Rohit Sharma: ಟೀಮ್ ಇಂಡಿಯಾಗೆ ಚಿಂತೆ ಶುರು: ಮತ್ತೆ ಗಾಯಗೊಂಡ ರೋಹಿತ್ ಶರ್ಮಾ..!

India vs West Indies: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ನಡೆಯುತ್ತಿರುವ ಐದು ಪಂದ್ಯಗಳ ಟಿ20 ಸರಣಿಯ ನಾಲ್ಕನೇ ಮತ್ತು ಐದನೇ ಪಂದ್ಯಗಳು ಕ್ರಮವಾಗಿ ಆಗಸ್ಟ್ 6 ಮತ್ತು 7 ರಂದು ಫ್ಲೋರಿಡಾದ ಸೆಂಟ್ರಲ್ ಬ್ರೋವರ್ಡ್ ರೀಜನಲ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯಲಿವೆ.

Rohit Sharma: ಟೀಮ್ ಇಂಡಿಯಾಗೆ ಚಿಂತೆ ಶುರು: ಮತ್ತೆ ಗಾಯಗೊಂಡ ರೋಹಿತ್ ಶರ್ಮಾ..!
Rohit Sharma
Follow us
TV9 Web
| Updated By: ಝಾಹಿರ್ ಯೂಸುಫ್

Updated on: Aug 03, 2022 | 11:06 AM

ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಮತ್ತೆ ಗಾಯಗೊಂಡಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ದ ನಡೆದ ಮೂರನೇ ಟಿ20 ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದಿದ್ದ ಹಿಟ್​ಮ್ಯಾನ್ ಬೆನ್ನು ನೋವಿನ ಕಾರಣ ಅರ್ಧದಲ್ಲೇ ಮೈದಾನವನ್ನು ತೊರೆದಿದ್ದರು. ಇದೀಗ ರೋಹಿತ್ ಶರ್ಮಾ ಅವರ ಗಾಯದ ಸಮಸ್ಯೆಯು ಟೀಮ್ ಇಂಡಿಯಾದ ಚಿಂತೆಯನ್ನು ಹೆಚ್ಚಿಸಿದೆ. ಏಕೆಂದರೆ ಇದೇ ತಿಂಗಳು ಭಾರತ ತಂಡವು ಏಷ್ಯಾಕಪ್ ಆಡಬೇಕಿದ್ದು, ಅದಕ್ಕೂ ಮುನ್ನವೇ ಭಾರತ ತಂಡದ ನಾಯಕ ಇಂಜುರಿಗೆ ತುತ್ತಾಗಿರುವುದು ಹೊಸ ಚಿಂತೆಯನ್ನುಂಟು ಮಾಡಿದೆ.

ಅಂದರೆ ಹಿಟ್​ಮ್ಯಾನ್ ಕಳೆದ ಕೆಲ ಸರಣಿಗಳನ್ನು ಗಾಯದ ಕಾರಣ ತಪ್ಪಿಸಿಕೊಂಡಿದ್ದರು. ಹೀಗಾಗಿ ಅವರಿಗೆ ಹೆಚ್ಚಿನ ವಿಶ್ರಾಂತಿ ನೀಡಲಾಗಿತ್ತು. ಮುಂಬರುವ ಟಿ20 ವಿಶ್ವಕಪ್​ ಅನ್ನು ಗಣನೆಗೆ ತೆಗೆದುಕೊಂಡು ಬಿಸಿಸಿಐ ಗಾಯಗೊಂಡಂತಹ ಆಟಗಾರರಿಗೆ ಹೆಚ್ಚಿನ ವಿಶ್ರಾಂತಿ ನೀಡುತ್ತಿದೆ. ಆದರೆ ಇದೀಗ ಪ್ರಮುಖ ಸರಣಿ ಆರಂಭಕ್ಕೆ ದಿನಗಳು ಮಾತ್ರ ಉಳಿದಿರುವಾಗ ಮತ್ತೆ ಟೀಮ್ ಇಂಡಿಯಾ ನಾಯಕ ಸ್ನಾಯು ಸೆಳೆತಕ್ಕೆ ಒಳಗಾಗಿರುವುದು ಬಿಸಿಸಿಐನ ಚಿಂತೆಯನ್ನು ಮತ್ತಷ್ಟು ಹೆಚ್ಚಿಸಿದೆ.

