GT vs RR: 47 ಎಸೆತಗಳಲ್ಲಿ 5ನೇ ಐಪಿಎಲ್ ಶತಕ ಬಾರಿಸಿದ ಶುಭ್​ಮನ್ ಗಿಲ್

Shubman Gill's 47-ball Century: ರಾಜಸ್ಥಾನ್ ರಾಯಲ್ಸ್ ವಿರುದ್ಧದ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಶುಭ್​ಮನ್ ಗಿಲ್ ಕೇವಲ 47 ಎಸೆತಗಳಲ್ಲಿ ಭರ್ಜರಿ ಶತಕ ಬಾರಿಸಿ ಗುಜರಾತ್ ಟೈಟಾನ್ಸ್ ತಂಡವನ್ನು ಗೆಲುವಿನ ಸನಿಹಕ್ಕೆ ತಂದರು. 215 ರನ್‌ಗಳ ಗುರಿ ಬೆನ್ನಟ್ಟಿದ ಗಿಲ್, ಸಾಯಿ ಸುದರ್ಶನ್ ಜೊತೆ 150 ರನ್‌ಗಳ ದಾಖಲೆಯ ಜೊತೆಯಾಟವಾಡಿ ಐಪಿಎಲ್‌ನಲ್ಲಿ ಅತಿ ಹೆಚ್ಚು ಶತಕದ ಜೊತೆಯಾಟದ ಹೊಸ ದಾಖಲೆಯನ್ನು ಬರೆದರು. ಈ ನಾಯಕನ ಇನ್ನಿಂಗ್ಸ್ GTಗೆ ಅತಿ ಮುಖ್ಯವಾಗಿತ್ತು.

GT vs RR: 47 ಎಸೆತಗಳಲ್ಲಿ 5ನೇ ಐಪಿಎಲ್ ಶತಕ ಬಾರಿಸಿದ ಶುಭ್​ಮನ್ ಗಿಲ್
Shubman Gill

Updated on: May 29, 2026 | 11:22 PM

ರಾಜಸ್ಥಾನ್ ರಾಯಲ್ಸ್ (RR) ವಿರುದ್ಧದ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ನಾಯಕನ ಇನ್ನಿಂಗ್ಸ್ ಆಡಿದ ಗುಜರಾತ್ ಟೈಟಾನ್ಸ್ (GT) ತಂಡದ ನಾಯಕ ಶುಭ್​ಮನ್ ಗಿಲ್ (Shubman Gill) ಕೇವಲ 47 ಎಸೆತಗಳಲ್ಲಿ ಶತಕ ಬಾರಿಸುವ ಮೂಲಕ ತಂಡವನ್ನು ಗೆಲುವಿನ ಸನಿಹಕ್ಕೆ ತಂದಿದ್ದಾರೆ. ಗೆಲುವಿಗೆ ರಾಜಸ್ಥಾನ್ ನೀಡಿದ 215 ರನ್​ಗಳ ಗುರಿ ಬೆನ್ನಟ್ಟಿದ ಗುಜರಾತ್ ಪರ ಅಬ್ಬರದ ಇನ್ನಿಂಗ್ಸ್ ಆಡಿದ ಶುಭ್​ಮನ್ 15 ಬೌಂಡರಿ ಹಾಗೂ 3 ಬೌಂಡರಿ ಸಹಿತ ತಮ್ಮ ಐದನೇ ಐಪಿಎಲ್ ಶತಕವನ್ನು ಪೂರೈಸಿದರು. ಮಾತ್ರವಲ್ಲದೆ ಸಾಯಿ ಸುದರ್ಶನ್ ಅವರೊಂದಿಗೆ 150 ರನ್​ಗಳ ಜೊತೆಯಾಟವನ್ನು ಕಟ್ಟಿದರು. ಇದು ಈ ಜೋಡಿಯ 11ನೇ ಶತಕದ ಜೊತೆಯಾಟವಾಗಿದ್ದು, ಐಪಿಎಲ್‌ನಲ್ಲಿ ಅತಿ ಹೆಚ್ಚು ಶತಕದ ಜೊತೆಯಾಟ ನಡೆಸಿದ ದಾಖಲೆಯನ್ನು ಈ ಜೋಡಿ ಬರೆಯಿತು.

