IPL 2022: RCBಗೆ ಕೊನೆಯ ಪಂದ್ಯ, ಮೂರು ಎದುರಾಳಿಗಳು..!

| Updated By: ಝಾಹಿರ್ ಯೂಸುಫ್

Updated on: May 14, 2022 | 5:29 PM

IPL 2022 RCB Playoffs: ಆರ್​ಸಿಬಿ ತಂಡವು ಮುಂದಿನ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ದ ಗೆದ್ದರೆ 16 ಪಾಯಿಂಟ್ಸ್ ಆಗಲಿದೆ. ಅಂದರೆ ಆರ್​ಸಿಬಿ ತಂಡವು ಪಾಯಿಂಟ್ಸ್​ ಟೇಬಲ್​ನಲ್ಲಿ 16 ಪಾಯಿಂಟ್ಸ್​ ಪಡೆದರೂ ಪ್ಲೇಆಫ್​ ಕನ್​ಫರ್ಮ್ ಆಗುವುದಿಲ್ಲ.

IPL 2022: RCBಗೆ ಕೊನೆಯ ಪಂದ್ಯ, ಮೂರು ಎದುರಾಳಿಗಳು..!
IPL 2022 RCB
Follow us on

IPL 2022: ಐಪಿಎಲ್​ ಸೀಸನ್​ 15 ರ ಮೊದಲಾರ್ಧದಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದ ಆರ್​ಸಿಬಿ (RCB) ತಂಡವು 7 ಪಂದ್ಯಗಳಲ್ಲಿ 5 ಗೆಲುವು ದಾಖಲಿಸಿತ್ತು. ಆದರೆ ದ್ವಿತಿಯಾರ್ಧದಲ್ಲಿ ಆರ್​ಸಿಬಿ ತಂಡದ ಲೆಕ್ಕಚಾರಗಳು ತಲೆಕೆಳಗಾಗಿದೆ. ಏಕೆಂದರೆ ದ್ವಿತಿಯಾರ್ಧದಲ್ಲಿ ಆರ್​ಸಿಬಿ ಆಡಿದ 6 ಪಂದ್ಯಗಳಲ್ಲಿ ಗೆದ್ದಿರುವುದು ಕೇವಲ 2 ಮ್ಯಾಚ್ ಮಾತ್ರ. ಅಂದರೆ 13 ಪಂದ್ಯಗಳಲ್ಲಿ 7 ಜಯ ಸಾಧಿಸಿ ಇದೀಗ ಪಾಯಿಂಟ್ಸ್ ಟೇಬಲ್​ನಲ್ಲಿ 4ನೇ ಸ್ಥಾನದಲ್ಲಿದೆ. ಇದಾಗ್ಯೂ ಆರ್​ಸಿಬಿ ತಂಡದ ಪ್ಲೇಆಫ್ ಪ್ರವೇಶ ಇನ್ನೂ ಕೂಡ ಖಚಿತವಾಗಿಲ್ಲ. ಏಕೆಂದರೆ ಆರ್​ಸಿಬಿ ವಿರುದ್ದದ ಪಂದ್ಯದಲ್ಲಿ ಗೆಲ್ಲುವ ಮೂಲಕ ಪಂಜಾಬ್ ಕಿಂಗ್ಸ್ ತಂಡವು ಪ್ಲೇಆಫ್ ರೇಸ್​ನಲ್ಲಿ ಉಳಿದುಕೊಂಡಿದೆ. ಅತ್ತ ಆರ್​ಸಿಬಿ ತಂಡಕ್ಕೆ ಉಳಿದಿರುವುದು ಕೇವಲ 1 ಪಂದ್ಯ ಮಾತ್ರ. ಆದರೆ ಪಂಜಾಬ್ ಕಿಂಗ್ಸ್​ಗೆ ಇನ್ನೂ 2 ಪಂದ್ಯವಿದೆ. ಈ ಎರಡು ಪಂದ್ಯದಲ್ಲಿ ಗೆದ್ದರೆ ಪಂಜಾಬ್ ಕಿಂಗ್ಸ್ ತಂಡದ ಪಾಯಿಂಟ್ಸ್ 16 ಆಗಲಿದೆ.