ಇದಕ್ಕೂ ಮುನ್ನ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದ ರೋಹಿತ್ ಶರ್ಮಾ ಅಲ್ಜಾರಿ ಜೋಸೆಫ್ ಎಸೆತದಲ್ಲಿ ಭರ್ಜರಿ ಸಿಕ್ಸರ್ ಬಾರಿಸಿದರು. ಇದಾದ ಬಳಿಕ ಅದೇ ಓವರ್‌ನಲ್ಲಿ ಫೋರ್‌ ಸಿಡಿಸಿದರು. ಮೈದಾನದಲ್ಲಿ ಎರಡು ದೊಡ್ಡ ಹೊಡೆತಗಳನ್ನು ಬಾರಿಸಿದ ನಂತರ, ಅವರು ಮುಂದಿನ ಎಸೆತದಲ್ಲಿ ಸಿಂಗಲ್ ತೆಗೆದುಕೊಂಡರು. ಆದರೆ ಈ ಮಧ್ಯೆ, ಇದ್ದಕ್ಕಿದ್ದಂತೆ ಅವರಿಗೆ ಬೆನ್ನು ನೋವು ಕಾಣಿಸಿಕೊಂಡಿದೆ.

ಇದನ್ನೂ ಓದಿ
Image
Team India: 7 ತಿಂಗಳಲ್ಲಿ 7 ನಾಯಕರು: ವಿಶೇಷ ದಾಖಲೆ ಬರೆದ ಟೀಮ್ ಇಂಡಿಯಾ
Image
ಸಚಿನ್, ಧೋನಿಗೂ ಸಿಕ್ಕಿಲ್ಲ ಈ ಗೌರವ: ಇಂಗ್ಲೆಂಡ್ ಕ್ರಿಕೆಟ್ ಸ್ಟೇಡಿಯಂಗೆ ಭಾರತೀಯ ಕ್ರಿಕೆಟಿಗನ ಹೆಸರು..!
Image
Cheteshwar Pujara: ಒಟ್ಟು 997 ರನ್​: ಕೌಂಟಿ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದ ಪೂಜಾರ
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ತಕ್ಷಣವೇ ಮೈದಾನಕ್ಕೆ ಬಂದ ಫಿಸಿಯೋ ಚಿಕಿತ್ಸೆ ನೀಡಿದರೂ ನೋವು ಕಡಿಮೆಯಾಗಿರಲಿಲ್ಲ. ಅಲ್ಲದೆ ನೋವು ಹೆಚ್ಚಾದ ಕಾರಣ ಅರ್ಧದಲ್ಲೇ ಮೈದಾನ ತೊರೆದರು. ಸದ್ಯಕ್ಕೆ ಅವರ ಗಾಯದ ಸಮಸ್ಯೆಯ ಗಂಭೀರತೆಯ ಬಗ್ಗೆ ಸ್ಪಷ್ಟ ಮಾಹಿತಿ ಹೊರಬಿದ್ದಿಲ್ಲ. ಇದಾಗ್ಯೂ ಅವರು ಅರ್ಧದಲ್ಲೇ ಮೈದಾನ ತೊರೆದಿರುವುದರಿಂದ ಮುಂದಿನ ಪಂದ್ಯಗಳಲ್ಲಿ ಆಡುವುದು ಅನುಮಾನ ಎನ್ನಲಾಗುತ್ತಿದೆ.

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ನಡೆಯುತ್ತಿರುವ ಐದು ಪಂದ್ಯಗಳ ಟಿ20 ಸರಣಿಯ ನಾಲ್ಕನೇ ಮತ್ತು ಐದನೇ ಪಂದ್ಯಗಳು ಕ್ರಮವಾಗಿ ಆಗಸ್ಟ್ 6 ಮತ್ತು 7 ರಂದು ಫ್ಲೋರಿಡಾದ ಸೆಂಟ್ರಲ್ ಬ್ರೋವರ್ಡ್ ರೀಜನಲ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯಲಿವೆ. ಈ ವೇಳೆಗೆ ಹಿಟ್​ಮ್ಯಾನ್ ಚೇತರಿಸಿಕೊಳ್ಳಲಿದ್ದಾರಾ ಅಥವಾ ವೈದ್ಯರು ಅವರಿಗೆ ಹೆಚ್ಚಿನ ವಿಶ್ರಾಂತಿ ಸೂಚಿಸಲಿದ್ದಾರಾ ಕಾದು ನೋಡಬೇಕಿದೆ.

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