AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಎಷ್ಟಿದೆ ಅಂತ ಗೊತ್ತಿಲ್ಲ, ಎಲ್ಲವನ್ನೂ ಅಮ್ಮನಿಗೆ ಕಳಿಸ್ತೀನಿ..!

India vs New Zealand, 1st ODI: ಭಾರತದ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡವು 50 ಓವರ್​ಗಳಲ್ಲಿ 300 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಪರ ವಿರಾಟ್ ಕೊಹ್ಲಿ (93) ಅರ್ಧಶತಕ ಬಾರಿಸಿದ್ದರು. ಈ ಹಾಫ್ ಸೆಂಚುರಿ ನೆರವಿನೊಂದಿಗೆ ಭಾರತ ತಂಡವು 49 ಓವರ್​ಗಳಲ್ಲಿ ಗುರಿ ಮುಟ್ಟುವ ಮೂಲಕ 4 ವಿಕೆಟ್​ಗಳ ಜಯ ಸಾಧಿಸಿದೆ.

Virat Kohli: ಎಷ್ಟಿದೆ ಅಂತ ಗೊತ್ತಿಲ್ಲ, ಎಲ್ಲವನ್ನೂ ಅಮ್ಮನಿಗೆ ಕಳಿಸ್ತೀನಿ..!
Virat Kohli
ಝಾಹಿರ್ ಯೂಸುಫ್
|

Updated on: Jan 12, 2026 | 8:33 AM

Share

2026ರ ಮೊದಲ ಪಂದ್ಯದಲ್ಲಿ ಭರ್ಜರಿ ಗೆಲುವು ದಾಖಲಿಸಿ ಭಾರತ ತಂಡ ಶುಭಾರಂಭ ಮಾಡಿದೆ. ಹೀಗೆ ಶುಭಾರಂಭ ಮಾಡಲು ಕಾರಣಕರ್ತರು ವಿರಾಟ್ ಕೊಹ್ಲಿ. ವಡೋದರಾದ ಬಿಸಿಎ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಶುಭ್​​ಮನ್ ಗಿಲ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡವು 50 ಓವರ್​ಗಳಲ್ಲಿ ಬರೋಬ್ಬರಿ 300 ರನ್​ಗಳಿಸುವಲ್ಲಿ ಯಶಸ್ವಿಯಾದರು.

ಈ ಕಠಿಣ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಪರ ವಿರಾಟ್ ಕೊಹ್ಲಿ ಆಕರ್ಷಕ ಬ್ಯಾಟಿಂಗ್ ಪ್ರದರ್ಶಿಸಿದರು. ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಇನಿಂಗ್ಸ್ ಕಟ್ಟಿದ ಕೊಹ್ಲಿ 91 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ 93 ರನ್ ಬಾರಿಸಿ ಔಟಾದರು. ಈ ಅರ್ಧಶತಕದ ನೆರವಿನೊಂದಿಗೆ ಭಾರತ ತಂಡವು 49 ಓವರ್​ಗಳಲ್ಲಿ 306 ರನ್​ಗಳಿಸಿ 4 ವಿಕೆಟ್​ಗಳ ಜಯ ಸಾಧಿಸಿತು.

ನಿರೀಕ್ಷೆಯಂತೆ ಈ ಪಂದ್ಯದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದ ವಿರಾಟ್ ಕೊಹ್ಲಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಒಲಿಯಿತು. ಹೀಗೆ ಒಲಿದ ಪಂದ್ಯ ಶ್ರೇಷ್ಠ ಪ್ರಶಸ್ತಿ ಎಷ್ಟನೇದು ಎಂಬುದು ಖುದ್ದು ಕೊಹ್ಲಿಗೆ ಗೊತ್ತಿರಲಿಲ್ಲ.

