ಹೈದರಾಬಾದ್ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಇಂದು ಭಾರತ ಹಾಗೂ ಆಸ್ಟ್ರೇಲಿಯಾ (India vs Australia) ನಡುವೆ ಅಂತಿಮ ತೃತೀಯ ಟಿ20 ಪಂದ್ಯ (T20 Match) ನಡೆಯಲಿದೆ. ನಾಗ್ಪುರದಲ್ಲಿ ಶುಕ್ರವಾರ ನಡೆದ ಎಂಟು ಓವರ್‌ಗಳ ಪಂದ್ಯದಲ್ಲಿ 6 ವಿಕೆಟ್‌ಗಳಿಂದ ಗೆಲ್ಲುವ ಮೂಲಕ ಭಾರತ ಸರಣಿಯನ್ನು ಸಮಬಲಕ್ಕೆ ತರುವಲ್ಲಿ ಯಶಸ್ವಿಯಾಗಿದೆ. ಮೊದಲ ಪಂದ್ಯವನ್ನು ಆಸ್ಟ್ರೇಲಿಯ 4 ವಿಕೆಟ್‌ಗಳಿಂದ ಜಯಿಸಿತ್ತು. ಹೀಗಾಗಿ ಇಂದಿನ ಕೊನೆಯ ಟಿ20 ಮೇಲೆ ಎಲ್ಲರ ಕಣ್ಣಿದೆ. ಉಭಯ ತಂಡಗಳ ಬೌಲಿಂಗ್ ವಿಭಾಗ ದುಬಾರಿ ಆಗಿದ್ದು ಇಂದು ಯಾವ ಪ್ಲಾನ್ನೊಂದಿಗೆ ಕಣಕ್ಕಿಳಿಯುತ್ತಾರೆ ಎಂಬುದು ನೋಡಬೇಕಿದೆ. ಹಾಗಾದರೆ ಹೈದರಾಬಾದ್ (Hyderabad) ಕ್ರೀಡಾಂಗಣದ ಪಿಚ್ ಯಾರಿಗೆ ನೆರವಾಗಲಿದೆ?, ಪಂದ್ಯಕ್ಕೆ ಮಳೆಯ ಕಾಟ ಇದೆಯೇ? ಎಂಬುದನ್ನು ನೋಡೋಣ.
ಹೈದರಾಬಾದ್ನ ರಾಜೀವ್‌ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣ ಬ್ಯಾಟಿಂಗ್ಗೆ ಹೇಳಿ ಮಾಡಿಸಿದ ಪಿಚ್ ಆಗಿದೆ. ಹೀಗಾಗಿ ಟಿ20 ಕ್ರಿಕೆಟ್ನಲ್ಲಿ ಇಲ್ಲಿ ದೊಡ್ಡ ಮೊತ್ತದ ಸ್ಕೋರ್ ಆಗುವುದು ಖಚಿತ. ಇಂದು ರನ್ಗಳ ಮಳೆ ಸುರಿಯುವ ಸಾಧ್ಯತೆ ಇದೆ. ಮೊದಲ ಇನ್ನಿಂಗ್ಸ್‌ನ ಸರಾಸರಿ ಸ್ಕೋರ್ 190 ರನ್ ಆಗಿದ್ದು, 2ನೇ ಇನ್ನಿಂಗ್ಸ್ ನಲ್ಲಿ ಸರಾಸರಿ ಸ್ಕೋರ್ 160 ರನ್. ಇಲ್ಲಿ ಟಾಸ್ ಗೆದ್ದ ನಾಯಕ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಆದರೆ ಏನಾದರೂ ಇಬ್ಬನಿಯ ಅಂಶ ಹೆಚ್ಚಿದ್ದಲ್ಲಿ ಪಂದ್ಯದ ಗತಿ ಬದಲಾಗುವ ಸಾಧ್ಯತೆಯನ್ನು ಅಲ್ಲಗೆಳೆಯುವಂತಿಲ್ಲ.
ಇನ್ನು ಪಂದ್ಯಕ್ಕೆ ಮಳೆ ಅಡ್ಡಿ ಪಡಿಸುವ ಸಾಧ್ಯತೆ ಕಡಿಮೆ ಎಂದು ಹೇಳಲಾಗಿದೆ. ಶೇ. 11 ರಷ್ಟು ಮಾತ್ರ ಮಳೆಯಾಗುವ ಸಂಭವವಿದೆಯಂತೆ. ಭಾನುವಾರ ಮಳೆ ಬಂದರು ಅದು ಕೇವಲ ಅರ್ಧ ಗಂಟೆಯಷ್ಟು ಮಾತ್ರ ಇರಲಿದೆಯಂತೆ. ಇದು ಪಂದ್ಯಕ್ಕೆ ಯಾವುದೇ ತೊಂದರೆ ಉಂಟು ಮಾಡುವುದಿಲ್ಲ. ರಾತ್ರಿ ಸಮಯದಲ್ಲಿ ಶೇ. 59 ರಷ್ಟು ಮೋಡ ಇರಲಿದೆ. 22 ಡಿಗ್ರಿ ಸೆ. ನಷ್ಟು ತಾಪಮಾನ ಇರಲಿದೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟಿ20 ಪಂದ್ಯ ಸಂಜೆ 7.00 ಕ್ಕೆ ಶುರುವಾಗಲಿದೆ. ಟಾಸ್ ಸಂಜೆ 6:30ಕ್ಕೆ ನಡೆಯಲಿದೆ. ಈ ಸರಣಿಯನ್ನು ನೀವು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ನೇರ ಪ್ರಸಾರವನ್ನು ವೀಕ್ಷಿಸಬಹುದು. ಸರಣಿಯ ಲೈವ್ ಸ್ಟ್ರೀಮಿಂಗ್ ಅನ್ನು ಡಿಸ್ನಿ + ಹಾಟ್‌ಸ್ಟಾರ್‌ನಲ್ಲಿ ನೋಡಬಹುದು. ಇದಲ್ಲದೆ, ನೀವು tv9kannada.com ನ ಲೈವ್ ಬ್ಲಾಗ್‌ನಿಂದಲೂ ಪಂದ್ಯದ ಮಾಹಿತಿಯನ್ನು ಪಡೆಯಬಹುದು.
ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್ XI:
ಭಾರತ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ರಿಷಭ್ ಪಂತ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಯುಜ್ವೇಂದ್ರ ಚಹಾಲ್/ ಆರ್. ಅಶ್ವಿನ್, ದೀಪಕ್ ಚಹರ್, ಜಸ್ಪ್ರೀತ್ ಬುಮ್ರಾ.
ಆಸ್ಟ್ರೇಲಿಯಾ: ಆರೋನ್ ಫಿಂಚ್ (ನಾಯಕ), ಕ್ಯಾಮರೂನ್ ಗ್ರೀನ್, ಸ್ಟೀವ್ ಸ್ಮಿತ್, ಗ್ಲೆನ್ ಮ್ಯಾಕ್ಸ್‌ವೆಲ್, ಟಿಮ್ ಡೇವಿಡ್, ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ಡೇನಿಯಲ್ ಸ್ಯಾಮ್ಸ್, ಪ್ಯಾಟ್ ಕಮಿನ್ಸ್, ಸೀನ್ ಅಬಾಟ್, ಆ್ಯಡಂ ಝಂಪಾ, ಜೋಶ್ ಹ್ಯಾಜ್ಲೆವುಡ್.
Published On - 9:13 am, Sun, 25 September 22