 PM

ಟೀಮ್ ಇಂಡಿಯಾ ಟಿ20 ವಿಶ್ವಕಪ್ ಗೆದ್ದ ಬೆನ್ನಲ್ಲೇ ಬಿಸಿಸಿಐ 125 ಕೋಟಿ ರೂ. ಬಹುಮಾನ ಮೊತ್ತ ಘೋಷಿಸಿತ್ತು. ಈ ಬಹುಮಾನ ಮೊತ್ತವನ್ನು ಭಾರತ ತಂಡಕ್ಕೆ ಪ್ರದಾನ ಮಾಡಲಾಗಿದೆ. ವಾಂಖೆಡೆಯಲ್ಲಿ ನಡೆದ ಟೀಮ್ ಇಂಡಿಯಾದ ವಿಶ್ವಕಪ್ ವಿಜಯೋತ್ಸವದ ವೇಳೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ 125 ಕೋಟಿ ರೂ.ಗಳ ಚೆಕ್ ಅನ್ನು ಭಾರತ ತಂಡಕ್ಕೆ ಹಸ್ತಾಂತರಿಸಿದರು. ಈ 125 ಕೋಟಿ ರೂ.ನಲ್ಲಿ ಯಾರಿಗೆ ಎಷ್ಟು ಮೊತ್ತ ಸಿಗಲಿದೆ ಎಂಬ ಪ್ರಶ್ನೆ ಮೂಡುವುದು ಸಹಜ. ಪ್ರಶ್ನೆಗೆ ಉತ್ತರ ಇಲ್ಲಿದೆ.

ಬಿಸಿಸಿಐ ಮೂಲಗಳ ಮಾಹಿತಿ ಪ್ರಕಾರ, 125 ಕೋಟಿ ರೂ. ಅನ್ನು ಟೀಮ್ ಇಂಡಿಯಾ ಆಟಗಾರರು ಮತ್ತು ಸಿಬ್ಬಂದಿಗಳು ಹಂಚಿಕೊಳ್ಳಲಿದ್ದಾರೆ. ಇಲ್ಲಿ ಟಿ20 ವಿಶ್ವಕಪ್​ ತಂಡದಲ್ಲಿ ಕಾಣಿಸಿಕೊಂಡ ಆಟಗಾರರಿಗೆ ಹೆಚ್ಚಿನ ಪಾಲು ದೊರಕಿದರೆ, ಉಳಿದವರಿಗೂ ಕೋಟಿ ರೂ. ಮೊತ್ತ ಪಡೆಯಲಿದ್ದಾರೆ. ಹಾಗಿದ್ರೆ ಯಾರಿಗೆ ಎಷ್ಟು ಮೊತ್ತ ಸಿಗಲಿದೆ ಎಂದು ತಿಳಿಯೋಣ..

  • ಟೀಮ್ ಇಂಡಿಯಾದಲ್ಲಿ ಕಾಣಿಸಿಕೊಂಡ 15 ಆಟಗಾರರಿಗೆ ತಲಾ 5 ಕೋಟಿ ರೂ. ಸಿಗಲಿದೆ.
  • ಟೀಮ್ ಇಂಡಿಯಾದ ಮೀಸಲು ಆಟಗಾರರಾಗಿದ್ದ ರಿಂಕು ಸಿಂಗ್, ಶುಭಮನ್ ಗಿಲ್, ಅವೇಶ್ ಖಾನ್ ಮತ್ತು ಖಲೀಲ್ ಅಹ್ಮದ್ ತಲಾ 1 ಕೋಟಿ ರೂ.
  • ಭಾರತ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್​ಗೆ 5 ಕೋಟಿ ರೂ.
  • ಟೀಮ್ ಇಂಡಿಯಾದ ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋರ್, ಬೌಲಿಂಗ್ ಕೋಚ್ ಪರಾಸ್ ಮಾಂಬ್ರೆ ಮತ್ತು ಫೀಲ್ಡಿಂಗ್ ಕೋಚ್ ಟಿ. ದಿಲೀಪ್ ಅವರಿಗೆ ತಲಾ 2.5 ಕೋಟಿ ರೂ.
  • ಟೀಮ್ ಇಂಡಿಯಾ ಫಿಸಿಯೋಥೆರಪಿಸ್ಟ್‌ಗಳಾದ ಕಮಲೇಶ್ ಜೈನ್, ಯೋಗೇಶ್ ಪರ್ಮಾರ್ ಮತ್ತು ತುಳಸಿ ರಾಮ್ ಯುವರಾಜ್​ಗೆ ತಲಾ 2 ಕೋಟಿ ರೂ.
  • ಭಾರತ ತಂಡ ಥ್ರೋಡೌನ್ ಸ್ಪೆಷಲಿಸ್ಟ್​ಗಳಾದ ರಾಘವಿಂದ್ರ ದಿವಿಗಿ, ನುವಾನ್ ಉದೆನೆಕೆ ಮತ್ತು ದಯಾನಂದ್ ಗರಾನಿಗೆ ತಲಾ 2 ಕೋಟಿ ರೂ.
  • ಟೀಮ್ ಇಂಡಿಯಾ ಮಸಾಜ್ ಥೆರಪಿಸ್ಟ್‌ಗಳಾದ ರಾಜೀವ್ ಕುಮಾರ್ ಮತ್ತು ಅರುಣ್ ಕಾನಡೆಗೆ ತಲಾ 2 ಕೋಟಿ ರೂ.
  • ಭಾರತ ತಂಡದ ಸ್ಟ್ರೆಂಗ್ತ್ ಅ್ಯಂಡ್ ಕಂಡೀಷನಿಂಗ್ ಕೋಚ್ ಸೋಹಮ್ ದೇಸಾಯಿಗೆ 2 ಕೋಟಿ ರೂ.
  • ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ಸೇರಿದಂತೆ ಆಯ್ಕೆ ಸಮಿತಿಯ ಸದಸ್ಯರಿಗೆ ತಲಾ 1 ಕೋಟಿ ರೂ.

ಇದನ್ನೂ ಓದಿ: Team India: ಕೊನೆಯ 10 ಓವರ್​ಗಳಲ್ಲಿ ವಿಶ್ವ ದಾಖಲೆ ನಿರ್ಮಿಸಿದ ಟೀಮ್ ಇಂಡಿಯಾ

ಭಾರತ ಟಿ20 ವಿಶ್ವಕಪ್ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್-ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್-ಕೀಪರ್), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್ , ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಲ್, ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.