ಭಾರತವು ಸ್ವಾತಂತ್ರ್ಯದ ಅಮೃತ ಮಹೋತ್ಸವನ್ನು ಆಚರಿಸುತ್ತಿರುವ ಸಂದರ್ಭದಲ್ಲಿ ಎಲ್ಲರೂ ತಮ್ಮ ಸೋಷಿಯಲ್ ಮೀಡಿಯಾ ಡಿಸ್ಪ್ಲೇ ಅನ್ನು ತ್ರಿವರ್ಣವಾಗಿ ಬದಲಿಸುವಂತೆ ಪ್ರಧಾನಿ ಮೋದಿ ಇತ್ತೀಚೆಗೆ ಮನವಿ ಮಾಡಿದ್ದರು. ಅದರಂತೆ ಇದೀಗ ಬಹುತೇಕ ಮಂದಿ ತಮ್ಮ ಡಿಪಿಗಳನ್ನು ಬದಲಿಸಿದ್ದಾರೆ. ಈ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ (MS Dhoni) ಧೋನಿ ಕೂಡ ಇರುವುದು ವಿಶೇಷ. ಧೋನಿ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಡಿಸ್ಪ್ಲೇ ಫೋಟೋವನ್ನು ಬದಲಿಸುವ ಮೂಲಕ ತಮ್ಮ ಅನಿಸಿಕೆ ವ್ಯಕ್ತಪಡಿಸಿದ್ದಾರೆ.
ವಿಶೇಷ ಎಂದರೆ ಮಹೇಂದ್ರ ಸಿಂಗ್ ಧೋನಿ ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚು ಸಕ್ರಿಯವಾಗಿಲ್ಲ. ಆದರೆ 75ನೇ ವರ್ಷ ಸ್ವಾತಂತ್ರ್ಯದ ಸಂಭ್ರಮಕ್ಕಾಗಿ ಇದೀಗ ಎರಡು ವರ್ಷಗಳ ನಂತರ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಿದ್ದಾರೆ. ಹೌದು, ವರ್ಷಗಳ ಬಳಿಕ ಇನ್ಸ್ಟಾಗ್ರಾಮ್ನಲ್ಲಿ ಕಾಣಿಸಿಕೊಂಡಿರುವ ಧೋನಿ ತಮ್ಮ ಪ್ರೊಫೈಲ್ ಚಿತ್ರವನ್ನು ಬದಲಾಯಿಸಿದ್ದಾರೆ. ಅಲ್ಲದೆ ಭಾರತದ ಧ್ವಜ ಹೊಂದಿರುವ ಫೋಟೋವನ್ನು ಪ್ರೊಫೈಲ್ ಚಿತ್ರವಾಗಿ ಅಪ್ಡೇಟ್ ಮಾಡಿದ್ದಾರೆ.
ಇನ್ನು ಈ ಫೋಟೋದಲ್ಲಿ- ನಾನು ಭಾರತೀಯನಾಗಲು ಪುಣ್ಯ ಮಾಡಿದ್ದೇನೆ ಎಂಬ ಬರೆದಿರುವುದು ವಿಶೇಷ. ಸದ್ಯ ಧೋನಿ ಹಾಕಿಕೊಂಡಿರುವ ಈ ವಿಶೇಷ ಫೋಟೋ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಅಭಿಮಾನಿಗಳು ಕೂಡ ಧೋನಿಯ ಡಿಪಿಯನ್ನು ಕಾಪಿ ಮಾಡಿಕೊಂಡಿದ್ದಾರೆ.
MS Dhoni changes his Instagram DP for Independence Day. pic.twitter.com/Ucznok9OFg
— Mufaddal Vohra (@mufaddal_vohra) August 12, 2022
ಟೀಮ್ ಇಂಡಿಯಾ ಪರ ವಿಕೆಟ್ ಕೀಪರ್, ಕ್ಯಾಪ್ಟನ್ ಮತ್ತು ಫಿನಿಶರ್ ಆಗಿ ಗುರುತಿಸಿಕೊಂಡಿದ್ದ ಧೋನಿ, ಕ್ರಿಕೆಟ್ ಇತಿಹಾಸದಲ್ಲಿ ಎಲ್ಲಾ ಮೂರು ಐಸಿಸಿ ಟ್ರೋಫಿಗಳನ್ನು ಗೆದ್ದ ಏಕೈಕ ನಾಯಕ ದಾಖಲೆಯ ಒಡೆಯ ಎಂಬುದು ವಿಶೇಷ. ಅಂದರೆ ಧೋನಿ ನಾಯಕತ್ವದಲ್ಲಿ ಭಾರತ ಟಿ20 ವಿಶ್ವಕಪ್-2007, ಏಕದಿನ ವಿಶ್ವಕಪ್- 2011 ಮತ್ತು ಚಾಂಪಿಯನ್ಸ್ ಟ್ರೋಫಿ- 2013 ಗೆದ್ದಿದೆ.
ಇಷ್ಟೇ ಅಲ್ಲ, ಅಂತರಾಷ್ಟ್ರೀಯ ಕ್ರಿಕೆಟಿಗನಾಗಿ ಸಕ್ರಿಯವಾಗಿರುವ ದಿನಗಳಲ್ಲಿ ಧೋನಿ ತನ್ನ ಜೀವನದಲ್ಲಿ ಎಲ್ಲಕ್ಕಿಂತ ಹೆಚ್ಚಾಗಿ ರಾಷ್ಟ್ರೀಯ ಕರ್ತವ್ಯವನ್ನು ಪರಿಗಣಿಸಿದ್ದರು. ಅಂದರೆ ಧೋನಿ ವಿವಿಧ ಸಂದರ್ಭಗಳಲ್ಲಿ ಭಾರತೀಯ ಸೇನೆಯೊಂದಿಗೆ ಕಾಣಿಸಿಕೊಂಡಿದ್ದರು. 41 ವರ್ಷದ ಧೋನಿ ಭಾರತೀಯ ಪ್ರಾದೇಶಿಕ ಸೇನೆಯಲ್ಲಿ ಲೆಫ್ಟಿನೆಂಟ್ ಕರ್ನಲ್ ಗೌರವ ಹೊಂದಿದ್ದಾರೆ ಮತ್ತು ಅರ್ಹ ಪ್ಯಾರಾಟ್ರೂಪರ್ ಕೂಡ ಆಗಿದ್ದಾರೆ. ಅಲ್ಲದೆ ಹಲವು ಬಾರಿ ಸೇನಾ ತರಬೇತಿಯಲ್ಲೂ ಕಾಣಿಸಿಕೊಂಡಿದ್ದಾರೆ. ಇಲ್ಲಿ ವಿಶೇಷ ಎಂದರೆ ಲೆಫ್ಟಿನೆಂಟ್ ಕರ್ನಲ್ ಆಗಿರುವ ಮಹೇಂದ್ರ ಸಿಂಗ್ ಧೋನಿ ಯುದ್ಧದ ಸಂದರ್ಭಗಳಲ್ಲಿ ಭಾರತೀಯ ಸೇನೆಯಲ್ಲಿ ತೊಡಗಿಸಿಕೊಳ್ಳಬಹುದು.