53 ಎಸೆತಗಳಲ್ಲಿ 104 ರನ್

ರಾಜಸ್ಥಾನ ರಾಯಲ್ಸ್ ವಿರುದ್ಧದ ಎರಡನೇ ಕ್ವಾಲಿಫೈಯರ್‌ನಲ್ಲಿ ಸ್ಮರಣೀಯ ಇನ್ನಿಂಗ್ಸ್ ಆಡಿದ ಗಿಲ್ ಕೇವಲ 47 ಎಸೆತಗಳಲ್ಲಿ ಶತಕ ಬಾರಿಸಿದರು. ಈ ಮೂಲಕ ಗುಜರಾತ್ ಟೈಟಾನ್ಸ್ ಪರ ಅತಿ ವೇಗದ ಶತಕ ಬಾರಿಸಿದ ದಾಖಲೆಯನ್ನು ನಿರ್ಮಿಸಿದರು. 53 ಎಸೆತಗಳಲ್ಲಿ 104 ರನ್ ಬಾರಿಸಿ ಔಟಾದ ಗಿಲ್, ಸಾಯಿ ಸುದರ್ಶನ್ ಅವರೊಂದಿಗೆ 167 ರನ್‌ಗಳ ಪಾಲುದಾರಿಕೆಯನ್ನು ಹಂಚಿಕೊಂಡರು, ಇದು ಪ್ಲೇಆಫ್‌ನಲ್ಲಿ ಯಾವುದೇ ವಿಕೆಟ್‌ಗೆ ಅತ್ಯಧಿಕ ಜೊತೆಯಾಟವಾಗಿದೆ.

ಗುಜರಾತ್ ಪರ ಅತಿ ವೇಗದ ಶತಕ

ಇದರ ಜೊತೆಗೆ ಶುಭಮನ್ ಗಿಲ್ 47 ಎಸೆತಗಳಲ್ಲಿ ಶತಕ ಗಳಿಸುವ ಮೂಲಕ ಆರ್​ಸಿಬಿ ನಾಯಕ ರಜತ್ ಪಾಟಿದಾರ್ ಅವರ ದಾಖಲೆಯನ್ನು ಮುರಿದು ಐಪಿಎಲ್ ಪ್ಲೇಆಫ್‌ನಲ್ಲಿ ಅತಿ ವೇಗದ ಶತಕ ಬಾರಿಸಿದ ದಾಖಲೆ ನಿರ್ಮಿಸಿದರು. ವಾಸ್ತವವಾಗಿ ರಜತ್ ಪಾಟಿದರ್ 49 ಎಸೆತಗಳಲ್ಲಿ ಶತಕ ಬಾರಿಸಿ ಈ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದರು. ಇದೀಗ ಆ ದಾಖಲೆ ಗಿಲ್ ಪಾಲಾಗಿದೆ. ಹಾಗೆಯೇ ನಾಯಕನಾಗಿ ಶುಭಮನ್ ಗಿಲ್ ಎರಡನೇ ಶತಕ ಬಾರಿಸುವದರೊಂದಿಗೆ ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ನಂತರ ಈ ಸಾಧನೆ ಮಾಡಿದ ಮೂರನೇ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

IPL 2026 GT vs RR Qualifier-2 Live Score: ಶತಕ ಬಾರಿಸಿ ಗಿಲ್ ಔಟ್

ದಾಖಲೆಯ ಜೊತೆಯಾಟ

ಶುಭಮನ್ ಗಿಲ್ ಕೇವಲ ಶತಕ ಗಳಿಸಿದ್ದಲ್ಲದೆ, ಸಾಯಿ ಸುದರ್ಶನ್ ಜೊತೆ ದಾಖಲೆಯ ಜೊತೆಯಾಟವನ್ನು ಹಂಚಿಕೊಂಡರು. ಒಟ್ಟಾಗಿ, ಈ ಜೋಡಿ 167 ರನ್‌ ಕಲೆಹಾಕಿತು. ಇದು ಐಪಿಎಲ್ ಪ್ಲೇಆಫ್‌ನಲ್ಲಿ ಯಾವುದೇ ವಿಕೆಟ್‌ಗೆ ಅತ್ಯಧಿಕ ಪಾಲುದಾರಿಕೆಯಾಗಿದೆ. ಈ ಪಾಲುದಾರಿಕೆಯು ಗುಜರಾತ್ ಟೈಟಾನ್ಸ್‌ಗೆ ಫೈನಲ್‌ನಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸಿತು. ಈ ಆವೃತ್ತಿಯಲ್ಲಿ ಅಮೋಘ ಫಾರ್ಮ್​ನಲ್ಲಿರುವ ಶುಭಮನ್ ಗಿಲ್ 700 ಕ್ಕೂ ಹೆಚ್ಚು ರನ್ ಕಲೆಹಾಕಿದ್ದಾರೆ. ಆಡಿರುವ 15 ಪಂದ್ಯಗಳಲ್ಲಿ 48.13 ಸರಾಸರಿಯಲ್ಲಿ 722 ರನ್ ಗಳಿಸಿರುವ ಗಿಲ್ 33 ಸಿಕ್ಸರ್‌ಗಳು ಮತ್ತು 72 ಬೌಂಡರಿಗಳನ್ನು ಬಾರಿಸಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:14 pm, Fri, 29 May 26

pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us