Harbhajan Singh: ತಂಡದಿಂದ ಕೈಬಿಟ್ಟಿದ್ದೇಕೆ ಎಂದು ಹಲವು ಬಾರಿ ಧೋನಿಯನ್ನು ಪ್ರಶ್ನಿಸಿದ್ದೆ…ಆದರೆ

400 ವಿಕೆಟ್ ಪಡೆದ ಆಟಗಾರರನ್ನು ಯಾವುದೇ ಕಾರಣ ನೀಡದೇ ಹೊರಹಾಕಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ. ಯಾಕೆ ತಂಡದಿಂದ ಕೈ ಬಿಡಲಾಗಿದೆ ಎಂಬುದು ಇನ್ನೂ ಕೂಡ ನಿಗೂಢ.

Harbhajan Singh: ತಂಡದಿಂದ ಕೈಬಿಟ್ಟಿದ್ದೇಕೆ ಎಂದು ಹಲವು ಬಾರಿ ಧೋನಿಯನ್ನು ಪ್ರಶ್ನಿಸಿದ್ದೆ...ಆದರೆ
Harbhajan Singh
Follow us
TV9 Web
| Updated By: ಝಾಹಿರ್ ಯೂಸುಫ್

Updated on: Dec 30, 2021 | 10:21 PM

ಟೀಮ್ ಇಂಡಿಯಾದ ಹಿರಿಯ ಸ್ಪಿನ್ನರ್ ಹರ್ಭಜನ್ ಸಿಂಗ್ ಕಳೆದ ವಾರ ತಮ್ಮ ವೃತ್ತಿಪರ ಕ್ರಿಕೆಟರ್ ವೃತ್ತಿಜೀವನಕ್ಕೆ ವಿದಾಯ ಹೇಳಿದ್ದಾರೆ. 1998 ರಲ್ಲಿ ಭಾರತ ಕ್ರಿಕೆಟ್ ತಂಡಕ್ಕೆ ಪಾದಾರ್ಪಣೆ ಮಾಡಿದ ಹರ್ಭಜನ್ 103 ಟೆಸ್ಟ್, 236 ODI ಮತ್ತು 28 T20 ಅಂತರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ. ಸುಮಾರು ಎರಡು ದಶಕಗಳ ಕಾಲ ತಂಡದಲ್ಲಿದ್ದ ಹರ್ಭಜನ್ ಸಿಂಗ್ 2011ರ ಬಳಿಕ ತಂಡದಿಂದ ಸ್ಥಾನ ಕಳೆದುಕೊಂಡಿದ್ದರು. ಇದರ ನಂತರ, ಅವರು ಮುಂದಿನ 5 ವರ್ಷಗಳ ಕಾಲ ಭಾರತ ತಂಡದ ಅನಿಯಮಿತ ಸದಸ್ಯರಾಗಿದ್ದರು.

ಹರ್ಭಜನ್ ಸಿಂಗ್ 2011 ರ ವಿಶ್ವಕಪ್ ನಂತರ ಕೇವಲ 10 ODI ಮತ್ತು 10 ಟೆಸ್ಟ್ ಪಂದ್ಯಗಳನ್ನು ಆಡಿದರು. 2013ರ ಚಾಂಪಿಯನ್ಸ್ ಟ್ರೋಫಿ ಮತ್ತು 2015ರ ವಿಶ್ವಕಪ್‌ಗೆ ಅವರನ್ನು ತಂಡಕ್ಕೆ ಆಯ್ಕೆ ಮಾಡಿರಲಿಲ್ಲ. ಹರ್ಭಜನ್ ಸಿಂಗ್ ನಿವೃತ್ತಿಯ ನಂತರ ತಂಡಕ್ಕೆ ಸೇರಿಸಿಕೊಳ್ಳದ ಬಗ್ಗೆ ಮೌನ ಮುರಿದಿದ್ದಾರೆ.

400 ವಿಕೆಟ್ ಪಡೆದ ಆಟಗಾರರನ್ನು ಯಾವುದೇ ಕಾರಣ ನೀಡದೇ ಹೊರಹಾಕಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ. ಯಾಕೆ ತಂಡದಿಂದ ಕೈ ಬಿಡಲಾಗಿದೆ ಎಂಬುದು ಇನ್ನೂ ಕೂಡ ನಿಗೂಢ. ಈಗಲೂ ನನಗೆ ಅಚ್ಚರಿಯಾಗುತ್ತೆ. ಯಾಕಾಗಿ ಕೈ ಬಿಟ್ಟರು, ಎಲ್ಲಿ ತಪ್ಪಾಯ್ತು? ನಾನು ತಂಡದಲ್ಲಿದ್ದರೆ ಯಾರಿಗೆ ತೊಂದರೆಯಾಗುತ್ತಿತ್ತು? ಇತ್ಯಾದಿ ಪ್ರಶ್ನೆಗಳಿಗೆ ಉತ್ತರವಂತು ಸಿಕ್ಕಿಲ್ಲ ಎಂದು ಭಜ್ಜಿ ತಿಳಿಸಿದ್ದಾರೆ.