ಇತ್ತ ಆರ್​ಸಿಬಿ ತಂಡವು ಮುಂದಿನ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ದ ಗೆದ್ದರೆ 16 ಪಾಯಿಂಟ್ಸ್ ಆಗಲಿದೆ. ಅಂದರೆ ಆರ್​ಸಿಬಿ ತಂಡವು ಪಾಯಿಂಟ್ಸ್​ ಟೇಬಲ್​ನಲ್ಲಿ 16 ಪಾಯಿಂಟ್ಸ್​ ಪಡೆದರೂ ಪ್ಲೇಆಫ್​ ಕನ್​ಫರ್ಮ್ ಆಗುವುದಿಲ್ಲ. ಏಕೆಂದರೆ ಡೆಲ್ಲಿ ಕ್ಯಾಪಿಟಲ್ಸ್, ಸನ್​ರೈಸರ್ಸ್​ ಹೈದರಾಬಾದ್ ಹಾಗೂ ಪಂಜಾಬ್ ಕಿಂಗ್ಸ್​ ತಂಡಗಳಿಗೂ 16 ಪಾಯಿಂಟ್ಸ್​ಗಳಿಸುವ ಅವಕಾಶವಿದೆ. ಹೀಗಾಗಿ ಈ ಮೂರು ತಂಡಗಳು ಹೆಚ್ಚಿನ್ ರನ್​ ರೇಟ್​ನೊಂದಿಗೆ ಮುಂದಿನ ಪಂದ್ಯಗಳನ್ನು ಗೆದ್ದುಕೊಂಡರೆ ನಾಲ್ಕನೇ ಸ್ಥಾನಕ್ಕೇರಬಹುದು. ಇದರೊಂದಿಗೆ ಆರ್​ಸಿಬಿ ತಂಡವು ಪ್ಲೇಆಫ್​ನಿಂದ ಹೊರಬೀಳಲಿದೆ.

ಆರ್​ಸಿಬಿ ತಂಡವು ತನ್ನ ಕೊನೆಯ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ದ ಆಡಲಿದ್ದು, ಈ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿ ನೆಟ್​ ರನ್​ ರೇಟ್​ ಹೆಚ್ಚಿಸಿಕೊಳ್ಳಬೇಕಿದೆ. ಅಷ್ಟೇ ಅಲ್ಲದೆ ಪಂಜಾಬ್ ಕಿಂಗ್ಸ್, ಎಸ್​ಆರ್​ಹೆಚ್​ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಂದಿನ ಪಂದ್ಯದಲ್ಲಿ ಸೋಲುವುದನ್ನು ಎದುರು ನೋಡಬೇಕಿದೆ. ಈ ಮೂರು ತಂಡಗಳು ಮುಂದಿನ ಪಂದ್ಯದಲ್ಲಿ ಸೋತರೆ ಆರ್​ಸಿಬಿ ಪ್ಲೇಆಫ್ ಆಡುವುದನ್ನು ಬಹುತೇಕ ಖಚಿತಪಡಿಸಿಕೊಳ್ಳಬಹುದು. ಹೀಗಾಗಿಯೇ ಆರ್​ಸಿಬಿಗೆ ಕೊನೆಯ ಪಂದ್ಯದ ವೇಳೆಗೆ, ಪಾಯಿಂಟ್ಸ್​ ಟೇಬಲ್​ನಲ್ಲಿ ಮೂರು ಎದುರಾಳಿಗಳು ಹುಟ್ಟಿಕೊಂಡಿದೆ.

ಇದನ್ನೂ ಓದಿ
Virat Kohli: ಕಳಪೆ ಫಾರ್ಮ್​ ನಡುವೆಯೂ 2 ದಾಖಲೆ ಬರೆದ ಕಿಂಗ್ ಕೊಹ್ಲಿ
IPL 2022: RCB ತಂಡದ ಸೋಲಿಗೆ ಇವರಿಬ್ಬರೇ ಕಾರಣ..!
IPL 2022: ಸೋಲುತ್ತೆ ನಿಜ, ಆದರೆ ಇದು?, LSG ಆಟಗಾರರ ವಿರುದ್ದ ಗಂಭೀರ್ ಗರಂ
IPL 2022: ಅಂದು ಲಯನ್ಸ್, ಇಂದು ಟೈಟನ್ಸ್: ಗುಜರಾತ್ ತಂಡದ ಫ್ಯಾನ್ಸ್​ಗೆ ಹೊಸ ಚಿಂತೆ ಶುರು..!

