IPL 2025: ಸೋಲಿನಿಂದ ನಾ ಪಾಠ ಕಲಿತೆ: ರಿಷಭ್ ಪಂತ್ ಬೇಸರದ ನುಡಿ
Lucknow Super Giants vs Punjab Kings: ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಜಯಭೇರಿ ಬಾರಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ LSG ತಂಡವು 20 ಓವರ್ಗಳಲ್ಲಿ 171 ರನ್ ಕಲೆಹಾಕಿದರೆ, ಈ ಗುರಿಯನ್ನು ಬೆನ್ನತ್ತಿದ PBKS ತಂಡವು 16.2 ಓವರ್ಗಳಲ್ಲಿ ಪಂದ್ಯ ಮುಗಿಸಿತು. ಈ ಮೂಲಕ ಪಂಜಾಬ್ ಕಿಂಗ್ಸ್ 8 ವಿಕೆಟ್ಗಳ ಗೆಲುವು ದಾಖಲಿಸಿದೆ.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ನ 13ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ 8 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ಪರ ನಿಕೋಲಸ್ ಪೂರನ್ 44 ರನ್ ಬಾರಿಸಿದರೆ, ಆಯುಷ್ ಬದೋನಿ 41 ರನ್ಗಳಿಸಿದರು. ಈ ಮೂಲಕ ಲಕ್ನೋ ಸೂಪರ್ ಜೈಂಟ್ಸ್ ತಂಡವು 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 171 ರನ್ ಕಲೆಹಾಕಿತು.
172 ರನ್ಗಳ ಗುರಿ ಪಡೆದ ಪಂಜಾಬ್ ಕಿಂಗ್ಸ್ ತಂಡಕ್ಕೆ ಪ್ರಭ್ಸಿಮ್ರಾನ್ ಸಿಂಗ್ ಸ್ಪೋಟಕ ಆರಂಭ ಒದಗಿಸಿದ್ದರು. 34 ಎಸೆತಗಳನ್ನು ಎದುರಿಸಿದ ಪ್ರಭ್ಸಿಮ್ರಾನ್ 3 ಭರ್ಜರಿ ಸಿಕ್ಸ್ ಹಾಗೂ 9 ಫೋರ್ಗಳೊಂದಿಗೆ 69 ರನ್ ಚಚ್ಚಿದರು.
ಆ ಬಳಿಕ ಬಂದ ಶ್ರೇಯಸ್ ಅಯ್ಯರ್ ಅಜೇಯ 52 ರನ್ ಬಾರಿಸಿದರೆ, ನೇಹಾಲ್ ವಧೇರಾ ಅಜೇಯ 43 ರನ್ ಸಿಡಿಸಿದರು. ಈ ಮೂಲಕ ಪಂಜಾಬ್ ಕಿಂಗ್ಸ್ ತಂಡವು ಕೇವಲ 16.2 ಓವರ್ಗಳಲ್ಲಿ 177 ರನ್ ಬಾರಿಸಿ 8 ವಿಕೆಟ್ಗಳ ಭರ್ಜರಿ ಜಯ ಸಾಧಿಸಿತು.
ಈ ಸೋಲಿನ ಬಳಿಕ ಮಾತನಾಡಿದ ರಿಷಭ್ ಪಂತ್, ನಾವು 20-25 ರನ್‌ಗಳನ್ನು ಕಡಿಮೆ ಗಳಿಸಿದ್ದೇವೆ. ಆದರೆ ಇದು ಸಹ ಆಟದ ಒಂದು ಭಾಗ. ನಾವು ಇನ್ನೂ ತವರು ಮೈದಾನದ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸುತ್ತಿದ್ದೇವೆ. ಆರಂಭದಲ್ಲಿ, ನಾವು ವಿಕೆಟ್‌ಗಳನ್ನು ಕಳೆದುಕೊಂಡಾಗ ದೊಡ್ಡ ರನ್‌ಗಳನ್ನು ಗಳಿಸುವುದು ಕಷ್ಟಕರವಾಗಿತ್ತು. ಆದರೆ ಎಲ್ಲಾ ಆಟಗಾರರು ಬೃಹತ್ ಮೊತ್ತ ಕಲೆಹಾಕಲು ಶ್ರಮಿಸಿದ್ದಾರೆ ಎಂದರು.
171 ರನ್ಗಳ ಗುರಿ ನೀಡಿದ ಬಳಿಕ ನಿಧಾನಗತಿಯ ವಿಕೆಟ್‌ನ ಲಾಭವನ್ನು ಪಡೆಯಲು ನಾವು ನಿರ್ಧರಿಸಿದ್ದೆವು. ಬೌಲಿಂಗ್ ನಿಧಾನವಾಗಿ ಪರಿಣಾಮಕಾರಿ ಎಂದು ಸಾಬೀತಾಯಿತು. ಆದರೆ ನಾವು ಅಂದುಕೊಂಡಂತೆ ಯಾವುದೂ ಸಹ ನಡೆದಿರಲಿಲ್ಲ. ಈ ಪಂದ್ಯದ ಸೋಲಿನಿಂದಾಗಿ ನಾವು ಪಾಠ ಕಲಿತಿದ್ದೇವೆ. ಅಲ್ಲದೆ ಇಂದಿನ ತಪ್ಪುಗಳನ್ನು ತಿದ್ದಿಕೊಂಡು ಮುಂದುವರಿಯುತ್ತೇವೆ ಎಂದು ರಿಷಭ್ ಪಂತ್ ಬೇಸರಲ್ಲಿ ಹೇಳಿದ್ದಾರೆ.
ಇದನ್ನೂ ಓದಿ: IPL 2025: ಸೋಲಿನ ಬೆನ್ನಲ್ಲೇ ರಿಷಭ್ ಪಂತ್ಗೆ ಸಂಜೀವ್ ಗೊಯೆಂಕಾ ಖಡಕ್ ಸೂಚನೆ
ಈ ಮೂಲಕ ಮುಂದಿನ ಪಂದ್ಯಗಳಲ್ಲಿ ತಪ್ಪುಗಳನ್ನು ತಿದ್ದಿಕೊಂಡು ಕಂಬ್ಯಾಕ್ ಮಾಡುವ ವಿಶ್ವಾಸವನ್ನು ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ರಿಷಭ್ ಪಂತ್ ವ್ಯಕ್ತಪಡಿಸಿದ್ದಾರೆ.