ಟೀಮ್ ಇಂಡಿಯಾ ಟಿ20 ವಿಶ್ವಕಪ್ ಗೆದ್ದ ಬೆನ್ನಲ್ಲೇ ಬಿಸಿಸಿಐ 125 ಕೋಟಿ ರೂ. ಬಹುಮಾನ ಮೊತ್ತ ಘೋಷಿಸಿತ್ತು. ಈ ಬಹುಮಾನ ಮೊತ್ತವನ್ನು ಭಾರತ ತಂಡಕ್ಕೆ ಪ್ರದಾನ ಮಾಡಲಾಗಿದೆ. ವಾಂಖೆಡೆಯಲ್ಲಿ ನಡೆದ ಟೀಮ್ ಇಂಡಿಯಾದ ವಿಶ್ವಕಪ್ ವಿಜಯೋತ್ಸವದ ವೇಳೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ 125 ಕೋಟಿ ರೂ.ಗಳ ಚೆಕ್ ಅನ್ನು ಭಾರತ ತಂಡಕ್ಕೆ ಹಸ್ತಾಂತರಿಸಿದರು. ಈ 125 ಕೋಟಿ ರೂ.ನಲ್ಲಿ ಯಾರಿಗೆ ಎಷ್ಟು ಮೊತ್ತ ಸಿಗಲಿದೆ ಎಂಬ ಪ್ರಶ್ನೆ ಮೂಡುವುದು ಸಹಜ. ಪ್ರಶ್ನೆಗೆ ಉತ್ತರ ಇಲ್ಲಿದೆ.
ಬಿಸಿಸಿಐ ಮೂಲಗಳ ಮಾಹಿತಿ ಪ್ರಕಾರ, 125 ಕೋಟಿ ರೂ. ಅನ್ನು ಟೀಮ್ ಇಂಡಿಯಾ ಆಟಗಾರರು ಮತ್ತು ಸಿಬ್ಬಂದಿಗಳು ಹಂಚಿಕೊಳ್ಳಲಿದ್ದಾರೆ. ಇಲ್ಲಿ ಟಿ20 ವಿಶ್ವಕಪ್ ತಂಡದಲ್ಲಿ ಕಾಣಿಸಿಕೊಂಡ ಆಟಗಾರರಿಗೆ ಹೆಚ್ಚಿನ ಪಾಲು ದೊರಕಿದರೆ, ಉಳಿದವರಿಗೂ ಕೋಟಿ ರೂ. ಮೊತ್ತ ಪಡೆಯಲಿದ್ದಾರೆ. ಹಾಗಿದ್ರೆ ಯಾರಿಗೆ ಎಷ್ಟು ಮೊತ್ತ ಸಿಗಲಿದೆ ಎಂದು ತಿಳಿಯೋಣ..
ಇದನ್ನೂ ಓದಿ: Team India: ಕೊನೆಯ 10 ಓವರ್ಗಳಲ್ಲಿ ವಿಶ್ವ ದಾಖಲೆ ನಿರ್ಮಿಸಿದ ಟೀಮ್ ಇಂಡಿಯಾ
ಭಾರತ ಟಿ20 ವಿಶ್ವಕಪ್ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್-ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್-ಕೀಪರ್), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್ , ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಲ್, ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.