ಪ್ಲೇಯರ್ ಆಫ್ ದಿ ಮ್ಯಾಚ್ ಸ್ವೀಕರಿಸಿದ ಬಳಿಕ ಕೊಹ್ಲಿಗೆ ಇದು ನಿಮ್ಮ ಎಷ್ಟನೆಯೇ ಪಂದ್ಯ ಶ್ರೇಷ್ಠ ಪ್ರಶಸ್ತಿ ಎಂಬ ಪ್ರಶ್ನೆಯನ್ನು ಮುಂದಿಡಲಾಗಿತ್ತು. ಈ ಪ್ರಶ್ನೆಗೆ ನಗುತ್ತಾ ಉತ್ತರರಿಸಿದ ವಿರಾಟ್, ನಿಜವಾಗಿಯೂ ನನಗೆ ಗೊತ್ತಿಲ್ಲ.

ನನಗೆ ಸಿಕ್ಕಾ ಟ್ರೋಫಿಗಳನ್ನು ನಾನು ಗುರುಗಾಂವ್​ನಲ್ಲಿರುವ ನನ್ನ ತಾಯಿಗೆ ಕಳಿಸುತ್ತೇನೆ. ಪ್ರಶಸ್ತಿ ನೋಡಿ ಅವರು ತುಂಬಾ ಹೆಮ್ಮೆಪಡುತ್ತಾರೆ. ಅಲ್ಲದೆ ಅವರು ಈ ಪ್ರಶಸ್ತಿಗಳನ್ನೆಲ್ಲಾ ಇಟ್ಟುಕೊಳ್ಳುತ್ತಾರೆ ಎಂದರು.

ಈ ಮೂಲಕ ತನಗೆ ಸಿಕ್ಕ ಟ್ರೋಫಿಗಳನ್ನು ಅಮ್ಮ ಒಂದು ಕಡೆಗೆ ಜೋಪಾನವಾಗಿ ಜೋಡಿಸುತ್ತಿರುವ ವಿಚಾರವನ್ನು ವಿರಾಟ್ ಕೊಹ್ಲಿ ಇದೇ ಮೊದಲ ಬಾರಿಗೆ ಬಹಿರಂಗಪಡಿಸಿದ್ದಾರೆ. ಅಂದಹಾಗೆ ವಿರಾಟ್ ಕೊಹ್ಲಿಗೆ ಈವರೆಗೆ ಎಷ್ಟು ಪಂದ್ಯ ಶ್ರೇಷ್ಠ ಪ್ರಶಸ್ತಿ ಲಭಿಸಿದೆ ಎಂದು ನೋಡಿದರೆ…

  • ಏಕದಿನ ಕ್ರಿಕೆಟ್​ನಲ್ಲಿ ಅವರು 45 ಬಾರಿ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.
  • ಟೆಸ್ಟ್ ಕ್ರಿಕೆಟ್​ನಲ್ಲಿ ಕೊಹ್ಲಿ ಪಡೆದಿರುವ ಪಂದ್ಯ ಶ್ರೇಷ್ಠ ಪ್ರಶಸ್ತಿ ಸಂಖ್ಯೆ 10.
  • ಟಿ20 ಕ್ರಿಕೆಟ್​ನಲ್ಲಿ 16 ಬಾರಿ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿಯನ್ನು ಪಡೆದಿದ್ದಾರೆ.

ಇದನ್ನೂ ಓದಿ: ಶತಕ ತಪ್ಪಿಸಿ ಭರ್ಜರಿ ದಾಖಲೆ ಬರೆದ ವಿರಾಟ್ ಕೊಹ್ಲಿ

ಈ ಮೂಲಕ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ವಿಶ್ವದ 2ನೇ ಆಟಗಾರ ಎನಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಒಟ್ಟು 76 ಪಂದ್ಯ ಶ್ರೇಷ್ಠ ಪ್ರಶಸ್ತಿಗಳನ್ನು ಪಡೆದಿರುವ ಸಚಿನ್ ತೆಂಡೂಲ್ಕರ್ ಅಗ್ರಸ್ಥಾನದಲ್ಲಿದ್ದಾರೆ. ಇದೀಗ 71 ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದಿರುವ ವಿರಾಟ್ ಕೊಹ್ಲಿ ಮುಂಬರುವ ದಿನಗಳಲ್ಲಿ ಸಚಿನ್ ಅವರ ಈ ದಾಖಲೆಯನ್ನು ಅಳಿಸಿ ಹಾಕಿದರೂ ಅಚ್ಚರಿಪಡಬೇಕಿಲ್ಲ.

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!