AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅದು ಮುಗಿದ ಅಧ್ಯಾಯ… ಎಲ್ಲಾ ಅಂತೆ-ಕಂತೆಗಳಿಗೆ ಬ್ರೇಕ್ ಹಾಕಿದ ವಿರಾಟ್ ಕೊಹ್ಲಿ

Virat Kohli: ಟೀಮ್ ಇಂಡಿಯಾ ಪರ 123 ಟೆಸ್ಟ್ ಪಂದ್ಯಗಳನ್ನಾಡಿರುವ ವಿರಾಟ್ ಕೊಹ್ಲಿ ಒಟ್ಟು 9,230 ರನ್ ಕಲೆಹಾಕಿದ್ದಾರೆ. ಈ ವೇಳೆ ಅವರ ಬ್ಯಾಟ್​ನಿಂದ 30 ಶತಕಗಳು ಕೂಡ ಮೂಡಿಬಂದಿವೆ. ಇದಾಗ್ಯೂ ಕಳೆದ ವರ್ಷ ದಿಢೀರನೇ ಟೆಸ್ಟ್ ನಿವೃತ್ತಿ ಘೋಷಿಸಿ ವಿರಾಟ್ ಕೊಹ್ಲಿ ಅಚ್ಚರಿ ಮೂಡಿಸಿದ್ದರು.

ಅದು ಮುಗಿದ ಅಧ್ಯಾಯ... ಎಲ್ಲಾ ಅಂತೆ-ಕಂತೆಗಳಿಗೆ ಬ್ರೇಕ್ ಹಾಕಿದ ವಿರಾಟ್ ಕೊಹ್ಲಿ
Virat KohliImage Credit source: GettyImages
ಝಾಹಿರ್ ಯೂಸುಫ್
|

Updated on: Jun 23, 2026 | 8:32 AM

Share

ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್​ಗೆ ಮರಳಲಿದ್ದಾರಾ? ಕಿಂಗ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿ ಇಂದಿಗೆ (ಜೂನ್ 23, 2026) ಸರಿಯಾಗಿ 1 ವರ್ಷ 1 ತಿಂಗಳು ಕಳೆದಿದೆ. ಇದಾಗ್ಯೂ ಅವರ ಕಂಬ್ಯಾಕ್ ಅನ್ನು ಅಭಿಮಾನಿಗಳು ಎದುರು ನೋಡುತ್ತಿದ್ದಾರೆ. ಅದರಲ್ಲೂ ಕಳೆದ ಕೆಲ ತಿಂಗಳಿಂದ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್​ನಿಂದ ನಿವೃತ್ತಿ ಹಿಂಪಡೆಯಲಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು. ಆದರೀಗ ಈ ಎಲ್ಲಾ ಸುದ್ದಿಗಳಿಗೆ ಅಧಿಕೃತವಾಗಿ ತೆರೆ ಎಳೆದಿದ್ದಾರೆ.

ನವದೆಹಲಿಯಲ್ಲಿ ನಡೆದ ಬ್ರ್ಯಾಂಡ್ ಲಾಂಚ್ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ವಿರಾಟ್ ಕೊಹ್ಲಿ, ನಾನು ಟೆಸ್ಟ್ ಕ್ರಿಕೆಟ್​ನಿಂದ ಹೊರಬಂದಿದ್ದೇನೆ. ಹೀಗಾಗಿ ಮತ್ತೆ ರೆಡ್ ಬಾಲ್​ ಕ್ರಿಕೆಟ್​ನಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂದು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.

ವಿರಾಟ್ ಕೊಹ್ಲಿ ಒಡೆತನದ ಪ್ರಸಿದ್ಧ ಲೈಫ್‌ಸ್ಟೈಲ್ ಬ್ರ್ಯಾಂಡ್ ‘One8’ ನ ಹೊಸ ಶೂ ಬಿಡುಗಡೆ ಸಮಾರಂಭದಲ್ಲಿ ಕಾರ್ಯಕ್ರಮದ ನಿರೂಪಕ ದಾನಿಶ್ ಸೇಠ್ ಅವರು, ಹೊಸದಾಗಿ ಮಾರುಕಟ್ಟೆಗೆ ಬಂದಿರುವ ‘ರೆಡ್ ಶೂ’ ಬೆಲೆಯನ್ನು ₹9,230 ಕ್ಕೆ ನಿಗದಿಪಡಿಸಲಾಗಿದೆ.