ಅಂದರೆ ಆರ್​ಸಿಬಿ ಪ್ಲೇಆಫ್​ ನಿರ್ಧಾರವಾಗುವುದು ಗುಜರಾತ್ ಟೈಟನ್ಸ್ ವಿರುದ್ದದ ಗೆಲುವಿನೊಂದಿಗೆ ಜೊತೆಗೆ ಇತ್ತ ಮೂರು ತಂಡಗಳ ಸೋಲಿನೊಂದಿಗೆ ಎಂಬುದು ವಿಶೇಷ. ಒಂದು ವೇಳೆ ಎಸ್​ಆರ್​ಹೆಚ್​, ಪಂಜಾಬ್ ಕಿಂಗ್ಸ್ ಅಥವಾ ಡೆಲ್ಲಿ ಕ್ಯಾಪಿಟಲ್ಸ್​ ತಂಡಗಳಲ್ಲಿ ಒಂದು ತಂಡವು 16 ಪಾಯಿಂಟ್ಸ್​ ಕಲೆಹಾಕಿದರೆ ಆರ್​ಸಿಬಿ ತಂಡದ ಸ್ಥಾನಕ್ಕೆ ಕುತ್ತು ಬರಲಿದೆ. ಏಕೆಂದರೆ ಆರ್​ಸಿಬಿ ತಂಡದ ನೆಟ್​ ರನ್​ ರೇಟ್ ಮೈನಸ್​ (-0.323) ಇದ್ದು ಉಳಿದ ತಂಡಗಳ ನೆಟ್ ರನ್​ ರೇಟ್​ ಪ್ಲಸ್​ನಲ್ಲಿದೆ.

ಅತ್ತ ಪಾಯಿಂಟ್ಸ್ ಟೇಬಲ್​ನಲ್ಲಿ 3ನೇ ಸ್ಥಾನದಲ್ಲಿರುವ ರಾಜಸ್ಥಾನ್ ರಾಯಲ್ಸ್ ಕೂಡ 14 ಪಾಯಿಂಟ್ಸ್ ಹೊಂದಿದ್ದರೂ, ಆರ್​ಆರ್​ ತಂಡಕ್ಕೆ ಇನ್ನೆರಡು ಪಂದ್ಯಗಳಿವೆ. ಹೀಗಾಗಿ ಇದರಲ್ಲಿ ಒಂದರಲ್ಲಿ ಗೆದ್ದರೂ ನೆಟ್​ ರನ್​ ರೇಟ್ ಮೂಲಕ ಪ್ಲೇಆಫ್​ಗೇರುವ ಅವಕಾಶವನ್ನು ಹೊಂದಿದೆ. ಆದರೆ ಇತ್ತ ಉತ್ತಮ ನೆಟ್​ ರನ್​ ರೇಟ್​ನೊಂದಿಗೆ ಪಂಜಾಬ್ ಕಿಂಗ್ಸ್​, ಕೆಕೆಆರ್ ಅಥವಾ ಡೆಲ್ಲಿ ಕ್ಯಾಪಿಟಲ್ಸ್​ ಮುಂದಿನ ಪಂದ್ಯಗಳನ್ನು ಗೆದ್ದು 16 ಪಾಯಿಂಟ್ಸ್​ ಗಳಿಸಿದರೆ ಆರ್​ಸಿಬಿ ಪ್ಲೇಆಫ್​ನಿಂದ ಹೊರಬೀಳಲಿದೆ. ಹೀಗಾಗಿ ಪಂಜಾಬ್ ಕಿಂಗ್ಸ್​ ವಿರುದ್ದದ ನಿರ್ಣಾಯಕ ಪಂದ್ಯದಲ್ಲಿ ಸೋಲುವ ಮೂಲಕ ಇದೀಗ ಆರ್​ಸಿಬಿ ತಂಡವು ಸಂಕಷ್ಟಕ್ಕೆ ಸಿಲುಕಿದೆ.

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.