
ಏಷ್ಯಾಕಪ್ನ ಸೂಪರ್-4 ಹಂತದ ಮೊದಲ ಪಂದ್ಯದಲ್ಲೇ ಸೋತಿರುವ ಪಾಕಿಸ್ತಾನ್ (Pakistan) ತಂಡ ಇದೀಗ ಫೈನಲ್ ಹಾದಿಯ ಲೆಕ್ಕಾಚಾರದಲ್ಲಿದೆ. ಈ ಹಾದಿಯನ್ನು ಸುಗಮಗೊಳಿಸಲು ಇಂದು ನಡೆಯಲಿರುವ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಜಯ ಸಾಧಿಸಲೇಬೇಕು. ಈ ಗೆಲುವಿನ ಬಳಿಕ ಬಾಂಗ್ಲಾದೇಶ್ ವಿರುದ್ಧ ಕೂಡ ಪಾಕ್ ತಂಡ ಗೆದ್ದರೆ ಫೈನಲ್ಗೇರುವುದು ಖಚಿತ.
ಏಕೆಂದರೆ ಟೀಮ್ ಇಂಡಿಯಾದ ಮುಂದಿನ ಎದುರಾಳಿಗಳು ಬಾಂಗ್ಲಾದೇಶ್ ಮತ್ತು ಶ್ರೀಲಂಕಾ. ಬಾಂಗ್ಲಾದೇಶ್ ತಂಡವು ಭಾರತ ಹಾಗೂ ಪಾಕಿಸ್ತಾನ್ ವಿರುದ್ಧ ಸೋತರೆ 2 ಅಂಕಗಳೊಂದಿಗೆ ಅಂಕ ಪಟ್ಟಿಯಲ್ಲಿ 3ನೇ ಸ್ಥಾನದಲ್ಲೇ ಉಳಿಯಲಿದೆ.
ಇನ್ನು ಶ್ರೀಲಂಕಾ ವಿರುದ್ಧ ಪಾಕಿಸ್ತಾನ್ ಹಾಗೂ ಭಾರತ ತಂಡ ಗೆದ್ದರೆ ಯಾವುದೇ ಅಂಕವಿಲ್ಲದೆ ಲಂಕಾ ಪಡೆ ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನ ಅಲಂಕರಿಸಲಿದೆ.
ಇತ್ತ ಪಾಕಿಸ್ತಾನ್ ತಂಡವು ಬಾಂಗ್ಲಾದೇಶ್ ಹಾಗೂ ಶ್ರೀಲಂಕಾ ವಿರುದ್ಧ ಜಯ ಸಾಧಿಸುವುದರೊಂದಿಗೆ ಒಟ್ಟು 4 ಅಂಕಗಳನ್ನು ಪಡೆಯಲಿದೆ. ಈ ಮೂಲಕ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನವನ್ನು ಅಲಂಕರಿಸಿ ಫೈನಲ್ಗೆ ಪ್ರವೇಶಿಸಬಹುದು.
ಟೀಮ್ ಇಂಡಿಯಾ ಮುಂದಿನ ಎರಡು ಪಂದ್ಯಗಳಲ್ಲಿ ಜಯ ಸಾಧಿಸಿದರೆ ಒಟ್ಟು 6 ಅಂಕಗಳನ್ನು ಪಡೆಯಲಿದೆ. ಈ ಮೂಲಕ ಪಾಯಿಂಟ್ಸ್ ಟೇಬಲ್ನಲ್ಲಿ ಅಗ್ರಸ್ಥಾನ ಅಲಂಕರಿಸಿ ಫೈನಲ್ಗೇರುವುದು ಬಹುತೇಕ ಖಚಿತ.
ಇತ್ತ ಪಾಕಿಸ್ತಾನ್ ತಂಡವು ಶ್ರೀಲಂಕಾ ಮತ್ತು ಬಾಂಗ್ಲಾದೇಶ್ ವಿರುದ್ಧ ಗೆದ್ದು 4 ಅಂಕಗಳನ್ನು ಪಡೆದರೆ ಪಾಯಿಂಟ್ಸ್ ಟೇಬಲ್ನಲ್ಲಿ ದ್ವಿತೀಯ ಸ್ಥಾನ ಪಡೆಯಲಿದೆ. ಈ ಮೂಲಕ ಫೈನಲ್ಗೆ ಅರ್ಹತೆ ಪಡೆಯಬಹುದು.
ಅಂದರೆ ಪ್ರಸ್ತುತ ಏಷ್ಯಾಕಪ್ ಟೂರ್ನಿಯು ರೌಂಡ್ ರಾಬಿನ್ ಫಾರ್ಮ್ಯಾಟ್ನಲ್ಲಿ ನಡೆಯುತ್ತಿದೆ. ಹೀಗಾಗಿ ಯಾವುದೇ ಸೆಮಿಫೈನಲ್ ಪಂದ್ಯ ಇರುವುದಿಲ್ಲ. ಬದಲಾಗಿ ಸೂಪರ್-4 ಹಂತದ ಅಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳನ್ನು ಅಲಂಕರಿಸುವ ತಂಡಗಳು ಫೈನಲ್ ಆಡಲಿದೆ.
ಒಂದು ವೇಳೆ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಸೂಪರ್-4 ಹಂತದ ಅಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳನ್ನು ಅಲಂಕರಿಸಿದರೆ ಫೈನಲ್ ಮ್ಯಾಚ್ನಲ್ಲಿ ಮುಖಾಮುಖಿಯಾಗಲಿದೆ. ಹೀಗಾಗಿ ಸಾಂಪ್ರದಾಯಿಕ ಎದುರಾಳಿಗಳ ನಡುವಣ ಮೂರನೇ ಪಂದ್ಯವನ್ನು ಈ ಬಾರಿಯ ಏಷ್ಯಾಕಪ್ನಲ್ಲಿ ನಿರೀಕ್ಷಿಸಬಹುದು.
ಏಷ್ಯಾಕಪ್ ಟೂರ್ನಿಯ ಫೈನಲ್ ಮ್ಯಾಚ್ ಸೆಪ್ಟೆಂಬರ್ 28 ರಂದು ನಡೆಯಲಿದೆ. ದುಬೈ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದೊಂದಿಗೆ ಏಷ್ಯಾಕಪ್ ಟೂರ್ನಿಗೆ ತೆರೆ ಬೀಳಲಿದೆ.
ಇದನ್ನೂ ಓದಿ: ಟೀಮ್ ಇಂಡಿಯಾಗೆ ಬಿಗ್ ಶಾಕ್: ಟೆಸ್ಟ್ ಸರಣಿಯಿಂದ ಪ್ರಮುಖ ಆಟಗಾರ ಔಟ್
| ತಂಡ | ಪಂದ್ಯಗಳು | ಗೆಲುವು | ಸೋಲು | ಅಂಕಗಳು | ನೆಟ್ ರನ್ ರೇಟ್ |
| ಭಾರತ | 1 | 1 | 0 | 2 | 0.689 |
| ಬಾಂಗ್ಲಾದೇಶ್ | 1 | 1 | 0 | 2 | 0.121 |
| ಶ್ರೀಲಂಕಾ | 1 | 0 | 1 | 0 | -0.121 |
| ಪಾಕಿಸ್ತಾನ್ | 1 | 0 | 1 | 0 | -0.689 |
Published On - 8:55 am, Tue, 23 September 25