ಈ ಮೊತ್ತವು ನಿಮ್ಮ  ಟೆಸ್ಟ್ ವೃತ್ತಿಜೀವನದಲ್ಲಿ ಗಳಿಸಿದ ಒಟ್ಟು 9,230 ರನ್‌ಗಳಿಗೆ ನಿಖರವಾಗಿ ಹೊಂದಿಕೆಯಾಗುತ್ತದೆ. ಹೀಗಾಗಿ ಈ ಶೂ ಬೆಲೆಯನ್ನು ಮತ್ತಷ್ಟು ಹೆಚ್ಚಿಸಲು ಮತ್ತು ಬ್ರ್ಯಾಂಡ್ ಲಾಭಕ್ಕಾಗಿ ನೀವು (ವಿರಾಟ್ ಕೊಹ್ಲಿ) ಮತ್ತೆ ಟೆಸ್ಟ್ ಕ್ರಿಕೆಟ್‌ಗೆ ಮರಳಿ ಇನ್ನೂ ಕೆಲವು ರನ್ ಗಳಿಸುತ್ತೀರಾ? ಎಂದು ತಮಾಷೆಯಾಗಿ ಕೇಳಿದ್ದಾರೆ.

ಈ ಪ್ರಶ್ನೆಗೆ ನಕ್ಕ ವಿರಾಟ್ ಕೊಹ್ಲಿ, “ನಾನು ಕಡಿಮೆ ಮೊತ್ತಕ್ಕೆ ಮಾರಾಟ ಮಾಡಲು ಬಯಸುತ್ತೇನೆ. ಅಲ್ಲದೆ ಟೆಸ್ಟ್ ಕ್ರಿಕೆಟ್ ಅನ್ನು ಈಗಾಗಲೇ ಮುಗಿಸಿದ್ದೇನೆ” ಎಂದಿದ್ದಾರೆ. ಈ ಮೂಲಕ ನನ್ನ ಟೆಸ್ಟ್ ಕೆರಿಯರ್ ಮುಗಿದ ಅಧ್ಯಾಯ ಎಂದು ಕಿಂಗ್ ಕೊಹ್ಲಿ ಬಹಿರಂಗವಾಗಿಯೇ ಖಚಿತಪಡಿಸಿದ್ದಾರೆ.

ವಿರಾಟ್ ಕೊಹ್ಲಿ ಟೆಸ್ಟ್ ವೃತ್ತಿಜೀವನ

ಮೇ 2025 ರಲ್ಲಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದ ವಿರಾಟ್ ಕೊಹ್ಲಿ, 14 ವರ್ಷಗಳ ಸುದೀರ್ಘ ಅವಧಿಯಲ್ಲಿ ಭಾರತೀಯ ಕ್ರಿಕೆಟ್‌ಗೆ ಅಳಿಸಲಾಗದ ಕೊಡುಗೆ ನೀಡಿದ್ದಾರೆ. ಅವರ ಟೆಸ್ಟ್ ಸಾಧನೆಯ ಕಿರುನೋಟ ಇಲ್ಲಿದೆ…

  •  ಒಟ್ಟು ಪಂದ್ಯಗಳು: 123
  • ಒಟ್ಟು ರನ್‌ಗಳು: 9,230
  • ಬ್ಯಾಟಿಂಗ್ ಸರಾಸರಿ: 46.85
  •  ಶತಕಗಳು: 30
  •  ಗರಿಷ್ಠ ಸ್ಕೋರ್: 254*

ಇದನ್ನೂ ಓದಿ: ಭಾರತದ ವಿರುದ್ಧದ ಟಿ20 ಸರಣಿಗೆ ಬಲಿಷ್ಠ ಇಂಗ್ಲೆಂಡ್ ತಂಡ ಪ್ರಕಟ

ಸಚಿನ್ ತೆಂಡೂಲ್ಕರ್, ರಾಹುಲ್ ದ್ರಾವಿಡ್ ಮತ್ತು ಸುನಿಲ್ ಗವಾಸ್ಕರ್ ಅವರ ನಂತರ ಭಾರತದ ಪರ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ 4ನೇ ಆಟಗಾರ ಎಂಬ ಹೆಗ್ಗಳಿಕೆ ವಿರಾಟ್ ಕೊಹ್ಲಿ ಅವರದ್ದಾಗಿದೆ. ಇದಾಗ್ಯೂ ಅವರು ರೆಡ್ ಬಾಲ್ ಕ್ರಿಕೆಟ್​ನಲ್ಲಿ 10000 ರನ್ ಪೂರೈಸದೇ ನಿವೃತ್ತಿ ಘೋಷಿಸಿದ್ದು ಅಚ್ಚರಿಗೆ ಕಾರಣವಾಗಿತ್ತು.

Follow Us
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್