ಈ ಪ್ರಶ್ನೆಯನ್ನು ನಾನು ಟೀಮ್ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರಲ್ಲೂ ಕೇಳಿದ್ದೆ. ಎಷ್ಟೇ ವಿಚಾರಿಸಿದರೂ ಉತ್ತರ ಸಿಗಲಿಲ್ಲ. ಇನ್ನು ಕೇಳುವುದರಲ್ಲಿ ಅರ್ಥವಿಲ್ಲ ಎಂದು ಮನಗಂಡು ನಾನು ಕೇಳುವುದನ್ನು ನಿಲ್ಲಿಸಿದೆ ಎಂದು ಹರ್ಭಜನ್ ಸಿಂಗ್ ತಿಳಿಸಿದ್ದಾರೆ.

“ನಾನು ನಾಯಕನನ್ನು (ಧೋನಿ) ಕೇಳಲು ಪ್ರಯತ್ನಿಸಿದೆ, ಆದರೆ ನನಗೆ ಯಾವುದೇ ಕಾರಣವನ್ನು ನೀಡಲಿಲ್ಲ. ಆ ಬಳಿಕ ಇದಕ್ಕೆ ಕಾರಣವೇನು ಮತ್ತು ಅದರ ಹಿಂದೆ ಯಾರಿದ್ದಾರೆ ಎಂದು ಕೇಳುವುದರಲ್ಲಿ ಅರ್ಥವಿಲ್ಲ ಎಂದು ಅರಿತುಕೊಂಡೆ, ಏಕೆಂದರೆ ನೀವು ಕೇಳುತ್ತಲೇ ಇದ್ದರೆ ಮತ್ತು ಯಾರೂ ಉತ್ತರಿಸದಿದ್ದರೆ, ಅಂತಹ ಪ್ರಶ್ನೆಯನ್ನು ಬಿಡುವುದು ಉತ್ತಮ. ಆದರೆ ಯಾಕಾಗಿ ನಾನು ತಂಡದಿಂದ ಹೊರಬಿದ್ದಿದ್ದೆ ಎಂಬುದಕ್ಕೆ ಇನ್ನೂ ಕೂಡ ಉತ್ತರವಂತು ಸಿಕ್ಕಿಲ್ಲ ಎಂದು ಹರ್ಭಜನ್ ಸಿಂಗ್ ತಿಳಿಸಿದರು.

ಹರ್ಭಜನ್ 2011 ರ ನಂತರ ಪುನರಾಗಮನ ಮಾಡಿದರು. ಆದರೆ ಪ್ಲೇಯಿಂಗ್ ಇಲೆವೆನ್​ ಖಾಯಂ ಸದಸ್ಯರಾಗಿರಲಿಲ್ಲ. 2016ರಲ್ಲಿ ಟೀಂ ಇಂಡಿಯಾ ಪರ ಕೊನೆಯ ಪಂದ್ಯವಾಡಿದ್ದರು. 2016 ರಲ್ಲಿ T20 ವಿಶ್ವಕಪ್ ತಂಡದ ಸದಸ್ಯರಾಗಿದ್ದರೂ, ಆಡುವ ಬಳಗದಲ್ಲಿ ಅವಕಾಶ ಸಿಕ್ಕಿರಲಿಲ್ಲ. ಅದರ ನಂತರ ಅವರನ್ನು ವೆಸ್ಟ್ ಇಂಡೀಸ್ ವಿರುದ್ಧದ ತಂಡದಿಂದ ಕೈಬಿಡಲಾಯಿತು. ಆ ಬಳಿಕ ಕಂಬ್ಯಾಕ್ ಮಾಡಲು ಸಾಧ್ಯವಾಗಿರಲಿಲ್ಲ. ಇದಾಗ್ಯೂ ಹರ್ಭಜನ್ ಸಿಂಗ್ ಐಪಿಎಲ್​ನಲ್ಲಿ ಕಾಣಿಸಿಕೊಂಡಿದ್ದರು. ಕಳೆದ ಸೀಸನ್​ನಲ್ಲಿ ಕೆಕೆಆರ್ ಪರ ಕೂಡ ಆಡಿದ್ದರು. ಇದೀಗ ವೃತ್ತಿಪರ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿರುವ ಭಜ್ಜಿ ಮುಂದಿನ ಸೀಸನ್ ಐಪಿಎಲ್​ನಲ್ಲಿ ಕಾಣಿಸಿಕೊಳ್ಳಲಿದ್ದಾರಾ ಕಾದು ನೋಡಬೇಕಿದೆ.

ಇದನ್ನೂ ಓದಿ:  India vs South Africa 1st Test: ದಕ್ಷಿಣ ಆಫ್ರಿಕಾ ವಿರುದ್ದ ಭಾರತಕ್ಕೆ ಭರ್ಜರಿ ಜಯ

ಇದನ್ನೂ ಓದಿ:  ಭಾರತವನ್ನು ಗೇಲಿ ಮಾಡಿದ ಇಂಗ್ಲೆಂಡ್ ಕ್ರಿಕೆಟಿಗನ ಕಾಲೆಳೆದ ಆಸ್ಟ್ರೇಲಿಯಾ ಪತ್ರಕರ್ತೆ..!

ಇದನ್ನೂ ಓದಿ: IPL 2022: RCB ಮನೀಷ್ ಪಾಂಡೆಯನ್ನು ಯಾಕೆ ಖರೀದಿಸಬೇಕು ಅಂದರೆ…

ಇದನ್ನೂ ಓದಿ: IPL 2022: ಇವರೇ RCB ತಂಡದ ಮುಂದಿನ ಕ್ಯಾಪ್ಟನ್ ಎಂದ ಮಾಜಿ ಆರ್​ಸಿಬಿ ನಾಯಕ

(I tried to ask captain MS Dhoni but…: Harbhajan Singh)

ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