AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Suresh Raina: ಈ ಸಲ RCB ಕಪ್ ಗೆಲ್ಲಲಿ, ಏಕೆಂದರೆ…

IPL 2022 RCB: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್​ವುಡ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಸುಯಶ್ ಪ್ರಭುದೇಸಾಯಿ

Suresh Raina: ಈ ಸಲ RCB ಕಪ್ ಗೆಲ್ಲಲಿ, ಏಕೆಂದರೆ...
Suresh Raina
TV9 Web
| Edited By: |

Updated on: May 23, 2022 | 6:49 PM

Share

IPL 2022: ಐಪಿಎಲ್ ಸೀಸನ್ 15 ಪ್ಲೇಆಫ್ ಹಂತಕ್ಕೆ ಬಂದು ನಿಂತಿದೆ. ಅದರಂತೆ ಅಂತಿಮ ಹಂತದ ಪಂದ್ಯಗಳಲ್ಲಿ ಗುಜರಾತ್ ಟೈಟನ್ಸ್, ರಾಜಸ್ಥಾನ್ ರಾಯಲ್ಸ್, ಲಕ್ನೋ ಸೂಪರ್ ಜೈಂಟ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಗಳು ಸೆಣಸಲಿದೆ. ಈ ನಾಲ್ಕು ತಂಡಗಳಲ್ಲಿ ಈ ಬಾರಿ ಆರ್​ಸಿಬಿ ತಂಡ ಕಪ್ ಗೆಲ್ಲಲಿ ಎಂದು ಹಾರೈಸಿದ್ದಾರೆ ಮಾಜಿ ಸಿಎಸ್​ಕೆ ಆಟಗಾರ ಸುರೇಶ್ ರೈನಾ (Suresh Raina). ಫಾಫ್ ಡು ಪ್ಲೆಸಿಸ್ ನೇತೃತ್ವದ ಆರ್‌ಸಿಬಿ ಈ ಬಾರಿ ಕೂಡ ಪ್ಲೇಆಫ್‌ ಪ್ರವೇಶಿಸಿದೆ. ಆದರೆ ಪ್ರಶಸ್ತಿ ಗೆಲ್ಲಲು ಆರ್‌ಸಿಬಿ ಸತತ ಮೂರು ಪಂದ್ಯಗಳನ್ನು ಗೆಲ್ಲಬೇಕು. ಏಕೆಂದರೆ ತಂಡವು ಮೊದಲು ಎಲಿಮಿನೇಟರ್ ಪಂದ್ಯವನ್ನು ಆಡಲಿದ್ದು, ನಂತರ ಅರ್ಹತಾ ಪಂದ್ಯವನ್ನು ಗೆಲ್ಲಬೇಕು. ಆ ಬಳಿಕವಷ್ಟೇ ಫೈನಲ್​ಗೇರಲಿದೆ. ಹೀಗೆ ಮೂರು ಪಂದ್ಯಗಳನ್ನು ಗೆದ್ದು ಆರ್​ಸಿಬಿ ಚಾಂಪಿಯನ್ ಪಟ್ಟಕೇರಲಿ ಎಂದು ಸುರೇಶ್ ರೈನಾ ಹೇಳಿದ್ದಾರೆ.

ಆರ್‌ಸಿಬಿ ಈ ವರ್ಷ ಐಪಿಎಲ್ ಟ್ರೋಫಿಯನ್ನು ಗೆಲ್ಲಬೇಕೆಂದು ನಾನು ನಿಜವಾಗಿಯೂ ಬಯಸುತ್ತೇನೆ. ಇದಕ್ಕೆ ಮುಖ್ಯ ಕಾರಣ ವಿರಾಟ್ ಕೊಹ್ಲಿ. ಕೊಹ್ಲಿಗಾಗಿ ಆರ್‌ಸಿಬಿ ಈ ಬಾರಿ ಪ್ರಶಸ್ತಿಯನ್ನು ಗೆಲ್ಲಬೇಕು ಎಂದು ರೈನಾ ಹೇಳಿದ್ದಾರೆ. ಈ ಮೂಲಕ ವಿರಾಟ್ ಕೊಹ್ಲಿಯನ್ನು ಆರ್​ಸಿಬಿ ಚಾಂಪಿಯನ್ ತಂಡದ ಭಾಗವನ್ನಾಗಿಸಬೇಕೆಂದು ಹೇಳಿದ್ದಾರೆ.

