
2026ರ ಮೊದಲ ಪಂದ್ಯದಲ್ಲಿ ಭರ್ಜರಿ ಗೆಲುವು ದಾಖಲಿಸಿ ಭಾರತ ತಂಡ ಶುಭಾರಂಭ ಮಾಡಿದೆ. ಹೀಗೆ ಶುಭಾರಂಭ ಮಾಡಲು ಕಾರಣಕರ್ತರು ವಿರಾಟ್ ಕೊಹ್ಲಿ. ವಡೋದರಾದ ಬಿಸಿಎ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಶುಭ್ಮನ್ ಗಿಲ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡವು 50 ಓವರ್ಗಳಲ್ಲಿ ಬರೋಬ್ಬರಿ 300 ರನ್ಗಳಿಸುವಲ್ಲಿ ಯಶಸ್ವಿಯಾದರು.
ಈ ಕಠಿಣ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಪರ ವಿರಾಟ್ ಕೊಹ್ಲಿ ಆಕರ್ಷಕ ಬ್ಯಾಟಿಂಗ್ ಪ್ರದರ್ಶಿಸಿದರು. ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಇನಿಂಗ್ಸ್ ಕಟ್ಟಿದ ಕೊಹ್ಲಿ 91 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 8 ಫೋರ್ಗಳೊಂದಿಗೆ 93 ರನ್ ಬಾರಿಸಿ ಔಟಾದರು. ಈ ಅರ್ಧಶತಕದ ನೆರವಿನೊಂದಿಗೆ ಭಾರತ ತಂಡವು 49 ಓವರ್ಗಳಲ್ಲಿ 306 ರನ್ಗಳಿಸಿ 4 ವಿಕೆಟ್ಗಳ ಜಯ ಸಾಧಿಸಿತು.
ನಿರೀಕ್ಷೆಯಂತೆ ಈ ಪಂದ್ಯದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದ ವಿರಾಟ್ ಕೊಹ್ಲಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಒಲಿಯಿತು. ಹೀಗೆ ಒಲಿದ ಪಂದ್ಯ ಶ್ರೇಷ್ಠ ಪ್ರಶಸ್ತಿ ಎಷ್ಟನೇದು ಎಂಬುದು ಖುದ್ದು ಕೊಹ್ಲಿಗೆ ಗೊತ್ತಿರಲಿಲ್ಲ.
ಪ್ಲೇಯರ್ ಆಫ್ ದಿ ಮ್ಯಾಚ್ ಸ್ವೀಕರಿಸಿದ ಬಳಿಕ ಕೊಹ್ಲಿಗೆ ಇದು ನಿಮ್ಮ ಎಷ್ಟನೆಯೇ ಪಂದ್ಯ ಶ್ರೇಷ್ಠ ಪ್ರಶಸ್ತಿ ಎಂಬ ಪ್ರಶ್ನೆಯನ್ನು ಮುಂದಿಡಲಾಗಿತ್ತು. ಈ ಪ್ರಶ್ನೆಗೆ ನಗುತ್ತಾ ಉತ್ತರರಿಸಿದ ವಿರಾಟ್, ನಿಜವಾಗಿಯೂ ನನಗೆ ಗೊತ್ತಿಲ್ಲ.
ನನಗೆ ಸಿಕ್ಕಾ ಟ್ರೋಫಿಗಳನ್ನು ನಾನು ಗುರುಗಾಂವ್ನಲ್ಲಿರುವ ನನ್ನ ತಾಯಿಗೆ ಕಳಿಸುತ್ತೇನೆ. ಪ್ರಶಸ್ತಿ ನೋಡಿ ಅವರು ತುಂಬಾ ಹೆಮ್ಮೆಪಡುತ್ತಾರೆ. ಅಲ್ಲದೆ ಅವರು ಈ ಪ್ರಶಸ್ತಿಗಳನ್ನೆಲ್ಲಾ ಇಟ್ಟುಕೊಳ್ಳುತ್ತಾರೆ ಎಂದರು.
ಈ ಮೂಲಕ ತನಗೆ ಸಿಕ್ಕ ಟ್ರೋಫಿಗಳನ್ನು ಅಮ್ಮ ಒಂದು ಕಡೆಗೆ ಜೋಪಾನವಾಗಿ ಜೋಡಿಸುತ್ತಿರುವ ವಿಚಾರವನ್ನು ವಿರಾಟ್ ಕೊಹ್ಲಿ ಇದೇ ಮೊದಲ ಬಾರಿಗೆ ಬಹಿರಂಗಪಡಿಸಿದ್ದಾರೆ. ಅಂದಹಾಗೆ ವಿರಾಟ್ ಕೊಹ್ಲಿಗೆ ಈವರೆಗೆ ಎಷ್ಟು ಪಂದ್ಯ ಶ್ರೇಷ್ಠ ಪ್ರಶಸ್ತಿ ಲಭಿಸಿದೆ ಎಂದು ನೋಡಿದರೆ…
ಇದನ್ನೂ ಓದಿ: ಶತಕ ತಪ್ಪಿಸಿ ಭರ್ಜರಿ ದಾಖಲೆ ಬರೆದ ವಿರಾಟ್ ಕೊಹ್ಲಿ
ಈ ಮೂಲಕ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ವಿಶ್ವದ 2ನೇ ಆಟಗಾರ ಎನಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಒಟ್ಟು 76 ಪಂದ್ಯ ಶ್ರೇಷ್ಠ ಪ್ರಶಸ್ತಿಗಳನ್ನು ಪಡೆದಿರುವ ಸಚಿನ್ ತೆಂಡೂಲ್ಕರ್ ಅಗ್ರಸ್ಥಾನದಲ್ಲಿದ್ದಾರೆ. ಇದೀಗ 71 ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದಿರುವ ವಿರಾಟ್ ಕೊಹ್ಲಿ ಮುಂಬರುವ ದಿನಗಳಲ್ಲಿ ಸಚಿನ್ ಅವರ ಈ ದಾಖಲೆಯನ್ನು ಅಳಿಸಿ ಹಾಕಿದರೂ ಅಚ್ಚರಿಪಡಬೇಕಿಲ್ಲ.