ಸುರೇಶ್ ರೈನಾ ಹೀಗೆ ಹೇಳಲು ಮುಖ್ಯ ಕಾರಣ, ವಿರಾಟ್ ಕೊಹ್ಲಿ ಇದುವರೆಗೆ ಐಪಿಎಲ್​ ಚಾಂಪಿಯನ್ ತಂಡದ ಭಾಗವಾಗಿಲ್ಲ. ಅದರಲ್ಲೂ ಒಂದೇ ತಂಡದ ಪರ ಕಳೆದ 15 ವರ್ಷಗಳಿಂದ ಆಡುತ್ತಿದ್ದರೂ ಟ್ರೋಫಿ ಗೆಲ್ಲುವ ಅವಕಾಶ ಕಿಂಗ್ ಕೊಹ್ಲಿಗೆ ಸಿಕ್ಕಿಲ್ಲ. ಮತ್ತೊಂದೆಡೆ ಟೀಮ್ ಇಂಡಿಯಾದಲ್ಲಿ ಸಹ ಆಟಗಾರರಾಗಿದ್ದ ಸುರೇಶ್ ರೈನಾ, ಮಹೇಂದ್ರ ಸಿಂಗ್ ಧೋನಿ, ಯುವರಾಜ್ ಸಿಂಗ್, ಯೂಸುಫ್ ಪಠಾಣ್, ಗೌತಮ್ ಗಂಭೀರ್ ಸೇರಿದಂತೆ ಪ್ರಮುಖ ಆಟಗಾರರು ಐಪಿಎಲ್ ಚಾಂಪಿಯನ್ ತಂಡಗಳ ಭಾಗವಾಗಿದ್ದಾರೆ. ಹೀಗಾಗಿ ಈ ಬಾರಿ ಪ್ಲೇಆಫ್ ಪ್ರವೇಶಿಸಿರುವ ಆರ್​ಸಿಬಿ ಚಾಂಪಿಯನ್ ಪಟ್ಟಕ್ಕೇರುವ ಮೂಲಕ ಕೊಹ್ಲಿಯ ವರ್ಷಗಳ ಕನಸನ್ನು ಈಡೇರಿಸಲು ಎಂಬಾರ್ಥದಲ್ಲಿ ಸುರೇಶ್ ರೈನಾ ಈ ಹೇಳಿಕೆ ನೀಡಿದ್ದಾರೆ.

ಈ ಬಾರಿ ಆರ್​ಸಿಬಿ ಪ್ರಶಸ್ತಿಯನ್ನು ಗೆಲ್ಲಲು ಮೊದಲು ಎಲಿಮಿನೇಟರ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಅನ್ನು ಸೋಲಿಸಬೇಕು. ನಂತರ ಕ್ವಾಲಿಫೈಯರ್ 2 ನಲ್ಲಿ ಕ್ವಾಲಿಫೈಯರ್ 1 ಅನ್ನು ಸೋತ ತಂಡವನ್ನು ಎದುರಿಸಬೇಕಾಗುತ್ತದೆ. ಅಂದರೆ ಎಲಿಮಿನೇಟರ್ ಪಂದ್ಯವನ್ನು ಆರ್​ಸಿಬಿ ಗೆದ್ದರೆ ಗುಜರಾತ್ ಟೈಟನ್ಸ್ ಅಥವಾ ರಾಜಸ್ಥಾನ್ ರಾಯಲ್ಸ್ ವಿರುದ್ದ ಕ್ವಾಲಿಫೈಯರ್ 2 ಪಂದ್ಯವನ್ನಾಡಲಿದೆ. ಈ ಪಂದ್ಯವನ್ನೂ ಗೆಲ್ಲುವ ಮೂಲಕ ಫೈನಲ್​ಗೆ ಪ್ರವೇಶಿಸಲಿದೆ. ಈ ರೀತಿಯಾಗಿ ಸತತ ಮೂರು ಪಂದ್ಯಗಳನ್ನು ಗೆಲ್ಲುವ ಮೂಲಕ ಆರ್​ಸಿಬಿ ಚೊಚ್ಚಲ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಲಿದೆಯಾ ಕಾದು ನೋಡಬೇಕಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB): ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್​ವುಡ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಸುಯಶ್ ಪ್ರಭುದೇಸಾಯಿ, ರಜತ್ ಪಾಟಿದಾರ್, ಅನೀಶ್ವರ್ ಗೌತಮ್, ಕರ್ಣ್ ಶರ್ಮಾ, ಜೇಸನ್ ಬೆಹ್ರೆಡ್ರಾರ್ಫ್, ಸಿದ್ದಾರ್ಥ್ ಕೌಲ್, ಚಾಮಾ ಮಿಲಿಂದ್, ಮಹಿಪಾಲ್ ಲೊಮ್ರೋರ್, ಶೆರ್ಫೇನ್ ರುದರ್‌ಫೋರ್ಡ್, ಫಿನ್ ಅಲೆನ್, ಡೇವಿಡ್ ವಿಲ್ಲಿ.

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು